Neenade naa Kannada Serial In star suvarna Neenade Naa Serial: ಅಪರಿಚಿತ ಹೃದಯಗಳ ಅನಿರೀಕ್ಷಿತ ಪ್ರೇಮಯಾನ ಹೊಚ್ಚ ಹೊಸ ಧಾರಾವಾಹಿ 'ನೀನಾದೆ ನಾ' - Vistara News

ಕಿರುತೆರೆ

Neenade Naa Serial: ಅಪರಿಚಿತ ಹೃದಯಗಳ ಅನಿರೀಕ್ಷಿತ ಪ್ರೇಮಯಾನ ಹೊಚ್ಚ ಹೊಸ ಧಾರಾವಾಹಿ ‘ನೀನಾದೆ ನಾ’

‘ನೀನಾದೆ ನಾ’ ಧಾರಾವಾಹಿಯು (Neenade Naa Serial) ಅದ್ಭುತ ತಾರಾಬಳಗವನ್ನು ಹೊಂದಿದ್ದು, ನಾಯಕನ ಪಾತ್ರದಲ್ಲಿ ದಿಲೀಪ್ ಶೆಟ್ಟಿ, ನಾಯಕಿಯಾಗಿ ಖುಷಿ ಅಭಿನಯಿಸುತ್ತಿದ್ದಾರೆ.

VISTARANEWS.COM


on

Neenade naa Kannada Serial In star suvarna
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹೊಸತನದೊಂದಿಗೆ ವಿಭಿನ್ನ ಕಥಾ ಹಂದರವುಳ್ಳ ಧಾರಾವಾಹಿ ಪ್ರೇಕ್ಷಕರ ಮುಂದೆ ಬರುತ್ತಿದೆ. ಇತ್ತೀಚೆಗಷ್ಟೇ ಶುರುವಾದ ‘ನಮ್ಮ ಲಚ್ಚಿ’ ಹಾಗೂ ‘ರಾಣಿ’ ಧಾರಾವಾಹಿಗಳು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು, ಇದೀಗ “ನೀನಾದೆ ನಾ” (Neenade Naa Serial) ಎಂಬ ಹೊಸ ಧಾರಾವಾಹಿಯನ್ನು ಪ್ರಸಾರಮಾಡಲು ಸ್ಟಾರ್‌ ಸುವರ್ಣ ಸಜ್ಜಾಗಿದೆ.

ʻದೇವರ ಆಟ ಬಲ್ಲವರಾರುʼ ಎಂಬ ಮಾತಿದೆ. ಈ ಕತೆಯೂ ಅಪರಿಚಿತ ಹೃದಯಗಳ ಅನಿರೀಕ್ಷಿತ ಪ್ರೇಮಯಾನ ಎಂದು ತಂಡ ಹೇಳಿಕೊಂಡಿದೆ. ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿದರು ಕೂಡ ಸಂಸ್ಕಾರ-ಸಂಸ್ಕೃತಿ, ಆಚಾರ-ವಿಚಾರಗಳನ್ನು ಪರಿಪಾಲಿಸುವಲ್ಲಿ ಸದಾ ಮುಂದೆ ಈ ಕಥಾ ನಾಯಕಿ ‘ವೇದಾ’. ಅಜ್ಜಿಯ ಪ್ರೀತಿಯ ಮೊಮ್ಮಗಳು ‘ವೇದಾ’ ನೇರ ನಡೆಯನ್ನು ಹೊಂದಿರುತ್ತಾಳೆ. ಈಕೆಗೆ ಮನೆಯವರ ಸಮ್ಮುಖದಲ್ಲಿ, ಹುಟ್ಟಿ ಬೆಳೆದ ಊರಲ್ಲಿ, ಮನೆಯವರು ನೋಡಿದ ಹುಡುಗನೊಂದಿಗೆ ಮದುವೆಯಾಗಬೇಕು ಎಂಬ ಆಸೆ ಇರುತ್ತದೆ. ಆದರೆ ಮುಂದೆ ನಡೆಯುವುದು ಮಾತ್ರ ವಿಧಿಲಿಖಿತ.

