The Elephant Whisperers: ನಿರ್ದೇಶಕಿ ಕಾರ್ತಿಕಿಗೆ ಬೊಮ್ಮನ್‌-ಬೆಳ್ಳಿ ದಂಪತಿಯಿಂದ ನೋಟಿಸ್; ಚಿತ್ರತಂಡದಿಂದ ಮೋಸ? - Vistara News

ಕಾಲಿವುಡ್

The Elephant Whisperers: ನಿರ್ದೇಶಕಿ ಕಾರ್ತಿಕಿಗೆ ಬೊಮ್ಮನ್‌-ಬೆಳ್ಳಿ ದಂಪತಿಯಿಂದ ನೋಟಿಸ್; ಚಿತ್ರತಂಡದಿಂದ ಮೋಸ?

The Elephant Whisperers: ನಿರ್ದೇಶಕಿ ಕಾರ್ತಿಕಿ ಅವರಿಗೆ ಇದೀಗ ಬೊಮ್ಮನ್‌ ಹಾಗೂ ಬೆಳ್ಳಿ ದಂಪತಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಲಾಗಿದೆ.

VISTARANEWS.COM


on

Bomman, Bellie Kartiki Gonsalves
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾರ್ತಿಕಿ​ ಗೋನ್ಸಾಲ್ವಿಸ್ (Kartiki Gonsalves) ನಿರ್ದೇಶನದಲ್ಲಿ ಮೂಡಿಬಂದ ‘ದಿ ಎಲಿಫೆಂಟ್​ ವಿಸ್ಪರರ್ಸ್​’ (The Elephant Whisperers) ಸಾಕ್ಷ್ಯಚಿತ್ರಕ್ಕೆ ಈ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ನಿರ್ದೇಶಕಿ ಕಾರ್ತಿಕಿ ಅವರಿಗೆ ಇದೀಗ ಬೊಮ್ಮನ್‌ ಹಾಗೂ ಬೆಳ್ಳಿ ದಂಪತಿ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. 2 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಲಾಗಿದೆ.

ಸಾಕ್ಷ್ಯಚಿತ್ರ ಶೂಟ್ ಮಾಡುವ ಸಂದರ್ಭದಲ್ಲಿ ಒಂದು ಮನೆ ಕಟ್ಟಿಕೊಡುವ ಭರವಸೆ ನೀಡಲಾಗಿತ್ತು. ಒಂದು ವಾಹನ ಹಾಗೂ ಆರ್ಥಿಕ ಸಹಾಯದ ಭರವಸೆಯನ್ನೂ ಇವರಿಗೆ ಕಾರ್ತಿಕಿ ನೀಡಿದ್ದರು. ಆದರೆ, ಅದಾವುದೂ ನೆರವೇರಿಲ್ಲ ಎಂದು ಯಟ್ಯೂಬ್‌ ಸಂದರ್ಶನದಲ್ಲಿ ಈ ಬಗ್ಗೆ ದಂಪತಿ ಮಾತನಾಡಿದ್ದಾರೆ.

ದಂಪತಿ ಆರೋಪವೇನು?

‘ನಮ್ಮನ್ನು ರಿಯಲ್ ಹೀರೊಗಳು ಎಂದು ಎಲ್ಲ ಕಡೆಗಳಲ್ಲೂ ಪರಿಚಯಿಸಲಾಯಿತು. ಆದರೆ, ತಂಡದವರ ಕಡೆಯಿಂದ ನಮಗೆ ಹಣದ ಸಹಾಯ ಸಿಕ್ಕಿಲ್ಲ. ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ದೇಣಿಗೆಗಳನ್ನು ತಂಡದವರು ಸ್ವೀಕರಿಸಿದ್ದಾರೆ. ಆದರೆ, ನಮಗೆ ಯಾವುದೇ ಪರಿಹಾರ ನೀಡದೆ ತಂಡದವರು ಎಲ್ಲಾ ಹಣಕಾಸಿನ ಲಾಭಗಳನ್ನು ಪಡೆದರು’ ಎಂದು ದಂಪತಿ ಆರೋಪಿಸಿದ್ದಾರೆ.

ಇದನ್ನೂ ಓದಿ: The Elephant Whisperers : ‘ದಿ ಎಲಿಫೆಂಟ್ ವಿಸ್ಪರರ್ಸ್ʼ ಖ್ಯಾತಿಯ ಬೆಳ್ಳಿಗೆ ಸರ್ಕಾರಿ ನೌಕರಿ!

ದಂಪತಿಯೇ ಹಣ ಖರ್ಚು ಮಾಡಿದ್ದರಂತೆ.

