Telugu Film | ಹೊಸ ನಿಯಮ ಜಾರಿಗೆ ತಂದ ಟಾಲಿವುಡ್‌: ಇದು ಕಾಂತಾರ ಎಫೆಕ್ಟ್‌, ವೈರಲ್‌ ಆಯ್ತು ಪ್ರೆಸ್‌ ನೋಟ್‌! - Vistara News

ಟಾಲಿವುಡ್

Telugu Film | ಹೊಸ ನಿಯಮ ಜಾರಿಗೆ ತಂದ ಟಾಲಿವುಡ್‌: ಇದು ಕಾಂತಾರ ಎಫೆಕ್ಟ್‌, ವೈರಲ್‌ ಆಯ್ತು ಪ್ರೆಸ್‌ ನೋಟ್‌!

ಟಾಲಿವುಡ್‌ನಲ್ಲಿ ತೆಲುಗು ಸಿನಿಮಾಗಳಿಗೆ (Telugu Film) ಮೊದಲ ಆದ್ಯತೆ ಸಿಗಬೇಕು ಎಂದು ಹೊಸ ಚರ್ಚೆಯೊಂದು ಶುರುವಾಗಿದೆ.

VISTARANEWS.COM


on

telugu film
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಚಿತ್ರರಂಗದಲ್ಲಿ ಪ್ಯಾನ್‌ ಇಂಡಿಯಾ ಸಿನಿಮಾಗಳ ಸದ್ದು ಹೆಚ್ಚಾಗಿದೆ. ತೆಲುಗು ರಾಜ್ಯಗಳಲ್ಲಿ ಬಾಕ್ಸ್‌ ಆಫೀಸ್‌ನಲ್ಲಿ ಬೇರೆ ಭಾಷೆಯ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಕಲೆಕ್ಷನ್‌ ಮಾಡುತ್ತಿದೆ. ಈ ನಿಟ್ಟಿನಲ್ಲಿ ತೆಲುಗು ಸಿನಿಮಾಗಳಿಗೆ (Telugu Film) ಮೊದಲ ಆದ್ಯತೆ ಆಂಧ್ರಪ್ರದೇಶದಲ್ಲಿ ಸಿಗಬೇಕು ಎಂದು ಹೊಸ ಚರ್ಚೆ ಒಂದು ಶುರುವಾಗಿದೆ. ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ ಈಗಾಗಲೇ ಪ್ರೆಸ್‌ ನೋಟ್‌ ಒಂದನ್ನು ಶೇರ್‌ ಮಾಡಿಕೊಂಡಿದೆ.

ಇತ್ತೀಚಿನ ದಿನಗಳಲ್ಲಿ ಸಿನಿಮಾಗಳು ಬೇರೆ ಭಾಷೆಯಲ್ಲಿ ಡಬ್‌ ಆಗುತ್ತಿದೆ. ಆಂಧ್ರದಲ್ಲಿ ಸಂಕ್ರಾಂತಿ ಮತ್ತು ದಸರಾ, ದೀಪಾವಳಿಗೆ ಹೆಚ್ಚಾಗಿ ತೆಲುಗು ಸಿನಿಮಾಗಳಿಗೆ ಆದ್ಯತೆ ನೀಡಬೇಕು ಎನ್ನುವ ಚರ್ಚೆ ಶುರುವಾಗಿದೆ. ಆಂಧ್ರದಲ್ಲಿ ಸಂಕ್ರಾಂತಿ ಮತ್ತು ದೀಪಾವಳಿ ದೊಡ್ಡ ಹಬ್ಬ. ಆ ಸಂದರ್ಭದಲ್ಲಿ ಪ್ರೇಕ್ಷಕರಿಗೆ ರಜೆಗಳು ಸಿಗುವುದರಿಂದ ಚಿತ್ರಮಂದಿರಕ್ಕೆ ಬರುತ್ತಾರೆ. ಈ ಹಬ್ಬಗಳ ಸಂದರ್ಭದಲ್ಲಿ ಸಿನಿಮಾಗಳನ್ನು ಹೆಚ್ಚಾಗಿ ಆಂಧ್ರದಲ್ಲಿ ಬಿಡುಗಡೆ ಮಾಡುತ್ತಾರೆ. ಇದೀಗ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಇದನ್ನೂ ಓದಿ | Pavitra Lokesh | ಪವಿತ್ರಾ ಲೋಕೇಶ್‌-ನರೇಶ್‌ ನಡುವೆ ಬ್ರೇಕಪ್‌ ಆಗಿದೆ ಅಂತಿದೆ ಟಾಲಿವುಡ್‌!

ಪ್ರೆಸ್‌ ನೋಟ್‌ನಲ್ಲಿ ಏನಿದೆ?
ʻʻಐದು ವರ್ಷಗಳ ಹಿಂದೆಯೇ ಸಕ್ರಾಂತಿ, ದಸರಾ ಸಂದರ್ಭದಲ್ಲಿ ಆಂಧ್ರದಲ್ಲಿ ತೆಲುಗು ಚಿತ್ರಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ತೆಲುಗು ನಿರ್ಮಾಪಕರ ಸಂಘ ತೀರ್ಮಾನ ಕೈಗೊಂಡಿತ್ತು. ನಿರ್ಮಾಪಕ ದಿಲ್‌ ರಾಜು ಅವರು ಈ ಬಗ್ಗೆ ಧ್ವನಿ ಎತ್ತಿದ್ದರು. ಇದೀಗ ಅವರ ಹೇಳಿಕೆ ಮುಂದಿಟ್ಟುಕೊಂಡು ಈ ಬಾರಿ ಸಂಕ್ರಾಂತಿಗೆ ಈ ನಿಯಮ ಜಾರಿಗೆ ತರಬೇಕುʼʼಎಂದು ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ ಪ್ರೆಸ್‌ನೋಟ್‌ ಬಿಡುಗಡೆಗೊಳಿಸಿದೆ.

ಇದನ್ನೂ ಓದಿ | Sneha Reddy | ಟಾಲಿವುಡ್‌ ಸ್ಟಾರ್‌ ಅಲ್ಲು ಅರ್ಜುನ್‌ ಪತ್ನಿ ಸ್ನೇಹಾ ರೆಡ್ಡಿ ಮಾಲಿವುಡ್‌ಗೆ ಎಂಟ್ರಿ: ನಟ ಯಾರು?