ಕಥಾ ನಾಯಕ ವಿಕ್ರಮ್. ಗೂಂಡಾಗಿರಿ ಮಾಡಿಕೊಂಡು, ತನ್ನ ಬಾಸ್ ಹೇಳಿದನ್ನು ಚಾಚು ತಪ್ಪದೆ ಮಾರುವ ಈತನಿಗೆ , ಆಚಾರ-ವಿಚಾರ ಸಂಸ್ಕಾರವಂತೂ ಇಲ್ಲವೇ ಇಲ್ಲ. ಪದವಿ ಪಡೆದಿದ್ದರೂ ಕೂಡ ಈತ ಹೀಗಿರುವುದರಿಂದ ಅಪ್ಪನಿಗೂ ಇವನ ಮೇಲೆ ಸಿಕ್ಕಾಪಟ್ಟೆ ಕೋಪವಿರುತ್ತದೆ. ಅಚಾನಕ್ ಆಗಿ ಒಂದು ದಿನ ದೇವರ ಸನ್ನಿಧಾನದಲ್ಲಿ ವಿಧಿಯಾಟದಂತೆ ವಿಕ್ರಮ್- ವೇದಾಳಿಗೆ ತಾಳಿ ಕಟ್ಟುತ್ತಾನೆ. ಶ್ರೀಮಂತ ಕುಟುಂಬದಲ್ಲಿ ಬೆಳೆದ ವೇದ ರೌಡಿಯಂತಿರುವ ವಿಕ್ರಮ್‌ನನ್ನು ಗಂಡ ಎಂದು ಒಪ್ಪಿಕೊಳ್ತಾಳಾ ವೇದಾ? ವಿದ್ಯಾವಂತಳಾಗಿರುವ ವೇದಾಳ ಮುಂದಿನ ನಡೆ ಏನು? ವಿರುದ್ಧ ಮನಸ್ಸುಗಳು ಹೇಗೆ ಒಂದಾಗುತ್ತೆ ಎಂಬುದೇ “ನೀನಾದೆ ನಾ” ಧಾರಾವಾಹಿಯ ಮುಖ್ಯ ಕಥಾ ಹಂದರ.

ಇದನ್ನೂ ಓದಿ: Actress Chandrika Saha: 15 ತಿಂಗಳ ಮಗನನ್ನು ನೆಲಕ್ಕೆ ಬಡಿದು ಗಾಯಗೊಳಿಸಿದ ಪಾಪಿ ತಂದೆ: ದೂರು ದಾಖಲಿಸಿದ ಕಿರುತೆರೆ ನಟಿ

‘ನೀನಾದೆ ನಾ’ ಧಾರಾವಾಹಿಯು ಅದ್ಭುತ ತಾರಾಬಳಗವನ್ನು ಹೊಂದಿದ್ದು, ನಾಯಕನ ಪಾತ್ರದಲ್ಲಿ ದಿಲೀಪ್ ಶೆಟ್ಟಿ, ನಾಯಕಿಯಾಗಿ ಖುಷಿ ಅಭಿನಯಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸ್ಟಾರ್ ಸುವರ್ಣ ವಾಹಿನಿಗೆ ಖ್ಯಾತ ನಟ ರಮೇಶ್ ಅರವಿಂರ್‌ ಅವರು ‘ವಂದನ ಮೀಡಿಯಾ’ ಸಂಸ್ಥೆಯಡಿ ಈ ಧಾರಾವಾಹಿಯನ್ನು ನಿರ್ಮಿಸುತ್ತಿದ್ದಾರೆ. “ನೀನಾದೆ ನಾ” ಇದೇ ಮೇ 16, ಮಂಗಳವಾರದಿಂದ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕಿರುತೆರೆ

Amruthadhaare Serial: ಇಂದು ಭೂಮಿಕಾಗೆ ಹುಟ್ಟು ಹಬ್ಬ: ರೀಲ್‌ ಗಂಡ ಎಸ್ಟೇಟ್​ ಬರೆದು ಕೊಟ್ರು! ರಿಯಲ್‌ ಗಂಡ ಕೊಟ್ಟ ಗಿಫ್ಟ್‌ ಏನು?

