The Kerala Story box office collection Day 2 The Kerala Story: ʻದಿ ಕೇರಳ ಸ್ಟೋರಿʼ ಸಿನಿಮಾದ ಎರಡನೇ ದಿನದ ಕಲೆಕ್ಷನ್‌ ಎಷ್ಟು? - Vistara News

South Cinema

The Kerala Story: ʻದಿ ಕೇರಳ ಸ್ಟೋರಿʼ ಸಿನಿಮಾದ ಎರಡನೇ ದಿನದ ಕಲೆಕ್ಷನ್‌ ಎಷ್ಟು?

ಮೇ 5ರಂದು ಚಿತ್ರ ಬಿಡುಗಡೆಗೊಂಡಿದ್ದು, ಮೊದಲ ದಿನ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 8 ಕೋಟಿ ರೂ. ಕಲೆಕ್ಷನ್​ (Box Office Collection) ಮಾಡಿದೆ.

VISTARANEWS.COM


on

The Kerala Story
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻದಿ ಕೇರಳ ಸ್ಟೋರಿʼ ಸಿನಿಮಾ (The Kerala Story) ಹಲವಾರು ವಿವಾದಗಳ ನಡುವೆ ಚಿತ್ರಮಂದಿರಗಳಿಗೆ ಅಪ್ಪಳಿಸಿತು. ಮೇ 5ರಂದು ಚಿತ್ರ ಬಿಡುಗಡೆಗೊಂಡಿದ್ದು, ಮೊದಲ ದಿನ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ 8 ಕೋಟಿ ರೂ. ಕಲೆಕ್ಷನ್​ (Box Office Collection) ಮಾಡಿದೆ. ಎರಡನೇ ದಿನ ಕಲೆಕ್ಷನ್​ನಲ್ಲಿ ಗಣನೀಯ ಏರಿಕೆ ಕಂಡಿದೆ. ಎರಡನೇ ದಿನ ಈ ಸಿನಿಮಾ 12 ಕೋಟಿ ರೂ. ಕಲೆಕ್ಷನ್‌ ಮಾಡಿದ್ದು, ಒಟ್ಟು 20 ಕೋಟಿ ರೂ. ಗಳಿಕೆ ಕಂಡಿದೆ. ಎಂದು ಟ್ರೇಡ್​ ವಿಶ್ಲೇಷಕ ರಮೇಶ್​ ಬಾಲಾ ಅವರು ಸೋಷಿಯಲ್​ ಮೀಡಿಯಾ​ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.

ಕೇರಳದಿಂದ ಕಾಣೆಯಾದ ಹುಡುಗಿಯರ ನಿಜ ಜೀವನದ ಅನುಭವವನ್ನು ಆಧರಿಸಿದೆ ಈ ಸಿನಿಮಾ. ನರ್ಸ್ ಆಗುವ ಕನಸು ಹೊತ್ತ ಶಾಲಿನಿ ಉನ್ನಿಕೃಷ್ಣನ್ ಎಂಬ ಗ್ರಾಮೀಣ ಹುಡುಗಿ, ವಿದೇಶದಲ್ಲಿರುವ ಐಸಿಸ್ ಭಯೋತ್ಪಾದಕ ಶಿಬಿರಕ್ಕೆ ಸೇರಿಹೋದ, ಅಲ್ಲಿಂದ ಹೊರಬರಲಾಗದೆ ಪರಿತಪಿಸುವ ಕತೆಯನ್ನು ಕೇರಳ ಸ್ಟೋರಿ ಹೊಂದಿದೆ. ಕೇರಳದ ಹಿಂದು ಯುವತಿಯರನ್ನು ಕಳ್ಳಸಾಗಣೆ ಮಾಡಿ, ಮತಾಂತರಿಸಿ, ಭಯೋತ್ಪಾದಕ ಶಿಬಿರಗಳಿಗೆ ಕಳುಹಿಸಲಾಗುತ್ತಿದೆ ಎಂಬ ಸುದ್ದಿಗಳು ಸಾಕಷ್ಟಿವೆ. ಅಂಥ ನೈಜ ಪ್ರಕರಣಗಳೂ ವರದಿಯಾಗಿವೆ. ಅದೇ ಹಿನ್ನೆಲೆಯಲ್ಲಿ ಈ ಚಿತ್ರ ಹುಟ್ಟಿಕೊಂಡಿದೆ ಎನ್ನಲಾಗಿದೆ.