ಬೊಮ್ಮನ್ ಹಾಗೂ ಬೆಳ್ಳಿಯ ಮದುವೆ ದೃಶ್ಯವೊಂದು ಸಾಕ್ಷ್ಯಚಿತ್ರದಲ್ಲಿ ಬರುತ್ತದೆ. ಇದಕ್ಕಾಗಿ ಈ ದಂಪತಿಯೇ ಹಣ ಖರ್ಚು ಮಾಡಿದ್ದರಂತೆ. ‘ನಿರ್ದೇಶಕಿ ಕಾರ್ತಿಕಿ ಅವರು ನಮ್ಮ ಮದುವೆಯ ದೃಶ್ಯವನ್ನು ಮರುಸೃಷ್ಟಿ ಮಾಡಲು ಬಯಸಿದ್ದರು. ಹೀಗಾಗಿ ಆ ದೃಶ್ಯವನ್ನು ಸೇರಿಸಲಾಗಿದೆ. ಈ ದೃಶ್ಯದ ಶೂಟ್​ಗೆ ಬೇಕಿರುವ ಸಿದ್ಧತೆಯನ್ನು ನಾವೇ ಮಾಡಿಕೊಂಡಿದ್ದೆವು. ಇದಕ್ಕಾಗಿ ನಮ್ಮ ಉಳಿತಾಯ ಖಾತೆಯಿಂದ ಹಣ ಬಳಕೆ ಮಾಡಿಕೊಳ್ಳಲಾಗಿದೆ. ಈ ಹಣವನ್ನು ಮರಳಿ ನೀಡುವುದಾಗಿ ಅವರು ಹೇಳಿದ್ದರು. ಆದರೆ, ಅದು ಭರವಸೆಯಾಗಿಯೇ ಉಳಿದಿದೆ’ ಎಂದಿದ್ದಾರೆ ಬೊಮ್ಮನ್ ಹಾಗೂ ಬೆಳ್ಳಿ.‘

ಬುಡಕಟ್ಟು ಜನಾಂಗ ಇವರದು

ಬೊಮ್ಮನ್‌ ಮತ್ತು ಬೆಳ್ಳಿ ಇಬ್ಬರಿಗೂ ಈಗ ವಯಸ್ಸು 54. ಅವರು ಕೇರಳ ಮತ್ತು ತಮಿಳುನಾಡಿನಲ್ಲಿ ವಾಸವಾಗಿರುವ ಕಾಟ್ಟು ನಾಯಕನ್‌ ಎಂಬ ಆದಿವಾಸಿ ಜನಾಂಗಕ್ಕೆ ಸೇರಿದವರು. ಅಂದರೆ ಇವರು ಕಾಡಿನ ನಾಯಕರು. ನೀಲಗಿರಿಯ ಮುದುಮಲೈ ಅರಣ್ಯ ಭಾಗದ ಸಾಂಪ್ರದಾಯಿಕ ಬುಡಕಟ್ಟು ಜನಾಂಗ ಇವರದು.

ಬೊಮ್ಮನ್‌ ಆನೆಗಳನ್ನು ಪಳಗಿಸುವ ಮಾಹುತರ ಕುಟುಂಬದಿಂದ ಬಂದವನು. ಅಪ್ಪ ತೀರಿಕೊಂಡ ಮೇಲೆ ಆ ಕೆಲಸಕ್ಕೆ ಬೊಮ್ಮನ್‌ ತಲೆ ಕೊಟ್ಟ. ಬೊಮ್ಮನ್‌ಗೆ ಒಂದು ವಿಶೇಷವಾದ ಗ್ರಹಣ ಶಕ್ತಿ ಇತ್ತು. ಅವನಿಗೆ ಆನೆಗಳ ಪುಟ್ಟ ಮರಿಗಳು ಎಲ್ಲದರೂ ಸಿಕ್ಕಿ ಹಾಕಿಕೊಂಡಿದ್ದರೆ, ಹಿಂಡಿನಿಂದ ಬೇರೆಯಾಗಿದ್ದರೆ ಗೊತ್ತಾಗುತ್ತಿತ್ತು. ಅದೆಷ್ಟೋ ಮರಿಗಳನ್ನು ಅವನು ರಕ್ಷಿಸಿದ್ದ. ಹೀಗಾಗಿ ಅವನು ತಮಿಳುನಾಡಿನ ಅರಣ್ಯ ಇಲಾಖೆಯ ಫೇವರಿಟ್‌!

ಇದನ್ನೂ ಓದಿ: The Elephant Whisperers: ಆಸ್ಕರ್ ಪ್ರಶಸ್ತಿ ವಿಜೇತ ಬೊಮ್ಮನ್-ಬೆಳ್ಳಿ ಆರೈಕೆ ಮಾಡುತ್ತಿದ್ದ ಆನೆ ಮರಿ ಅನಾರೋಗ್ಯದಿಂದ ಸಾವು

