Site icon Vistara News

Thalapathy Vijay: 20 ವರ್ಷಗಳ ನಂತರ ಮತ್ತೆ ಒಂದಾಗಲಿದ್ಯಾ ವಿಜಯ್‌-ಜ್ಯೋತಿಕಾ ಜೋಡಿ?

Thalapathy Vijay Jyothika

ಬೆಂಗಳೂರು: ಲೋಕೇಶ್ ಕನಕರಾಜ್ ನಿರ್ದೇಶನದ ‘ಲಿಯೋ’ ಚಿತ್ರದ ಶೂಟಿಂಗ್‌ ಮುಗಿಸಿ ದಳಪತಿ ವಿಜಯ್ (Thalapathy Vijay) ಯುರೋಪ್‌ನಲ್ಲಿ ವಕೇಶನ್‌ ಮೂಡ್‌ನಲ್ಲಿ ಇದ್ದಾರೆ. ನಿರ್ದೇಶಕ ವೆಂಕಟ್ ಪ್ರಭು ಅವರು ತಾತ್ಕಾಲಿಕವಾಗಿ ‘ದಳಪತಿ 68’ (Thalapathy 68) ಎಂದು ಹೆಸರಿಡದ ಸಿನಿಮಾದಲ್ಲಿ ಪ್ರಿ ಪ್ರೊಡಕ್ಷನ್‌ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಚಿತ್ರಕ್ಕೆ ಯುವನ್ ಶಂಕರ್ ರಾಜಾ ಸಂಗೀತ ನೀಡುತ್ತಿದ್ದು, ಎಜಿಎಸ್ ಪ್ರೊಡಕ್ಷನ್ಸ್ ಬಂಡವಾಳ ಹೂಡುತ್ತಿದೆ. ಒಂದೆರಡು ತಿಂಗಳ ಹಿಂದೆ ಜ್ಯೋತಿಕಾ ನಾಯಕಿಯಾಗಿ ಈ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಊಹಿಸಲಾಗಿತ್ತು. ಈ ಚಿತ್ರದಲ್ಲಿ ಜ್ಯೋತಿಕಾ (Jyotika) ಕೂಡ ನಟಿಸುತ್ತಾರೆ ಎನ್ನಲಾಗಿದೆ . ಬರೋಬ್ಬರಿ 20 ವರ್ಷಗಳ ನಂತರ (Jyothika onscreen after 20 years) ವಿಜಯ್- ಜ್ಯೋತಿಕಾ ತೆರೆಯ ಮೇಲೆ ಕಮಾಲ್ ಮಾಡಲು ರೆಡಿಯಾಗಿದ್ದಾರೆ ಎಂದು ವರದಿಯಾಗಿದೆ.

ಅಂದುಕೊಂಡಂತೆ ಆದರೆ ‘ಖುಷಿ ಮತ್ತು ‘ತಿರುಮಲೈ’ ನಲ್ಲಿ ಜೋಡಿಯಾಗಿದ್ದ ವಿಜಯ್ ಮತ್ತು ಜ್ಯೋತಿಕಾ 20 ವರ್ಷಗಳ ನಂತರ ಮತ್ತೆ ತೆರೆಯ ಮೇಲೆ ಒಂದಾಗುತ್ತಾರೆ. ಈ ಸುದ್ದಿ ಬಗ್ಗೆ ಚಿತ್ರತಂಡದ ಕಡೆಯಿಂದ ಅಧಿಕೃತ ಘೋಷಣೆ ಆಗಬೇಕಿದೆ. ಈ ಸಿನಿಮಾದಲ್ಲಿ ಜ್ಯೋತಿಕಾ ಅವರು ನಾಯಕಿ ಪಾತ್ರ ಮಾಡುತ್ತಾರೋ ಅಥವಾ ಬೇರೆ ಯಾವುದಾದರೂ ಮುಖ್ಯ ಪಾತ್ರಕ್ಕೆ ಬಣ್ಣ ಹಚ್ಚುತ್ತಾರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: Sanjay Dutt: `ಲಿಯೋ’ ಸಿನಿಮಾದಿಂದ ಸಂಜಯ್‌ ದತ್‌ಗೆ ಭರ್ಜರಿ ಗಿಫ್ಟ್‌!

ʼಲಿಯೋʼ ಚಿತ್ರದಲ್ಲಿ (‘Leo’ ) ಸಂಜಯ್ ದತ್ ಅಣ್ಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದಳಪತಿ ವಿಜಯ್‌ (Thalathy Vijay) ಹಾಗೂ ಲೋಕೇಶ್‌ ಕನಕರಾಜ್‌ ಲಿಯೋ ಸಿನಿಮಾ ಸಖತ್‌ ಹೈಪ್‌ ಕ್ರಿಯೇಟ್‌ ಮಾಡುತ್ತಿದೆ. ಈಗಾಗಲೆ ಸಿನಿಮಾದ ಫಸ್ಟ್‌ ಲುಕ್‌ ಹಾಗೂ ಮೊದಲ ಸಾಂಗ್‌ ʻನಾ ರೆಡಿʼ ಬಿಡುಗಡೆಗೊಂಡಿದೆ. ಮಾಸ್ಟರ್ʼ ಸಿನಿಮಾ ಬಳಿಕ ವಿಜಯ್‌ ಮತ್ತು ಲೋಕೇಶ್‌ ಕನಕರಾಜ್‌ ಮತ್ತೆ ಈ ಸಿನಿಮಾ ಮೂಲಕ ಒಂದಾಗಿದ್ದಾರೆ. ಲಿಯೋದಲ್ಲಿ ತ್ರಿಶಾ, ಸಂಜಯ್ ದತ್, ಅರ್ಜುನ್, ಪ್ರಿಯಾ ಆನಂದ್, ಗೌತಮ್ ವಾಸುದೇವ್ ಮೆನನ್, ಮನ್ಸೂರ್ ಅಲಿ ಖಾನ್, ಸ್ಯಾಂಡಿ ಮತ್ತು ಮಿಸ್ಕಿನ್ ಸಹ ನಟಿಸಿದ್ದಾರೆ.

ಇದನ್ನೂ ಓದಿ: Actress Jyothika : 25 ವರ್ಷಗಳ ನಂತರ ಬಾಲಿವುಡ್‌ಗೆ ಜ್ಯೋತಿಕಾ ವಾಪಸ್‌!

ಈ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೊದ ಲಲಿತ್ ಕುಮಾರ್ ನಿರ್ಮಿಸುತ್ತಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ, ಲಿಯೋ ಚಿತ್ರಕ್ಕೆ ಮನೋಜ್ ಪರಮಹಂಸ ಅವರ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಅವರ ಸಂಕಲನವಿದೆ.

Exit mobile version