ತೆಲುಗು ಸಿನಿಮಾಗಳಿಗೆ ಹೆಚ್ಚು ಸ್ಕ್ರೀನ್‌!
ಮೂಲ ತೆಲುಗು ಸಿನಿಮಾಗಳಿಗೆ ಹೆಚ್ಚು ಸ್ಕ್ರೀನ್‌ ಕೊಡಬೇಕು ಆ ನಂತರವೇ ಡಬ್‌ ಸಿನಿಮಾಗಳಿಗೆ ಅವಕಾಶ ನೀಡಬೇಕು ಎನ್ನುತ್ತಿದ್ದಾರೆ. ಈಗಾಗಲೇ ತೆಲುಗಿನಲ್ಲಿ ಚಿರಂಜೀವಿ ನಟನೆಯ ʻʻ’ವಾಲ್ತೇರು ವೀರಯ್ಯ’, ಬಾಲಕೃಷ್ಣ ನಟನೆಯ ‘ವೀರಸಿಂಹ ರೆಡ್ಡಿ’ ಸಿನಿಮಾಗಳು ಬಿಡುಗಡೆಗೆ ಸಿದ್ಧತೆ ನಡೆಸಿವೆ. ಅಖಿಲ್ ಅಕ್ಕಿನೇನಿ ‘ಏಜೆಂಟ್’ ಆಗಿ ಬರುತ್ತಿದ್ದಾರೆ. ಈ ಸಿನಿಮಾಗಳ ಜತೆಗೆ ತಮಿಳಿನ ‘ವಾರಿಸು’ ಹಾಗೂ ‘ತುನಿವು’ ಸಿನಿಮಾಗಳನ್ನು ಸಂಕ್ರಾಂತಿ ಹಬ್ಬಕ್ಕೆ ರಿಲೀಸ್ ಮಾಡುವ ಪ್ರಯತ್ನ ಆಗುತ್ತಿದೆ. ವಿಜಯ್ ಮತ್ತು ಅಜಿತ್‌ ಅವರಿಗೆ ತೆಲುಗು ರಾಜ್ಯಗಳಲ್ಲೂ ದೊಡ್ಡ ಅಭಿಮಾನಿ ಬಳಗ ಇದ್ದು,ತೆಲುಗಿಗೂ ಡಬ್ ಮಾಡಿ ದೊಡ್ಡಮಟ್ಟದಲ್ಲಿ ರಿಲೀಸ್ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ನಿರ್ಮಾಪಕ ದಿಲ್‌ರಾಜು ಹೇಳಿಕೆ ಅವರಿಗೇ ಮುಳುವಾಯ್ತಾ?
ದಿಲ್‌ರಾಜು ನಿರ್ಮಾಣದ ʻವಾರಿಸುʼ ಸಿನಿಮಾ ತಮಿಳು ಮತ್ತು ತೆಲುಗಿನಲ್ಲಿ ರಿಲೀಸ್‌ ಆಗುತ್ತಿದೆ. ತೆಲುಗಿನಲ್ಲಿ ʻವಾರಸುಡುʼ ಹೆಸರಿನಲ್ಲಿ ಬಿಡುಗಡೆಗೊಳ್ಳುತ್ತಿದ್ದು, ಅವರ ಹೇಳಿಕೆ ಅವರಿಗೇ ಸಂಕಷ್ಟ ಎದುರಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿದೆ. ಈ ಚಿತ್ರವನ್ನು ತೆಲುಗಿನ ವಂಶಿ ಪೈಡಿಪಲ್ಲಿ ನಿರ್ದೇಶನ ಮಾಡುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ.

Telugu Film

ಕಾಂತಾರ ಎಫೆಕ್ಟ್‌!
ಕಾಂತಾರ ಸಿನಿಮಾದಿಂದಾಗಿಯೂ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ ಇಂತಹ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗುತ್ತಿದೆ. ಕಾಂತಾರ ಸಿನಿಮಾ ಬಿಡುಗಡೆಯ ಸಂದರ್ಭದಲ್ಲಿ ಚಿರಂಜೀವಿ ನಟನೆಯ ʻಗಾಡ್‌ ಫಾದರ್‌ʼ ಹಾಗೂ ನಾಗಾರ್ಜುನ್‌ ನಟನೆಯ ʻದಿ ಘೋಸ್ಟ್‌ʼ ಚಿತ್ರಗಳು ರಿಲೀಸ್‌ ಆಗಿತ್ತು. ಆದರೆ ಕಾಂತಾರ ಸಿನಿಮಾ ಈ ಸಿನಿಮಾಗಳನ್ನು ಹಿಂದಿಕ್ಕಿ ಭರ್ಜರಿ ಕಲೆಕ್ಷನ್‌ ಮಾಡಿದೆ. ಇದರಿಂದಾಗಿ ತೆಲುಗು ಚಲನಚಿತ್ರ ನಿರ್ಮಾಪಕರ ಮಂಡಳಿ ಈ ನಿಯಮ ಜಾರಿಗೆ ತಂದಿದೆ ಎಂದು ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆಗಳು ಆಗುತ್ತಿವೆ.

Telugu Film

ಇದನ್ನೂ ಓದಿ | Actress Ramya | ಕಾಲಿವುಡ್‌ ನಟ ಧನುಷ್‌ ಜತೆ ಕಾಣಿಸಿಕೊಂಡ ಮೋಹಕ ತಾರೆ ರಮ್ಯಾ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಟಾಲಿವುಡ್

Kajal Aggarwal: ವಿಷ್ಣು ಮಂಚು `ಕಣ್ಣಪ್ಪ’ ಚಿತ್ರಕ್ಕೆ ಕಾಜಲ್ ಅಗರ್​ವಾಲ್​​ ಎಂಟ್ರಿ; ಪಾತ್ರ ಏನಿರಬಹುದು?