ಇದನ್ನೂ ಓದಿ: The Kerala Story: ದಿ ಕೇರಳ ಸ್ಟೋರಿ ಸಿನಿಮಾ ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತ; ಎಲ್ಲರೂ ನೋಡಿ ಎಂದ ಸಿಎಂ ಚೌಹಾಣ್​

ಈ ಸಿನಿಮಾದಲ್ಲಿದ್ದ 10 ದೃಶ್ಯಗಳಿಗೆ ಕತ್ತರಿ

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC-ಸೆನ್ಸಾರ್​ ಮಂಡಳಿ-Censor Board) ದಿ ಕೇರಳ ಸ್ಟೋರಿಗೆ ಎ ಸರ್ಟಿಫಿಕೇಟ್ (A certificate To The Kerala Story)​ ಕೊಟ್ಟಿದೆ. ಅಷ್ಟೇ ಅಲ್ಲ, ಈ ಸಿನಿಮಾದಲ್ಲಿದ್ದ 10 ದೃಶ್ಯಗಳಿಗೆ ಕತ್ತರಿ ಹಾಕಿದೆ. ಕೇರಳದ ಮಾಜಿ ಮುಖ್ಯಮಂತ್ರಿಯೊಬ್ಬರ ಸಂದರ್ಶನದ ದೃಶ್ಯವೂ ಸೇರಿ 10 ದೃಶ್ಯಗಳನ್ನು ತೆಗೆದುಹಾಕಲಾಗಿದೆ.

‘ಎಲ್ಲ ಹಿಂದು ದೇವತೆಗಳನ್ನು ಅನುಚಿತವಾಗಿ ಉಲ್ಲೇಖಿಸಿ ಬರೆದ ಸಂಭಾಷಣೆಗಳನ್ನೂ ಸೆನ್ಸಾರ್ ಮಂಡಳಿ ತೆಗೆದಿದೆ. ಅಷ್ಟೇ ಅಲ್ಲ, ಭಾರತದಲ್ಲಿರುವ ಎಲ್ಲ ಕಮ್ಯೂನಿಸ್ಟ್​ಗಳೂ ದೊಡ್ಡ ಕಪಟಿಗಳು ಎಂದು ಹೇಳಿರುವ ಒಂದು ಡೈಲಾಗ್​​ನಲ್ಲಿರುವ ಭಾರತೀಯರು (Indians) ಎಂಬ ಶಬ್ದವನ್ನು ಡಿಲೀಟ್ ಮಾಡಲಾಗಿದೆ. ವಿವಾದ ಸೃಷ್ಟಿಸುವ ಹಲವು ಸಂಭಾಷಣೆ ಮತ್ತು ದೃಶ್ಯಗಳು ಸಿನಿಮಾದಿಂದ ಕತ್ತರಿಸಲ್ಪಟ್ಟಿವೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಹಾಗೇ, ಸಿನಿಮಾದಲ್ಲಿ ಒಂದು ಟಿವಿ ಸಂದರ್ಶನದ ದೃಶ್ಯವಿತ್ತು. ಅದು ಮಾಧ್ಯಮವರು ಕೇರಳದ ಮಾಜಿ ಮುಖ್ಯಮಂತ್ರಿಯೊಬ್ಬರನ್ನು ಸಂದರ್ಶಿಸುವ ಚಿತ್ರಣ. ಮಾಧ್ಯಮದವರು ಕೇಳುವ ಪ್ರಶ್ನೆಗೆ ಉತ್ತರಿಸುವ ಆ ಮಾಜಿ ಸಿಎಂ ‘ಕೇರಳದಲ್ಲಿ ಯುವಜನರನ್ನು ದೊಡ್ಡಮಟ್ಟದಲ್ಲಿ ಇಸ್ಲಾಮ್​​ಗೆ ಮತಾಂತರಗೊಳಿಸಲಾಗುತ್ತಿದೆ. ಹೀಗಾಗಿ ಈ ರಾಜ್ಯ ಇನ್ನೆರಡು ದಶಕದಲ್ಲಿ ಮುಸ್ಲಿಂ ಬಹುಸಂಖ್ಯಾತ ರಾಜ್ಯವಾಗುತ್ತದೆ’ ಎಂದು ಹೇಳುತ್ತಾರೆ. ಆದರೆ ಈ ದೃಶ್ಯವನ್ನು ಸೆನ್ಸಾರ್​ ಮಂಡಳಿ ತೆಗೆಸಿದೆ. ಸಿನಿಮಾದಲ್ಲಿ ಈ ಟಿವಿ ಸಂದರ್ಶನದ ಚಿತ್ರಣ ಪ್ರಸಾರವಾಗಲೇಬಾರದು ಎಂದು ಆದೇಶಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸ್ಯಾಂಡಲ್ ವುಡ್

Yuva Movie: ಒಟಿಟಿಗೆ ಬಂದಾಯ್ತು ʻಯುವʼ: ಸಿನಿಮಾ ನೋಡಬಹುದು, ಆದರೆ….

Yuva Movie: ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

VISTARANEWS.COM


on

Yuva Movie streaming ott yuva rajkumar
Koo

ಬೆಂಗಳೂರು: ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್​’ (Hombale Films) ನಿರ್ಮಿಸುತ್ತಿರುವ, ಯುವ ರಾಜ್‌ಕುಮಾರ್ ಅಭಿನಯದ ಚಿತ್ರ ʼಯುವʼ (Yuva Movie). ಮಾರ್ಚ್‌ 29ರಂದು ತೆರೆ ಕಂಡಿತ್ತು. ಆದರೀಗ ಸಿನಿಮಾ ತೆರೆ ಕಂಡ 21 ದಿನಕ್ಕೆ ಒಟಿಟಿಗೆ ಬಂದಿದೆ. ಸದ್ದಿಲ್ಲದೇ ಸಿನಿಮಾ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ (Amazon Prime) ಆಗುತ್ತಿದೆ.

