Kannada New Movie: ಮಕ್ಕಳ ಚಿತ್ರ `ಜರ್ನಿ ಆಫ್ ಬೆಳ್ಳಿ' ಪೋಸ್ಟ್ ಪ್ರೊಡಕ್ಷನ್ ಹಂತ ಮುಕ್ತಾಯ! - Vistara News

South Cinema

Kannada New Movie: ಮಕ್ಕಳ ಚಿತ್ರ `ಜರ್ನಿ ಆಫ್ ಬೆಳ್ಳಿ’ ಪೋಸ್ಟ್ ಪ್ರೊಡಕ್ಷನ್ ಹಂತ ಮುಕ್ತಾಯ!

Kannada New Movie: ಇದುವರೆಗೂ ನಾನಾ ಕಥಾಹಂದರಗಳ ಒಂದಷ್ಟು ಮಕ್ಕಳ ಸಿನಿಮಾಗಳು ಕನ್ನಡದಲ್ಲಿ ತೆರೆಗಂಡಿವೆ. ಅದರಲ್ಲಿ ʻಚಿನ್ನಾರಿಮುತ್ತʼದಂಥಾ ಚಿತ್ರಗಳು ಸಾರ್ವಕಾಲಿಕ ದಾಖಲೆ ಬರೆದು ಅಚ್ಚಳಿಯದೆ ಉಳಿದುಕೊಂಡಿವೆ. ಇದೀಗ ಚಿತ್ರೀಕರಣವನ್ನೆಲ್ಲ ಸಂಪೂರ್ಣವಾಗಿ ಮುಗಿಸಿಕೊಂಡಿರುವ `ಜರ್ನಿ ಆಫ್ ಬೆಳ್ಳಿ’ ಚಿತ್ರ ಕೂಡಾ ಅಂಥಾದ್ದೊಂದು ಛಾಪು ಮೂಡಿಸುವ ಲಕ್ಷಣಗಳು ದಟ್ಟವಾಗಿವೆ.

VISTARANEWS.COM


on

The Journey of Belli Post Production compleated
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಾನಾ ಥರದ ಪ್ರಯತ್ನ,(Kannada New Movie) ಪ್ರಯೋಗಗಳು ನಡೆಯುತ್ತಿವೆ. ಅದೆಲ್ಲದರಾಚೆಗೂ ಒಂದಷ್ಟು ಪ್ರಕಾರಗಳ ಸಿನಿಮಾಗಳ ಸಂಖ್ಯೆ ಗಣನೀಯವಾಗಿ ಇಳಿಮುಖ ಕಂಡಿವೆ. ಆ ಸಾಲಿನಲ್ಲಿ ಮಕ್ಕಳ ಚಿತ್ರಗಳದ್ದು ಮುಂಚೂಣಿಯ ಸ್ಥಾನ. ಇದೀಗ ಅದನ್ನು ನೀಗುತ್ತಲೇ, ಈ ಜಾನರಿನಲ್ಲೇ ಹೊಸತನದಿಂದ ದಾಖಲಾಗುವಂತಹ ಚಿತ್ರವೊಂದು ಸಂಪೂರ್ಣವಾಗಿ ಇದೀಗ ಪೋಸ್ಟ್ ಪ್ರೊಡಕ್ಷನ್ ಮುಕ್ತಾಯ ಘಟ್ಟದಲ್ಲಿದೆ. ಈ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೋರ್ವ ನಿರ್ದೇಶಕಿಯ ಆಗಮನವೂ ಆಗಿದೆ. ಗೌರಿ ಶ್ರೀನಿವಾಸ್ ನಿರ್ದೇಶನದಲ್ಲಿ ರೂಪುಗೊಂಡಿರುವ `ಜರ್ನಿ ಆಫ್ ಬೆಳ್ಳಿ’ (The Journey of Belli) ಚಿತ್ರ ಪೋಸ್ಟ್ ಪ್ರೊಡಕ್ಷನ್ ಮುಕ್ತಾಯದ ಹಂತದಲ್ಲಿದೆ .

ಇದುವರೆಗೂ ನಾನಾ ಕಥಾಹಂದರಗಳ ಒಂದಷ್ಟು ಮಕ್ಕಳ ಸಿನಿಮಾಗಳು ಕನ್ನಡದಲ್ಲಿ ತೆರೆಗಂಡಿವೆ. ಅದರಲ್ಲಿ ʻಚಿನ್ನಾರಿಮುತ್ತʼದಂಥಾ ಚಿತ್ರಗಳು ಸಾರ್ವಕಾಲಿಕ ದಾಖಲೆ ಬರೆದು ಅಚ್ಚಳಿಯದೆ ಉಳಿದುಕೊಂಡಿವೆ. ಇದೀಗ ಚಿತ್ರೀಕರಣವನ್ನೆಲ್ಲ ಸಂಪೂರ್ಣವಾಗಿ ಮುಗಿಸಿಕೊಂಡಿರುವ `ಜರ್ನಿ ಆಫ್ ಬೆಳ್ಳಿ’ ಚಿತ್ರ ಕೂಡಾ ಅಂಥಾದ್ದೊಂದು ಛಾಪು ಮೂಡಿಸುವ ಲಕ್ಷಣಗಳು ದಟ್ಟವಾಗಿವೆ.