Kajal Aggarwal: ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

VISTARANEWS.COM


on

Kajal Aggarwal Kannappa Movie Entry
Koo

ಬೆಂಗಳೂರು: ಪಾತ್ರವರ್ಗದ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡುತ್ತಿದೆ ತೆಲುಗಿನ ʻಕಣ್ಣಪ್ಪʼ ಸಿನಿಮಾ. ಆಗೊಬ್ಬರು ಈಗೊಬ್ಬರು ಈ ಚಿತ್ರದ ತಾರಾಬಳಗ ಸೇರಿಕೊಳ್ಳುತ್ತಲೇ ಇದ್ದಾರೆ. ಇದೀಗ ಮತ್ತೊಬ್ಬರು ಸ್ಟಾರ್‌ ನಟಿ ಈ ತಂಡ ಸೇರಿಕೊಂಡಿದ್ದಾರೆ. ಅದು ಬೇರಾರು ಅಲ್ಲ, ನಟಿ ಕಾಜಲ್‌ ಅಗರ್‌ವಾಲ್! ವಿಷ್ಣು ಮಂಚು ಮತ್ತು ಕಾಜಲ್‌ ಅಗರ್‌ವಾಲ್‌ (Kajal Aggarwal) ಈ ಹಿಂದೆ ತೆಲುಗಿನ ʻಮೊಸಗಲ್ಲುʼ ಚಿತ್ರದಲ್ಲಿ ಸಹೋದರ ಮತ್ತು ಸಹೋದರಿಯಾಗಿ ಕಾಣಿಸಿಕೊಂಡಿದ್ದರು. ಇದೀಗ ವಿಷ್ಣು ಮಂಚು ಅವರ ಬಹುನಿರೀಕ್ಷಿತ ಪ್ರಾಜೆಕ್ಟ್‌ ʻಕಣ್ಣಪ್ಪʼ ಚಿತ್ರಕ್ಕೂ ಆಗಮಿಸುವ ಮೂಲಕ ಎರಡನೇ ಸಲ ಒಂದಾಗುತ್ತಿದ್ದಾರೆ.

ಹಾಗಾದರೆ, ಕಾಜಲ್‌ ಅಗರ್‌ವಾಲ್‌ ಪಾತ್ರವೇನು? ಸದ್ಯಕ್ಕೆ ಆ ಬಗ್ಗೆ ಚಿತ್ರತಂಡ ರಿವೀಲ್‌ ಮಾಡಿಲ್ಲ. ಬದಲಿಗೆ ವಿಶೇಷವಾದ ಪಾತ್ರವೊಂದರಲ್ಲಿ ಕಾಜಲ್‌ ನಟಿಸುವ ಮೂಲಕ ಕಣ್ಣಪ್ಪ ಸಿನಿಮಾದ ಭಾಗವಾಗಲಿದ್ದಾರೆ. ಈ ಸಿನಿಮಾದ ಶೂಟಿಂಗ್‌ ಸಹ ಅಷ್ಟೇ ಬಿರುಸಾಗಿಯೇ ನಡೆಯುತ್ತಿದೆ.

ಈ ಚಿತ್ರದಲ್ಲಿ ಮೋಹನ್ ಬಾಬು, ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಮತ್ತು ಶರತ್‌ಕುಮಾರ್ ಸೇರಿ ಬಹು ತಾರಾಗಣವೇ ಇದೆ. ಇತ್ತೀಚೆಗಷ್ಟೇ ಬಾಲಿವುಡ್‌ ನಟ ಅಕ್ಷಯ್ ಕುಮಾರ್ ಸಹ ಈ ಚಿತ್ರದ ಮೂಲಕ ಸೌತ್‌ ಕಡೆಗೆ ವಾಲಿದ್ದಾರೆ. ತಮ್ಮ ಭಾಗದ ಚಿತ್ರೀಕರಣವನ್ನೂ ಪೂರ್ಣಗೊಳಿಸಿದ್ದಾರೆ. ಪ್ರಭಾಸ್ ಸಹ ಕೆಲವು ದಿನಗಳ ಹಿಂದೆ ಕಣ್ಣಪ್ಪ ತಂಡವನ್ನು ಸೇರಿಕೊಂಡರು. ಈಗ ಕಾಜಲ್‌ ಅಗರ್‌ವಾಲ್‌ ಸರದಿ.

ಇದನ್ನೂ ಓದಿ: Kajal Aggarwal: ಸೆಲ್ಫಿ ನೆಪದಲ್ಲಿ ನಟಿ ಕಾಜಲ್ ಸೊಂಟ ಮುಟ್ಟಿದ ವ್ಯಕ್ತಿ: ವಿಡಿಯೊ ವೈರಲ್‌!


ಕಣ್ಣಪ್ಪ’ ಸಿನಿಮಾ ವ್ಯಕ್ತಿಯ ಅಚಲವಾದ ಭಕ್ತಿಯ ಮೇಲೆ ಬೆಳಕು ಚೆಲ್ಲುವ ಸಿನಿಮಾ ಆಗಿದೆ. ನಾಸ್ತಿಕನಾದ ಕಣ್ಣಪ್ಪ ಮಹಾನ್ ಶಿವನ ಆರಾಧಕನಾಗಿ ಬದಲಾದ ವಿಸ್ಮಯಕಾರಿ ಕತೆಯನ್ನು ಸಿನಿಮಾ ಒಳಗೊಂಡಿದೆ. ಈ ಚಿತ್ರವು ಶಿವನ ಭಕ್ತನಾಗಿದ್ದ ಭಕ್ತ ಕಣ್ಣಪ್ಪನ ಜೀವನವನ್ನು ಆಧರಿಸಿದೆ ಎಂದು ವರದಿಯಾಗಿದೆ.

ಮೋಹನ್ ಬಾಬು ನಿರ್ಮಿಸುತ್ತಿರುವ ಕಣ್ಣಪ್ಪ ಚಿತ್ರವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡುತ್ತಿದ್ದಾರೆ. ತೆಲುಗು ಮಾತ್ರವಲ್ಲದೆ, ತಮಿಳು, ಕನ್ನಡ, ಮಲಯಾಳಂ, ಹಿಂದಿ ಸೇರಿ ಇನ್ನೂ ಹಲವು ಭಾರತೀಯ ಭಾಷೆಗಳಿಗೂ ಈ ಚಿತ್ರ ಡಬ್‌ ಆಗಿ ರಿಲೀಸ್‌ ಆಗಲಿದೆ. ಅದೇ ರೀತಿ ಚಿತ್ರೀಕರಣದ ಮುಕ್ತಾಯದ ಹಂತಕ್ಕೂ ಬಂದು ನಿಂತಿರುವ ಈ ಸಿನಿಮಾ ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕವೂ ಘೋಷಣೆ ಆಗಲಿದೆ.

Continue Reading

South Cinema

Pavithra Jayaram: ಗೆಳೆಯ ಚಂದು ಜತೆ ಪವಿತ್ರ ಜಯರಾಮ್ ರೀಲ್ಸ್ ನೋಡಿದ್ರೆ ಕಣ್ಣು ಒದ್ದೆಯಾಗುತ್ತೆ!