ವಿಶೇಷ ಎಂದರೆ ಸಿನಿಮಾವನ್ನು ಪ್ರೈಂ ಚಂದಾದಾರರು ವೀಕ್ಷಿಸಲು ಸಾಧ್ಯವಿಲ್ಲ. ಸದ್ಯಕ್ಕೆ ಬಾಡಿಗೆ ಪದ್ಧತಿಯಲ್ಲಿ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. 349 ರೂ. ಕೊಟ್ಟು ಸಿನಿಮಾ ವೀಕ್ಷಿಸಬೇಕಿದೆ. ಚಾಮರಾಜನಗರದಲ್ಲಿ ‘ಯುವ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಮಾಡಲಾಗಿತ್ತು. ಹೊಸಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ಪ್ರೀ ರಿಲೀಸ್ ಈವೆಂಟ್ ಕೂಡ ನಡೆದಿತ್ತು.ಸಿನಿಮಾ 20 ದಿನಕ್ಕೆ ಭರ್ಜರಿ ಕಲೆಕ್ಷನ್ ಮಾಡಿದೆ. ಒಟಿಟಿಗೆ ಬಂದಿದ್ದರೂ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಈ ಚಿತ್ರದ ಮೊದಲ ಹಾಡಿಗೆ ನಿರ್ದೇಶಕ ಸಂತೋಷ್ ಆನಂದ್‌ರಾಮ್ ಸಾಹಿತ್ಯ ಬರೆದಿದ್ದಾರೆ. ನಕಾಶ್ ಅಜೀಜ್ ಜತೆ ಸೇರಿ ಸಂತೋಷ್ ಆನಂದ್ ರಾಮ್ ಹಾಗೂ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಡಿದ್ದಾರೆ. ಮೋಹನ್ ಭಜರಂಗಿ ಸಾಂಗ್ ಕೊರಿಯೋಗ್ರಫಿ ಮಾಡಿದ್ದಾರೆ. ಸುಮಾರು 3 ಕೋಟಿ ರೂ. ಮೊತ್ತಕ್ಕೆ ‘ಯುವ’ ಆಡಿಯೊ ರೈಟ್ಸ್ ಆನಂದ್ ಆಡಿಯೊ ಪಾಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Yuva Rajkumar: ʻಯುವʼನ ಆರ್ಭಟ ಶುರು: ಸಿನಿಮಾ ನೋಡಿ ಬೆಳ್ಳುಳ್ಳಿ ಕಬಾಬ್‌ ಚಂದ್ರು ಏನಂದ್ರು?

ಏಪ್ರಿಲ್ 23ರಂದು ಯುವ ರಾಜ್‌ಕುಮಾರ್ ಹುಟ್ಟುಹಬ್ಬ. ಮರುದಿನ ಡಾ. ರಾಜ್‌ಕುಮಾರ್ ಜಯಂತೋತ್ಸವ ಇದೆ. ಹಾಗಾಗಿ ಅದೇ ಸಂಭ್ರಮದಲ್ಲಿ ಹೊಸ ಸಿನಿಮಾ ಘೋಷಣೆ ಮಾಡುವ ನಿರೀಕ್ಷೆಯಿದೆ ಎನ್ನಲಾಗಿದೆ.

Continue Reading

ಸ್ಯಾಂಡಲ್ ವುಡ್

Uttarakaanda Movie: ಪಾಟೀಲನಾಗಿ ‘ಉತ್ತರಕಾಂಡ’ ಸಿನಿಮಾಗೆ ಎಂಟ್ರಿ ಕೊಟ್ಟ ಯೋಗರಾಜ್ ಭಟ್

Uttarakaanda Movie: ಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ.

VISTARANEWS.COM


on

Uttarakaanda Movie Yogaraj bhat entry
Koo

ಬೆಂಗಳೂರು: ಖ್ಯಾತ ನಿರ್ದೇಶಕ ಯೋಗರಾಜ್ ಭಟ್ `ಉತ್ತರಾಕಾಂಡ’ದಲ್ಲಿ (Uttarakaanda Movie) ನಟಿಸಲಿದ್ದಾರೆ‌. “ಪಾಟೀಲ” ಎಂಬ ಪಾತ್ರಕ್ಕಾಗಿ ಬಣ್ಣ ಹಚ್ಚಲಿದ್ದಾರೆ. ನಿರ್ದೇಶಕರಾಗಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಭಟ್ಟರು,‌ಇದೀಗ ವಿಭಿನ್ನವಾಗಿ ಆ್ಯಕ್ಷನ್ ಕಟ್ ಹೇಳಿಸಿಕೊಳ್ಳಲಿದ್ದಾರೆ‌. ಈ ವರ್ಷದ ಸ್ಯಾಂಡಲ್‌ವುಡ್‌ನ ಬಹು ನಿರೀಕ್ಷಿತ ಚಿತ್ರಗಳ ಪೈಕಿ ʼಉತ್ತರಕಾಂಡʼ (Uttarakaanda Movie)ವೂ ಒಂದು. ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ ಕುಮಾರ್‌, ಡಾಲಿ‌ ಧನಂಜಯ್‌ ಮತ್ತೊಮ್ಮೆ ತೆರೆ ಮೇಲೆ ಒಂದಾಗುತ್ತಿರುವ ಕಾರಣಕ್ಕೆ ಈ ಸಿನಿಮಾ ಈಗಾಗಲೇ ಕುತೂಹಲ ಕೆರಳಿಸಿದೆ. ಏ. 15 ಸಿನಿಮಾದ ಶೂಟಿಂಗ್‌ ಆರಂಭಿಸಲಾಗಿದೆ. 

