South Cinema
Thalapathy Vijay: ಪೂಜಾ ಹೆಗ್ಡೆ ಜತೆ `ಬುಟ್ಟಬೊಮ್ಮ’ ಸ್ಟೆಪ್ ಹಾಕೋ ವೇಳೆ ನಾಚಿ ನೀರಾದ ದಳಪತಿ ವಿಜಯ್!
Thalapathy Vijay: ಸದ್ಯ ದಳಪತಿ ವಿಜಯ್ ಅವರು ಲೋಕೇಶ್ ಕನಕರಾಜ್ ಅವರ ನಿರ್ದೇಶನದ ಲಿಯೋ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿ ದಳಪತಿ ವಿಜಯ್ ಅವರ ನಿರೀಕ್ಷಿತ ಚಿತ್ರವಾಗಿದೆ.
ಬೆಂಗಳೂರು: `ಬೀಸ್ಟ್ʼ ಚಿತ್ರದಲ್ಲಿ ದಳಪತಿ ವಿಜಯ್ (Thalapathy Vijay) ಜತೆ ಪೂಜಾ ಹೆಗ್ಡೆ ತೆರೆ ಹಂಚಿಕೊಂಡಿದ್ದರು. ಆದರೀಗ ಮತ್ತೆ ಈ ಜೋಡಿ ಸಖತ್ ಸುದ್ದಿಯಲ್ಲಿದೆ. ಪೂಜಾ ಹೆಗ್ಡೆ ಕೆಲವು ಮಕ್ಕಳೊಂದಿಗೆ ಹಾಗೂ ದಳಪತಿ ವಿಜಯ್ ಜತೆ ಸೆಟ್‌ನಲ್ಲಿ ಅಲ್ಲು ಅರ್ಜುನ್‌ನ ನಟನೆಯ ಅಲ್ಲು ವೈಕುಂಠಪುರಂಲೂ ಚಿತ್ರದ ಬ್ಲಾಕ್‌ಬಸ್ಟರ್ `ಬುಟ್ಟ ಬೊಮ್ಮ’ ಹಾಡಿಗೆ ಹುಕ್ ಸ್ಟೆಪ್ ಹಾಕಿದ್ದಾರೆ. ಚೂರೇ ಚೂರು ನಾಚಿಕೊಂಡು ದಳಪತಿ ಸ್ಟೆಪ್ ಹಾಕಿರುವ ವಿಡಿಯೊ ಇದೀಗ ವೈರಲ್ ಆಗಿದೆ.
ತಮ್ಮ ಫೋನ್‌ನಲ್ಲಿದ್ದ ಈ ವಿಡಿಯೊವನ್ನು ಬಹಳ ದಿನಗಳ ನಂತರ ಪೂಜಾ ಹಂಚಿಕೊಂಡಿದ್ದಾರೆ.“ ನಟ ವಿಜಯ್ ದಳಪತಿ ಅವರ ಹುಟ್ಟುಹಬ್ಬವಾಗಿತ್ತು. ಕಳೆದ ವರ್ಷ ಬಿಡುಗಡೆಯಾದ `ಬೀಸ್ಟ್’ ಚಿತ್ರದ ಚಿತ್ರೀಕರಣದ ಸಮಯದಲ್ಲಿ ಬುಟ್ಟ ಬೊಮ್ಮ ಹಾಡಿಗೆ ನಟ ಸ್ಟೆಪ್ ಹಾಕಿದ್ದರು” ಎಂದು ಬರೆದುಕೊಂಡಿದ್ದಾರೆ.
ಸದ್ಯ ದಳಪತಿ ವಿಜಯ್ ಅವರು ಲೋಕೇಶ್ ಕನಕರಾಜ್ ಅವರ ನಿರ್ದೇಶನದ ಲಿಯೋ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಬಾರಿ ದಳಪತಿ ವಿಜಯ್ ಅವರ ನಿರೀಕ್ಷಿತ ಚಿತ್ರವಾಗಿದೆ. ಇತ್ತೀಚೆಗೆ ನಟನ ಹುಟ್ಟುಹಬ್ಬದಂದು ಫಸ್ಟ್ ಲುಕ್ ಮತ್ತು ಫಸ್ಟ್ ಸಾಂಗ್ ನಾ ರೆಡಿ ಬಿಡುಗಡೆ ಮಾಡಿತ್ತು ಚಿತ್ರತಂಡ.
ಈ ಚಿತ್ರದಲ್ಲಿ ದಳಪತಿ ವಿಜಯ್ ಮತ್ತು ತ್ರಿಶಾ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಲಿಯೋ ಸಂಜಯ್ ದತ್, ಅರ್ಜುನ್ ಸರ್ಜಾ, ಪ್ರಿಯಾ ಆನಂದ್, ಗೌತಮ್ ಮೆನನ್, ಮ್ಯಾಥ್ಯೂ ಥಾಮಸ್, ಮಿಸ್ಕಿನ್, ಸ್ಯಾಂಡಿ ಮತ್ತು ಮನ್ಸೂರ್ ಅಲಿ ಖಾನ್ ಸೇರಿದಂತೆ ಸಮಗ್ರ ತಾರಾಗಣವನ್ನು ಹೊಂದಿದ್ದಾರೆ. ಈ ಚಿತ್ರವನ್ನು ಲಲಿತ್ ಕುಮಾರ್ ಅವರ ಸೆವೆನ್ ಸ್ಕ್ರೀನ್ ಸ್ಟುಡಿಯೋಸ್ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಿದೆ.