ಇದು ಓರ್ವ ಪುಟ್ಟ ಹುಡುಗಿಯ ಸುತ್ತ ಕದಲುವ ಕಥಾನಕವನ್ನೊಳಗೊಂಡ ಚಿತ್ರ. ಪುಟ್ಟ ಹುಡುಗಿಯೊಬ್ಬಳ ದೃಷ್ಟಿಕೋನದಲ್ಲಿ, ಆರ್ಮಿ ಫ್ಯಾಮಿಲಿಯ ಭೂಮಿಕೆಯಲ್ಲಿ ತೆರೆದುಕೊಳ್ಳುವ ಅಪರೂಪದ ಕಥೆಯೊಂದು ಜರ್ನಿ ಆಫ್ ಬೆಳ್ಳಿಯ ಜೀವಾಳವಂತೆ. ಸಮನ್ವಿ ಪಾಟೀಲ್ ಈ ಸಿನಿಮಾದ ಪ್ರಧಾನ ಪಾತ್ರವನ್ನು ನಿರ್ವಹಿಸಿದ್ದಾಳೆ. ಮಕ್ಕಳಲ್ಲಿ ಹೊಸ ಆಲೋಚನೆ ತುಂಬಬಲ್ಲ, ಎಳೇ ಮನಸುಗಳ ಭಾವಲೋಕದಲ್ಲಿ ಸಮ್ಮೋಹಕವಾದ ಛಾಪುಮೂಡಿಸಬಲ್ಲ ಈ ಸಿನಿಮಾ, ಎಲ್ಲ ವಯೋಮಾನದವರಿಗೂ ಹಿಡಿಸುವಂತಿದೆ ಎಂಬುದು ಚಿತ್ರತಂಡದ ಭರವಸೆ.

ಇದುವರೆಗೂ ಹೆಮ್ಮೆಯ ಸೈನಿಕರ ಜೀವನಗಾಥೆಯ ನಾನಾ ಮಗ್ಗುಲುಗಳನ್ನು ಸಿನಿಮಾ ಚೌಕಟ್ಟಿಗೆ ಒಗ್ಗಿಸಲಾಗಿದೆ. ಆದರೆ, ಪುಟ್ಟ ಮಗುವೊಂದರ ಕಣ್ಣುಗಳಲ್ಲಿ ಕದಲೋ ಕಥೆ ಕನ್ನಡದ ಮಟ್ಟಿಗೆ ಇದೇ ಮೋದಲೇನೋ…ಅಂಥಾದ್ದೊಂದು ಹೊಸತನದ ಕಥೆಯೊಂದಿಗೆ ಗೌರಿ ಶ್ರೀನಿವಾಸ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ: Children Movie | ಸೆಟ್ಟೇರಲು ಸಜ್ಜಾಗಿದೆ ದಿ ಜರ್ನಿ ಆಫ್‌ ಬೆಳ್ಳಿ

ಈಗಾಗಲೇ ತುಳು ಭಾಷೆಯಲ್ಲಿ `ಕಾರ್ನಿಕೊದ ಕಲ್ಲುರ್ಟಿ’ ಅಂತೊಂದು ಸಿನಿಮಾ ನಿರ್ಮಾಣ ಮಾಡಿದ್ದ ಮಹೇಂದ್ರ ಕುಮಾರ್ `ಜರ್ನಿ ಆಫ್ ಬೆಳ್ಳಿ’ಯ ಮೂಲಕ ಕನ್ನಡ ಚಿತ್ರರಂಗಕ್ಕೆ ಆಗಮಿಸಿದ್ದಾರೆ. ಜೀ ಕನ್ನಡ ವಾಹಿನಿಯ ಪ್ರೋಗ್ರಾಂ ಪ್ರೊಡ್ಯೂಸರ್ ಆಗಿ ವೃತ್ತಿ ಜೀವನ ಆರಂಭಿಸಿದ್ದ ಗೌರಿ ಶ್ರೀನಿವಾಸ್, ಆ ನಂತರ ಹಲವಾರು ದಿಕ್ಕುಗಳಲ್ಲಿ ಕಾರ್ಯನಿರ್ವಹಿಸುತ್ತಾ ತಮ್ಮದೇ ಲಿಚ್ಚಿ ಫಿಲಂಸ್ ಕಂಪೆನಿ ಕಟ್ಟಿದವರು. ಅದಾದ ಬಳಿಕ ಒಂದಷ್ಟು ಸಾಕ್ಷ್ಯಚಿತ್ರಗಳು, ಕಾಪೋರೇಟ್ ಜಾಹೀರಾತುಗಳನ್ನು ಸೃಷ್ಟಿಸುವ ಮೂಲಕ ಅನುಭವ ಜಗತ್ತನ್ನು ವಿಸ್ತರಿಸಿಕೊಂಡವರು.

