Site icon Vistara News

Junior NTR: ಬಿಗ್‌ ಅಪ್‌ಡೇಟ್‌ ಹಂಚಿಕೊಂಡ ಜ್ಯೂನಿಯರ್‌ ಎನ್‌ಟಿಆರ್‌-ಪ್ರಶಾಂತ್​ ನೀಲ್!

Junior NTR and Prashanth Neel

ಬೆಂಗಳೂರು: ಜ್ಯೂನಿಯರ್‌ ಎನ್‌ಟಿಆರ್‌ (Junior NTR) ಈಗಾಗಲೇ ವಾರ್ -2 ಸಿನಿಮಾ ಮೂಲಕ ಬಾಲಿವುಡ್‌ಗೆ ಪದಾರ್ಪಣೆ ಮಾಡುತ್ತಿರುವುದು ಕನ್‌ಫರ್ಮ್‌ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೇ ನಟನ ಕೈಯಲ್ಲಿ ಸಾಕಷ್ಟು ಸಿನಿಮಾಗಳು ಇವೆ. ಮತ್ತೊಂದೆಡೆ ‘ಕೆಜಿಎಫ್​’ ಸಿನಿಮಾ ಬಾಕ್ಲ್​ ಬಸ್ಟರ್​ ಹಿಟ್​ ಆಗುತ್ತಿದ್ದಂತೆಯೇ ಪ್ರಶಾಂತ್​ ನೀಲ್​ ಅವರಿಗೆ ಟಾಲಿವುಡ್​ನಿಂದ ಸಾಕಷ್ಟು ಆಫರ್​ ಬರಲು ಆರಂಭ ಆಯಿತು. ಜ್ಯೂನಿಯರ್‌​ ಎನ್​ಟಿಆರ್​ ನಟನೆಯ 31ನೇ ಸಿನಿಮಾಗೆ ಅವರು ನಿರ್ದೇಶನ ಮಾಡಲಿರುವ ವಿಚಾರ ಗೊತ್ತೇ ಇದೆ. ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮೈತ್ರಿ ಮೂವಿ ಮೇಕರ್ಸ್‌ ಬಿಗ್‌ ಅಪಡೇಟ್‌ ಹಂಚಿಕೊಂಡಿದೆ.

ʻʻಅತ್ಯಂತ ನಿರೀಕ್ಷಿತ ಯೋಜನೆ ತಾರಕ್‌ ಹಾಗೂ ಪ್ರಶಾಂತ್‌ ನೀಲ್‌ ಸಿನಿಮಾ 2024ರ ಏಪ್ರಿಲ್‌ನಲ್ಲಿ ಪ್ರಾರಂಭʼʼಎಂದು ಟ್ವೀಟ್‌ ಹಂಚಿಕೊಂಡಿದೆ. ಎನ್‌ಟಿಆರ್ ಆರ್ಟ್ಸ್ ಬ್ಯಾನರ್‌ನಲ್ಲಿ ತಯಾರಾದ ಕಲ್ಯಾಣ್ ರಾಮ್ ನಟನೆಯ ‘ಬಿಂಬಿಸಾರ’ ಸಿನಿಮಾ ದೊಡ್ಡ ಯಶಸ್ಸು ಕಂಡಿತ್ತು. ಇದೇ ಬ್ಯಾನರ್‌ನಲ್ಲಿ ಈಗ ಎನ್‌ಟಿಆರ್ ಹಾಗೂ ನಿರ್ದೇಶಕ ಕೊರಟಲಾ ಶಿವ ಕಾಂಬಿನೇಷನ್‌ನ ‘ದೇವರ’ ಸಿನಿಮಾ ತಯಾರಾಗುತ್ತಿದೆ. ಇದೀಗ ಪ್ರಶಾಂತ್ ನೀಲ್ ಮತ್ತು ಎನ್‌ಟಿಆರ್ ಜೋಡಿಯ ಈ ಚಿತ್ರ ಕೂಡ ಇದೇ ಬ್ಯಾನರ್‌ನಲ್ಲಿ ಮೂಡಿಬರಲಿದೆ. ಉಪ್ಪೆನ, ಪುಪ್ಪ, ವಾಲ್ತೇರ್‌ ವೀರಯ್ಯ, ಡಿಯರ್ ಕಾಮ್ರೆಡ್ ಸಿನಿಮಾಗಳನ್ನು ನಿರ್ಮಿಸಿರುವ ಮೈತ್ರಿ ಮೂವಿ ಮೇಕರ್ಸ್ ಎನ್‌ಟಿಆರ್ ಹಾಗೂ ಪ್ರಶಾಂತ್ ನೀಲ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಜ್ಯೂನಿಯರ್‌ ಎನ್‌ಟಿಆರ್‌ ದೇವರ ಸಿನಿಮಾ

‘ದೇವರ‘ ಒಂದು ದೊಡ್ಡ-ಬಜೆಟ್ ಕಮರ್ಷಿಯಲ್ ಆ್ಯಕ್ಷನ್ ಎಂಟರ್‌ಟೈನರ್ ಆಗಿದ್ದು, ಕೊರಟಾಲ ಶಿವ ನಿರ್ದೇಶಿಸಲಿದ್ದಾರೆ. ಚಿತ್ರತಂಡ ಇತ್ತೀಚೆಗೆ ಶೂಟಿಂಗ್‌ ಶುರು ಮಾಡಿದ್ದು, ಆ್ಯಕ್ಷನ್ ಸೀಕ್ವೆನ್ಸ್ ಚಿತ್ರೀಕರಿಸಿದೆ ಎಂದು ವರದಿಯಾಗಿದೆ. ‘ದೇವರ’ ಚಿತ್ರವನ್ನು ಕೊರಟಾಲ ಶಿವ ನಿರ್ದೇಶಿಸಿದ್ದಾರೆ. ಜ್ಯೂನಿಯರ್‌ ಎನ್‌ಟಿಆರ್‌, ಸೈಫ್ ಅಲಿ ಖಾನ್ ಮತ್ತು ಜಾನ್ವಿ ಕಪೂರ್ ಪ್ರಮುಖ ಪಾತ್ರಗಳಲ್ಲಿದ್ದಾರೆ.

ಇದನ್ನೂ ಓದಿ: Junior NTR: ಟಾಲಿವುಡ್ ಸಿಂಹಾದ್ರಿ ಹುಟ್ಟುಹಬ್ಬಕ್ಕೆ ಪ್ರಶಾಂತ್ ನೀಲ್ ಸರ್ಪ್ರೈಸ್‌; NTR31 ಸಿನಿಮಾ ಶೂಟಿಂಗ್ ಯಾವಾಗ ಶುರು?

2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್​ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್​ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ. ಇದೀಗ ‘ದೇವರ’ ಮೂಲಕ ಒಂದಾಗಿದ್ದಾರೆ. ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್​ಟಿಆರ್​ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್​ ಚಿತ್ರದಂತೆ ಕಾಣಿಸುತ್ತಿದೆ. ಈ ಸಿನಿಮಾ 2024ರ ಏಪ್ರಿಲ್ 5ರಂದು ತೆಲುಗು, ತಮಿಳು, ಹಿಂದಿ, ಮಲಯಾಳಂನಲ್ಲಿ ಬಿಡುಗಡೆಯಾಗುತ್ತಿದೆ.

Exit mobile version