ಇದನ್ನೂ ಓದಿ: Thalapathy Vijay: ಸೂಪರ್ ಹಿಟ್ ʻನಾ ರೆಡಿದಾʼ ಸಾಂಗ್; ದಳಪತಿ ವಿಜಯ್ ಸಖತ್ ಸ್ಟೆಪ್!
ವೈರಲ್ ವಿಡಿಯೊ
ಅನಿರುಚ್ ರವಿಚಂದರ್ ಸಂಗೀತ ನೀಡಲಿದ್ದಾರೆ. 40ರ ಹರೆಯದ ದರೋಡೆಕೋರನ ಪಾತ್ರದಲ್ಲಿ ದಳಪತಿ ವಿಜಯ್ ಕಾಣಿಸಿಕೊಳ್ಳಲಿದ್ದಾರೆ. 14 ವರ್ಷಗಳ ಸುದೀರ್ಘ ಗ್ಯಾಪ್ ಬಳಿಕ ವಿಜಯ್ ಹಾಗೂ ತ್ರಿಶಾ ತೆರೆ ಮೆಲೆ ಮತ್ತೆ ಒಂದಾಗುತ್ತಿದ್ದಾರೆ. ಸಂಜಯ್ ದತ್ ಸಿನಿಮಾದಲ್ಲಿ ವಿಲನ್ ಪಾತ್ರ ನಿಭಾಯಿಸುತ್ತಿದ್ದು, ಚಿತ್ರದಲ್ಲಿ ವಿಜಯ್ ಅವರ ತಂದೆಯ ಪಾತ್ರವನ್ನು ಸಹ ಮಾಡುತ್ತಿದ್ದಾರೆ ಎನ್ನಲಾಗಿದೆ.
ಪೂಜಾ ಹೆಗ್ಡೆ ತಮ್ಮ ಮುಂದಿನ ಚಿತ್ರವನ್ನು ಇನ್ನೂ ಘೋಷಿಸಿಲ್ಲ. ಮಹೇಶ್ ಬಾಬು ಮತ್ತು ತ್ರಿವಿಕ್ರಮ್ ಶ್ರೀನಿವಾಸ್ ಅವರ ʻಗುಂಟೂರು ಖಾರಂʼ ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಕಾರಣಾಂತರದಿಂದ ಅದರಿಂದ ಹೊರಗೆ ಬಂದಿದ್ದಾರೆ.
South Cinema
Rashmika Mandanna: ಮತ್ತೊಮ್ಮೆ ʼರಂಜಿತಮೆʼ, ʼಸಾಮಿʼ ಹಾಡಿಗೆ ಹೆಜ್ಜೆ ಹಾಕಿದ ರಶ್ಮಿಕಾ!
Rashmika Mandanna: ಕನ್ನಡ ಮೂಲದ ನಟಿ ರಶ್ಮಿಕಾ ಮಂದಣ್ಣ ದುಬೈಯಲ್ಲಿ ಆಭರಣ ಮಳೆಗೆಯೊಂದರ ಉದ್ಘಾಟನೆ ವೇಳೆ ವೇದಿಕೆಯಲ್ಲಿ ಹೆಜ್ಜೆ ಹಾಕಿದ ವಿಡಿಯೊ ವೈರಲ್ ಆಗಿದೆ.
ದುಬೈ: ಸ್ಯಾಂಡಲ್‌ವುಡ್‌ನ ʼಕಿರಿಕ್ ಪಾರ್ಟಿʼ (Kirik Party) ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಪ್ರವೇಶಿಸಿ ʼಚಲೋʼ ಚಿತ್ರದ ಮೂಲಕ ತೆಲುಗಿನಲ್ಲಿ ಛಾಪು ಮೂಡಿಸಿ ʼಸುಲ್ತಾನʼನ ಮನದರಸಿಯಾಗಿ ಕಾಲಿವುಡ್‌ಗೆ ಕಾಲಿಟ್ಟು, ʼಗುಡ್ ಬೈʼ ಮೂಲಕ ಬಾಲಿವುಡ್‌ಗೆ ಜಿಗಿದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಸದ್ಯ ಕೈ ತುಂಬಾ ಸಿನಿಮಾ, ಜಾಹೀರಾತು ಹೊಂದಿರುವ ನಟಿ. ಅವರು ದೇಶಾದ್ಯಂತ ಜನಪ್ರಿಯತೆ ಗಿಟ್ಟಿಸಿಕೊಂಡಿದ್ದಾರೆ. ಇತ್ತೀಚೆಗೆ ರಶ್ಮಿಕಾ ಆಭರಣ ಮಳಿಗೆಯೊಂದರ ಉದ್ಘಾಟನೆಗಾಗಿ ದುಬೈಗೆ ತೆರಳಿದ್ದರು. ಈ ವೇಳೆ ಅವರು ತಾವು ಕಾಲಿವುಡ್ ಸೂಪರ್ ಸ್ಟಾರ್ ವಿಜಯ್ ಜತೆ ನಟಿಸಿದ ʼವಾರಿಸುʼ (Varisu) ಚಿತ್ರ ʼರಂಜಿತಮೆʼ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸದ್ಯ ಈ ವಿಡಿಯೊ ವೈರಲ್ ಆಗಿದೆ.