ಇವರೇ ನಿರ್ಮಾಣ ಮಾಡಿದ್ದ ಮದ್ಯಪ್ರದೇಶದ ಹ್ಯಾಂಡ್ಲೂಮ್ ಉದ್ಯಮದ ಕುರಿತಾದ `the woven motifs of chanderi’ ಎಂಬ ಸಾಕ್ಷ್ಯಚಿತ್ರಕ್ಕೆ ಇತ್ತೀಚೆಗಷ್ಟೇ ಪ್ರಶಸ್ತಿ ಲಭಿಸಿದೆ. ಇಷ್ಟೆಲ್ಲ ಅನುಭವ ಪಡೆದುಕೊಂಡ ನಂತರ ಅವರು ಚೆಂದದ್ದೊಂದು ಕಥೆ ಸಿದ್ಧಪಡಿಸಿಕೊಂಡು `ಜರ್ನಿ ಆಫ್ ಬೆಳ್ಳಿ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳನ್ನು ಮುಕ್ತಾಯಗೊಳಿಸುತ್ತಿರುವ ಈ ಮಕ್ಕಳ ಚಿತ್ರದ ಬಗೆಗಿನ ಮತ್ತಷ್ಟು ಮಾಹಿತಿಗಳು ಇಷ್ಟರಲ್ಲೇ ಜಾಹೀರಾಗಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಸಿನಿಮಾ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ ಬರಲಿದೆ.

VISTARANEWS.COM


on

By

Action Prince Dhruva Sarja much awaited film Martin to hit the screens on October 11
Koo

ಬೆಂಗಳೂರು: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಮಾರ್ಟಿನ್‌ ರಿಲೀಸ್‌ಗೆ ಕೌಂಟ್‌ ಡೌನ್‌ ಶುರುವಾಗಿದೆ. ಅಕ್ಟೋಬರ್ 11 ರಂದು ಭಾರತದಾದ್ಯಂತ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಈಗಾಗಲೇ ಮಾರ್ಟಿನ್‌ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಭರ್ಜರಿ ಬರ್ತ್‌ ಡೇ ಸೆಲೆಬ್ರೆಷನ್‌ಗೆ ಫ್ಯಾನ್ಸ್‌ ಸಜ್ಜು

ಮಾರ್ಟಿನ್‌ ಸಿನಿಮಾಗೂ ಮೊದಲೇ ಧ್ರುವ ಸರ್ಜಾರ ಬರ್ತ್ ಡೇ ಸೆಲೆಬ್ರೆಷನ್‌‌ಗೆ ಫ್ಯಾನ್ಸ್ ಭರ್ಜರಿಯಾಗಿ ಸಜ್ಜಾಗಿದ್ದಾರೆ. ಸ್ಯಾಂಡಲ್‌ವುಡ್‌ನ ಆಟಂ ಬಾಂಬ್ ಧ್ರುವ ಸರ್ಜಾ ನಟನೆಯಲ್ಲಿ ರಿಲೀಸ್ ಆಗಿರುವುದುದು ನಾಲ್ಕೇ ಸಿನಿಮಾವಾದರೂ, 40 ಸಿನಿಮಾ ಮಾಡಿರುವಷ್ಟು ಅಭಿಮಾನಿಗಳನ್ನ ಸಂಪಾದಿಸಿದ್ದಾರೆ. ಅಭಿಮಾನಿಗಳನ್ನು ವಿಐಪಿ ಅಂತೇಳು ಧ್ರುವ, ಅವರಿಗಾಗಿಯೇ ಒಂದು ದಿನ ಮೀಸಲಿಟ್ಟಿದ್ದಾರೆ. ಪ್ರತಿ ಭಾನುವಾರ ಅಭಿಮಾನಿಗಳನ್ನು ಭೇಟಿಯಾಗುವ ಬಹದ್ಧೂರ್, ಈ ಬಾರಿ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಇರುವ ಜಾಗಕ್ಕೆ ಭೇಟಿ ಕೊಡುತ್ತಿದ್ದಾರೆ. ಕಳೆದ ಭಾನುವಾರ ಬೆಂಗಳೂರಿನ ಕೆ.ಆರ್ ರಸ್ತೆಯಲ್ಲಿರುವ ಧ್ರುವ ಮನೆಯ ರಸ್ತೆಯು, ಅಭಿಮಾನಿಗಳಿಂದ ತುಂಬಿ ಹೋಗಿತ್ತು.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಧ್ರುವ ಹುಟ್ಟುಹಬ್ಬಕ್ಕೂ ಮೊದಲು ಮಾರ್ಟಿನ್ ಚಿತ್ರತಂಡ ಅಕ್ಟೋಬರ್ 4ರಂದು ಹೈದರಾಬಾದ್‌ನಲ್ಲಿ ಧ್ರುವ ಅವರ ಇಂಟ್ರೋಡಕ್ಷನ್ ಸಾಂಗ್ ರಿಲೀಸ್ ಮಾಡುತ್ತಿದೆ. ಅಕ್ಟೋಬರ್ 5ರಂದು ಹುಬ್ಬಳಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್‌ನ ಮೀಟ್ ಮಾಡಲಿದ್ದಾರೆ. ತಮ್ಮ ಹುಟ್ಟುಹಬ್ಬದಂದು ದಾವಣಗೆರೆಯಲ್ಲಿ ಮಾರ್ಟಿನ್ ಪ್ರೀ ರಿಲೀಸ್ ಇವೆಂಟ್ ಹಮ್ಮಿಕೊಂಡಿದ್ದಾರೆ. ಒಟ್ಟಾರೆ ಉತ್ತರ ಕರ್ನಾಟಕ ಜನರ ಜತೆ ಧ್ರುವ ಈ ಬಾರಿ ಬರ್ತ್‌ಡೇ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಸಾಂಗ್‌ ರಿಲೀಸ್‌