Amruthadhaare Serial: ಅಮೃತಧಾರೆ ಧಾರಾವಾಹಿ ʻಬಢೇ ಅಚ್ಚೇ ಲಗತೇ ಹೈʼ(Bade Acche Lagte Hain) ಹಿಂದಿ ಧಾರಾವಾಹಿಯ ರಿಮೇಕ್‌ ಆಗಿದೆ. ನಟ ರಾಜೇಶ್ ಅವರು ಗೌತಮ್ ಎನ್ನುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಛಾಯಾ ಸಿಂಗ್ ಭೂಮಿಕಾ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. . ಈ ಧಾರಾವಾಹಿ ಉತ್ತಮ ಟಿಆರ್​ಪಿ (Kannada Serials TRP) ಪಡೆದುಕೊಳ್ಳುತ್ತಿದೆ. ಸಾರಾ ಅಣ್ಣಯ್ಯ ಮೊದಲಾದವರು ನಟಿಸುತ್ತಿದ್ದಾರೆ.

VISTARANEWS.COM


on

Amruthadhaare Serial bhoomika in birthday chaya singh
Koo

ಇಂದು (ಮೇ 16) ಅಮೃತಧಾರೆ ಧಾರಾವಾಹಿ (Amruthadhaare Serial) ಖ್ಯಾತಿಯ ನಟಿ ಛಾಯಾ ಸಿಂಗ್ (Chaya Singh)​ ಅವರಿಗೆ ಜನುಮದಿನದ ಸಂಭ್ರಮ. ಧಾರಾವಾಹಿಯಿಂದ ಜನರಿಗೆ ಭೂಮಿಕಾ ಎಂದೇ ಪರಿಚಯ.

ನಟಿಯ ವಿಶೇಷ ದಿನದಂದು ಜೀ ಕನ್ನಡ ವಾಹಿನಿ ಛಾಯಾ ಸಿಂಗ್​ ಕುರಿತು ವಿಡಿಯೊ ಒಂದನ್ನು ರಿಲೀಸ್​ ಮಾಡಿದೆ. ವಯಸ್ಸಾದರೂ ಮದುವೆಯಾಗದೇ ಉಳಿದ ಮಧ್ಯಮ ಕುಟುಂಬದ ಹೆಣ್ಣುಮಗಳೊಬ್ಬಳು ಹೇಗೆ ಕೋಟ್ಯಧಿಪತಿ ಉದ್ಯಮಿ ಜತೆ ಜೀವನ ನಡೆಸುತ್ತಾಳೆ ಎಂಬುದೇ ಈ ಧಾರಾವಾಹಿಯ ಒನ್‌ಲೈನ್‌ ಸ್ಟೋರಿ.

ಧಾರಾವಾಹಿಯಲ್ಲಿ ಪತಿ ಗೌತಮ್‌ ಹೆಂಡತಿಯ ಹುಟ್ಟುಹಬ್ಬಕ್ಕೆಂದು ಚಿಕ್ಕಮಗಳೂರಿನ ಎಸ್ಟೇಟ್​ ಬರೆದು ಕೊಟ್ಟಿದ್ದಾನೆ. ಇದೀಗ ರಿಯಲ್‌ ಗಂಡ ಪತ್ನಿಗೆ ಏನು ಗಿಫ್ಟ್‌ ಕೊಟ್ಟಿದ್ದಾರೆ? ಎಂದು ನೆಟ್ಟಿಗರು ಪ್ರಶ್ನೆ ಮೂಲಕ ನಟಿಯ ಕಾಲೆಳೆಯುತ್ತಿದ್ದಾರೆ.

ಛಾಯಾ ಅವರ ರಿಯಲ್​ ಲೈಫ್​ ಪತಿಯ ಹೆಸರು ಕೃಷ್ಣ. ಇನ್​ಸ್ಟಾಗ್ರಾಮ್​ನಲ್ಲಿ ಅವರು ಪತಿಯ ಜತೆ ಆಗಾಗ ಫೋಟೋ ಶೇರ್​ ಮಾಡಿಕೊಳ್ಳುತ್ತಿರುತ್ತಾರೆ.

ಇದನ್ನೂ ಓದಿ: Kiccha Sudeep: ʻಮ್ಯಾಕ್ಸ್‌ʼ ಸಿನಿಮಾ ಶೂಟಿಂಗ್‌ ಮುಗಿಸಿದ ಕಿಚ್ಚ ಸುದೀಪ್‌: ರಿಲೀಸ್‌ ಯಾವಾಗ?