ಆನೆ ಮರಿಗಳ ಜತೆ ಇವರ ಪ್ರೀತಿಯೂ ಬೆಳೆಯಿತು

2017ರಲ್ಲಿ ಬಂದ ರಘುವನ್ನು ಬೊಮ್ಮನ್‌ ಮತ್ತು ಬೆಳ್ಳಿ ಪ್ರೀತಿಯಿಂದ ನೋಡಿಕೊಂಡರು. ಬೆಳ್ಳಿ ಆನೆಯ ಆರೈಕೆಯಲ್ಲಿ ತನ್ನೆಲ್ಲ ದುಃಖ ಮರೆತರೆ ಬೊಮ್ಮನ್‌ ಪಾಲಿಗೆ ರಘುವೇ ಮಗ ಎಲ್ಲ. ಅದರ ನಡುವೆ 2019ರಲ್ಲಿ ಅಮ್ಮು ಎಂಬ ಇನ್ನೊಂದು ಆನೆ ಮರಿ ಈ ಕುಟುಂಬವನ್ನು ಸೇರಿಕೊಳ್ಳುತ್ತದೆ. ರಘು ಮತ್ತು ಅಮ್ಮುವನ್ನು ಮಕ್ಕಳಂತೆ ಪ್ರೀತಿಸುತ್ತಾ ಇರುವ ನಡುವೆಯೇ ಇತ್ತ ಬೊಮ್ಮನ್‌ ಮತ್ತು ಬೆಳ್ಳಿ ನಡುವೆಯೂ ಪ್ರೀತಿ ಹುಟ್ಟಿಕೊಳ್ಳುತ್ತದೆ. ಹಾಗೆ ಅದು ಬೆಳೆಯುತ್ತಾ ಮದುವೆಯಾಗುತ್ತಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Varalaxmi Sarathkumar: ʻಮಾಣಿಕ್ಯʼನಟಿಯ ಭಾವಿ ಪತಿಗೆ ಇದು 2ನೇ ಮದುವೆ? ಮೊದಲ ಪತ್ನಿ ಖ್ಯಾತ ಮಾಡೆಲ್!

Varalaxmi Sarathkumar: ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಆರ್ಟ್ ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ (Nicholai Sachdev) ಅವರೊಂದಿಗೆ ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.  ಆದರೆ ನಿಕೋಲಾಯ್ ಸಚ್‌ದೇವ್ ಅವರಿಗೆ ಇದು ಎರಡನೇ ಮದುವೆ ಎನ್ನಲಾಗಿದೆ.

VISTARANEWS.COM


on

Varalaxmi Sarathkumar Nicholai Sachdev to be husband first wife
Koo

ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದಾರೆ. ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಆರ್ಟ್ ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ (Nicholai Sachdev) ಅವರೊಂದಿಗೆ ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು.  ಆದರೆ ನಿಕೋಲಾಯ್ ಸಚ್‌ದೇವ್ ಅವರಿಗೆ ಇದು ಎರಡನೇ ಮದುವೆ ಎನ್ನಲಾಗಿದೆ.

ನಿಕೋಲಾಯ್ ಸಚ್‌ದೇವ್ ಅವರು ಮಾಡೆಲ್ ಕವಿತಾ ಅವರನ್ನು ಮದುವೆಯಾಗಿದ್ದರು. 2010ರಲ್ಲಿ ಮಿಸ್ ಗ್ಲಾಡ್ರಾಗ್ಸ್ ಆಗಿ ಹೊರಹೊಮ್ಮಿದ್ದರು. 2007 ರಲ್ಲಿ ಕ್ಯಾಲಿಫೋರ್ನಿಯಾದಲ್ಲಿ ನಡೆದ ಮಿಸ್ ಗ್ಲೋಬ್ 2011 ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಅವರಿಗೆ 15 ವರ್ಷದ ಮಗಳೂ ಸಹ ಇದ್ದಾರೆ ಎಂದು ವರದಿಯಾಗಿದೆ. ಈ ಜೋಡಿಗೆ ಮದುವೆ ಬಳಿಕ ಹೊಂದಾಣಿಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ ಇಬ್ಬರು ಬೇರೆಯಾಗುವ ನಿರ್ಧಾರಕ್ಕೆ ಬಂದಿದ್ದರು. ಆ ಬಳಿಕ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಿಟ್ಟುಕೊಂಡಿದ್ದರು. ನಿಕೋಲಾಯ್ ಹಾಗೂ ಕವಿತಾ ವಿಚ್ಛೇದನದ ಬಳಿಕವಷ್ಟೇ ವರಲಕ್ಷ್ಮಿ ಜೊತೆ ಡೇಟಿಂಗ್ ಶುರುವಾಗಿತ್ತು ಎಂದು ವರದಿಯಾಗಿವೆ.

ಇದನ್ನೂ ಓದಿ: Varalaxmi Sarathkumar:‌ 14 ವರ್ಷದ ಪ್ರೀತಿಗೆ 38ನೇ ವಯಸ್ಸಿನಲ್ಲಿ ನಿಶ್ಚಿತಾರ್ಥದ ಮುದ್ರೆ ಹಾಕಿದ ಮಾಣಿಕ್ಯ ನಟಿ!

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದರು. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದರು.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ

Continue Reading

South Cinema

Varalaxmi Sarathkumar:‌ 14 ವರ್ಷದ ಪ್ರೀತಿಗೆ 38ನೇ ವಯಸ್ಸಿನಲ್ಲಿ ನಿಶ್ಚಿತಾರ್ಥದ ಮುದ್ರೆ ಹಾಕಿದ ಮಾಣಿಕ್ಯ ನಟಿ!