ಹುಟ್ಟುಹಬ್ಬದ ನಂತರ ಅಕ್ಟೋಬರ್ 8ರಂದು ಮುಂಬೈನಲ್ಲಿ ಮಾರ್ಟಿನ್ ಚಿತ್ರದ ಮತ್ತೊಂದು ಸಾಂಗ್ ರಿಲೀಸ್ ಆಗುತ್ತಿದೆ. ಅಂದ‌ ಹಾಗೆ ಮಾರ್ಟಿನ್ ಒಂದಲ್ಲ ಒಂದು ಕಾರಣಕ್ಕೆ ಸೆನ್ಸೇಶನ್ ಕ್ರಿಯೇಟ್ ಮಾಡಿದೆ.ಇದೇ ತಿಂಗಳ 11ರಂದು ಮಾರ್ಟಿನ್ ಆಲ್ ಓವರ್ ಇಂಡಿಯಾ 3 ಸಾವಿರ ಥಿಯೇಟರ್‌ನಲ್ಲಿ ರಿಲೀಸ್ ಆಗುತ್ತಿದೆ. ಕನ್ನಡದ ಅತಿ ಹೆಚ್ಚು ಬಜೆಟ್‌ನ ಮಾರ್ಟಿನ್‌, ಶೇಖಡಾ 80ರಷ್ಟು ಚಿತ್ರವನ್ನು ಸೆಟ್‌ನಲ್ಲಿಯೇ ಚಿತ್ರೀಕರಣಗೊಂಡಿದೆ. ಹಾಲಿವುಡ್‌ನ ಫಾಸ್ಟ್ ಆ್ಯಂಡ್ ಪ್ಯೂರಿಯಸ್ ಚಿತ್ರ ನೋಡಿದ ಅನುಭವ ಆಗುತ್ತೆ ಎನ್ನುವ ಮಾತನ್ನು ಸಿನಿಮಾ ತಂಡ ಹೇಳಿಕೊಂಡಿದೆ.

Action Prince Dhruva Sarjas much-awaited film 'Martin' to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ತಂಡದಿಂದ ನಿರ್ದೇಶಕರೇ ಔಟ್!

ಮಾರ್ಟಿನ್ ಗೆಲ್ಲುತ್ತೆ ಎಂಬ ಭರವಸೆ ಕೂಡ ಗಾಂಧಿನಗರಕ್ಕಿದೆ. ಆದರೆ ಈ ಸಮಯದಲ್ಲಿ ಜತೆಯಾಗಿರಬೇಕಿದ್ದ ತಂಡದಲ್ಲಿ ಬಿರುಕು ಮೂಡಿದೆ. ಚಿತ್ರದ ಪ್ರಚಾರದಿಂದ ನಿರ್ದೇಶಕ ಎಪಿ ಅರ್ಜುನ್ ಅವರನ್ನು ದೂರ ಇಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ಮಾರ್ಟಿನ್‌ಗೆ ದ್ರೋಹದ ವಿಚಾರ ಜಗಜ್ಜಾಹೀರಾಗಿತ್ತು. ಚಿತ್ರದ ಹೆಸರಿನಲ್ಲಿ ನಿರ್ಮಾಪಕ ಉದಯ್ ಮೆಹ್ತಾಗೆ ನಿರ್ದೇಶಕ ಎ.ಪಿ.ಅರ್ಜುನ್ ಅವರಿಂದ ಮೋಸವಾಗಿದೆ. ಕೇವಲ ಸಿಜಿ ಮತ್ತು ವಿಎಫ್‌ಎಕ್ಸ್ ಒಂದರಲ್ಲೇ 73 ಲಕ್ಷ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಕಾರಣಕ್ಕೆ ಉದಯ್ ಮೆಹ್ತಾ ಮತ್ತು ಎಪಿ ಅರ್ಜುನ್ ನಡುವೆ ಸಂಬಂಧ ಹಳಸಿದೆ. ತಮ್ಮದೇ ಚಿತ್ರದ ಬಿಡುಗಡೆಗೆ ತಡೆ ನೀಡುವಂತೆ ಎಪಿ ಅರ್ಜುನ್ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ಆ ಅರ್ಜಿ ವಜಾ ಆಗಿದೆ ಎಂದು ಹೊಸ ಬಾಂಬ್ ಕೂಡ ಉದಯ್ ಮೆಹ್ತಾ ಸಿಡಿಸಿದ್ದಾರೆ.

Action Prince Dhruva Sarja  much awaited film Martin to hit the screens on October 11
Action Prince Dhruva Sarja much awaited film Martin to hit the screens on October 11

ಮಾರ್ಟಿನ್ ಚಿತ್ರದ ಕಥೆ ಚಿತ್ರಕಥೆಯನ್ನು ಆ್ಯಕ್ಷನ್ ಹೀರೋ ಅರ್ಜುನ್ ಸರ್ಜಾ ಬರೆದಿದ್ದಾರೆ. ಹೀಗಿರುವಾಗ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರಿಸಬೇಕಿದ್ದ ”ಮಾರ್ಟಿನ್‌” ಚಿತ್ರತಂಡದಲ್ಲಿ, ಸಿನಿಮಾ ರಿಲೀಸ್‌ಗೂ ಮೊದಲೇ ಬಿರುಕು ಮೂಡಿದೆ. ಇವೆಲ್ಲದರ ನಡುವೆ ಅಕ್ಟೋಬರ್ 6 ರಂದು ಧ್ರುವ ಸರ್ಜಾ ಬರ್ತ್ ಡೇ ಸೆಲೆಬ್ರೇಶನ್ ಮಾಡಿ ಮತ್ತೊಂದು ಮೆಗಾ ಸಂಭ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬೆಂಗಳೂರು

Love Case : ಸಿರಿಯಲ್ ನಟಿಯ ಮದುವೆ ಕಿರಿಕ್‌; ವಾಶ್‌ರೂಮ್‌ನಲ್ಲಿ ಯುವಕ ಆತ್ಮಹತ್ಯೆ

Love Case : ಸಿರಿಯಲ್ ನಟಿ ಮದುವೆ ಆಗುವಂತೆ ಒತ್ತಾಯಿಸಿದ್ದಕ್ಕೆ ಯುವಕನೊರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

VISTARANEWS.COM


on

By

Love case
Koo

ಬೆಂಗಳೂರು: ಸಿರಿಯಲ್ ನಟಿ ಮದುವೆ ಆಗುವಂತೆ ಪೀಡಿಸುತ್ತಿದ್ದಳು ಎಂದು ಯುವಕನೊಬ್ಬ ಆತ್ಮಹತ್ಯೆಗೆ (Love Case) ಶರಣಾಗಿದ್ದಾನೆ. ಮದನ್ (25) ಮೃತ ದುರ್ದೈವಿ. ಸಿರಿಯಲ್ ನಟಿ ವೀಣಾ ಎಂಬಾಕೆ ಜತೆಗೆ ಮದನ್ ಲಿವಿಂಗ್‌ ರಿಲೇಷನ್‌ಶಿಪ್‌ನಲ್ಲಿದ್ದ. ನಿನ್ನೆ ರಾತ್ರಿ ಇಬ್ಬರು ಒಂದೇ ರೂಮಿನಲ್ಲಿ ಪಾರ್ಟಿ ಮಾಡಿದ್ದರು. ಪಾರ್ಟಿ ನಂತರ ಮದನ್‌ ಜತೆಗೆ ವೀಣಾ ಮದುವೆ ಪ್ರಸ್ತಾಪಿಸಿದ್ದಳಂತೆ.

ಮದನ್‌ ಇವೆಂಟ್ ಮ್ಯಾನೇಜ್ ಮೆಂಟ್‌ನಲ್ಲಿ ಡೆಕೊರೇಟ್ ಕೆಲಸ ಮಾಡಿಕೊಂಡಿದ್ದ. ಈ ವೇಳೆ ಸಿರಿಯಲ್ ಸೆಟ್‌ನಲ್ಲಿ ಕಾಣಿಸಿಕೊಂಡಿದ್ದ ವೀಣಾಳನ್ನು ಕೆಲ ತಿಂಗಳ ಹಿಂದೆ ಪರಿಚಯ ಮಾಡಿಕೊಂಡಿದ್ದ. ಸಲುಗೆ ಬೆಳೆಸಿಕೊಂಡು ಇಬ್ಬರು ಲೀವಿಂಗ್ ರಿಲೇಶನ್ ಹೊಂದಿದ್ದರು.

ವೀಣಾ ಕನ್ನಡತಿ ಸೀರಿಯಲ್ ಹಾಗೂ ಕೆಲವು ಆ್ಯಡ್ ಗಳಲ್ಲಿ ನಟಿಸುತ್ತಿದ್ದಳು ಎನ್ನಲಾಗಿದೆ. ಸದ್ಯ ಘಟನೆ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಯುವತಿ ಹಲವು ಯುವಕರಿಗೆ ಮದುವೆ ಆಗುವುದಾಗಿ ವಂಚಿಸಿದ್ದಾಳೆ ಎಂದು ಮೃತನ ಪೋಷಕರು ಆರೋಪಿಸಿದ್ದಾರೆ.

ಕೈ ಕೊಯ್ದುಕೊಂಡು ಗಲಾಟೆ ಮಾಡಿದ್ದ ನಟಿ

ಮದುವೆಯಾಗುವಂತೆ ಒತ್ತಾಯಿಸಿ ವೀಣಾ ಈ ಹಿಂದೆ ಕೈ ಕೊಯ್ದುಕೊಂಡು ಮದನ್‌ ಮನೆ ಮುಂದೆ ಗಲಾಟೆ ಮಾಡಿದ್ದಳಂತೆ. ವೀಣಾಗೆ ಹಲವು ಹುಡುಗರ ಪರಿಚಯವಿತ್ತು. ಇದರಿಂದ ಆಕೆಯ ಕ್ಯಾರೆಕ್ಟರ್ ಮೇಲೆ ಮದನ್‌ ಅನುಮಾನ ಪಟ್ಟಿದ್ದ. ಹೀಗಾಗಿ ಮದನ್‌ ಮದುವೆಯಾಗಲು ನಿರಾಕರಿಸಿದ್ದ ಎನ್ನಲಾಗಿದೆ.