Pavithra Jayaram: ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

VISTARANEWS.COM


on

Pavithra Jayaram Last Instagram post to chandrakanth
Koo

ಬೆಂಗಳೂರು: ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ (Trinayani Serial) ಜನಪ್ರಿಯರಾಗಿದ್ದ ಕನ್ನಡತಿ ಪವಿತ್ರ ಜಯರಾಮ್ (Pavithra Jayaram)‌ ಅವರು ಅಪಘಾತದಲ್ಲಿ ಮೃತಪಟ್ಟ ಬೆನ್ನಲ್ಲೇ ಅವರ ಪ್ರಿಯತಮ, ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿಯ ಸಾವಿನ ಸುದ್ದಿ ಹೊರಬೀಳುತ್ತಿದ್ದಂತೆ, ಚಂದ್ರಕಾಂತ್‌ ಅವರು ಪವಿತ್ರ ಜಯರಾಮ್ ಜತೆ ರೀಲ್ಸ್‌ ಮಾಡಿರುವ ವಿಡಿಯೊಗಳು ವೈರಲ್‌ ಆಗುತ್ತಿವೆ.

ಇನ್‌ಸ್ಟಾಗ್ರಾಮ್ ವೀಡಿಯೊದಲ್ಲಿ ‘ತ್ರಿನಯನಿ’ ನಟಿ ಸೀರೆಯನ್ನು ಧರಿಸಿ ನಟ ಚಂದ್ರಕಾಂತ್‌ ಜತೆ ಪುಟ್ಟಮಲ್ಲಿ ಸಾಂಗ್‌ಗೆ ಹೆಜ್ಜೆ ಹಾಕಿದ್ದರು. ‘ತ್ರಿನಯನಿ’ಯಲ್ಲಿ ಸಹೋದರ ಪಾತ್ರ ನಿಭಾಯಿಸುತ್ತಿದ್ದರು ಚಂದ್ರಕಾಂತ್‌. ಚಂದ್ರಕಾಂತ್‌ ಕೊನೆಯ ಪೋಸ್ಟ್‌ನಲ್ಲಿ “ನನ್ನ ಪ್ರೀತಿ ಯಾವಾಗಲೂ ನಿನಗೆ. ಮಿಸ್ ಯೂ ಪಾಪಾʼʼ ಎಂದು ಬರೆಯಲಾಗಿತ್ತು. ಪೋಸ್ಟ್‌ ಮಾಡಿದ ಕೆಲವೇ ಗಂಟೆಗಳಲ್ಲಿ ವಿಡಿಯೊ ಡಿಲಿಟ್‌ ಮಾಡಿದ್ದರು ನಟ.

ಇದನ್ನೂ ಓದಿ: Pavithra Jayaram: ಪವಿತ್ರ ಜಯರಾಂಗೆ ಅಂತಿಮ ವಿದಾಯ; ಭಯದಲ್ಲೇ ಪ್ರಾಣ ಬಿಟ್ರಾ ನಟಿ?

ಇದೀ ನಟ ಚಂದ್ರಕಾಂತ್‌ (Chandrakanth) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಂಧ್ರಪ್ರದೇಶದಲ್ಲಿ (Andhra Pradesh) ಚಂದ್ರಕಾಂತ್‌ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಪವಿತ್ರ ಜಯರಾಮ್‌ ಅವರ ನಿಧನದ ಬಳಿಕ ಖಿನ್ನತೆಗೊಳಗಾಗಿದ್ದ ಅವರು ನೇಣಿಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಂಧ್ರಪ್ರದೇಶದ ರಂಗಾರೆಡ್ಡಿ ಜಿಲ್ಲೆ ನರಸಿಂಗ್‌ ಪೊಲೀಸ್‌ ಠಾಣೆ ವ್ಯಾಪ್ತಿಯ ಅಲ್ಕಾಪುರ ಕಾಲೊನಿಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ. ಪವಿತ್ರಾ ಜಯರಾಮ್‌ ಅವರು ಕಾರು ಅಪಘಾತದಲ್ಲಿ ಮೇ 12ರಂದು ಮೃತಪಟ್ಟಿದ್ದರು. ಅದೇ ಕಾರಿನಲ್ಲಿ ಚಂದ್ರಕಾಂತ್‌ ಅವರು ಕೂಡ ತೆರಳುತ್ತಿದ್ದಾರೆ. ಘಟನೆಯ ಬಳಿಕ ನೊಂದಿದ್ದ ಅವರು ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಟಿಯ ಅಗಲಿಕೆಯ ನೋವು ತಾಳದೆ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

ದುರಂತ ಸಾವು

ಆಂಧ್ರಪ್ರದೇಶದ ಕರ್ನೂಲು ಬಳಿ ಮೇ 12ರಂದು ಬೆಳಗ್ಗೆ ಅಪಘಾತ ಸಂಭವಿಸಿತ್ತು. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ತ್ರಿನಯನಿ ಧಾರವಾಹಿಯಲ್ಲಿ ಜನಪ್ರಿಯರಾಗಿದ್ದರು. ಕನ್ನಡದ ʻರೋಬೊ ಫ್ಯಾಮಿಲಿʼ ಮೂಲಕ ಕಿರುತೆರೆಗೆ ಎಂಟ್ರಿಕೊಟ್ಟಿದ್ದ ಪವಿತ್ರ ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ನಟಿ ರೋಬೊ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾರಮಣ ಧಾರವಾಹಿಯಲ್ಲಿ ನಟಿಸಿ ಮನೆಮಾತಾಗಿದ್ದರು. ಚಂದ್ರಕಾಂತ್‌ ಕೂಡ ನಟರಾಗಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿಶ್ಚಯಿಸಿದ್ದರು. ಆದರೆ, ಒಂದೇ ವಾರದಲ್ಲಿ ಇಬ್ಬರೂ ದುರಂತ ಸಾವು ಕಂಡಿದ್ದಾರೆ.

