ʻಅಗ್ನಿಸಾಕ್ಷಿ’ ,’ನಮ್ಮ ಲಚ್ಚಿ’ ಧಾರಾವಾಹಿ ಖ್ಯಾತಿಯ ನಟ ವಿಜಯ್ ಸೂರ್ಯ (Vijay Suriya) ಅವರು ಈ ಬಾರಿ ವಿಶೇಷವಾಗಿ ಅಮ್ಮಂದಿರ ದಿನಾಚರಣೆಯನ್ನು ಆಚರಿಸಿದ್ದಾರೆ.
ಇಂದಿನಿಂದ ನಾನು ನನ್ನ ಹೆಸರನ್ನು ʻವಿಜಯ್ ಲಲಿತಾ ಸೂರ್ಯʼ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು ಎಂದು ವಿಜಯ್ ಸೂರ್ಯ ಹೇಳಿದ್ದಾರೆ. ಈ ಮೂಲಕ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ ನಟ.
ಇದನ್ನೂ ಓದಿ: Puneeth Parva | ಅಪ್ಪುವಿನ ಮಾಸ್ ಡೈಲಾಗ್ ಹೇಳಿದ ಧ್ರುವ ಸರ್ಜಾ: ದುನಿಯಾ ವಿಜಯ್ ಭಾವುಕ
ವಿಜಯ್ ಸೂರ್ಯ ಪೋಸ್ಟ್ ಮಾಡಿ. ʻʻಅಮ್ಮ ಹಚ್ಚಿದೊಂದು ಹಣತೆ
ಇನ್ನೂ ಬೆಳಗಿದೆ..
ಮನಕೆ ಮಬ್ಬು ಕವಿಯದಂತೆ
ಸದಾ ಕಾದಿದೆ..
ಎಂ ಆರ್ ಕಮಲಾ ಅವರು ಬರೆದ ಈ ಸಾಲನ್ನು ಮನದಲ್ಲಿ ನೆನೆಯುತ್ತಾ ಅಮ್ಮನಿಗೊಂದು ಭಾವುಕ ನಮನ ಸಲ್ಲಿಸುತ್ತೇನೆ. ಹ್ಯಾಪಿ ಮದರ್ಸ್ ಡೇ ಅಮ್ಮ.
ಇಷ್ಟು ಹೇಳಿದರೆ ಸಾಕಾ ? ಅಮ್ಮ ಪ್ರತಿ ಕ್ಷಣದ ಮಿಡಿತ ಅಲ್ವಾ ? ಈ ಪ್ರಶ್ನೆ ನನ್ನನ್ನು ಸದಾ ಕಾಡಿದೆ ಇದಕ್ಕೆ ಉತ್ತರ ಹುಡುಕಲು ಹೊರಟಾಗ ಅನ್ನಿಸಿದ್ದು ನನ್ನ ಹೆಸರಿನಲ್ಲಿ ಅಮ್ಮನ ಹೆಸರು ಬೆರೆತರೆ ಹೇಗೆ ಎಂಬ ಭಾವ. ಅದನ್ನು ಅಳವಡಿಸಿಕೊಳ್ಳಲು ಅಮ್ಮಂದಿರ ದಿನಕ್ಕಿಂತ ವಿಶೇಷ ಸಂದರ್ಭ ಯಾವುದಿದೆ ಅಲ್ವಾ ?
ಹೌದು ಇಂದಿನಿಂದ ನಾನು ನನ್ನ ಹೆಸರನ್ನು ʻವಿಜಯ್ ಲಲಿತಾ ಸೂರ್ಯʼ ಎಂದು ಬದಲಿಸಿಕೊಳ್ಳುತ್ತಿದ್ದೇನೆ. ಲಲಿತಾ ನನ್ನ ಅಮ್ಮನ ಹೆಸರು. ನನ್ನ ಪಾಲಿನ ಉಸಿರು.
ಜಗತ್ತಿನ ಎಲ್ಲ ಅಮ್ಮಂದಿರಿಗೂ ನನ್ನ ಶುಭಾಶಯಗಳು. ʻನಿಮ್ಮವನುʼ , ವಿಜಯ್ ಲಲಿತಾ ಸೂರ್ಯ…ʼʼಎಂದು ಬರೆದುಕೊಂಡಿದ್ದಾರೆ.
ತಾಯಿಗಾಗಿ ಹೆಸರನ್ನೇ ಬದಲಿಸಿಕೊಂಡ ನಟನ ಈ ನಡೆಗೆ ಅಭಿಮಾನಿಗಳು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ವಿಜಯ್ ಸೂರ್ಯ ಅವರ ಕಿರುತೆರೆ ಪಯಣ ಶುರುವಾಗಿದ್ದು ‘ಉತ್ತರಾಯಣ’ ಧಾರಾವಾಹಿಯ ಮೂಲಕ.’ಲಕ್ಷ್ಮಿ ಬಾರಮ್ಮ’ ಧಾರಾವಾಹಿಯಲ್ಲಿ ಸಿದ್ಧಾರ್ಥ್ ಆಗಿ ಅಭಿನಯಿಸಿದರು ವಿಜಯ್ ಸೂರ್ಯ. ಮುಂದೆ ‘ಅಗ್ನಿಸಾಕ್ಷಿ’ ಧಾರಾವಾಹಿಯಲ್ಲಿಯೂ ನಾಯಕ ಸಿದ್ಧಾರ್ಥ್ ಆಗಿ ಕಂಡಿದ್ದರು.