ಎಸ್. ತಮನ್ ಸಂಗೀತ ನೀಡಿದ ʼರಂಜಿತಮೆʼ ಹಾಡು ಸೂಪರ್ ಹಿಟ್ ಆಗಿತ್ತು. ಡ್ಯಾನ್ಸಿಂಗ್ ನಂಬರ್ ಇದಾಗಿದ್ದು, ವಿಜಯ್-ರಶ್ಮಿಕಾ ಹೆಜ್ಜೆ ಹಾಕಿದ ರೀತಿಗೆ ಅಭಿಮಾನಿಗಳು ಫಿದಾ ಆಗಿದ್ದರು. ಇತ್ತೀಚೆಗೆ ದುಬೈಗೆ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ರಶ್ಮಿಕಾ ವೇದಿಕೆ ಮೇಲೆ ಬಂದಾಗ ನಿರೂಪಕರು ಒಂದರಡು ಹೆಜ್ಜೆ ಹಾಕಲು ಮನವಿ ಮಾಡಿದರು. ಅದಕ್ಕೆ ತಕ್ಕಂತೆ ಡಿಜೆ ʼರಂಜಿತಮೆʼ ಹಾಡು ಪ್ಲೇ ಮಾಡಿದರು. ಬಳಿಕ ರಶ್ಮಿಕಾ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿ ಗಮನ ಸೆಳೆದರು.
Ranjithame dance by @iamRashmika in dubai 😍❤️#RashmikaMandanna #Leo pic.twitter.com/mmw9y9UJ0Q
— ROHIT|| (@Redrayer45) October 1, 2023
ಕಲ್ಯಾಣ್ ಜ್ಯುವೆಲ್ಲರ್ಸ್‌ನ ಬ್ರ್ಯಾಂಡ್ ರಾಯಭಾರಿಯಾಗಿರುವ ರಶ್ಮಿಕಾ ದುಬೈನ ಅಲ್ ಬರ್ಶಾದಲ್ಲಿನ ಹೊಸ ಶೋರೂಂ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಹೆಜ್ಜೆ ಹಾಕಿದ್ದಾರೆ. ʼರಂಜಿತಮೆʼ ಮಾತ್ರವಲ್ಲ ತಮ್ಮ ಸೂಪರ್ ಹಿಟ್ ತೆಲುಗು ಚಿತ್ರ ʼಪುಷ್ಪʼದ ʼಸಾಮಿ ಸಾಮಿʼ ಹಾಡಿಗೂ ಕುಣಿದಿದ್ದಾರೆ. ಅಲ್ಲು ಅರ್ಜುನ್ ಜತೆ ರಶ್ಮಿಕಾ ಅಭಿನಯಿಸಿದ್ದ ʼಪುಷ್ಪʼ ಚಿತ್ರ 2021ರಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಕಂಡಿತ್ತು. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ದೇವಿ ಪ್ರಸಾದ್ ಸಂಗೀತ ನೀಡಿದ್ದರು. ಈ ಚಿತ್ರದ ಹಾಡುಗಳೆಲ್ಲ ಸೂಪರ್ ಹಿಟ್ ಆಗಿದ್ದವು. ಆಭರಣ ಮಳಿಗೆ ಉದ್ಘಾಟನೆ ವೇಳೆ ಸೀರೆ ಸುತ್ತಿ ಅಭಿಮಾನಿಗಳ ಮನ ಕದ್ದಿದ್ದ ರಶ್ಮಿಕಾ ಬಳಿ ಸ್ಪೆಪ್ ಮೂಲಕವೂ ಇಂಟರ್‌ನೆಟ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ʼರಂಜಿತಮೆʼ ಹಾಡಿನ ವಿಡಿಯೊವನ್ನು ಎಕ್ಸ್‌ನಲ್ಲಿ ಈಗಾಗಲೇ ಸುಮಾರು 20 ಸಾವಿರ ಮಂದಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತ ಎಕ್ಸ್‌ನಲ್ಲಿ ಪೋಸ್ಟ್ ಮಾಡಲಾದ ʼಸಾಮಿ ಸಾಮಿʼ ಹಾಡಿನ ವಿಡಿಯೊವನ್ನು ಸಾವಿರಾರು ಮಂದಿ ವೀಕ್ಷಿಸಿದ್ದಾರೆ.
ಇದನ್ನೂ ಓದಿ: Rashmika Mandanna: ಧನುಷ್ ಜತೆ ರಶ್ಮಿಕಾ ರೊಮ್ಯಾನ್ಸ್!
Our Saami Girl 😍💖@iamRashmika #RashmikaMandanna pic.twitter.com/9KGIOslNpk
— Rashmika_Tamil_FC (@RM_Tamil_FC) October 1, 2023
ಸದ್ಯ ರಶ್ಮಿಕಾ ವಿವಿಧ ಭಾಷೆಗಳ ಚಿತ್ರಗಳಲ್ಲಿ ಬ್ಯುಸಿ ಇದ್ದಾರೆ. ರಣಬೀರ್ ಕಪೂರ್ ಜತೆ ನಟಿಸುತ್ತಿರುವ ಬಾಲಿವುಡ್ ಚಿತ್ರ ʼಅನಿಮಲ್ʼನ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ಭಾರೀ ಸದ್ದು ಮಾಡುತ್ತಿದೆ. ಇನ್ನು ಬಹು ನಿರೀಕ್ಷಿತ ತೆಲುಗು ಚಿತ್ರ ʼಪುಷ್ಪ 2′ ಚಿತ್ರೀಕರಣ ನಡೆಯುತ್ತಿದೆ. ಮಾತ್ರವಲ್ಲ ‘ರೈನ್ ಬೋ’, ಧನುಷ್ ಜತೆ ‘ಡಿ 51ʼ, ವಿಜಯ್ ದೇವರಕೊಂಡ, ರವಿತೇಜ ಅಭಿನಯದ ಚಿತ್ರಗಳಿಗೂ ರಶ್ಮಿಕಾ ನಾಯಕಿ ಆಯ್ಕೆಯಾಗಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
South Cinema
Ragini Dwivedi: ರಾಜವರ್ಧನ್ ‘ಗಜರಾಮ’ ಸಿನಿಮಾದ ಸ್ಪೆಷಲ್ ಸಾಂಗ್‌ಗೆ ಹೆಜ್ಜೆ ಹಾಕಿದ ತುಪ್ಪದ ಬೆಡಗಿ ರಾಗಿಣಿ!
ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಗಜರಾಮನ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ (Ragini Dwivedi) ಜತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರು ಅನೇಕ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಿದ್ದಾರೆ. ಅವರ ಪುತ್ರ ರಾಜವರ್ಧನ್ ಕೂಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹೀರೊ ಆಗಿ ಅವರು ಸ್ಯಾಂಡಲ್‌ವುಡ್‌ನಲ್ಲಿ ಗುರುತಿಸಿಕೊಂಡಿರುವ ಅವರು ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರತಿ ಚಿತ್ರದಲ್ಲೂ ಬೇರೆ ಬೇರೆ ಬಗೆಯ ಪಾತ್ರಗಳಿಗೆ ಬಣ್ಣ ಹಚ್ಚುತ್ತಿರುವ ರಾಜವರ್ಧನ್ ಕೈಯಲ್ಲಿ ಹಲವು ಪ್ರಾಜೆಕ್ಟ್ ಗಳಿವೆ. ಅವುಗಳಲ್ಲಿ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ‘ಗಜರಾಮ’. ಈ ಚಿತ್ರದ ಕೆಲಸಗಳು ಭರದಿಂದ ಸಾಗಿವೆ. ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ಗಜರಾಮನ ಸ್ಪೆಷಲ್ ಹಾಡಿನ ಚಿತ್ರೀಕರಣ ಚಿಕ್ಕಗುಬ್ಬಿಯಲ್ಲಿ ನಡೆದಿದೆ. ಝಗಮಗಿಸುವ ಸೆಟ್ ನಲ್ಲಿ, ಧನು ಮಾಸ್ಟರ್ ಕೊರಿಯೋಗ್ರಫಿಯಲ್ಲಿ ತುಪ್ಪದ ಬೆಡಗಿ ರಾಗಿಣಿ (Ragini Dwivedi) ಜತೆ ರಾಜವರ್ಧನ್ ಹೆಜ್ಜೆ ಹಾಕಿದ್ದಾರೆ.
ರಾಗಿಣಿ ಮಾತನಾಡಿ, “ಹೊಸ ಹೊಸ ಪ್ರಯತ್ನಗಳು ನಮ್ಮ ಇಂಡಸ್ಟ್ರೀಯಲ್ಲಿ ಆಗಬೇಕು. ಕನ್ನಡ ಸಿನಿಮಾಗಳು ಒಳ್ಳೆ ರೀತಿಯಲ್ಲಿ ಬೆಳೆಯುತ್ತಿವೆ. ಅದನ್ನು ನೋಡಿ ಹೆಮ್ಮೆ ಅನಿಸುತ್ತದೆ. ನಾನು ಎಲ್ಲಿ ಹೋದರು ಕರ್ನಾಟಕ ನನ್ನ ಮನೆ ತರ. ಗಜರಾಮ ಸಿನಿಮಾದಲ್ಲಿ ನನಗಾಗಿ ಮಾಡಿರುವ ಸ್ಪೆಷಲ್ ಸಾಂಗ್ ಇದೆ. ರಾಜ್ ಅದ್ಭುತ ನಟ. ಮನೋಮೂರ್ತಿ ಸರ್ ಮ್ಯೂಸಿಕ್, ಧನು ಕೊರಿಯೋಗ್ರಫಿ ಎಲ್ಲವೂ ಸೇರಿ ಈ ವರ್ಷದ ಹಿಟ್ ಹಾಡುಗಳಲ್ಲಿ ಒಂದಾಗಲಿದೆ. ಇಡೀ ತಂಡಕ್ಕೆ ನಿಮ್ಮ ಬೆಂಬಲ ಇರಲಿ” ಎಂದರು.
ರಾಜವರ್ಧನ್ ಮಾತನಾಡಿ, “ಇವತ್ತು ಕುಂಬಳಕಾಯಿವರೆಗೂ ಬಂದಿದ್ದೇವೆ. ಈ ಸಿನಿಮಾ ಒಂದು ವರ್ಷದ ಜರ್ನಿ. ಲೈಫ್ ಲೈನ್ ಪಿಕ್ಚರ್ಸ್ jತೆ ಮಾಡುತ್ತಿರುವ ಮೊದಲ ಚಿತ್ರ ಇದು. ಅದ್ಭುತವಾಗಿ ಸಿನಿಮಾ ಬಂದಿದೆ. ಸುನಿಲ್ ಮುಂದಿನ ದಿನಗಳಲ್ಲಿ ಮಾಸ್ ಡೈರೆಕ್ಟರ್ ಆಗಿ ಚಿತ್ರರಂಗ ಬರುತ್ತಾರೆ. ರಾಗಿಣಿ ಮೇಡಂ ಕಾಲೇಜ್ ಟೈಮ್ ನಿಂದ ಕ್ರಶ್. ಈಗ ವರ್ಕ್ ಮಾಡುವ ಅವಕಾಶ ಸಿಕ್ಕಿದೆ. ಡ್ರೀಮ್ ಕಂಪ್ಲೀಟ್ ಆಗಿದೆ. ಮನೋ ಸರ್ ಮೆಲೋಡಿ ಕಿಂಗ್..ಈಗ ಮಾಸ್ ಕಿಂಗ್ ಆಗಿದ್ದಾರೆ. ನಮ್ಮ ಕಥೆಗೆ ಹೇಗೆ ಬೇಕೋ ಆಗಿದ್ದಾರೆ ನಮ್ಮ ಹೀರೋಯಿನ್. ರಾಮ್ ನನ್ನ ಪಾತ್ರ. ರಾಮ ರಾವಣ ಎರಡು ನಾನೇ. ತುಂಬಾ ಒಳ್ಳೆ ಆರ್ಟಿಸ್ಟ್ ಚಿತ್ರದಲ್ಲಿದ್ದಾರೆʼʼ ಎಂದರು.