ನಟಿ ಕರ್ನಾಟಕದಲ್ಲಿ ಹುಟ್ಟಿದ್ದರೂ ಕೂಡ ಹೆಚ್ಚು ಫೇಮಸ್‌ ಆದದ್ದು ತೆಲುಗಿನ ‘ತ್ರಿನಯನಿ’ ಧಾರಾವಾಹಿಯಿಂದ . ಈ ಬಗ್ಗೆ ನಟಿ ಈ ಹಿಂದೆ ಮಾಧ್ಯಮವೊಂದರಲ್ಲಿ ಹೇಳಿಕೊಂಡಿದ್ದರು. ʻʻನಾನು ಹುಟ್ಟಿ ಬೆಳೆದದ್ದು ಕರ್ನಾಟಕದಲ್ಲಿ. ಆದರೆ ಕನ್ನಡಕ್ಕಿಂತ ನನಗೆ ಹೆಚ್ಚು ಹೆಸರು ಕೊಟ್ಟಿದ್ದು ತೆಲುಗು. ‘ತ್ರಿನಯನಿ’ ಧಾರಾವಾಹಿ ಮುಂಚೆ ಅನೇಕ ಕನ್ನಡ ಧಾರಾವಾಹಿಯಲ್ಲಿ ನಟಿಸಿದ್ದರು ಅಷ್ಟಾಗಿ ಫಾಲೋವರ್ಸ್‌ ಇರಲಿಲ್ಲ. ಆದರೆ ‘ತ್ರಿನಯನಿ’ ಧಾರಾವಾಹಿ ಕನ್ನಡದಲ್ಲಿಯೂ ಡಬ್‌ ಆಗುತ್ತಿತ್ತು. ಹೀಗಾಗಿ ಕನ್ನಡದಲ್ಲಿಯೂ ತುಂಬಾ ಫ್ಯಾನ್ ಪೇಜ್‌ಗಳು ಶುರುವಾದವುʼʼಎಂದಿದ್ದರು.

Continue Reading

ಟಾಲಿವುಡ್

Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Pushpa 2: ಅನಸೂಯಾ ಅವರ ಹುಟ್ಟುಹಬ್ಬಕ್ಕೆ (ಮೇ 15) ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್‌ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್‌ನಲ್ಲಿ ಮಾಸ್ ಆಗಿ ಕಂಡಿದ್ದಾರೆ. ಅನಸೂಯಾ ಸೀರೆಯುಟ್ಟು ಮೈ ತುಂಬಾ ಆಭರಣ ಧರಿಸಿ ಖಡಕ್ ಆಗಿ ಪೋಸ್ ಕೊಟ್ಟಿದ್ದಾರೆ.

VISTARANEWS.COM


on

Pushpa 2 Allu Arjun anasuya bharadwaj poster look out
Koo

ಬೆಂಗಳೂರು: ಐಕಾನ್ ಸ್ಟಾರ್​ ಅಲ್ಲು ಅರ್ಜುನ್ (Allu Arjun) ಮತ್ತು ನ್ಯಾಷನಲ್ ಕ್ರಶ್​ ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2: ದಿ ರೂಲ್’ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಭಿಮಾನಿಗಳು ಚಿತ್ರಕ್ಕಾಗಿ ಕುತೂಹಲದಿಂದ ಕಾಯುತ್ತಿದ್ದ ನಡುವೆ ಪುಷ್ಪ 2 ಮುಂದೂಡಲ್ಪಡಬಹುದು (Pushpa 2) ಎಂಬ ವದಂತಿಗಳು ಅವರನ್ನು ಬೇಸರಕ್ಕೆ ತಳ್ಳಿತ್ತು. ಆದರೆ ತಯಾರಕರು ಅಂತಿಮವಾಗಿ ಅದು ನಿಜವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೀಗ ಸಿನಿಮಾ ಪ್ರಮುಖ ಪಾತ್ರಗಳಲ್ಲಿ ಒಂದಾದ ಅನಸೂಯಾ ಭಾರದ್ವಾಜ್ ಅವರ ಜನ್ಮದಿನದಂದು ತಂಡ ಹೊಸ ಪೋಸ್ಟರ್ ಅನ್ನು ಹಂಚಿಕೊಂಡಿದೆ. ಅನಸೂಯಾ ಅವರ ಹುಟ್ಟುಹಬ್ಬದ ಗೌರವಾರ್ಥವಾಗಿ, ಚಿತ್ರ ನಿರ್ಮಾಪಕರು ಅವರ ಫಸ್ಟ್‌ ಲುಕ್‌ ಅನಾವರಣಗೊಳಿಸಿದ್ದಾರೆ.

ಅನಸೂಯಾ ಅವರ ಹುಟ್ಟುಹಬ್ಬಕ್ಕೆ (ಮೇ 15) ದಾಕ್ಷಾಯಿಣಿ ಪಾತ್ರದ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಅಭಿಮಾನಿಗಳು ಫಸ್ಟ್ ಲುಕ್‌ಗೆ ಫಿದಾ ಆಗಿದ್ದಾರೆ. ಜಬರ್ದಸ್ತ್ ಲುಕ್‌ನಲ್ಲಿ ಮಾಸ್ ಆಗಿ ಕಂಡಿದ್ದಾರೆ. ಅನಸೂಯಾ ಸೀರೆಯುಟ್ಟು ಮೈ ತುಂಬಾ ಆಭರಣ ಧರಿಸಿ ಖಡಕ್ ಆಗಿ ಪೋಸ್ ಕೊಟ್ಟಿದ್ದಾರೆ.

ಹೀರೋ ಅಲ್ಲು ಅರ್ಜುನ್‌ಗೆ (Allu Arjun) ಅನಸೂಯಾ ಖಡಕ್ ವಿಲನ್ ಆಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ (Rashmika Mandanna) ನಟಿಸಿದ್ದಾರೆ. ಜೊತೆಗೆ ಫಹಾದ್ ಫಾಸಿಲ್, ಡಾಲಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: Allu Arjun: ʻಪುಷ್ಪ 2ʼ ಸಿನಿಮಾಗೆ ಹೆದರಿತಾ ʻಸಿಂಗಂʼ? ಅಜಯ್ ದೇವಗನ್ ಸಿನಿಮಾ ಮುಂದೂಡಿಕೆ!

ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ಅಲ್ಲು ಅರ್ಜುನ್ ಜೊತೆಗೆ ರಶ್ಮಿಕಾ ಮಂದಣ್ಣ ಕೂಡ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಈ ವರ್ಷದ ಆರಂಭದಲ್ಲಿ, ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದಂದು ಪುಷ್ಪ 2 ತಯಾರಕರು ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಿದರು. ಟೀಸರ್​ನಲ್ಲಿ ಅಲ್ಲು ಅರ್ಜುನ್ ಸೀರೆ ಉಟ್ಟು, ಮುಖವನ್ನು ನೀಲಿ ಮತ್ತು ಕೆಂಪು ಬಣ್ಣಗಳನ್ನು ಮೆತ್ತಿಕೊಂಡಿದ್ದಾರೆ. ಅವರು ಭಾರವಾದ ಸಾಂಪ್ರದಾಯಿಕ ಚಿನ್ನ ಮತ್ತು ಹೂವಿನ ಆಭರಣಗಳೊಂದಿಗೆ ಮೇಕಪ್ ಧರಿಸಿದ್ದರು. ಅವರು ಗೂಂಡಾಗಳನ್ನು ಹೊಡೆಯುತ್ತಿರುವುದು ಕಂಡುಬಂದಿದೆ.

ಪುಷ್ಪಾ 2 ಅನ್ನು ಚಿತ್ರಮಂದಿರಗಳಲ್ಲಿ ನೋಡಲು ಎಲ್ಲರೂ ಉತ್ಸುಕರಾಗಿದ್ದಾರೆ. ಚಿತ್ರವು ಖಂಡಿತವಾಗಿಯೂ ಬಾಕ್ಸ್ ಆಫೀಸ್ ಆಳುತ್ತಿದೆ. ಪುಷ್ಪಾ 2 ಚಿತ್ರದ ಥಿಯೇಟರ್ ಹಕ್ಕುಗಳನ್ನು ಅನಿಲ್ ತಡಾನಿ 200 ಕೋಟಿ ರೂ.ಗೆ ಮುಂಗಡವಾಗಿ ಖರೀದಿಸಿದ್ದಾರೆ ಎಂದು ಪಿಂಕ್​ವಿಲ್ಲಾ ಇತ್ತೀಚೆಗೆ ವರದಿ ಮಾಡಿತ್ತು.

`ಪುಷ್ಪ 2′ ಸಿನಿಮಾದ ಈ ಒಂದು ದೃಶ್ಯಕ್ಕೆ 50 ಕೋಟಿ ರೂ. ಖರ್ಚು!

ಪುಷ್ಪ 2 ಸಿನಿಮಾ ಕಂಡು ಸಿನಿಪ್ರಿಯರು ಬೆರಗಾಗಿದ್ದಾರೆ. ಟೀಸರ್‌ನಲ್ಲಿ ಹೆಚ್ಚು ಹೈಲೈಟ್‌ ಆಗಿದ್ದು, ಗಂಗಮ್ಮ ಜಾತ್ರೆ. ಈ ಜಾತ್ರೆಯಲ್ಲಿ ಅಲ್ಲು ಅರ್ಜುನ್ ಸೀರೆ ಧರಿಸಿ ಸಖತ್‌ ರಗಡ್‌ ಲುಕ್‌ನಲ್ಲಿ ಕಂಡಿದ್ದರು. ಈ ಸೆಟ್‌ಗೆ ಚಿತ್ರತಂಡ ಖರ್ಚು ಮಾಡಿದ್ದು ಐವತ್ತು ಕೋಟಿ ರೂ. ಎಂದು ವರದಿಯಾಗಿದೆ.

ಹೈದಬಾರಾದ್‌ನ ಗಂದಿಪೇಟ್‌ನಲ್ಲಿರುವ ಅಲ್ಲು ಸ್ಟುಡಿಯೋಸ್‌ನಲ್ಲಿ ಹಾಕಲಾದ ಈ ಸೆಟ್ ನಲ್ಲಿ ಪ್ರತಿ ದಿನ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಕಲಾವಿದರು ಕಂಡು ಬರುತ್ತಿದ್ದರು ಎಂದು ವರದಿಯಾಗಿದೆ. ಮುಂಬೈನಿಂದ ಮೋಕೊಬೋಟ್ ಕ್ಯಾಮೆರಾವನ್ನು ಸುಕುಮಾರ್ ತರಿಸಿಕೊಂಡಿದ್ದರು. ಇದೆಲ್ಲದಕ್ಕೂ ಖರ್ಚಾಗಿದ್ದು ಮೂವತ್ತು ಕೋಟಿ ರೂ. ಎನ್ನಲಾಗಿದೆ. ವಿಶೇಷ ಏನೆಂದರೆ, ನಿರ್ದೇಶಕ ಸುಕುಮಾರ್ ಅವರು ಈ ಜಾತ್ರೆಯ ಸನ್ನಿವೇಶವನ್ನು ಸುಮಾರು 30ಕ್ಕೂ ಅಧಿಕ ದಿನಗಳ ಕಾಲ ಹೈದರಾಬಾದ್‌ನಲ್ಲಿ ಚಿತ್ರೀಕರಣ ಮಾಡಿದ್ದಾರೆ.

ಸೆಟ್‌ ಅಲ್ಲದೇ ಕಲಾವಿದರ ಸಂಭಾವನೆ, ಮೇಕಪ್‌, ನೂರಾರು ಕಲಾವಿದರ ಸಂಭಾವನೆ, ವಿಶುವಲ್ ಎಫೆಕ್ಟ್ಸ್, ಪೋಸ್ಟ್ ಪ್ರೊಡಕ್ಷನ್ ವರ್ಕ್‌, ಸೌಂಡ್ ಡಿಸೈನ್ ಹೀಗೆ ಎಲ್ಲವೂ ಸೇರಿ ಬರೋಬ್ಬರಿ 50 ಕೋಟಿ ರೂ. ಖರ್ಚಾಗಿದೆ ಎಂದು ವರದಿಯಾಗಿದೆ.

Continue Reading

ಟಾಲಿವುಡ್

Anushka Shetty: ಕನ್ನಡ ನಿರ್ಮಾಪಕನ ಜತೆ ʻಟಾಲಿವುಡ್‌ ಸ್ವೀಟಿʼ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆ ನಿರ್ಮಾಪಕನಿಗೂ 42 ವರ್ಷ ಎಂದು ವರದಿಗಳಾಗಿವೆ. ಅನುಷ್ಕಾ ಶೆಟ್ಟಿ ಕನ್ನಡದ ನಟಿಯೇ ಆಗಿದ್ದರೂ, ತೆಲುಗು ಸಿನಿಮಾಗಳಿಂದ ವೃತ್ತಿ ಬದುಕನ್ನು ಆರಂಭಿಸಿದ್ದರು.ಇದೀಗ ತೆಲುಗು ಮಾಧ್ಯಮಗಳು ಅನುಷ್ಕಾ ಶೆಟ್ಟಿ ಶೀಘ್ರದಲ್ಲಿಯೇ ಮದುವೆ ಆಗಲಿದ್ದಾರೆ ಎಂದು ವರದಿ ಮಾಡಿವೆ.

