Site icon Vistara News

The Kerala Story : ಯಾವ ಒಟಿಟಿಯಲ್ಲಿ ಪ್ರಸಾರವಾಗಲಿದೆ `ದಿ ಕೇರಳ ಸ್ಟೋರಿ’?

The Kerala Story OTT release date and the platform

ಬೆಂಗಳೂರು: `ದಿ ಕೇರಳ ಸ್ಟೋರಿ‘ (The Kerala Story) ಆರು ದಿನದಲ್ಲಿ 68 ಕೋಟಿ ರೂ. ಕಲೆಕ್ಷನ್‌ ಮಾಡಿ ಮುನ್ನುಗುತ್ತಿದೆ. ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಭಾರೀ ವಿರೋಧದ ನಡುವೆಯೂ ‘ದಿ ಕೇರಳ ಸ್ಟೋರಿ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಇದೀಗ ಸಿನಿಮಾದ ಒಟಿಟಿ ಸ್ಟ್ರೀಮಿಂಗ್ ಚರ್ಚೆ ಶುರುವಾಗಿದೆ. ಈಗಾಗಲೇ ಭಾರೀ ಮೊತ್ತಕ್ಕೆ ‘ದಿ ಕೇರಳ ಸ್ಟೋರಿ’ ಡಿಜಿಟಲ್ ರೈಟ್ಸ್ ಮಾರಾಟವಾಗಿದೆ ಎನ್ನಲಾಗುತ್ತಿದೆ. ಜೀ5 ಸಂಸ್ಥೆ ‘ದಿ ಕೇರಳ ಸ್ಟೋರಿ’ ಡಿಜಿಟಲ್ ರೈಟ್ಸ್ ಕೊಂಡುಕೊಂಡಿದೆ ಎಂದು ವರದಿಯಾಗಿದೆ.

ಸಿನಿಮಾ ಇಷ್ಟೆಲ್ಲ ವಿವಾದ ಸೃಷ್ಟಿಸಿರುವುದು, ಶೋಗಳು ಕ್ಯಾನ್ಸಲ್ ಆಗುತ್ತಿರುವುದು ನೋಡಿದರೆ ಮೇ ಕೊನೆಗೆ ಅಥವಾ ಜೂನ್ ಮೊದಲ ವಾರ ಸ್ಮಾಲ್ ಸ್ಕ್ರೀನ್‌ಗೆ ಬರಲಿದೆ ಎನ್ನಲಾಗಿದೆ. ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಒಟಿಟಿಯಲ್ಲಿ ಸಿನಿಮಾ ಪ್ರದರ್ಶನಕ್ಕೆ ಅವಕಾಶ ನೀಡುತ್ತಾರೆಯೇ ಎಂಬ ಪ್ರಶ್ನೆಗಳು ಉದ್ಭವವಾಗಿದೆ.

ದಿ ಕೇರಳ ಸ್ಟೋರಿ (The Kerala Story) ಸಿನಿಮಾವನ್ನು ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿಷೇಧಿಸಲಾಗಿದೆ (The Kerala Story Ban in West Bengal). ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಪ್ರದರ್ಶನ ರದ್ದುಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಘೋಷಣೆ ಮಾಡಿದ್ದಾರೆ. ಮಾತ್ರವಲ್ಲದೆ, ಚೆನ್ನೈ ಸೇರಿದಂತೆ ಕೆಲವು ನಗರಗಳಲ್ಲಿ, ತಮಿಳುನಾಡಿನ ಕೆಲವು ಮಲ್ಟಿಪ್ಲೆಕ್ಸ್‌ಗಳು ಕೇರಳ ಸ್ಟೋರಿಯನ್ನು ಪ್ರದರ್ಶಿಸುವುದನ್ನು ನಿಲ್ಲಿಸಿದ್ದಾರೆ. ಇದರ ನಡುವೆಯೂ ಭಾರಿ ಕಲೆಕ್ಷನ್‌ನತ್ತ ಸಿನಿಮಾ ಸಾಗುತ್ತಿದೆ.

ಸುದೀಪ್ತೋ ಸೇನ್ ನಿರ್ದೇಶಿಸಿದ ಮತ್ತು ವಿಪುಲ್ ಶಾ ನಿರ್ಮಿಸಿದ ಈ ಚಲನಚಿತ್ರ ಬಿಡುಗಡೆಯಾದಾಗಿನಿಂದ ಬಾಕ್ಸ್ ಆಫೀಸ್‌ನಲ್ಲಿ 56 ಕೋಟಿ ರೂ. ಗಳಿಕೆ ಮಾಡಿದೆ. ಕೇರಳದ ಹಿಂದು/ಕ್ರಿಶ್ಚಿಯನ್ ಯುವತಿಯರನ್ನು ಸಿರಿಯಾ/ಅಫ್ಘಾನಿಸ್ತಾನಕ್ಕೆ ಕಳಿಸಿ ಇಸ್ಲಾಮ್​ಗೆ ಮತಾಂತರ ಮಾಡುವ/ಲವ್ ಜಿಹಾದ್​ಗೆ ಗುರಿಪಡಿಸುವ ಕಥೆಯನ್ನು ಒಳಗೊಂಡ ದಿ ಕೇರಳ ಸ್ಟೋರಿ ಸಿನಿಮಾ ಒಳಗೊಂಡಿದೆ.

ಇದನ್ನೂ ಓದಿ: The Kerala Story: ದೈಹಿಕವಾಗಿ, ಭಾವನಾತ್ಮಕವಾಗಿ ಭಯಭೀತಳನ್ನಾಗಿಸಿತು: ʻದಿ ಕೇರಳ ಸ್ಟೋರಿʼ ಬಗ್ಗೆ ನಟಿ ಅದಾ ಶರ್ಮಾ ಹೇಳಿದ್ದೇನು?

ಈ ಚಿತ್ರದ ಬಿಡುಗಡೆಗೆ ಕಾಂಗ್ರೆಸ್​, ಇತರ ಕಮ್ಯೂನಿಸ್ಟ್ ಪಕ್ಷಗಳು ವಿರೋಧಿಸಿದ್ದವು. ಇದರಲ್ಲಿ ಇಸ್ಲಾಮ್​​​ನ್ನು ಕೆಟ್ಟದಾಗಿ ಬಿಂಬಿಸಲಾಗಿದೆ ಎಂದು ಆರೋಪಿಸಿದ್ದರು. ಬಿಡುಗಡೆಗೂ ಮುನ್ನವೇ ಮದ್ರಾಸ್, ಕೇರಳ ಹೈಕೋರ್ಟ್​ಗಳಿಗೆ, ಸುಪ್ರೀಂಕೋರ್ಟ್​ಗೆ ಹಲವರು ಅರ್ಜಿ ಸಲ್ಲಿಸಿದ್ದರು. ಆದರೆ ಯಾವುದೇ ಕೋರ್ಟ್​ಗಳೂ ಪ್ರದರ್ಶನಕ್ಕೆ ತಡೆ ನೀಡಿರಲಿಲ್ಲ. ಮೇ 5ರಂದು ಸಿನಿಮಾ ಬಿಡುಗಡೆಯಾಗಿತ್ತು.

Exit mobile version