ಆದರೆ ಫೋನ್‌ ಮೂಲಕ ಮದನ್‌ಗೆ ಟಾರ್ಚರ್ ನೀಡುತ್ತಿದ್ದಳಂತೆ. ಸಿಕೆ ಪಾಳ್ಯದಲ್ಲಿ ರೂಂ ಮಾಡಿ ವಾಸವಿದ್ದ ವೀಣಾ ನಿನ್ನೆಯೂ ಸಹ ಮದನ್‌ನನ್ನು ಮನೆಗೆ ಕರೆಸಿಕೊಂಡಿದ್ದಳು. ನಿನ್ನೆ ಇಬ್ಬರು ಪಾರ್ಟಿ ಮಾಡಿದ್ದು, 8:30 ರಾತ್ರಿಯಲ್ಲಿ ಮತ್ತೆ ಮದುವೆ ವಿಚಾರ ಪ್ರಸ್ತಾಪವಾಗಿದೆ. ಇಬ್ಬರೂ ಕಂಠಪೂರ್ತಿ ಪಾನಮತ್ತರಾಗಿದ್ದರು. ಈ ವೇಳೆ ವಾಶ್ ರೂಂ ಗೆ ಹೋಗಿ ಬರ್ತಿನಿ ಅಂತ ಹೇಳಿದ್ದ ಮದನ್, ಅಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: Assault Case : ಡೋರ್‌ ಹತ್ರ ನಿಲ್ಲಬೇಡ ಒಳಗೆ ಹೋಗು ಎಂದಿದ್ದಕ್ಕೆ ಬಿಎಂಟಿಸಿ ಕಂಡಕ್ಟರ್‌ಗೆ ಚಾಕು ಇರಿದು ಹುಚ್ಚನಂತೆ ವರ್ತಿಸಿದ ಪ್ರಯಾಣಿಕ!

ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ

ರಾಯಚೂರು: ಸಹೋದರತ್ತೆ ಕಾಟಕ್ಕೆ ಬೇಸತ್ತು ಅಳಿಯ ಆತ್ಮಹತ್ಯೆ (Self harming) ಮಾಡಿಕೊಂಡಿದ್ದಾನೆ. ಜಮೀನು ವಿಚಾರಕ್ಕೆ (Land dispute) ಅತ್ತೆ – ಅಳಿಯನ ನಡುವೆ ಜಗಳ (Family Dispute) ನಡೆದಿದ್ದು, ಅತ್ತೆಯ ಬೆದರಿಕೆಗೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಹುಲಿಗೇಪ್ಪ (20) ಮೃತ ದುರ್ದೈವಿ.

ಮನೆಯಲ್ಲಿ ಯಾರು ಇಲ್ಲದ ವೇಳೆ ಡೆತ್‌ ನೋಟ್ ಬರೆದಿಟ್ಟು ವಿಷ ಸೇವಿಸಿದ್ದಾನೆ. ಡೆತ್ ನೋಟ್‌ನಲ್ಲಿ ಜಾಗದ ವಿಚಾರವಾಗಿ ಅತ್ತೆ ಲಕ್ಷ್ಮಿ, ಅತ್ತೆಯ ಮಗಳ ಅನುರಾಧ, ಮಹಾದೇವಿ, ಅನಿಲ್ ಎಂಬುವವರ ಹೆಸರು ಪ್ರಸ್ತಾಪ ಮಾಡಿದ್ದಾನೆ. ನನ್ನ ಸಾವಿಗೆ ನನ್ನ ಅತ್ತೆ ಲಕ್ಷ್ಮಿದೇವಿ ಮತ್ತು ಆಕೆಯ ಮಕ್ಕಳೇ ಕಾರಣ. ನಮ್ಮ 17 ಗುಂಟೆ ಜಾಗ ತಮ್ಮದು ಎಂದು ನಮಗೆ ಬೆದರಿಕೆ ಹಾಕಿದ್ದಾರೆ. ನನ್ನ ಸಾವಿನ ಬಳಿಕವಾದರೂ ನಮ್ಮ ಜಾಗ ನಮಗೆ ಕೊಡಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸಿರವಾರ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ರಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಸಿನಿಮಾ

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರು; ಮಧ್ಯರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು

Actor Rajinikanth: ಸೂಪರ್‌ ಸ್ಟಾರ್‌ ರಜನಿಕಾಂತ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಮಧ್ಯರಾತ್ರಿಯೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

VISTARANEWS.COM


on

By

Superstar Rajinikanth is unwell Family members admitted to hospital in the middle of the night
Koo

ಸೂಪರ್‌ ಸ್ಟಾರ್‌ ರಜನಿಕಾಂತ್ (Actor Rajinikanth) ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ (ಸೆ.30) ಮಧ್ಯರಾತ್ರಿ ತಲೈವಾ ರಜನಿಕಾತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್​ಗೆ ಕಾರ್ಡಿಯಾಕ್​ ಕ್ಯಾಥ್​ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್‌ ಅಭಿನಯಿಸಿರುವ ವೆಟ್ಟೈಯನ್​​​ ಸಿನಿಮಾದ ಆಡಿಯೋ ಲಾಂಚ್​ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್‌ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Mallikarjun Kharge: ಭಾಷಣ ಮಾಡುತ್ತಲೇ ವೇದಿಕೆ ಮೇಲೆ ಅಸ್ವಸ್ಥಗೊಂಡ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ

