Site icon Vistara News

Sanju Basayya: ರಿಜಿಸ್ಟರ್‌ ಮ್ಯಾರೇಜ್‌ ಆದ ʻಕುಳ್ಳ ಮಿಂಡ್ರಿʼ ಖ್ಯಾತಿಯ ಕಾಮಿಡಿ ಕಿಲಾಡಿ ಸಂಜು; ಕುಟುಂಬದ ಒಪ್ಪಿಗೆ ಅಷ್ಟೇ ಬಾಕಿ ಅಂತು ಜೋಡಿ!

comedy Khiladigalu Fame Sanju Bassayya

ಕಾಮಿಡಿ ಕಿಲಾಡಿಗಳು (Comedy Khiladigalu) ರಿಯಾಲಿಟಿ ಶೋ ಮೂಲಕ ಮನೆಮಾತಾದ ನಟ ಸಂಜು ಬಸಯ್ಯ (Sanju Basayya) ತಮ್ಮ ಬಹುಕಾಲದ ಗೆಳತಿ ಪಲ್ಲವಿ ಬಳ್ಳಾರಿ ಎಂಬುವವರನ್ನು ರಿಜಿಸ್ಟರ್‌ ಮದುವೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಮುರುಗೋಡು ಗ್ರಾಮದ ಸಂಜು, ಆರಂಭದಲ್ಲಿ ನಾಟಕ ಕಂಪನಿಗಳಲ್ಲಿ ಗುರುತಿಸಿಕೊಂಡಿದ್ದರು. ಕುಳ್ಳ ಮಿಂಡ್ರಿ, ಮೆಣಸಿನಕಾಯಿ ಬಸ್ಯಾ, ಸಂಜು ಬಸಯ್ಯ ಹೀಗೆ ಹಲವು ಹೆಸರುಗಳಿಂದಲೇ ಇವರು ಫೇಮಸ್ ಆಗಿದ್ದಾರೆ.