Varalaxmi Sarathkumar:‌  ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆ

VISTARANEWS.COM


on

Varalaxmi Sarathkumar gets engaged Nicholai Sachdev
Koo

ಬೆಂಗಳೂರು: ಬಹುಭಾಷಾ ನಟ ಶರತ್‌ಕುಮಾರ್ (Varalaxmi Sarathkumar) ಅವರ ಪುತ್ರಿ ಮತ್ತು ಕನ್ನಡದ ʻಮಾಣಿಕ್ಯʼ ಸಿನಿಮಾದಲ್ಲಿ ಸುದೀಪ್‌ಗೆ ಜೋಡಿಯಾಗಿದ್ದ ನಟಿ ವರಲಕ್ಷ್ಮಿ ಶರತ್‌ಕುಮಾರ್ ಮುಂಬೈ ಮೂಲದ ಉದ್ಯಮಿ ಜತೆಗೆ 38ನೇ ವಯಸ್ಸಿನಲ್ಲಿ ಎಂಗೇಜ್‌ ಆಗಿದ್ದಾರೆ. ನಟಿ ವರಲಕ್ಷ್ಮಿ ಶರತ್‌ಕುಮಾರ್ ಅವರು ಆರ್ಟ್ ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ (Nicholai Sachdev) ಅವರೊಂದಿಗೆ ಮಾರ್ಚ್ 1ರಂದು ಮುಂಬೈನಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಸಿನಿಮಾ ತಜ್ಞ ರಮೇಶ್ ಬಾಲಾ ಅವರು ನಿಶ್ಚಿತಾರ್ಥ ಸಮಾರಂಭದ ಫೋಟೊವನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವರಲಕ್ಷ್ಮಿ ಮತ್ತು ನಿಕೋಲಾಯ್ ಅವರ ಪ್ರೇಮಕಥೆ!

ರಮೇಶ್ ಅವರು ಜೋಡಿಯ ಪ್ರೇಮಕಥೆಯನ್ನು ಬಹಿರಂಗಪಡಿಸಿದ್ದಾರೆ. “ನಟಿ ವರಲಕ್ಷ್ಮಿ ಶರತ್‌ಕುಮಾರ್ ಮತ್ತು ಗ್ಯಾಲರಿಸ್ಟ್ ನಿಕೋಲಾಯ್ ಸಚ್‌ದೇವ್ ಅವರು ಮಾರ್ಚ್ 1ರಂದು ಮುಂಬೈನಲ್ಲಿ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಕಳೆದ 14 ವರ್ಷಗಳಿಂದ ಪರಸ್ಪರ ಪರಿಚಿತರಾದ ವರಲಕ್ಷ್ಮಿ ಮತ್ತು ನಿಕೋಲಾಯ್ ತಮ್ಮ ಪೋಷಕರ ಆಶೀರ್ವಾದದೊಂದಿಗೆ ಉಂಗುರಗಳನ್ನು ಬದಲಾಯಿಸಿಕೊಂಡರು. ಈ ವರ್ಷದ ಕೊನೆಯಲ್ಲಿ ಜೋಡಿ ವಿವಾಹವಾಗಲಿದೆʼʼಎಂದು ಬರೆದುಕೊಂಡಿದ್ದಾರೆ.

ನಿಶ್ಚಿತಾರ್ಥ ಸಮಾರಂಭದಲ್ಲಿ, ವರಲಕ್ಷ್ಮಿ ರೇಷ್ಮೆ ಸೀರೆಯಲ್ಲಿ ಮಿಂಚುತ್ತಿದ್ದರು. 2020 ರಲ್ಲಿ ವರಲಕ್ಷ್ಮಿ ಅವರು ಸಿನಿಮಾಗಳನ್ನು ತೊರೆದು ಉದ್ಯಮಿಯೊಬ್ಬರನ್ನು ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿತ್ತು. ಇದಾದ ಬಳಿಕ ನಟಿ ವದಂತಿಗಳನ್ನು ತಳ್ಳಿ ಹಾಕಿದ್ದರು.

ಇದನ್ನೂ ಓದಿ: Simple Suni: ‘ಅವತಾರ ಪುರುಷ 2’ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಿದ ಸಿಂಪಲ್‌ ಸುನಿ!

ಇನ್ನೇನು ಶೀಘ್ರದಲ್ಲಿಯೇ ಈ ಜೋಡಿಯ ಮದುವೆಯ ದಿನಾಂಕವೂ ಘೋಷಣೆ ಆಗಲಿದೆ. ಈ ಮೊದಲು ವರಲಕ್ಷ್ಮಿ ಶರತ್‌ಕುಮಾರ್, ತಮಿಳು ನಟ ವಿಶಾಲ್ ಅವರನ್ನು ಪ್ರೀತಿಸುತ್ತಿದ್ದಾರೆ ಮತ್ತು ಇಬ್ಬರೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ವದಂತಿಗಳು ಕಾಲಿವುಡ್‌ನಲ್ಲಿ ಹರಿದಾಡಿದ್ದವು.