VISTARANEWS.COM


on

Anushka Shetty producer marriage news viral
Koo

ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿ (Anushka Shetty) ಮದುವೆ ವದಂತಿಗಳು ಹೊಸದೇನಲ್ಲ. ಹಲವು ಬಾರಿ ಪ್ರಭಾಸ್  ಜತೆ ನಟಿಯ ಹೆಸರು ತುಳುಕು ಹಾಕಿಕೊಂಡಿತ್ತು. ಕಳೆದ ಕೆಲವು ವರ್ಷಗಳಿಂದ ಜೋಡಿ ರಿಲೇಶನ್‌ಶಿಪ್‌ನಲ್ಲಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಬಳಿಕ ತಾವು ಉತ್ತಮ ಸ್ನೇಹಿತರು ಎಂದು ಹೇಳಿಕೊಂಡಿದ್ದರು. ಇದೀಗ ತೆಲುಗು ಮಾಧ್ಯಮಗಳು ಅನುಷ್ಕಾ ಶೆಟ್ಟಿ ಶೀಘ್ರದಲ್ಲಿಯೇ ಮದುವೆ ಆಗಲಿದ್ದಾರೆ ಎಂದು ವರದಿ ಮಾಡಿವೆ.

ಕನ್ನಡದ ದೊಡ್ಡ ನಿರ್ಮಾಪಕನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರಂತೆ. ಎರಡೂ ಕುಟುಂಬಗಳು ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆ ನಿರ್ಮಾಪಕನಿಗೂ 42 ವರ್ಷ ಎಂದು ವರದಿಗಳಾಗಿವೆ. ಅನುಷ್ಕಾ ಶೆಟ್ಟಿ ಕನ್ನಡದ ನಟಿಯೇ ಆಗಿದ್ದರೂ, ತೆಲುಗು ಸಿನಿಮಾಗಳಿಂದ ವೃತ್ತಿ ಬದುಕನ್ನು ಆರಂಭಿಸಿದ್ದರು. ಅಕ್ಕಿನೇನಿ ನಾಗಾರ್ಜುನ ನಟಿಸಿದ್ದ ‘ಸೂಪರ್’ ಸಿನಿಮಾ ಮೂಲಕ ಟಾಲಿವುಡ್‌ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದರು.’ಅರುಂಧತಿ’, ‘ಬಾಹುಬಲಿ’ ಅಂತಹ ಸಿನಿಮಾ ಅನುಷ್ಕಾ ಶೆಟ್ಟಿ ವೃತ್ತಿ ಬದುಕಿಗೆ ಹೊಸ ತಿರುವನ್ನು ಕೊಟ್ಟಿತ್ತು. ಅದರಲ್ಲೂ ‘ಬಾಹುಬಲಿ’ ಸಿನಿಮಾ ಜಗತ್ತಿನಾದ್ಯಂತ ಸದ್ದು ಮಾಡಿತ್ತು.

ಇದನ್ನೂ ಓದಿ: Anushka Shetty: ಬಿಜೆಪಿ ಬೆಂಬಲಿತ ಪವನ್ ಕಲ್ಯಾಣ್ ಪಕ್ಷ ಸೇರಲಿದ್ದಾರಂತೆ ನಟಿ ಅನುಷ್ಕಾ ಶೆಟ್ಟಿ!

ಕೆಲ ದಿನಗಳ ಹಿಂದೆ ನಿರ್ದೇಶಕ ಕ್ರಿಶ್ ಅವರು ಅನುಷ್ಕಾ ಶೆಟ್ಟಿ (Anushka Shetty) ಜತೆ ಗುಟ್ಟಾಗಿ ಹೊಸ ಸಿನಿಮಾ ಶುರು ಮಾಡಿದ್ದಾರೆ ಎಂದು ವರದಿ ಆಗಿದ್ದವು. ಯುವಿ ಕ್ರಿಯೇಷನ್ಸ್ ಈ ಚಿತ್ರ ಮಹಿಳಾ ಪ್ರಧಾನ ಸಿನಿಮಾವಾಗಿದೆ. 14 ವರ್ಷಗಳ ಹಿಂದೆ ಬಂದಿದ್ದ ‘ವೇದಂ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ವೇಶ್ಯೆಯ ಪಾತ್ರದಲ್ಲಿ ನಟಿಸಿದ್ದರು. ಆ ಚಿತ್ರಕ್ಕೆ ಕ್ರಿಶ್ ಆ್ಯಕ್ಷನ್ ಕಟ್ ಹೇಳಿದ್ದರು. ಅದೇ ಕಾಂಬಿನೇಷನ್‌ನಲ್ಲಿ ಹೊಸದೊಂದು ಸಿನಿಮಾ ಮೂಡಿ ಬರುತ್ತಿದೆ. ಇದೀಗ ಆ ಚಿತ್ರದ ಟೈಟಲ್ ರಿವೀಲ್ ಆಗಿದೆ. ‘ಘಾಟಿ’ ಎನ್ನುವ ಟೈಟಲ್ (Ghaati Title) (UV Creations) ಫೈನಲ್ ಮಾಡಲಾಗಿದೆ. ಇದು ತೆಲುಗು ಸಿನಿಮಾ. ಅಷ್ಟೇ ಅಲ್ಲ ಪೋಸ್ಟ್ ಥ್ರಿಯೇಟ್ರಿಕಲ್ ಒಟಿಟಿ ಪಾರ್ಟ್‌ನರ್‌ ಕೂಡ ಫಿಕ್ಸ್ ಆಗಿದ್ದಾರೆ. ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ಚಿತ್ರದ ನಂತರ ಈಗ ಮತ್ತೆ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನುಷ್ಕಾ.

ತೆಲುಗು ಚಿತ್ರರಂಗದ ಜನಪ್ರಿಯ ನಿರ್ದೇಶಕರಲ್ಲಿ ಕ್ರಿಶ್ ಒಬ್ಬರು. ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಅವರದ್ದು ವೇಶ್ಯೆ ಪಾತ್ರ ಎಂದು ಹೇಳಲಾಗುತ್ತಿದೆ. ಅನುಷ್ಕಾ ಶೆಟ್ಟಿ ಜತೆ ಈ ಚಿತ್ರಕ್ಕೆ ಕ್ರಿಶ್ ಈ ಸಿನಿಮಾ ಮಾಡಿದ ಬಳಿಕ ಪವನ್‌ ಕಲ್ಯಾಣ್‌ ಜತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ.