ಕೂಲಿ ಚಿತ್ರದಲ್ಲಿ ಸೂಪರ್‌ ಸ್ಟಾರ್‌ ತಲೈವಾ ಜತೆಗೆ ರಿಯಲ್ ಸ್ಟಾರ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಹೊಸ ಸಿನಿಮಾ ಕೂಲಿಯಲ್ಲಿ ಕನ್ನಡದ ರಿಯಲ್‌ ಸ್ಟಾರ್‌ ಉಪೇಂದ್ರ ಅಭಿನಯಿಸಲಿದ್ದಾರೆ. ಈ ಕುರಿತು ಉಪೇಂದ್ರ ಅವರು ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ಕೂಲಿ ಸಿನಿಮಾವು ತಮಿಳು, ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬರಲಿದೆ. ಲೋಕೇಶ್ ಕನಕರಾಜ್‌ ಡೈರೆಕ್ಷನ್‌ನಲ್ಲಿ ಕೂಲಿ ಸಿನಿಮಾ ಮೂಡಿಬರುತ್ತಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ತಲೈವಾ ರಜನಿಕಾಂತ್‌ ಅವರ 171ನೇ ಸಿನಿಮಾ ಕೂಲಿ ಆಗಿದೆ. ಜೈಲರ್‌ನಂತಹ ಬ್ಲಾಕ್ ಬಸ್ಟರ್ ಸಿನಿಮಾವನ್ನು ನಿರ್ದೇಶನ ಮಾಡಿದ್ದ ಸನ್ ಪಿಕ್ಚರ್ಸ್ ಕೂಲಿಯನ್ನು ನಿರ್ಮಿಸಲಿದೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ರಜನಿಕಾಂತ್‌ ಮತ್ತು ಲೋಕೇಶ್ ಕನಕರಾಜ್‌ ಕಾಂಬಿನೇಷನ್‌ನ ‘ಕೂಲಿ’ ಸಿನಿಮಾದಲ್ಲಿ ಕನ್ನಡದ ಸೂಪರ್‌ ಸ್ಟಾರ್‌ ಉಪೇಂದ್ರ ನಟಿಸಲಿದ್ದಾರೆ.

ಈ ಕುರಿತು ಉಪೇಂದ್ರ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಕೂಲಿ ಸಿನಿಮಾದ ಪೋಸ್ಟರ್‌ ಹಾಕಿ ತಿಳಿಸಿದ್ದಾರೆ. ತಲೈವಾ ರಜಿನಿಕಾಂತ್‌ ನಟನೆಯ ಕೂಲಿ ಚಿತ್ರದಲ್ಲಿ ಉಪೇಂದ್ರ ಕಲೀಷ ಎಂಬ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ.

Real Star Upendra Acting with Superstar Rajinikanth Coolie Movie
Real Star Upendra Acting with Superstar Rajinikanth Coolie Movie

ನಿಮ್ಮ ಆಶೀರ್ವಾದದಿಂದ ನನ್ನ ಗುರು ನನ್ನ ಸೂಪರ್‌ ಸ್ಟಾರ್‌ ರಜಿನಿ ಸರ್‌ ಜತೆಗೆ ಕೂಲಿ ಚಿತ್ರದಲ್ಲಿ ಒಂದು ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದೇನೆ. ಫೀಲಿಂಗ್‌‌ ಬ್ಲೆಸ್ಡ್ ಅಂತ ಲೋಕೇಶ್‌ ಕನಕರಾಜ್‌ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Continue Reading

ಬೆಂಗಳೂರು

Actor Darshan : ನಟ ದರ್ಶನ್‌, ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಅ.4ಕ್ಕೆ ಮುಂದೂಡಿಕೆ

Actor Darshan : ಕೊಲೆ ಕೇಸ್‌ನಲ್ಲಿ ಜೈಲುಪಾಲಾಗಿರುವ ನಟ ದರ್ಶನ್‌ ಹಾಗೂ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆಯಿತು. ಇದೇ ವೇಳೆ ಇಬ್ಬರ ಅರ್ಜಿ ವಿಚಾರಣೆಯನ್ನು ಅ.4ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶಿಸಿದೆ.

VISTARANEWS.COM


on

By

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder) ಕೇಸ್‌ನಲ್ಲಿ ನಟ ದರ್ಶನ್‌ (Actor Darshan) ಜೈಲುಪಾಲಾಗಿದ್ದಾರೆ. ಪ್ರಕರಣ ಸಂಬಂಧ 57ನೇ ಸೆಷನ್ ಕೋರ್ಟ್‌ನಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾಗೌಡರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್‌ ಪರ ವಕೀಲರು ವಾದ ಮಾಡಲು ಸಮಯ ಕೇಳಿದ ಹಿನ್ನೆಲೆಯಲ್ಲಿ ದರ್ಶನ್‌ರ ಜಾಮೀನು ಅರ್ಜಿ ಮುಂದೂಡಿಕೆ ಮಾಡಲಾಗಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಅಕ್ಟೋಬರ್ 4ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ.

ಇನ್ನು ಎಸ್‌ಪಿಪಿ ಕೋರ್ಟ್ ಹಾಲ್‌ನಲ್ಲಿ ನಡೆದ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರವಾಗಿ ಎಸ್‌ಪಿಪಿ ಪ್ರಸನ್ನಕುಮಾರ್‌ ಅವರನ್ನು ಕರೆಸುವಂತೆ ನ್ಯಾಯಾಧೀಶರು ಸೂಚನೆ ನೀಡಿದರು. ರವಿಶಂಕರ್ ಅರ್ಜಿ ವಿಚಾರಣೆಗೂ ಎಸ್‌ಎಸ್‌ಪಿ ಅಗತ್ಯ ಹಿನ್ನೆಲೆಯಲ್ಲಿ ಎಸ್‌ಎಸ್‌ಪಿ ಅವರ ಹಾಜರಾತಿಗೆ ನ್ಯಾಯಾಲಯ ಸೂಚಿಸಿತು. ಇದಕ್ಕಾಗಿ ಕೆಲಕಾಲ ವಿಚಾರಣೆ ಮುಂದೂಡಲಾಯಿತು.