ವರಲಕ್ಷ್ಮಿ ಅವರು ಇತ್ತೀಚೆಗೆ ಪ್ರಶಾಂತ್ ವರ್ಮಾ ಅವರ ತೇಜ ಸಜ್ಜಾ ಅಭಿನಯದ ತೆಲುಗು ಚಿತ್ರ ʻಹನುಮಾನ್ ಚಿತ್ರದಲ್ಲಿʼ ಕಾಣಿಸಿಕೊಂಡಿದ್ದರು. ಧನುಷ್ ಅವರ ಮುಂಬರುವ ತಮಿಳು ಚಿತ್ರ ʻರಾಯನ್‌ʼನಲ್ಲಿ ನಟಿಸಲು ರೆಡಿಯಾಗಿದ್ದಾರೆ. ʻಶಬರಿʼ ಎಂಬ ತೆಲುಗು ಚಿತ್ರದ ಹೊರತಾಗಿ ಮಲಯಾಳಂ ಚಿತ್ರ ʻಕಲರ್ಸ್ʼನಲ್ಲಿಯೂ ಅವರು ಕಾಣಿಸಿಕೊಳ್ಳಲಿದ್ದಾರೆ.

Continue Reading

ಕಾಲಿವುಡ್

Nayanthara and Vignesh: ಪತಿಯನ್ನು ಅನ್‌ಫಾಲೋ ಮಾಡಿ ಭಾವುಕ ಪೋಸ್ಟ್‌ ಹಂಚಿಕೊಂಡ ನಯನತಾರ!

Nayanthara and Vignesh: ನಟಿ ಏಕಾಏಕಿ ಇನ್‌ಸ್ಟಾಗ್ರಾಮ್‌ನಲ್ಲಿ ಪತಿ ವಿಘ್ನೇಶ್ ಶಿವನ್‌ ಅವರನ್ನು ಅನ್‌ಫಾಲೋ ಮಾಡಿದ್ದಾರೆ ಎಂದು ವರದಿಯಾಗಿದೆ. ಮಾತ್ರವಲ್ಲ ಭಾವುಕ ಪೋಸ್ಟ್‌ ಕೂಡ ಹಾಕಿಕೊಂಡಿದ್ದಾರೆ.

VISTARANEWS.COM


on

Vignesh Shivan Shares fIRST Post After Nayanthara Unfollows
Koo

ಬೆಂಗಳೂರು: ವಿಘ್ನೇಶ್ ಶಿವನ್ ಮತ್ತು ನಯನತಾರಾ (Nayanthara and Vignesh) ಅಕ್ಟೋಬರ್ 9ರಂದು ಅವಳಿ ಮಕ್ಕಳನ್ನು ಪಡೆದರು. ನಟಿ ನಯನತಾರಾ ಇತ್ತೀಚೆಗೆ ತಮ್ಮ ಮಕ್ಕಳಾದ ಉಯಿರ್ ಮತ್ತು ಉಲಗ್ ಅವರ ಫೋಟೋಗಳನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಆದರೀಗ ನಟಿ ಏಕಾಏಕಿ ಇನ್‌ಸ್ಟಾಗ್ರಾಮ್‌ನಲ್ಲಿ ಪತಿ ವಿಘ್ನೇಶ್ ಶಿವನ್‌ನ ಅನ್‌ಫಾಲೋ ಮಾಡಿದ್ದಾರೆ ಎಂದು ವರದಿಯಾಗಿದೆ. ಮಾತ್ರವಲ್ಲ ಭಾವುಕ ಪೋಸ್ಟ್‌ ಕೂಡ ಹಾಕಿಕೊಂಡಿದ್ದಾರೆ.

ಆದರೆ ಅಸಲಿಗೆ ಹಾಗೇನು ಆಗಿಲ್ಲ. ನಯನತಾರಾ ಅವರು ಇನ್​ಸ್ಟಾಗ್ರಾಮ್​ನಲ್ಲಿ ವಿಘ್ನೇಶ್ ಶಿವನ್ ಅವರನ್ನು ಅನ್​ಫಾಲೋ ಮಾಡಿಯೇ ಇಲ್ಲ. ಇದರ ಸ್ಕ್ರೀನ್​ಶಾಟ್​ಗಳು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ನಯನತಾರಾ ಅವರಿಗೆ ಆಗದೇ ಇರುವವರ ಕೆಲಸ ಇದು ಎಂದು ಫ್ಯಾನ್ಸ್‌ ಕಮೆಂಟ್‌ ಮಾಡುತ್ತಿದ್ದಾರೆ. ಕೆಲವು ದಿನಗಳಹಿಂದೆ ಜೋಡಿ ಡಿವೋರ್ಸ್‌ ಪಡೆದುಕೊಳ್ಳುತ್ತಿದೆ ಎಂದು ಸುದ್ದಿಯಾಗಿತ್ತು. ಆದರೀಗ ನಟಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, ನಯನತಾರಾ ಒಂದು ಇಂಗ್ಲಿಷ್ ಪೋಸ್ಟ್ ಮಾಡಿದ್ದಾರೆ. “ಅವಳು ಕಣ್ಣೀರಿನ ಮೂಲಕವೂ ಇದು ಆಕೆಗೆ ಸಿಕ್ಕಿದೆ ಎಂದು ಯಾವಾಗಲೂ ಹೇಳುತ್ತಿದ್ದಳು” ಎನ್ನುವ ಅರ್ಥದಲ್ಲಿ ಒಂದು ಕೋಟ್ ಹಾಕಿದ್ದಾರೆ. ಇದಾದ ಬಳಿಕ ನಟಿ ಪತಿ ವಿಘ್ನೇಶ್ ಅವರನ್ನು ಅನ್ ಫಾಲೋ ಮಾಡಿದ್ದಾರೆ ಎಂದು ಸುದ್ದಿ ವೈರಲ್‌ ಆಗಿದೆ. ಆದರೀಗ ಮತ್ತೆ ನಯನತಾರಾ ಪತಿಯನ್ನು ಫಾಲೋ ಮಾಡುತ್ತಿದ್ದಾರೆ. ನಟಿಯ ಸಂಸಾರದಲ್ಲಿ ಬಿರುಕು ಮೂಡಿದೆ ಎನ್ನುವ ಚರ್ಚೆ ಶುರುವಾಗಿದೆ.