ಏ.18ರಂದು ಚಿತ್ರತಂಡ ದೂದ್‌ಪೇಡ ದಿಗಂತ್‌ ಅವರ ಲುಕ್‌ ಅನಾವರಣಗೊಳಿಸಿತ್ತು. ಮಿರ್ಚಿ “ಮಲ್ಲಿಗೆ” ಎಂಬ ಪಾತ್ರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಟೋಬಿʼ, ʼಸಪ್ತ ಸಾಗರದಾಚೆ ಸೈಡ್‌ ಬಿʼ ಮುಂತಾದ ಸಿನಿಮಾಗಳಲ್ಲಿ ಗಮನ ಸೆಳೆದಿದ್ದ ಚೈತ್ರಾ ʼಉತ್ತರಕಾಂಡʼ ಚಿತ್ರತಂಡವನ್ನು ಸೇರಿದ್ದು, ಇನ್ನಷ್ಟು ನಿರೀಕ್ಷೆ ಮೂಡಿಸಿದೆ.ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಒಳಗೊಂಡ ʼಉತ್ತರಕಾಂಡʼ ಸಿನಿಮಾಕ್ಕೆ ರೋಹಿತ್ ಪದಕಿ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಚೈತ್ರಾ ಆಚಾರ್ ಈ ಚಿತ್ರದಲ್ಲಿ ಲಚ್ಚಿ ಎಂಬ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇದನ್ನೂ ಓದಿ: Uttarakaanda Movie: ʻಉತ್ತರಕಾಂಡʼ ಸಿನಿಮಾದಲ್ಲಿ ದೂದ್ ಪೇಡಾ ದಿಗಂತ್ ಈಗʻಮಿರ್ಚಿ ಮಲ್ಲಿಗೆʼ!

ನಾಯಕಿ ಪಾತ್ರದಿಂದ ಹೊರ ಬಂದಿದ್ದ ರಮ್ಯಾ

ಚಿತ್ರತಂಡ ಆರಂಭದಲ್ಲಿ ನಾಯಕಿಯಾಗಿ ಸ್ಯಾಂಡಲ್‌ವುಡ್‌ ಕ್ವೀನ್‌ ರಮ್ಯಾ ಅವರನ್ನು ಹೆಸರಿಸಿತ್ತು. ಮಾತ್ರವಲ್ಲ ರಮ್ಯಾ ಚಿತ್ರದ ಮುಹೂರ್ತದಲ್ಲಿಯೂ ಭಾಗವಹಿಸಿದ್ದರು. ಆದರೆ ಇತ್ತೀಚೆಗೆ ಅವರು ಚಿತ್ರತಂಡದಿಂದ ಹೊರಬಂದು ಶಾಕ್‌ ನೀಡಿದ್ದರು. ಕಳೆದ ವರ್ಷ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಚಿತ್ರದ ನಾಯಕಿ ಪಾತ್ರದಿಂದ ಹಿಂದೆ ಸರಿದಿದ್ದ ರಮ್ಯಾ ಕೆಲವು ದಿನಗಳ ಹಿಂದೆ ʼಉತ್ತರಕಾಂಡʼ ಸಿನಿಮಾದಿಂದಲೂ ಹೊರ ಬಂದಿದ್ದರು. ʼ‘ಡೇಟ್ಸ್​ ಕೊರತೆಯಿಂದಾಗಿ ನಾನು ʼಉತ್ತರಕಾಂಡʼದಲ್ಲಿ ಕೆಲಸ ಮಾಡುತ್ತಿಲ್ಲ (ಸಿನಿಮಾ ಮತ್ತು ರಾಜಕೀಯದ ಕೆಲಸಗಳನ್ನು ನಾನು ಸದ್ಯಕ್ಕೆ ಸ್ಥಗಿತಗೊಳಿಸಿದ್ದೇನೆ). ಚಿತ್ರತಂಡಕ್ಕೆ ನಾನು ಶುಭ ಹಾರೈಸುತ್ತೇನೆ’ʼ ಎಂದು ರಮ್ಯಾ ಕಾರಣ ತಿಳಿಸಿದ್ದರು. ಆ ಮೂಲಕ ಅನೇಕ ವರ್ಷಗಳ ಬಳಿಕ ಅವರನ್ನು ತೆರೆ ಮೇಲೆ ನೋಡಬೇಕೆಂಬ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದರು.