ಕೃಷ್ಣ ಮತ್ತು ಛಾಯಾ ಮದುವೆಯಾಗಿ 11 ವರ್ಷಗಳೇ ಕಳೆದಿವೆ. ಛಾಯಾ ಅವರಿಗೆ ಕೃಷ್ಣ ಅವರ ಪರಿಚಯವಾದದ್ದು, ತಮಿಳು ಚಿತ್ರದಲ್ಲಿ ನಟಿಸುವ ಸಮಯದಲ್ಲಿ.
ಕನ್ನಡ ಸಿನಿರಂಗದಲ್ಲಿಯೂ ಸಕ್ರಿಯರಾಗಿರುವ ಛಾಯಾ, 2000ನೇ ಇಸವಿಯಲ್ಲಿ ತೆರೆಕಂಡ ಪಿ ಶೇಷಾದ್ರಿ ನಿರ್ದೇಶನದ `ಮುನ್ನುಡಿ’ ಚಿತ್ರದಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. 
Continue Reading

ಕಿರುತೆರೆ

Bhavani Singh: ಮೊದಲ ಮಗುವಿನ ನಿರೀಕ್ಷೆಯಲ್ಲಿ ʻಸುಬ್ಬಲಕ್ಷ್ಮಿ ಸಂಸಾರʼ ಧಾರಾವಾಹಿ ನಟ!

Bhavani Singh: ಪಂಕಜ ಶಿವಣ್ಣ-ಭವಾನಿಸಿಂಗ್ ಸೋಷಿಯಲ್‌ ಮೀಡಿಯಾದಲ್ಲಿ ಆಗಾಗ ರೀಲ್ಸ್‌ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಬೇಬಿ ಬಂಪ್‌ ಫೋಟೊ ಶೂಟ್‌ ಮಾಡಿಸಿಕೊಂಡಿದ್ದಾರೆ ಪಂಕಜ್‌. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಜೋಡಿಗೆ ವಿಶ್‌ ಮಾಡುತ್ತಿದ್ದಾರೆ ಫ್ಯಾನ್ಸ್‌.

VISTARANEWS.COM


on

Bhavani Singh pankaj shivanna couple expecting-their first child
Koo

‘ಚರಣದಾಸಿ’, ‘ಸುಬ್ಬಲಕ್ಷ್ಮಿ ಸಂಸಾರ’,’ರಕ್ಷಾ ಬಂಧನ’ ಖ್ಯಾತಿಯ ಕಿರುತೆರೆ ನಟ ಭವಾನಿ ಸಿಂಗ್ (Bhavani Singh) ಅವರು ತಂದೆಯಾಗುತ್ತಿದ್ದಾರೆ. ಪತ್ನಿ ಪಂಕಜ ಶಿವಣ್ಣ ಕೂಡ ನಟಿಯಾಗಿದ್ದು, ಇದೀಗ ಜೋಡಿ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದೆ.

ಭವಾನಿ ಸಿಂಗ್ ಅವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್‌ ಶೇರ್‌ ಮಾಡಿ ʻʻನಮ್ಮ ಸಂಸಾರ ದೊಡ್ಡದಾಗುತ್ತಿದೆʼʼ ಎಂದು ಬರೆದುಕೊಂಡಿದ್ದಾರೆ.

‘ಚರಣದಾಸಿ’ ಧಾರಾವಾಹಿ ಮೂಲಕ ನಟನೆಗೆ ಕಾಲಿಟ್ಟರು ನಟ ಭವಾನಿ ಸಿಂಗ್. ಪಂಕಜ ಶಿವಣ್ಣ ಅವರು ‘ಸುಬ್ಬಲಕ್ಷ್ಮಿ ಸಂಸಾರ’ ಧಾರಾವಾಹಿ ಮೂಲಕ ಭವಾನಿ ಸಿಂಗ್ ಅವರಿಗೆ ಪರಿಚಯವಾದರು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

2019ರಲ್ಲಿ ಇವರಿಬ್ಬರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇದೀಗ ಐದು ವರ್ಷಗಳ ನಂತರ ಈ ಜೋಡಿ ಸಿಹಿಸುದ್ದಿಯನ್ನು ಹಂಚಿಕೊಂಡಿದೆ.
Continue Reading

ಕಿರುತೆರೆ

Star Suvarna: ಕಿರುತೆರೆಗೆ ಬರ್ತಿದೆ ಹೊಸ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ’: ಪ್ರಸಾರ ಯಾವಾಗ?