ಇದನ್ನೂ ಓದಿ: Nayanthara and Vignesh: ಅವಳಿ ಮಕ್ಕಳೊಂದಿಗೆ ಇರುವ ಕ್ಯೂಟ್‌ ಫೋಟೊ ಹಂಚಿಕೊಂಡ ನಯನತಾರಾ!

ನಯನತಾರಾ ನಟನೆ ಹಾಗೂ ಮಕ್ಕಳ ಜವಾಬ್ದಾರಿ ಎರಡನ್ನು ನಿಭಾಯಿಸುವುದು ಕಷ್ಟವಾದ ಹಿನ್ನೆಲೆ ಮಕ್ಕಳ ಜೊತೆ ಸಮಯ ಕಳೆಯಲು ಕೆಲ ಕಾಲ ನಟಿ ಬ್ರೇಕ್ ತೆಗೆದುಕೊಳ್ಳುತ್ತಾರೆ ಎನ್ನುವ ಮಾತು ಕಾಲಿವುಡ್ ಅಂಗಳದಲ್ಲಿ ಕೇಳಿ ಹರಿದಾಡಿತ್ತು. ಆದರೆ ನಟಿ ʻಜವಾನ್‌ʼ ಸಿನಿಮಾ ಮೂಲಕ ಮತ್ತೆ ಕಮ್‌ ಬ್ಯಾಕ್‌ ಆದರು.

ಇತ್ತೀಚೆಗೆ ಥಿಯೇಟರ್‌ಗಳಲ್ಲಿ ತೆರೆಕಂಡ ಲೇಡಿ ಸೂಪರ್‌ ಸ್ಟಾರ್‌ ನಯನತಾರಾ (Actress Nayanthara) ಅಭಿನಯದ ʼಅನ್ನಪೂರ್ಣಿʼ (Annapoorani) ಚಿತ್ರ ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗಿತ್ತು. ಸಿನಿಮಾ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುತ್ತಿದೆ ಎಂದು ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಕೇಸ್ ಕೂಡ ದಾಖಲಿಸಿದ್ದರು. ಇದಾದ ಬಳಿಕ ನೆಟ್​ಫ್ಲಿಕ್ಸ್ ಎಚ್ಚೆತ್ತುಕೊಂಡಿದ್ದು, ಸಿನಿಮಾವನ್ನು ಡಿಲೀಟ್ ಮಾಡಿತ್ತು. ಇನ್‌ಸ್ಟಾ ಮೂಲಕ ನಟಿ ಕ್ಷಮೆ ಕೂಡ ಕೇಳಿದ್ದರು.

ವಿಘ್ನೇಶ್ ಶಿವನ್ ಪ್ರಸ್ತುತ ʻಲವ್ ಇನ್ಶುರೆನ್ಸ್ ಕಾರ್ಪೊರೇಶನ್‌ʼ ಸಿನಿಮಾ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಪ್ರದೀಪ್ ರಂಗನಾಥನ್, ಎಸ್.ಜೆ.ಸೂರ್ಯ ಮತ್ತು ಕೃತಿ ಶೆಟ್ಟಿ ಮನರಂಜನಾ ಪಾತ್ರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ.