ವಿಳಂಬಕ್ಕೆ ಕಾರಣವೇನು?

ʼʼಉತ್ತರಕಾಂಡʼದ ಮುಹೂರ್ತ 2022ರಲ್ಲಿ‌ಯೇ ಆಗಿತ್ತು. ಆದರೆ ಇದುವರೆಗೆ ಚಿತ್ರೀಕರಣ ಆರಂಭವಾಗಿರಲಿಲ್ಲ. ಚಿತ್ರಕಥೆಯು ಬಯಲುಸೀಮೆಯ ಸಂಸ್ಕೃತಿಯನ್ನು ಎಳೆ ಎಳೆಯಾಗಿ ಬಿಚ್ಚಿಡುವುದರಿಂದ ಹಾಗೂ ಉತ್ತರ ಕರ್ನಾಟಕದ ಆಡುಭಾಷೆಯನ್ನು ಹೊಂದಿರುವುದರಿಂದ ಚಿತ್ರಕ್ಕೆ ನಿಖರವಾದ ಸಂಶೋಧನೆ ಮತ್ತು ಪ್ಲ್ಯಾನಿಂಗ್‌ನ ಅಗತ್ಯವಿತ್ತು. ಈ ಕಾರಣದಿಂದ ಮತ್ತು ಕೆಲವು ಅನಿವಾರ್ಯ ಸಂದರ್ಭಗಳಿಂದಾಗಿ ಚಿತ್ರೀಕರಣ ವಿಳಂಬಗೊಂಡಿತು. ಆದರೆ ಇದೀಗ ಸರ್ವ ಸಿದ್ಧತೆಗಳೊಂದಿಗೆ ಚಿತ್ರೀಕರಣ ಆರಂಭಗೊಂಡಿದೆʼʼ ಎಂದು ಚಿತ್ರತಂಡ ತಿಳಿಸಿದೆ. ಖ್ಯಾತ ಬಾಲಿವುಡ್ ಗಾಯಕ ಹಾಗೂ ಸಂಗೀತ ನಿರ್ದೇಶಕ ಅಮಿತ್ ತ್ರಿವೇದಿ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಲಿದ್ದು, ಅದ್ವೈತ ಗುರುಮೂರ್ತಿ ಮುಖ್ಯ ಛಾಯಾಗ್ರಾಹಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Nenapirali Prem: ಪೊಲೀಸ್ ಖದರ್‌ನಲ್ಲಿ `ನೆನಪಿರಲಿ ಪ್ರೇಮ್’: ಹೊಸ ಸಿನಿಮಾ ಅನೌನ್ಸ್‌!

Nenapirali Prem: ನೆನಪಿರಲಿ ಪ್ರೇಮ್ ಮತ್ತೆ ಪೊಲೀಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೊಲೀಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೊಲೀಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.

VISTARANEWS.COM


on

Nenapirali Prem New Movie announced
Koo

ಬೆಂಗಳೂರು: `ಅಪ್ಪ ಐ ಲವ್ ಯೂ; ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಬಂದಿದ್ದ ಲವ್ಲಿ ಸ್ಟಾರ್ ಪ್ರೇಮ್ (Nenapirali Prem) ಈಗ ಮತ್ತೊಂದು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಬಾರಿ ಅವರು ಲವರ್ ಬಾಯ್ ಆಗಿ ಕಾಣಿಸಿಕೊಳ್ಳುತ್ತಿಲ್ಲ. ಬದಲಾಗಿ ರಗಡ್ ಅವತಾರ ತಾಳಿದ್ದಾರೆ. ಏ. 18 ಪ್ರೇಮ್ ಅವರ ಜನುಮದಿನ (Nenapirali Prem birthday) . ಹುಟ್ಟುಹಬ್ಬದ ಸ್ಪೆಷಲ್ ಆಗಿ ಹೊಸ ಸಿನಿಮಾದ ಮುಹೂರ್ತ ನೆರವೇರಿದೆ. ಬೆಂಗಳೂರಿನ ಬಂಡಿ ಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದ್ದು, ಇಡೀ ಚಿತ್ರತಂಡ ಭಾಗಿಯಾಗಿ ತಾಯಿಯ ಆಶೀರ್ವಾದ ಪಡೆದುಕೊಂಡರು.