ಇದನ್ನೂ ಓದಿ: Thapaswini Poonacha: ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಹರಿಕಥೆ ಅಲ್ಲ ಗಿರಿ ಕಥೆ’ ಚಿತ್ರದ ನಾಯಕಿ!
ನಿರ್ದೇಶಕ ಸುನಿಲ್ ಕುಮಾರ್ ಮಾತನಾಡಿ, ʻʻಬೆಂಗಳೂರು, ಮೈಸೂರು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ಇವತ್ತು ಕೊನೆಯ ದಿನ. ರಾಜವರ್ಧನ್ ಸರ್ ತುಂಬಾ ಡೆಡಿಕೇಷನ್ ಆಗಿ ಕೆಲಸ ಮಾಡಿದ್ದಾರೆ. ನಿರ್ಮಾಪಕರು ಬಜೆಟ್ ಕೇಳದೆ ಸಿನಿಮಾ ಮಾಡಿದ್ದಾರೆ. ಮನೋಮೂರ್ತಿ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ. ಸಾಂಗ್ ಕೇಳಿದ ತಕ್ಷಣ ರಾಗಿಣಿ ಮೇಡಂ ಒಪ್ಪಿಕೊಂಡರುʼʼ ಎಂದರು.
ನಿರ್ಮಾಪಕ ನರಸಿಂಹಮೂರ್ತಿ ಮಾತನಾಡಿ, ʻʻಇವತ್ತು ಸಿನಿಮಾಗೆ ಕುಂಬಳಕಾಯಿ..ಮೂಹೂರ್ತ ಆದಾಗ ಎಷ್ಟು ಖುಷಿ ಆಗಿತ್ತು. ಈಗ ಅಷ್ಟೇ ಖುಷಿಯಾಗುತ್ತಿದೆ. ಈ ಸಾಂಗ್‌ವನ್ನು ವಿವರಣೆ ಪಡೆದು ಬಳಿಕ ಮಾಡುತ್ತೇನೆ. ಅದಕ್ಕಾಗಿ ಕಾಯಬೇಕು ಎಂದರು. ಮನೋ ಸರ್ ಗೆ ತುಂಬಾ ಕಾಟ ಕೊಟ್ಟು ಸಾಂಗ್ ಮಾಡಿಸಿದ್ದೇವೆ. ಧನು ಮಾಸ್ಟರ್ ಈ ಹಾಡನ್ನು ಕೊನೆಯಲಿ ಮಾಡೋಣಾ ಎಂದರು. ಒಳ್ಳೆ ಔಟ್ ಫುಟ್ ಬಂದಿದೆ. ನವೆಂಬರ್ ಅಥವಾ ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ಬರುವ ಪ್ರಯತ್ನ ಮಾಡುತ್ತೇವೆʼʼ ಎಂದರು.
ಸಂಗೀತ ನಿರ್ದೇಶಕ ಮನೋಮೂರ್ತಿ ಮಾತನಾಡಿ, ʻಸಿನಿಮಾದಲ್ಲಿ ಒಟ್ಟು 5 ಹಾಡುಗಳಿವೆ. ಈ ಸಾಂಗ್ ಅದ್ಭುತವಾಗಿ ಮೂಡಿಬಂದಿದೆ. ಈ ತರ ಹಾಡು ಮಾಡದೆ ಬಹಳ ವರ್ಷಗಳೇ ಆಗಿದೆʼ ಎಂದರು.
ಇದನ್ನೂ ಓದಿ: Ragini Dwivedi: ಕನ್ನಡ, ಮಲಯಾಳದಲ್ಲಿ ರಾಗಿಣಿ ದ್ವಿವೇದಿಯ ʼಶೀಲʼ
ಶಿಷ್ಯ ದೀಪಕ್ ಪೊಲೀಸ್ ಪಾತ್ರದಲ್ಲಿ, ತೆಲುಗಿನ ಖ್ಯಾತ ಖಳನಟ ಕಬೀರ್ ಸಿಂಗ್ ಖಳನಾಯಕನಾಗಿ, ತಪಸ್ವಿನಿ ರಾಜವರ್ಧನ್ ಗೆ ಜೋಡಿಯಾಗಿ ನಟಿಸಿದ್ದಾರೆ. ಕಾಮಿಡಿಕಿಲಾಡಿ ಖ್ಯಾತಿಯ ಸಂತು ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ. ಯುವ ನಿರ್ದೇಶಕ ಸುನಿಲ್ ಕುಮಾರ್ ವಿ.ಎ. ನಿರ್ದೇಶನ ಮಾಡುತ್ತಿದ್ದಾರೆ. ಖ್ಯಾತ ನಿರ್ದೇಶಕರಾದ ಯೋಗರಾಜ್ ಭಟ್, ‘ದುನಿಯಾ’ ಸೂರಿ ಸೇರಿದಂತೆ ಒಂದಷ್ಟು ನಿರ್ದೇಶಕರ ಜತೆ ಅಸಿಸ್ಟೆಂಟ್, ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಸುನಿಲ್ ಕುಮಾರ್ ಈಗ ‘ಗಜರಾಮ’ ಸಿನಿಮಾದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ.