ಸಂಜು ಅವರು ಮದುವೆ ಆಗಿದ್ದು ನಟಿ ಪಲ್ಲವಿ ಬಳ್ಳಾರಿ ಎಂಬುವವರನ್ನು. ನಾಟಕ ಕಲಾವಿದೆಯಾಗಿರುವ ಪಲ್ಲವಿ, ಹಲವು ಯೂಟ್ಯೂಬರ್‌ಗಳ ಕಿರು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತ ಸಂಜು ಬಸಯ್ಯ ನಾಟಕಗಳಲ್ಲಿ ಇಂದಿಗೂ ಸಕ್ರಿಯರಾಗಿದ್ದಾರೆ. ಅಲ್ಲದೆ ಸಿನಿಮಾಗಳಲ್ಲೂ ನಟಿಸುತ್ತಿದ್ದಾರೆ. ನಾಲ್ಕು ವಾರದ ಹಿಂದೆಯೇ ರಿಜಿಸ್ಟರ್ ಮ್ಯಾರೇಜ್ ಆಗಿದ್ದು, ಕುಟುಂಬಸ್ಥರ ಒಪ್ಪಿಗೆ ಪಡೆದು ಸಪ್ತಪದಿ ತುಳಿಯುವುದಾಗಿ ಹೇಳಿದ್ದಾರೆ.
ಸಂಜು ತಮ್ಮ ಇನ್‌ಸ್ಟಾದಲ್ಲಿ ʻʻಕನ್ನಡದ ಕಲಾಭಿಮಾನಿಗಳಿಗೆ ನಿಮ್ಮ ಪ್ರೀತಿಯ ಸಂಜು ಬಸಯ್ಯ ಮತ್ತು ಪಲ್ಲವಿ ಬಳ್ಳಾರಿ ಮಾಡುವ ಅನಂತ ಕೋಟಿ ನಮಸ್ಕಾರಗಳು. ಇಲ್ಲಿಯವರೆಗಿನ ನನ್ನ ಹಾಗೂ ಪಲ್ಲವಿ ಬಳ್ಳಾರಿಯವರ ನಡುವಿನ ಸಂಬಂಧಗಳ ಊಹಾಪೋಹಗಳಿಗೆ ಇಂದು ನಾವು ತೆರೆ ಎಳೆದಿದ್ದೆವೆ. ಮೊದಲಿಗೆ ನಮ್ಮಿಬ್ಬರ ಪರಿಚಯವಾಗಿತು ,ಆ ಪರಿಚಯ ಸ್ನೇಹವಾಗಿ , ಸ್ನೇಹ ಪ್ರೀತಿಯಾಗಿದ್ದು ನಿಮಗೆಲ್ಲರಿಗೂ ಗೊತ್ತಿದ್ದ ವಿಷಯ. ಈಗ ನಾವಿಬ್ಬರು ಕಾನೂನಬದ್ದವಾಗಿ, ಅಧಿಕೃತವಾಗಿ, ರಿಜಿಸ್ಟರ್ ಮ್ಯಾರೇಜ್ ಆಗಿದ್ದೇವೆ. ನಮ್ಮ ,ನಮ್ಮ ಕುಟುಂಬದ ಒಪ್ಪಿಗೆ ಪಡೆದು ನಿಮ್ಮೆಲ್ಲರ ಸುಮ್ಮುಖದಲ್ಲಿ ಆದಷ್ಟು ಬೇಗ ಸಪ್ತಪದಿ ತುಳಿಯಲಿದ್ದೇವೆ. ನಿಮ್ಮ ಪ್ರೀತಿ, ಆಶೀರ್ವಾದ ನಮ್ಮ ಮೇಲೆ ಹೀಗೆ ಇರಲಿ. ನಿಜವಾದ ಪ್ರೀತಿಗೆ ಯಾವುದೇ ಜಾತಿ, ಧರ್ಮ ಇನ್ನಿತರ ಯಾವುದೇ ವಿಷಯಗಳು ಅಡ್ಡ ಬರಲಾರದು ಎಂಬುದನ್ನು ಸಾಧಿಸಿ ತೋರಿಸಿದ್ದೇವೆ. ನಿಜವಾದ ಪ್ರೀತಿಗೆ ಜಯ ಸಿಕ್ಕೆ ಸಿಗುತ್ತದೆ ಎನ್ನುವುದಕ್ಕೆ ನಾವೇ ಕಾರಣ. ಇಂತಿ ನಿಮ್ಮ ಪ್ರೀತಿಯ ಸಂಜು ಬಸಯ್ಯ , ಪಲ್ಲವಿ ಬಳ್ಳಾರಿʼʼ ಎಂದು ಬರೆದುಕೊಂಡಿದ್ದಾರೆ.
ಈ ಜೋಡಿಗೆ ನೆಟ್ಟಿಗರು ಶುಭಾಶಯ ಕೋರಿದ್ದಾರೆ. ಒಬ್ಬರು “ಪ್ರೀತಿ ಅಮರ ಅಂತ ಇಂತಹ ಕಾಲದಲ್ಲಿ ಸಾಬೀತು ಮಾಡಿದೆ. ನಿಮ್ಮ ಜೋಡಿ” ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬರು “ಪ್ರೀತಿಗೆ ಕಣ್ಣಿಲ್ಲ ಮೂಗಿಲ್ಲ ಬಾಯಿಲ್ಲ. ಆದರೆ ಹೃದಯ ಇದೆ ಎಂದು ತೋರಿಸಿಕೊಟ್ಟಿದ್ದೀರಾ” ಎಂದು ಮೆಚ್ಚುಗೆ ಸೂಚಿಸಿದ್ದಾರೆ.
ಕಳೆದ ಏಳೆಂಟು ವರ್ಷಗಳ ಹಿಂದೆಯೇ ಸಂಜು ಬಸಯ್ಯ ಮತ್ತು ಪಲ್ಲವಿ ಅವರ ಪರಿಚಯವಾಗಿತ್ತು. ಆ ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಯಾಗಿ ಬದಲಾಗಿತ್ತು. ಈ ಜೋಡಿ ಮುಂದಿನ ದಿನಗಳಲ್ಲಿ ಸಪ್ತಪದಿ ತುಳಿಯಲಿದೆ.
ಈ ಮೊದಲು ಜೀ ಕನ್ನಡ ಕಾಮಿಡಿ ಕಿಲಾಡಿ ಸಂಚಿಕೆವೊಂದರಲ್ಲಿ ಈ ಜೋಡಿಯ ಪರಿಚಯ ಆಗಿತ್ತು.
Exit mobile version