Star Suvarna: ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ.

VISTARANEWS.COM


on

Star Suvarna HuAnthiya UhuuAnthiya new celebrity game show
Koo

ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ರಿಯಾಲಿಟಿ ಶೋಗಳ ಸರದಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ʻಸ್ಟಾರ್ ಸುವರ್ಣʼ ವಾಹಿನಿಯು ಇದೀಗ ‘Huu ಅಂತೀಯಾ…Uhuu ಅಂತೀಯಾ’ (HuAnthiya UhuuAnthiya) ಎಂಬ (Star Suvarna) ಹೊಸ ಬಗೆಯ ವಿನೂತನ ಗೇಮ್ ಶೋ ಅನ್ನು ಪ್ರಸಾರ ಮಾಡಲಿದೆ.

ಇಬ್ಬರು ಜನಪ್ರಿಯ ಆ್ಯಂಕರ್‌ಗಳನ್ನು ಹೊಂದಿರುವ ಈ ಶೋ ಒಟ್ಟು ಮೂರು ಸುತ್ತುಗಳನ್ನು ಹೊಂದಿರುತ್ತದೆ. ಸೆಲೆಬ್ರಿಟಿ ಸ್ಪರ್ಧಿಗಳಿಗೆ 6 ಲಕ್ಷ ರೂಪಾಯಿಗಳನ್ನು ಗೆಲ್ಲುವ ಅವಕಾಶವಿರುತ್ತದೆ. ಮೊದಲ ಸುತ್ತಿನಲ್ಲಿ ಸ್ಪರ್ಧಿಗಳು ಒಬ್ಬರ ನಂತರ ಒಬ್ಬರು ಆಡುತ್ತಾರೆ. ನಿರೂಪಕರು ನೀಡಿದ ಸತ್ಯ ಮತ್ತು ಸುಳ್ಳು ಸಂಗತಿಗಳನ್ನು ಸ್ಪರ್ಧಿಗಳು ಸರಿಯಾಗಿ ಆರಿಸಿದರೆ 1 ಲಕ್ಷ ರೂಪಾಯಿ ಗೆಲ್ಲುವ ಅವಕಾಶವಿದೆ.

ಇನ್ನು ಎರಡನೇ ಸುತ್ತಿನಲ್ಲಿ ಸ್ಪರ್ಧಿಗಳಿಗೆ ಆಹಾರವನ್ನು ಸೇವಿಸುವ ಸವಾಲಿರುತ್ತದೆ, ಮಜಾ ತುಂಬಿರುವ ಟ್ವಿಸ್ಟ್ ಗಳೊಂದಿಗೆ ಒಟ್ಟು 60 ಸೆಕೆಂಡ್‌ಗಳ ಸಮಯವನ್ನು ನೀಡಲಾಗುತ್ತದೆ. ಇದರಲ್ಲಿ ಗೆದ್ದ ವಿಜೇತರು 2 ಲಕ್ಷ ರೂಪಾಯಿಗಳನ್ನು ಗೆಲ್ಲಬಹುದು. ಮೂರನೇ ಹಾಗು ಕೊನೆಯ ಸುತ್ತಿನಲ್ಲಿ ಕೇವಲ ಇಬ್ಬರು ಸ್ಪರ್ಧಿಗಳು ತಮ್ಮ ಅದೃಷ್ಟದ ಆಧಾರದ ಮೇಲೆ ಆಡುತ್ತಾರೆ, ಗೆದ್ದ ಸ್ಪರ್ಧಿಗೆ 3 ಲಕ್ಷಗಳನ್ನು ಗೆಲ್ಲುವ ಅವಕಾಶವಿದೆ. ಇದು ಈ ಗೇಮ್ ಶೋ ನ ನಿಯಮಾವಳಿಗಳು.