‘ಗಜರಾಮ’ ಚಿತ್ರಕ್ಕೆ ಮನೋಮೂರ್ತಿ ಸಂಗೀತ ನೀಡುತ್ತಿರುವುದು ವಿಶೇಷ. ಈ ಚಿತ್ರಕ್ಕೆ ಕೆ.ಎಸ್. ಚಂದ್ರಶೇಖರ್ ಛಾಯಾಗ್ರಾಹಣ ಮಾಡುತ್ತಿದ್ದು, ಜ್ಞಾನೇಶ್ ಬಿ. ಮಠದ್ ಸಂಕಲನದ ಹೊಣೆ ಹೊತ್ತುಕೊಂಡಿದ್ದಾರೆ. ಧನಂಜಯ್ ಅವರ ಕೊರಿಯೋಗ್ರಾಫಿ, ಚಿನ್ಮಯ್ ಭಾವಿಕೆರೆ, ಜಯಂತ್ ಕಾಯ್ಕಿಣಿ, ಚೇತನ್ ಕುಮಾರ್, ಪ್ರಮೋದ್ ಮರವಂತೆ ಅವರ ಸಾಹಿತ್ಯ ಈ ಚಿತ್ರಕ್ಕಿದೆ.
‘ಬಾಂಡ್ ರವಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಲೈಫ್ ಲೈನ್ ಫಿಲ್ಮ್ ಪ್ರೊಡಕ್ಷನ್ ಅಡಿಯಲ್ಲಿ ನರಸಿಂಹಮೂರ್ತಿ ‘ಗಜರಾಮ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಮಲ್ಲಿಕಾರ್ಜುನ್ ಕಾಶಿ ಮತ್ತು ಝವೀಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.
South Cinema
Thalapathy Vijay: ದಳಪತಿ ವಿಜಯ್ ಅಭಿನಯದ ʻಲಿಯೋʼ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್!
Thalapathy Vijay: ಹಲವು ವರ್ಷಗಳ ನಂತರ ವಿಜಯ್ ಜತೆ ತ್ರಿಷಾ ನಾಯಕಿಯಾಗಿ ಈ ಸಿನಿಮಾ ಮೂಲಕ ಮಿಂಚಲಿದ್ದಾರೆ. ಕೀರ್ತಿ ಸುರೇಶ್, ಅರ್ಜುನ್, ಮಿಶಾ ಘೋಷಾಲ್, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮತ್ತು ಸಂಜಯ್ ತಾರಾ ಬಳಗವಿದೆ.
ಬೆಂಗಳೂರು; ದಳಪತಿ ವಿಜಯ್ (Thalapathy Vijay) ಹಾಗೂ ಲೋಕೇಶ್ ಕನಕರಾಜ್ (Lokesh Kanakaraj) ಅವರ ಮುಂಬರುವ ಚಿತ್ರ ʻಲಿಯೋʼ (Leo poster) ಪೋಸ್ಟರ್‌ಗಳು ಈಗಾಗಲೇ ಬಿಡುಗಡೆಗೊಂಡಿವೆ. ಇದೀಗ ಮಹತ್ವದ ಸುದ್ದಯನ್ನು ಚಿತ್ರತಂಡ ಘೋಷಣೆ ಮಾಡಿದೆ. ಹಲವು ದಿನಗಳಿಂದ ವಿಜಯ್ ಫ್ಯಾನ್ಸ್ ಟ್ರೈಲರ್ ರಿಲೀಸ್ ಯಾವಾಗ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದರು. ಇದೀಗ ಉತ್ತರ ಸಿಕ್ಕಿದೆ. ಇದೇ ಅ.5ರಂದು ʻಲಿಯೋʼ ಟ್ರೈಲರ್ ಬಿಡುಗಡೆಯಾಗುತ್ತಿದೆ. ಪೋಸ್ಟ್ ಮೂಲಕ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಹಲವು ವರ್ಷಗಳ ನಂತರ ವಿಜಯ್ ಜತೆ ತ್ರಿಷಾ ನಾಯಕಿಯಾಗಿ ಈ ಸಿನಿಮಾ ಮೂಲಕ ಮಿಂಚಲಿದ್ದಾರೆ. ಕೀರ್ತಿ ಸುರೇಶ್, ಅರ್ಜುನ್, ಮಿಶಾ ಘೋಷಾಲ್, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮತ್ತು ಸಂಜಯ್ ತಾರಾ ಬಳಗವಿದೆ. ಇತ್ತೀಚೆಗೆ ಕಾಶ್ಮೀರ ಮತ್ತು ಚೆನ್ನೈನ ವಿವಿಧ ಸ್ಥಳಗಳಲ್ಲಿ ಚಿತ್ರೀಕರಣಗೊಂಡಿತ್ತು. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಡಬ್ಬಿಂಗ್ ಕೆಲಸಗಳು ಆಗುತ್ತಿವೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಸೈಮಾ ಪ್ರಶಸ್ತಿ ಸಮಾರಂಭದಲ್ಲಿ ಲಿಯೋ ಚಿತ್ರಕ್ಕೆ ಸಂಬಂಧಿಸಿದ ಹೊಸ ಅಪ್‌ಡೇಟ್‌ಗಳ ಲೋಕೇಶ್ ಅವರು ಹೇಳಿಕೊಂಡಿದ್ದರು. ʻʻಚಿತ್ರಕ್ಕಾಗಿ ಸಾಕಷ್ಟು ಕೆಲಸಗಳನ್ನು ಮಾಡಬೇಕಾಗಿದೆ. ಅದಕ್ಕಾಗಿಯೇ ನಾವು ಯಾವುದೇ ಅಪ್‌ಡೇಟ್‌ಗಳನ್ನು ನೀಡಿಲ್ಲ. ಕ್ರಮೇಣ ಹೊಸ ಹೊಸ ಅಪ್‌ಡೇಟ್‌ಗಳನ್ನು ಬಿಡುಗಡೆ ಮಾಡಲು ನಿರ್ಧರಿಸಿದ್ದೇವೆ. ಚಿತ್ರ ಬಿಡುಗಡೆಗೆ 30 ದಿನಗಳ ಮುಂಚೆಯೇ ಚಿತ್ರದ ಬಗ್ಗೆ ಅಪ್‌ಡೇಟ್‌ಗಳನ್ನು ಬಿಡುಗಡೆ ಮಾಡಲು ನಾವು ಯೋಜಿಸಿದ್ದೇವೆʼʼ ಎಂದಿದ್ದರು. ಹೇಳಿದಂತೆ ಸೆ. 17ರಂದು ಚಿತ್ರದ ತೆಲುಗು ಪೋಸ್ಟರ್ ಬಿಡುಗಡೆಯಾಗಿದೆ.