Continue Reading

ಕಾಲಿವುಡ್

Prakash Raj: ಧನುಷ್ ನಿರ್ದೇಶನದಲ್ಲಿ ಪ್ರಕಾಶ್ ರಾಜ್‌: ಮತ್ತೆ ಒಂದಾದ್ರೂ ‘ತಿರುಚಿತ್ರಂಬಲಂ’ ಜೋಡಿ

Prakash Raj: ಪಾತ್ರ ಚಿಕ್ಕದೇ ಇರಲಿ, ದೊಡ್ಡದ್ದೇ ಇರಲಿ ಅದಕ್ಕೆ ಪ್ರಕಾಶ್ ರಾಜ್ ನ್ಯಾಯ ಒದಗಿಸುತ್ತಾರೆ. ಹೀಗಾಗಿ ಕಾಲಿವುಡ್ ನಟ ಧನುಷ್ ತಮ್ಮ ನಿರ್ದೇಶನದಲ್ಲಿ ಪ್ರಕಾಶ್ ರಾಜ್ ಅವರಿಗೊಂದು ತೂಕದ ಪಾತ್ರ ನೀಡಿದ್ದಾರೆ.

VISTARANEWS.COM


on

prakash Raj dhanush raayan
Koo

ಬೆಂಗಳೂರು: ಕನ್ನಡದ ನಟ, ಪರಭಾಷೆಗಳಲ್ಲಿಯೂ ಕರುನಾಡನ್ನು ಪ್ರತಿನಿಧಿಸುವ ಪ್ರಕಾಶ್ ರಾಜ್, ತಮ್ಮ ಅಭಿನಯದ ಮೂಲಕವೇ ಎಲ್ಲರನ್ನೂ ಸೆಳೆದವರು. ಯಾವುದೇ ಪಾತ್ರ ಕೊಟ್ಟರು ಅವರು ಲೀಲಾಜಾಲವಾಗಿ ನಟಿಸುತ್ತಾರೆ. ಕೆಲವೊಮ್ಮೆ ವಿಭಿನ್ನ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಕೆಲವೊಮ್ಮೆ ಪಕ್ಕಾ ಕಮರ್ಷಿಯಲ್ ಸಿನಿಮಾಗಳಲ್ಲಿ ನಟಿಸಿದ್ದೂ ಇದೆ. ಪಾತ್ರ ಚಿಕ್ಕದೇ ಇರಲಿ ದೊಡ್ಡದ್ದೇ ಇರಲಿ ಅದಕ್ಕೆ ಪ್ರಕಾಶ್ ರಾಜ್ ನ್ಯಾಯ ಒದಗಿಸುತ್ತಾರೆ. ಹೀಗಾಗಿ ಕಾಲಿವುಡ್ ನಟ ಧನುಷ್ ತಮ್ಮ ನಿರ್ದೇಶನದಲ್ಲಿ ಪ್ರಕಾಶ್ ರಾಜ್ ಅವರಿಗೊಂದು ತೂಕದ ಪಾತ್ರ ನೀಡಿದ್ದಾರೆ.

2017ರಲ್ಲಿ ತೆರೆಕಂಡ ‘ಪಾ ಪಂಡಿ’ ಸಿನಿಮಾದ ಮೂಲಕ ಪ್ರಕಾಶ್ ರಾಜ್ ನಿರ್ದೇಶಕರಾಗಿಯೂ ಚಿತ್ರರಂಗದಲ್ಲಿ ಗುರುತಿಸಿಕೊಂಡರು. ಒಂದಷ್ಟು ಗ್ಯಾಪ್ ಬಳಿಕ “ನಿಲವುಕ್ಕು ಎನ್ ಮೆಲ್ ಎನ್ನಡಿ ಕೋಬಮ್” ಎಂಬ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದರು. ಇದೀಗ ರಾಯನ್ ಚಿತ್ರದ ಮೂಲಕ ಧನುಷ್ ಮತ್ತೊಮ್ಮ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಇದು ಅವರ 50ನೇ ಚಿತ್ರ ಅನ್ನೋದು ವಿಶೇಷ. ಸನ್ ಪಿಕ್ಚರ್ಸ್ ನಡಿ ಮೂಡಿ ಬರ್ತಿರುವ ರಾಯನ್ ಬಳಗಕ್ಕೀಗ ಕನ್ನಡದ ಪ್ರಕಾಶ್ ರಾಜ್ ಎಂಟ್ರಿ ಕೊಟ್ಟಿದ್ದಾರೆ.

ಇದನ್ನೂ ಓದಿ: Actor Prakash Raj: ಮಾರ್ಚ್ 15ಕ್ಕೆ ಪ್ರೇಕ್ಷಕರ ಎದುರು ಬರ್ತಿದೆ ʻಫೋಟೋʼಸಿನಿಮಾ!

ಪ್ರಕಾಶ್ ರಾಜ್ ಹಾಗೂ ಧನುಷ್ ‘ತಿರುಚಿತ್ರಂಬಲಂ’ ಸಿನಿಮಾದಲ್ಲಿ ಕಮಾಲ್ ಮಾಡಿದ್ದರು. ಅಪ್ಪ ಮಗನಾಗಿ ಪ್ರೇಕ್ಷಕರನ್ನು ರಂಜಿಸಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಈಗ ರಾಯನ್ ಚಿತ್ರದ ಮೂಲಕ ಮತ್ತೊಂದು ಸುಂದರ ಪಯಣಕ್ಕೆ ಧನುಷ್ ಪ್ರಕಾಶ್ ರಾಜ್ ಸಜ್ಜಾಗಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಅವರ ಆನ್ ಬೋರ್ಡ್ ಲುಕ್ ಹಂಚಿಕೊಂಡು ಧನುಷ್ ತಮ್ಮ ತಂಡಕ್ಕೆ ಸ್ವಾಗತಿಸಿದ್ದಾರೆ.