ಬಳಿಕ ಶುರುವಾದ ಪವಿತ್ರಗೌಡ ಗೌಡ ಜಾಮೀನು ಅರ್ಜಿ ವಿಚಾರಣೆ ವೇಳೆ ಎಸ್‌ಪಿಪಿ ಪರ ವಕೀಲರು 15 ದಿನಗಳ ಸಮಯಾವಕಾಶ ಕೇಳಿದರು. ಸಮಯಾವಕಾಶ ನೀಡಲು ಆಗಲ್ಲ, ಇವತ್ತೇ ನಿಮ್ಮ ಸಿನಿಯರ್ ವಕೀಲರನ್ನು ಕರೆಸಿ ಎಂದು ನ್ಯಾಯಾಧೀಶರು ಸೂಚಿಸಿ, ಜಾಮೀನು ಅರ್ಜಿಯನ್ನು ಕೆಲ ಕಾಲ ಮುಂದೂಡಿದರು. ಬಳಿಕ ಅಕ್ಟೋಬರ್‌ 4ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ಈಗಾಗಲೆ ದರ್ಶನ್, ಲಕ್ಷ್ಮಣ್ ಜಾಮೀನು ಅರ್ಜಿಯನ್ನು ಅ .4ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಸದ್ಯ ಪವಿತ್ರಾ ಗೌಡ ಅರ್ಜಿ ವಿಚಾರಣೆ ಕೂಡ ಮುಂದೂಡಿಕೆ ಮಾಡಿ ನ್ಯಾಯಾಧೀಶ ಶ್ರೀ ಜೈಶಂಕರ್ ಆದೇಶ ಹೊರಡಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Murder case
ಬೆಂಗಳೂರು9 ನಿಮಿಷಗಳು ago

Murder Case : ನಿದ್ದೆಗೆ ಜಾರಿದ 13 ವರ್ಷದ ಬಾಲಕಿಯನ್ನು ಕೊಂದಿದ್ಯಾರು? ನಿಗೂಢ ಸಾವಿನ ಬೆನ್ನಟ್ಟಿದ ಪೊಲೀಸರು

murder case
ಬೆಂಗಳೂರು50 ನಿಮಿಷಗಳು ago

Murder case : ಬೆಂಗಳೂರಲ್ಲಿ ಬಿಹಾರಿ ಮೂಲದ ವ್ಯಕ್ತಿಯನ್ನು ದೊಣ್ಣೆಯಿಂದ ಹೊಡೆದು ಭೀಕರ ಹತ್ಯೆ

Wall Collapse
ಬೆಂಗಳೂರು2 ಗಂಟೆಗಳು ago

Wall collapse : ಕಾಂಪೌಂಡ್ ಗೋಡೆ ಕುಸಿದು ಕೂಲಿ ಕಾರ್ಮಿಕ ಸಾವು; ಮತ್ತೊಬ್ಬ ಗಂಭೀರ

karnataka Weather Forecast
ಮಳೆ8 ಗಂಟೆಗಳು ago

Karnataka Weather : ಇಂದು ಅಬ್ಬರಿಸಲಿದೆ ಗುಡುಗು ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Dina Bhavishya
ಭವಿಷ್ಯ8 ಗಂಟೆಗಳು ago

Dina Bhavishya : ಈ ರಾಶಿಯವರಿಗೆ ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ

Action Prince Dhruva Sarja much awaited film Martin to hit the screens on October 11
ಸಿನಿಮಾ18 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Actor Darshan
ಬೆಂಗಳೂರು19 ಗಂಟೆಗಳು ago

Parappana Agrahara : ಜೈಲಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಕೇಸ್; ಕ್ಲೈ ಮ್ಯಾಕ್ಸ್ ಹಂತದಲ್ಲಿ ರಿವೈಲ್ ಆಯ್ತು ಜೈಲಿನೊಳಗಿನ ಅಂದರ್ ಕಿ ದರ್ಬಾರ್!

Bengaluru News
ಬೆಂಗಳೂರು21 ಗಂಟೆಗಳು ago

Bengaluru News : ಮತ್ತೆ ಮೂವರು ಪಾಕ್ ಪ್ರಜೆಗಳ ಬಂಧನ; ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಕುಟುಂಬ

HD kumaraswamy And Vijayetata
ಬೆಂಗಳೂರು22 ಗಂಟೆಗಳು ago

HD Kumaraswamy : ಎಲೆಕ್ಷನ್‌ಗೆ 50 ಕೋಟಿ ರೂ.ಗೆ ಡಿಮ್ಯಾಂಡ್‌ ಮಾಡಿ ಉದ್ಯಮಿಗೆ ಬೆದರಿಕೆ; ಎಚ್‌ಡಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು

Karnataka weather Forecast
ಪ್ರಮುಖ ಸುದ್ದಿ22 ಗಂಟೆಗಳು ago

Karnataka Rain : ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ; ಹೈರಾಣಾದ ವಾಹನ ಸವಾರರು

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ18 ಗಂಟೆಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