ಇದನ್ನೂ ಓದಿ: Actor Rajinikanth: ಲೋಕೇಶ್ ಕನಕರಾಜ್ ಜತೆ ರಜನಿ ಸಿನಿಮಾ ಪಕ್ಕಾ; ʻಲಿಯೋʼ ಕಥೆ ಎನು?
ಲಿಯೋʼ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೊದ ಲಲಿತ್ ಕುಮಾರ್ ನಿರ್ಮಿಸುತ್ತಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ʼಲಿಯೋʼ ಚಿತ್ರದಲ್ಲಿ ಸಂಜಯ್ ದತ್ ಅಣ್ಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದಳಪತಿ ವಿಜಯ್ (Thalathy Vijay) ಹಾಗೂ ಲೋಕೇಶ್ ಕನಕರಾಜ್ ʼಲಿಯೋʼ ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡುತ್ತಿದೆ. ಈಗಾಗಲೆ ಸಿನಿಮಾದ ಫಸ್ಟ್ ಲುಕ್ ಹಾಗೂ ಮೊದಲ ಸಾಂಗ್ ʻನಾ ರೆಡಿʼ ಬಿಡುಗಡೆಗೊಂಡಿದೆ. ʼಮಾಸ್ಟರ್ʼ ಸಿನಿಮಾ ಬಳಿಕ ವಿಜಯ್ ಮತ್ತು ಲೋಕೇಶ್ ಕನಕರಾಜ್ ಮತ್ತೆ ಈ ಸಿನಿಮಾ ಮೂಲಕ ಒಂದಾಗಿದ್ದಾರೆ. ʼಲಿಯೋʼ ಚಿತ್ರಕ್ಕೆ ಮನೋಜ್ ಪರಮಹಂಸ ಅವರ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಅವರ ಸಂಕಲನವಿದೆ.
South Cinema
Shiva Rajkumar: ಮಕ್ಕಳು ಧೀಮಂತ ನಾಯಕರ ಚಿಂತನೆ ಜೀವನದಲ್ಲೂ ಅಳವಡಿಸಿಕೊಳ್ಳಲಿ ಎಂದ ಶಿವಣ್ಣ!
Shiva Rajkumar: ಅ.2ರಂದು ಆಚರಿಸಲಾಗುತ್ತಿದೆ. ಈ ದಿನಶ ಶಕ್ತಿಧಾಮ ಮಕ್ಕಳ ಜತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂಭ್ರಮವನ್ನು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಆಚರಿಸಿದರು.
ಬೆಂಗಳೂರು: ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನಿರ್ಣಾಯಕ ಕೊಡುಗೆ ನೀಡಿದ, ಅಹಿಂಸಾ ತತ್ವದಿಂದಲೇ ಜಗತ್ತಿಗೆ ಸ್ಫೂರ್ತಿಯಾದ ಮಹಾತ್ಮ ಗಾಂಧೀಜಿಯವರ 154ನೇ ಜಯಂತಿ (Gandhi Jayanti 2023)ಅ.2ರಂದು ಆಚರಿಸಲಾಗುತ್ತಿದೆ. ಈ ದಿನ ಶಕ್ತಿಧಾಮ ಮಕ್ಕಳ ಜತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂಭ್ರಮವನ್ನು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಆಚರಿಸಿದರು.
ಮಕ್ಕಳ ಜತೆ ಶಿವಣ್ಣ ನಿಂತು ʻʻಇಂದು ನಮ್ಮ ಶಕ್ತಿಧಾಮ ಮಕ್ಕಳ ಜತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನದ ಸಂಭ್ರಮ ಆಚರಿದ್ದು ಸಂತೋಷವಾಯ್ತು! ಮಕ್ಕಳು ಈ ಧೀಮಂತ ನಾಯಕರ ಚಿಂತನೆ ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿʼʼಎಂದು ಬರೆದುಕೊಂಡಿದ್ದಾರೆ. ಹಲವು ವಿಶೇಷ ದಿನಗಳಲ್ಲಿ ಶಿವರಾಜ್‌ಕುಮಾರ್ ಅವರು ಅಲ್ಲಿಗೆ ಭೇಟಿ ನೀಡುತ್ತಾರೆ.