ಇದನ್ನೂ ಓದಿ: A Movie Re-Release: ರೀ-ರಿಲೀಸ್ ಆಗ್ತಿದೆ ಉಪ್ಪಿಯ `A’ ಸಿನಿಮಾ : ನೆನಪುಗಳನ್ನು ಮೆಲುಕು ಹಾಕಿದ ನಟಿ ಚಾಂದಿನಿ!

ಇನ್ನು ‘Huu ಅಂತೀಯಾ…Uhuu ಅಂತೀಯಾ’ ಶೋ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿರೋದು ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ. ಹಾಗೂ ನಟನೆ ಹಾಗು ತನ್ನ ಹಾಸ್ಯಗಾರಿಕೆಯ ಮೂಲಕ ನೋಡುಗರ ಮನಗೆದ್ದಿರುವ ಅರುಣ್ ಹರಿಹರನ್. ಇವರಿಬ್ಬರು ಈ ಶೋನ ರೂವಾರಿಗಳಾಗಿದ್ದಾರೆ. ಮೊದಲ ಗ್ರ್ಯಾಂಡ್ ಓಪನಿಂಗ್ ಸಂಚಿಕೆಯಲ್ಲಿ ಸೆಲೆಬ್ರಿಟಿ ಸ್ಫರ್ಧಿಗಳಾಗಿ ನಟ ಡಾರ್ಲಿಂಗ್ ಕೃಷ್ಣ, ನಟಿಯರಾದ ಮಿಲನಾ ನಾಗರಾಜ್ ಹಾಗು ಅಮೃತಾ ಅಯ್ಯಂಗಾರ್ ಭಾಗವಹಿಸಲಿದ್ದಾರೆ.

ಈ ರಿಯಾಲಿಟಿ ಶೋ ನ ಟೈಟಲ್ ಟ್ರ್ಯಾಕ್‌ಗೆ ನೋಡುಗರು ಫಿದಾ ಆಗಿದ್ದು, ಮಸ್ತ್ ಮನರಂಜನೆಗೆ ಕಾತುರತೆಯಿಂದ ಕಾಯುತ್ತಿದ್ದಾರೆ. ಅಷ್ಟೇ ಅಲ್ಲದೆ ಮನೆಯಲ್ಲಿ ಕುಳಿತು ವೀಕ್ಷಿಸುವ ವೀಕ್ಷಕರಿಗೂ “ಐ ಫೋನ್” ಗೆಲ್ಲುವ ಅವಕಾಶವನ್ನು ಸ್ಟಾರ್ ಸುವರ್ಣ ವಾಹಿನಿಯು ನೀಡುತ್ತಿದೆ. ಮೊದಲ ಹಾಗು ಎರಡನೇ ಸಂಚಿಕೆಯ ಕೊನೆಯಲ್ಲಿ ಕೇಳುವ ಪ್ರಶ್ನೆಗೆ ಸರಿಯಾದ ಉತ್ತರವನ್ನು ನೀಡಿದರೆ ‘I Phone’ ಗೆಲ್ಲುವ ಅವಕಾಶವನ್ನು ನೋಡುಗರು ಪಡೆಯುತ್ತಾರೆ.

ಇದೀಗ ಪ್ರೇಕ್ಷಕರನ್ನು ಮನರಂಜಿಸಲು ಬರ್ತಿದೆ ಹೊಚ್ಚ ಹೊಸ ಯೂನಿಕ್ ಸೆಲೆಬ್ರಿಟಿ ಗೇಮ್ ಶೋ ‘Huu ಅಂತೀಯಾ…Uhuu ಅಂತೀಯಾ. ‘ ಇದೇ ಮೇ 19 ರಿಂದ ಪ್ರತಿ ಭಾನುವಾರ ರಾತ್ರಿ 7 ಗಂಟೆಗೆ ಸ್ವಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗಲಿದೆ.