ನೆನಪಿರಲಿ ಪ್ರೇಮ್ ಮಾತನಾಡಿ, ʻʻಇಂದು ನಾನು ಹುಟ್ಟಿದ ದಿನ. ಈ ದಿನ ಮುಹೂರ್ತ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿತ್ತು. 2.0 ರೀಬ್ರ್ಯಾಂಡಿಂಗ್ ಎಂದು ನನ್ನ ಸ್ನೇಹಿತರು ಕೇಳಿದರು. ಈ ಮೊದಲು ಆಕ್ಷನ್ ಸಿನಿಮಾ ಮಾಡಿದ್ದೇವು. ಆದರೆ ಬಹಳಷ್ಟು ಗ್ಯಾಪ್ ಆಗಿತ್ತು. ಲವ್ ಬ್ರ್ಯಾಂಡ್ ಆಗಿದ್ದರಿಂದ ಈಗ ಒಂದೊಳ್ಳೆ ಕಥೆಯೊಂದಿಗೆ ನಿರ್ದೇಶಕರು ಬಂದರು. ಹೀಗಾಗಿ ಈ ಚಿತ್ರ ಒಪ್ಪಿಕೊಂಡೆ. ಸಿನಿಮಾದಲ್ಲಿ ಸ್ಟ್ರೀಕ್ಟ್ ಪೊಲೀಸ್ ಅಧಿಕಾರಿ ಪಾತ್ರ ನಿರ್ವಹಿಸುತ್ತಿದ್ದೇನೆ. ಸ್ಕ್ರೀಪ್ಟ್ ರೆಡಿಯಾಗ್ತಿದೆ. ಕ್ಲೈಮ್ಯಾಕ್ಸ್ ಚರ್ಚೆ ಹಂತದಲ್ಲಿದೆ. ಪೂರ್ಣ ಪ್ರಮಾಣದಲ್ಲಿ ಸ್ಟಾರ್ ಕಾಸ್ಟ್ ಡಿಸೈಡ್ ಆಗಿಲ್ಲ. ಮುಂದಿನ ದಿನಗಳಲ್ಲಿ ಮುಹೂರ್ತ ಮಾಡಬೇಕು ಎಂದುಕೊಂಡಿದ್ದೇವು. ಆದರೆ ನಿಮ್ಮ ಬರ್ತ್ ಡೇ ಒಳ್ಳೆ ಸಂದರ್ಭ ಸರ್ ಎಂದು ನಿರ್ದೇಶಕರು ಹೇಳಿದ್ದರು. ಹೀಗಾಗಿ ಈ ದಿನ ಮುಹೂರ್ತ ಮಾಡಿದ್ದೇವೆʼʼ ಎಂದರು.

ಇದನ್ನೂ ಓದಿ: Nenapirali Prem: ಇದೇ ಏಪ್ರಿಲ್ 12ಕ್ಕೆ ʻನೆನಪಿರಲಿ ಪ್ರೇಮ್ʼ ಸಿನಿಮಾ ರಿಲೀಸ್‌!

ತೇಜೇಶ್ ಮಾತನಾಡಿ, ʻʻಇದು ನನ್ನ ಮೊದಲ ಸಿನಿಮಾ. ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಇದಾಗಿದೆ. ಟೈಟಲ್ ಚರ್ಚೆಯಲ್ಲಿದೆ. ಕಥೆಗೆ ಪ್ರೇಮ್ ಸರ್ ಸೂಟ್ ಆಗಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದೇವೆ. ರಂಗಾಯಣ ರಘು ಸರ್ ಚಿತ್ರದ ಭಾಗವಾಗಿದ್ದಾರೆ. ಈ ತಿಂಗಳಾತ್ಯಂಕ್ಕೆ ಶೂಟಿಂಗ್ ಗೆ ಹೊರಡಲಿದ್ದೇವೆʼʼ ಎಂದು ಮಾಹಿತಿ ನೀಡಿದರು.

ನೆನಪಿರಲಿ ಪ್ರೇಮ್ ಮತ್ತೆ ಪೊಲೀಸ್ ಪಾತ್ರ ಮಾಡಿದ್ದಾರೆ. 11 ವರ್ಷದ ಹಿಂದೆ ಪೊಲೀಸ್ ರೋಲ್ ಮಾಡಿದ್ದರು. ಶತ್ರು ಅನ್ನೋ ಈ ಚಿತ್ರದಲ್ಲಿ ಪೊಲೀಸ್ ಖದರ್ ನಲ್ಲಿ ಪವರ್ ತೋರಿಸಿದ್ದರು. ಆದರೆ ಪ್ರೇಮ್ ಈ ಸಲ ಬೇರೆ ರೀತಿಯ ಪೊಲೀಸ್ ಪಾತ್ರ ಮಾಡಿದ್ದಾರೆ. ರಫ್ ಆ್ಯಂಡ್ ಟಫ್ ಅಲ್ಲದೇ, ರಗಡ್ ಲುಕ್ ಇರೋ ಪೊಲೀಸ್ ರೀತಿನೂ ಕಾಣಿಸುತ್ತಿದ್ದಾರೆ. ಕೈಯಲ್ಲಿ ಸಿಂಗಲ್ ಬ್ಯಾರಲ್ ಗನ್ ಕೂಡ ಇದೆ. ಅದನ್ನ ಸ್ಟೈಲ್ ಆಗಿಯೂ ಪ್ರೇಮ್ ಹಿಡಿದು ಕೊಂಡು, ದೊಂಬಿ ಮಾಡೋರ ಕಡೆಗೆ ಮುಖ ಮಾಡಿ ನಿಂತಿದ್ದಾರೆ.