ಸಿನಿಮಾ ವಿಚಾರಕ್ಕೆ ಬಂದರೆ ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ (Shiva Rajkumar) ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಟ್ರೈಲರ್ (Ghost Trailer) ಬಿಡುಗಡೆಗೊಂಡಿದೆ. ʻʻಸಾಮಾನ್ಯವಾಗಿ ನಾನ್ ಯಾರ್ ತಂಟೆಗೂ ಹೋಗಲ್ಲ. ಸೋಲ್ತಿನಿ ಅನ್ನೊ ಭಯಕ್ಕಲ್ಲ, ನಾನ್ ಹೋದ್ರೆ ಯುದ್ಧಭೂಮಿ ರುದ್ರಭೂಮಿ ಆಗುತ್ತೆʼʼಎನ್ನು ಖಡಕ್ ಡೈಲಾಗ್ ಮೂಲಕ ರಗಡ್ ಆಗಿ ಕಂಡಿದ್ದಾರೆ ಶಿವಣ್ಣ. ಈ ಹಿಂದೆ “ಘೋಸ್ಟ್” ಚಿತ್ರದ ಸಾಂಗ್ ರಿಲೀಸ್ ಆಗಿತ್ತು. ಅರ್ಜುನ್ ಜನ್ಯಾ ಕಂಪೋಸ್ ಮಾಡಿದ್ದು, ಹಾಡು ಸಖತ್ ಆಗಿದೆ ಎಂದು ಶಿವಣ್ಣನ ಫ್ಯಾನ್ಸ್ (GHOST OGM) ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಇದನ್ನೂ ಓದಿ: Shiva Rajkumar: ʻಘೋಸ್ಟ್ʼ ಸಿನಿಮಾ ಹಾಡಿಗೆ ಶಿವಣ್ಣನ ಫ್ಯಾನ್ಸ್ ಫಿದಾ!
ಈಗಾಗಲೇ ಸಿನಿಮಾದ ಥಿಯೇಟ್ರಿಕಲ್, ಸ್ಯಾಟಲೈಟ್ ಹಾಗೂ ಡಿಜಿಟಲ್ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಶ್ರೀನಿ ನಿರ್ದೇಶನದ ಈ ಸಿನಿಮಾ ಮತ್ತೆ ಸುದ್ದಿಯಲ್ಲಿದೆ .”ಆರ್ ಆರ್ ಆರ್”, “ಜವಾನ್” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ವಿತರಣೆ ಮಾಡಿರುವ ಪೆನ್ ಸ್ಟುಡಿಯೊ ಸಂಸ್ಥೆ ಈಗ “ಘೋಸ್ಟ್” ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡಿದೆ.
ಬಾಲಿವುಡ್ ನಟ ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಕೆಜಿಎಫ್ ಖ್ಯಾತಿಯ ನಟಿ ಅರ್ಚನಾ ಜೋಯಿಸ್ ಕಾಣಿಸಿಕೊಳ್ಳಲಿದ್ದಾರೆ. ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್ ಮಾಂಕ್ ಸಿನಿಮಾ ಖ್ಯಾತಿಯ ಎಂ.ಜಿ.ಶ್ರೀನಿವಾಸ್ ಅವರು ಘೋಸ್ಟ್ ಸಿನಿಮಾನವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ಇದ್ದರೆ, ಸಂದೇಶ್ ನಾಗರಾಜ್ ನಿರ್ಮಾಪಕರಾಗಿದ್ದಾರೆ. ಅಕ್ಟೋಬರ್ 19ರಂದು ಸಿನಿಮಾ ರಿಲೀಸ್ ಆಗಲಿದೆ.
-
ಪ್ರಮುಖ ಸುದ್ದಿ24 hours ago
Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!
-
ಕಿರುತೆರೆ14 hours ago
BBK Season 10 : ಅಕ್ಟೋಬರ್ 8 ರಿಂದ ಬಿಗ್ ಬಾಸ್ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?
-
ದೇಶ19 hours ago
Raid On NewsClick: ನ್ಯೂಸ್ಕ್ಲಿಕ್ನ 30 ಪತ್ರಕರ್ತರ ಮನೆಗಳ ಮೇಲೆ ಪೊಲೀಸರ ದಾಳಿ, ಏನಿದು ಕೇಸ್?
-
ಕರ್ನಾಟಕ16 hours ago
Namma Metro: ಮೆಟ್ರೋ ಟ್ರ್ಯಾಕ್ನಲ್ಲಿ ಲಾಕ್ ಆದ ಮೆಂಟೈನ್ಸ್ ವೆಹಿಕಲ್! ಮೇಲೆತ್ತಲು ಕ್ರೇನ್ ಬಳಕೆ
-
ಕ್ರೈಂ20 hours ago
4 ವರ್ಷದಿಂದ ಇಬ್ಬರು ಪುತ್ರಿಯರ ಮೇಲೆಯೇ ಅತ್ಯಾಚಾರ ಎಸಗಿದ ಪಾಪಿಯ ಬಂಧನ; ಇವನೆಂಥಾ ತಂದೆ?
-
ಕರ್ನಾಟಕ13 hours ago
Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್ ವೆಹಿಕಲ್; ಎಂದಿನಂತೆ ಮೆಟ್ರೋ ಓಡಾಟ
-
ಉತ್ತರ ಕನ್ನಡ15 hours ago
Karwar Tunnel Route : ಕಾರವಾರ ರಾಷ್ಟ್ರೀಯ ಹೆದ್ದಾರಿ 66ರ ಸುರಂಗ ಮಾರ್ಗ ಕೊನೆಗೂ ಸಂಚಾರ ಮುಕ್ತ!
-
ಕರ್ನಾಟಕ11 hours ago
Lecturer Death : ಬಿಜಿಎಸ್ ಕಾಲೇಜಿನ ಉಪನ್ಯಾಸಕ ನೇಣಿಗೆ ಶರಣು; ಸಾವಿನ ಸುತ್ತ ಅನುಮಾನದ ಹುತ್ತ