ಅಮೆಜಾನ್ ಪ್ರೈಂ ಸಂಸ್ಥೆ ಮುಂದಿನ 2 ವರ್ಷಗಳಲ್ಲಿ ಸ್ಟ್ರೀಮಿಂಗ್ ಮಾಡುವ ಸಿನಿಮಾ ಹಾಗೂ ವೆಬ್‌ ಸೀರಿಸ್ ಲಿಸ್ಟ್ ಬಿಡುಗಡೆ ಮಾಡಿದೆ. ಆ ಲಿಸ್ಟ್‌ನಲ್ಲಿ ಅನುಷ್ಕಾ ಶೆಟ್ಟಿ ನಟನೆಯ ‘ಘಾಟಿ’ ಸಿನಿಮಾ ಕೂಡ ಇದೆ. ಇನ್ನು ಯುವಿ ಕ್ರಿಯೇಷನ್ಸ್ ಜತೆಗೆ ಫಸ್ಟ್ ಫ್ರೇಮ್ಸ್ ಎಂಟರ್‌ಟ್ರೈನ್‌ಮೆಂಟ್ಸ್ ಸಂಸ್ಥೆ ಕೂಡ ಸಿನಿಮಾ ನಿರ್ಮಾಣಕ್ಕೆ ಕೈಜೋಡಿಸಿದೆ.

ಚಿಂತಕಿಂಡಿ ಶ್ರೀನಿವಾಸ್ ರಾವ್, ಕ್ರಿಶ್ ಹಾಗೂ ಸಾಯಿಮಾಧವ ಬುರ್ರಾ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಆಂಧ್ರ ಮತ್ತು ಒಡಿಶಾ ಗಡಿಯಲ್ಲಿ ‘ಘಾಟಿ’ ಚಿತ್ರದ ಬಹುತೇಕ ಚಿತ್ರೀಕರಣ ನಡೆಯುತ್ತಿದೆ. ಇತ್ತೀಚೆಗೆ ರಮ್ಯಾ ಕೃಷ್ಣನ್ ಛತ್ತೀಸ್‌ಗಢದ ತಿರತ್‌ಗಢದಲ್ಲಿ ನಡೆದ ಚಿತ್ರೀಕರಣದಲ್ಲಿ ಕೂಡ ಭಾಗಿ ಆಗಿದ್ದರು.

Continue Reading
Advertisement
Virat kohli
ಪ್ರಮುಖ ಸುದ್ದಿ19 mins ago

Virat kohli : ಚೆನ್ನೈ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ವಿರಾಟ್​ ಕೊಹ್ಲಿ

Health Tips in Kannada
ಆರೋಗ್ಯ22 mins ago

Health Tips in Kannada: ಕಾಮಕಸ್ತೂರಿ ಬೀಜದ ಪಾನಕ ಕುಡಿದರೆ ಆರೋಗ್ಯ ವೃದ್ಧಿ ಪಕ್ಕಾ!

Dina bhavishya
ಭವಿಷ್ಯ1 hour ago

Dina Bhavishya : ಈ ರಾಶಿಯವರಿಗೆ ರಹಸ್ಯ ಕಾರ್ಯಗಳಿಂದಲೂ ಸಿಗುತ್ತೆ ಯಶಸ್ಸು

Karnataka Police
ಸಂಪಾದಕೀಯ6 hours ago

ವಿಸ್ತಾರ ಸಂಪಾದಕೀಯ: ರಾಜ್ಯದಲ್ಲಿ ಕೊಲೆಗಳ‌ ಸರಮಾಲೆ; ಪೊಲೀಸ್ ಇಲಾಖೆ ಯಾಕಿಷ್ಟು‌ ದುರ್ಬಲವಾಗಿದೆ?

Jammu Kashmir
ದೇಶ6 hours ago

Jammu Kashmir: ಕಾಶ್ಮೀರದ 2 ಕಡೆ ಉಗ್ರರ ದಾಳಿ; ಮಾಜಿ ಸರ್ಪಂಚ್‌ ಬಲಿ, ರಾಜಸ್ಥಾನದ ದಂಪತಿಗೆ ಗಾಯ

RCB vs CSK
ಕ್ರೀಡೆ6 hours ago

RCB vs CSK: ಇದು ಆರ್​ಸಿಬಿಯ ಹೊಸ ಅಧ್ಯಾಯ; ಹಾಲಿ ಚಾಂಪಿಯನ್​ ಚೆನ್ನೈ ಮಣಿಸಿ ಪ್ಲೇ ಆಫ್​ಗೆ ಲಗ್ಗೆ

Anjali Murder Case
ಕರ್ನಾಟಕ7 hours ago

Anjali Murder Case: ಅಂಜಲಿ ಹತ್ಯೆ ಪ್ರಕರಣ; ಹು-ಧಾ ಐಪಿಎಸ್ ಅಧಿಕಾರಿಯ ತಲೆದಂಡ

Narendra Modi
ದೇಶ7 hours ago

Narendra Modi: ಗುರಿ ದೊಡ್ಡದಿದೆ, 3ನೇ ಅವಧಿಯ ಆಡಳಿತಕ್ಕೆ ಪ್ಲಾನ್‌ ರೆಡಿ ಇದೆ; ಮೋದಿ ವಿಶ್ವಾಸ

RCB vs CSK
ಕರ್ನಾಟಕ8 hours ago

RCB vs CSK: ಆರ್‌ಸಿಬಿ-ಸಿಎಸ್‌ಕೆ ಪಂದ್ಯದ ವೇಳೆ ಚಿನ್ನಸ್ವಾಮಿ ಮೈದಾನಕ್ಕೆ ನುಗ್ಗುತ್ತೇನೆ ಎಂದಿದ್ದ ಯುವಕ ವಶಕ್ಕೆ

Bank of Bhagyalakshmi movie poster released
ಸಿನಿಮಾ8 hours ago

Kannada New Movie: ಬ್ಯಾಂಕ್‌ ಆಫ್‌ ಭಾಗ್ಯಲಕ್ಷ್ಮೀ ಸಿನಿಮಾದ ಪೋಸ್ಟರ್ ಔಟ್‌; ಶೀಘ್ರದಲ್ಲೇ ತೆರೆಗೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ1 day ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ2 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ4 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20245 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