ಯುವ ಪ್ರತಿಭೆ ತೇಜಸ್ ಬಿ.ಕೆ ಕಥೆ ಚಿತ್ರಕಥೆ ಬರೆದು ಸಿನಿಮಾ ಆಕ್ಷನ್ ಕಟ್ ಹೇಳುತ್ತಿದ್ದಾರೆ. ವಾಸುಕಿ ವೈಭವ್ ಸಂಗೀತ, ಆನಂದ್ ಮೀನಾಕ್ಷಿ ಛಾಯಾಗ್ರಹಣ ಚಿತ್ರಕ್ಕಿದೆ. ಹೆಸರಿಡದ ಈ ಸಿನಿಮಾಗೆ ಮಧು ಗೌಡ ಬಂಡವಾಳ ಹೂಡಿದ್ದಾರೆ. ಮುಹೂರ್ತ ನೆರವೇರಿಸಿರುವ ಚಿತ್ರತಂಡ ಈ ತಿಂಗಳ್ಯಾಂತಕ್ಕೆ ಶೂಟಿಂಗ್ ಅಖಾಡಕ್ಕೆ ಧುಮುಕಲಿದೆ.

Continue Reading

ಟಾಲಿವುಡ್

Teja Sajja: ಹೊಸ ಸಿನಿಮಾ ಅನೌನ್ಸ್‌ ಮಾಡಿದ ʻಹನುಮಾನ್ʼ ಹೀರೊ ತೇಜ್ ಸಜ್ಜಾ

Teja Sajja: ಮಿರಾಯ್ʼ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

VISTARANEWS.COM


on

Teja Sajja Hanuman Movie Feme Mirai announce
Koo

ಬೆಂಗಳೂರು: ʻಹನುಮಾನ್ʼ ಸಿನಿಮಾ (Hanuman Movie) ಮೂಲಕ ಸೂಪರ್ ಸಕ್ಸೆಸ್‌ ಕಂಡಿರುವ ತೆಲುಗಿನ ಯುವ ನಟ ತೇಜ್ ಸಜ್ಜಾ (Teja Sajja) ಹೊಸ ಸಿನಿಮಾ ಅನೌನ್ಸ್ ಆಗಿದೆ. ʻಕಾರ್ತಿಕೇಯʼ, ʻಕಾರ್ತಿಕೇಯ-2ʼ , `ಧಮಾಕ’ ಸೇರಿದಂತೆ ಹಲವು ಹಿಟ್ ಚಿತ್ರ ಕೊಟ್ಟಿರುವ ಕಾರ್ತಿಕ್ ಗಟ್ಟಮ್ನೇನಿ  ಅವರು ತೇಜ್ ಸಜ್ಜಾಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಜೋಡಿಯ ಹೊಸ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಝಲಕ್ ಅನಾವರಣಗೊಂಡಿದೆ.

ʻಹನುಮಾನ್ʼನಲ್ಲಿ ಸೂಪರ್ ಹೀರೊ ಆಗಿದ್ದ ತೇಜ್ ಸಜ್ಜಾ ಈಗ ಸೂಪರ್ ಯೋಧನಾಗಿ ಪ್ರತ್ಯಕ್ಷರಾಗಿದ್ದಾರೆ. ಕೈಯಲ್ಲಿ ಸ್ಟಾಫ್ಟ್ ಸ್ಟಿಕ್ ಹಿಡಿದು ದುಷ್ಟರನ್ನು ಸಂಹರಿಸಲು ಪಣ ತೊಟ್ಟಿದ್ದಾರೆ. ಅದಕ್ಕಾಗಿ ತೇಜ್ ಸಜ್ಜಾ ಹೊಸ ಅವತಾರವನ್ನೇ ತಾಳಿದ್ದಾರೆ.

ಕಾರ್ತಿಕ್ ಗಟ್ಟಮ್ನೇನಿ ಹಾಗೂ ತೇಜ್ ಸಜ್ಜಾ ಹೊಸ ಸಿನಿಮಾ ʻಮಿರಾಯ್ʼ ಎಂಬ ಟೈಟಲ್ ಇಡಲಾಗಿದೆ. ʻಮಿರಾಯ್ʼ ಎಂದರೆ ಭವಿಷ್ಯ ಎಂದರ್ಥ. ಅಶೋಕ ಚಕ್ರವರ್ತಿ ಹಾಗೂ ಆತನ 9 ರಹಸ್ಯದ ಕಥೆಯನ್ನು ಬಿಚ್ಚಿಡುವ ಮಿರಾಯ್ ವಿಷ್ಯುವಲ್ ಟ್ರೀಟ್ ನೋಡುಗರಿಗೆ ಹಬ್ಬದಂತಿದೆ.