Continue Reading

ಕಿರುತೆರೆ

Anchor Anushree: ಖುಷಿಯಾಗಿದ್ರೂ ಕಷ್ಟ, ಸಾಧನೆ ಹೊಗಳಿದ್ರೆ ಬಕೆಟ್‌ ಅಂತೀರಾ: ಅನುಶ್ರೀ ಬೇಸರ

Anchor Anushree: ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು. ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

VISTARANEWS.COM


on

Anchor Anushree talking with fans on instagram live
Koo

ಕಿರುತೆರೆ ಜನಪ್ರಿಯ ನಿರೂಪಕಿ, ಸ್ಯಾಂಡಲ್‌ವುಡ್‌ ನಟಿ (Sandalwood star) ಅನುಶ್ರೀ (Anchor anushree) ಅವರು ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ ತುಳು ಪಾಡ್‌ಕಾಸ್ಟ್‌ನಲ್ಲಿ ಸಂದರ್ಶನ ಕೊಟ್ಟಿದ್ದರು. ತಮ್ಮ ಮದುವೆ ವಿಚಾರ ಸೇರಿದಂತೆ ಹಲವು ವೈಯಕ್ತಿಕ ವಿಚಾರಗಳನ್ನು ಶೇರ್‌ ಮಾಡಿಕೊಂಡಿದ್ದರು.

ಇದೀಗ ಅನುಶ್ರೀ ಅವರು ಇನ್​ಸ್ಟಾಗ್ರಾಮ್​ ಮೂಲಕ ನೇರಪ್ರಸಾರದಲ್ಲಿ ಬಂದು ಅಭಿಮಾನಿಗಳ ಜತೆ ಮಾತುಕತೆ ನಡೆಸಿದ್ದಾರೆ. ಮೇ 13ರಂದು ನೇರ ಪ್ರಸಾರದಲ್ಲಿ ಬಂದಿರುವ ಅನುಶ್ರೀಯವರು, ಕೆಲವೊಂದು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಇದನ್ನೂ ಓದಿ: Actor Diganth: ಕ್ರೇಜಿಸ್ಟಾರ್ ರವಿಚಂದ್ರನ್ ಸಿನಿಮಾದಲ್ಲಿ ದಿಗಂತ್‌ ಪಾತ್ರ ಡಿಫರೆಂಟ್!

ಈ ಸಂದರ್ಭದಲ್ಲಿ ಅವರು ಅನುಶ್ರೀ ಅವರು ತಮ್ಮ ವಿರುದ್ಧ ಕೆಲವರು ಮಾಡುವ ಟೀಕೆಗಳ ಕುರಿತು ನೋವು ತೋಡಿಕೊಂಡಿದ್ದಾರೆ.

ʻʻಖುಷಿಯಾಗಿದ್ದರೆ ಓವರ್​ ಆ್ಯಕ್ಟಿಂಗ್​ ಅಂತೀರಿ, ಸ್ವಲ್ಪ ಕಷ್ಟ ಹೇಳಿಕೊಂಡು ಕಣ್ಣೀರು ಹಾಕಿದರೆ ಅದಕ್ಕೂ ಓವರ್ ಆ್ಯಕ್ಟಿಂಗ್​ ಅಂತೀರಿ, ಏನನ್ನಾದರೂ ನೋಡಿ ಆಶ್ಚರ್ಯ ಪಟ್ಟರೆ ಅದಕ್ಕೂ ಹಾಗೆಯೇ ಹೇಳುತ್ತೀರಿ… ಸಾಧನೆಯನ್ನು ಹೊಗಳಿದರೆ ಬಕೆಟ್​ ಅಂತೀರಿ. ಒಂದೊಂದು ಭಾವನೆಗೂ ಒಂದೊಂದು ಹೆಸರು ಕೊಡ್ತೀರಾʼʼ ಎಂದು ನೋವು ತೋಡಿಕೊಂಡರು. ʻʻಹತ್ತು ಜನರು ಹೀಗೆಲ್ಲಾ ಹೇಳಿದ್ರೂ, ಕೋಟ್ಯಂತರ ಮಂದಿ ಹರಸುವವರು ಇದ್ದಾರೆ. ಅವರ ಹೊಟ್ಟೆ ತಣ್ಣಗಾಗಿರಲಿʼʼ ಎಂದಿದ್ದಾರೆ.

Continue Reading
Advertisement
Karnataka weather Forecast
ಮಳೆ30 seconds ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ2 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ7 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ7 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

MS Dhoni
ಕ್ರೀಡೆ7 hours ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ7 hours ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ7 hours ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು7 hours ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ7 hours ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ30 seconds ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ14 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ16 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು20 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