ಕುರ್ಚಿ ಮೇಲೆ ಕುಳಿತಿರುವ ಪ್ರಕಾಶ್ ರಾಜ್ ಯಾವುದೋ ಗಾಢ ಯೋಚನೆಯಲ್ಲಿ ಮಗ್ನರಾಗಿದ್ದಾರೆ. ಪೋಸ್ಟರ್ ನಲ್ಲಿ ಕಪ್ಪು ಬೆಳಕಿನ ಆಟವಿದೆ. ಎಆರ್ ರೆಹಮಾನ್ ಸಂಗೀತ ಸಂಯೋಜನೆಯಲ್ಲಿ ತಯಾರಾಗುತ್ತಿರುವ ರಾಯನ್ ಚಿತ್ರದಲ್ಲಿ ದೊಡ್ಡ ತಾರಾಬಗಳವಿದೆ.

Continue Reading
Advertisement
R Ashok Bangalore blastNew Project
ರಾಜಕೀಯ1 min ago

R AShok : ಕರ್ನಾಟಕದಲ್ಲಿ ಪಾಕಿಸ್ತಾನದ ಮಕ್ಕಳು ಹುಟ್ಟಿಕೊಳ್ತಿದ್ದಾರೆ ಎಂದ ಅಶೋಕ್‌

Murder by friends over love affair
ಕಲಬುರಗಿ5 mins ago

Murder Case : ಪ್ರೀತಿ ವಿಚಾರಕ್ಕೆ ಕಿತ್ತಾಟ; ಯುವಕನ ಕೊಲೆಯಲ್ಲಿ ಅಂತ್ಯ

modi
ದೇಶ13 mins ago

Narendra Modi: ತೆಲಂಗಾಣ, ಒಡಿಶಾಕ್ಕೆ ಮೋದಿ ಭೇಟಿ; 26,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ

KSRTC to operate special buses for Mahashivratri
ಮಹಾ ಶಿವರಾತ್ರಿ30 mins ago

Maha Shivratri : ಮಹಾಶಿವರಾತ್ರಿಗೆ ಕೆಎಸ್‌ಆರ್‌ಟಿಸಿಯಿಂದ ಸ್ಪೆಷಲ್‌ ಬಸ್‌; ಶೇ.10ರಷ್ಟು ಡಿಸ್ಕೌಂಟ್‌!

Stones pelted at 3 Vande Bharat train in a single day
ರಾಜಕೀಯ42 mins ago

Vande Bharat Train: ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ​; ಒಂದೇ ದಿನ 2 ಟ್ರೈನ್‌ ಮೇಲೆ 3 ಕಡೆ ದಾಳಿ!

Sedition Case BY Vijayendra
ಬೆಳಗಾವಿ49 mins ago

BY Vijayendra :‌ ನಾಸಿರ್‌ ಹುಸೇನ್‌ ಕೂಡಾ ಅಪರಾಧಿ, FIRನಲ್ಲಿ ಸೇರಿಸಿ; ವಿಜಯೇಂದ್ರ ಆಗ್ರಹ

elon musk
ವಾಣಿಜ್ಯ1 hour ago

World’s Richest Person: ವಿಶ್ವದ ಅತ್ಯಂತ ಸಿರಿವಂತ ವ್ಯಕ್ತಿ ಪಟ್ಟ ಕಳೆದುಕೊಂಡ ಎಲಾನ್‌ ಮಸ್ಕ್‌; ಈಗ ಯಾರು ನಂ. 1 ಶ್ರೀಮಂತ?

Guest Lecturers salarys
ನೌಕರರ ಕಾರ್ನರ್1 hour ago

Guest Lecturers : ಅತಿಥಿ ಉಪನ್ಯಾಸಕರ ವೇತನ 8000 ರೂ. ಹೆಚ್ಚಳ, ಪಾಠದ ಅವಧಿಯೂ ಜಾಸ್ತಿ

Is there a drinking water problem in your area Call this helpline number
ಬೆಂಗಳೂರು1 hour ago

Water Crisis : ನಿಮ್ಮ ಏರಿಯಾದಲ್ಲಿ ಕುಡಿಯುವ ನೀರಿನ ಸಮಸ್ಯೆನಾ?; ಈ ಹೆಲ್ಪ್‌ಲೈನ್‌ ನಂಬರ್‌ಗೆ ಕಾಲ್‌ ಮಾಡಿ

soumya shetty
ಸಿನಿಮಾ1 hour ago

Soumya Shetty: ಗೆಳತಿಯ ಮನೆಯಿಂದಲೇ ಚಿನ್ನ ಕದ್ದು ಸಿಕ್ಕಿಬಿದ್ದ ತೆಲುಗು ನಟಿ

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ19 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ23 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