ʻಮಿರಾಯ್ʼ ಸಿನಿಮಾಗಾಗಿ ತೇಜ್ ಸಜ್ಜಾ ಕೋಲು ಕಾಳಗ ಕಲಿತಿದ್ದಾರೆ. ಪ್ರತಿ ಫ್ರೇಮ್ ನ್ನು ಕಾರ್ತಿಕ್ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ. ಗೌರ ಹರಿ ಸಂಗೀತ ತೂಕ ಹೆಚ್ಚಿಸಿದೆ. ದಕ್ಷಿಣ ಭಾರತದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಪೀಪಲ್ ಮೀಡಿಯಾ ಫ್ಯಾಕ್ಟರಿಯಡಿ ಟಿಜಿ ವಿಶ್ವಪ್ರಸಾದ್ ಮಿರಾಯ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಇದನ್ನೂ ಓದಿ: Hanuman Chalisa: ಹನುಮಾನ್‌ ಚಾಲೀಸಾ ಹಾಕಿದ್ದಕ್ಕೆ FIR;‌ ಪಾಕಿಸ್ತಾನವನ್ನು ಆಳುತ್ತಿದ್ದೀರಾ ಎಂದು ಸಿಎಂಗೆ ಜೋಶಿ ಪ್ರಶ್ನೆ

ಕಾರ್ತಿಕ್ ಗಟ್ಟಮ್ನೇನಿ ಮಿರಾಯ್ ಗೆ ಚಿತ್ರಕಥೆಯನ್ನು ಬರೆದು ನಿರ್ದೇಶನ ಮಾಡುತ್ತಿದ್ದು, ಮಣಿಬಾಬು ಕರಣಂ ಅವರು ಸಂಭಾಷಣೆ ಬರೆದಿದ್ದಾರೆ. ಶ್ರೀ ನಾಗೇಂದ್ರ ತಂಗಳ ಕಲಾ ನಿರ್ದೇಶಕನ, ವಿವೇಕ್ ಕೂಚಿಭೋಟ್ಲ ಸಹ ನಿರ್ಮಾಪಕರಾಗಿದ್ದಾರೆ. ಕೃತಿ ಪ್ರಸಾದ್ ಕ್ರಿಯೇಟಿವ್ ನಿರ್ಮಾಪಕರಾಗಿದ್ದು, ಸುಜಿತ್ ಕುಮಾರ್ ಕೊಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಸಾಥ್ ಕೊಟ್ಟಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮೂಡಿ ಬರ್ತಿರುವ ಮರೈ ಸಿನಿಮಾವನ್ನು 2025ರ ಏಪ್ರಿಲ್ 18ರಂದು ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ.

Continue Reading
Advertisement
Narendra Modi
ದೇಶ4 mins ago

Narendra Modi : ವಿಶ್ವವೇ ನೋಡಿದೆ.. ಯುಪಿ ರ್ಯಾಲಿಯಲ್ಲಿ ಶಮಿಯನ್ನು ಹೊಗಳಿದ ಮೋದಿ

IPL 2024
ಕ್ರೀಡೆ24 mins ago

IPL 2024 : ಚೆನ್ನೈ ವಿರುದ್ಧ ಲಕ್ನೊ ತಂಡಕ್ಕೆ8 ವಿಕೆಟ್ ಭರ್ಜರಿ ಗೆಲುವು

Operation Hasta
ಕರ್ನಾಟಕ26 mins ago

Operation Hasta: ಮಾಜಿ‌ ಸಚಿವ ಮಾಲೀಕಯ್ಯ ಗುತ್ತೇದಾರ್, ಮಾಜಿ ಶಾಸಕಿ ಶಾರದಾ ಶೆಟ್ಟಿ ಕಾಂಗ್ರೆಸ್‌ ಸೇರ್ಪಡೆ

Ballari Lok Sabha constituency Congress candidate e Tukaram Election campaign
ಬಳ್ಳಾರಿ49 mins ago

Lok Sabha Election 2024: ಬಡವರ ಬಾಳು ಬಂಗಾರ ಮಾಡಿದ್ದು ಕಾಂಗ್ರೆಸ್‌: ಈ. ತುಕಾರಾಂ

Lok Sabha Election 2024
Lok Sabha Election 202449 mins ago

Lok Sabha Election 2024: 1 ವೋಟಿಗಾಗಿ ದಟ್ಟ ಕಾಡಿನಲ್ಲಿ 18 ಕಿ.ಮೀ. ನಡೆದ ಚುನಾವಣಾ ಸಿಬ್ಬಂದಿ

Narendra Modi
ಪ್ರಮುಖ ಸುದ್ದಿ59 mins ago

Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Lok sabha Election
ರಾಜಕೀಯ1 hour ago

lok Sabha Election : ಮೊದಲ ಹಂತದಲ್ಲಿ ಶೇ.60.3ರಷ್ಟು ಮತದಾನ

Actor Darshan
ಕರ್ನಾಟಕ1 hour ago

Actor Darshan: ನಟ ದರ್ಶನ್‌ ಇದ್ದ ಪ್ರಚಾರ ವಾಹನಕ್ಕೆ ವಿದ್ಯುತ್‌ ಸ್ಪರ್ಶ; ತಪ್ಪಿದ ಭಾರೀ ಅನಾಹುತ!

Boat Capsizes
ದೇಶ2 hours ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ2 hours ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ8 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ19 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