ಬೆಂಗಳೂರು: ಭಾರತೀಯ ಸಿನಿಮಾದಲ್ಲಿ ಈಗ ದಕ್ಷಿಣ ಭಾರತದ ಸಿನಿಮಾಗಳದ್ದೇ ಹವಾ. ಈಗ ದಕ್ಷಿಣದಲ್ಲಿ ನಿರ್ಮಾಣವಾಗುತ್ತಿರುವ ಹಲವು ಸಿನಿಮಾಗಳು ಪ್ಯಾನ್ ಇಂಡಿಯಾ (Pan India movies 2023) ಖದರ್ ಹೊಂದಿವೆ. ‘ಕೆಜಿಎಫ್’ (KGF Movie), ‘ಪುಷ್ಪ’, ‘ಆರ್‌ಆರ್‌ಆರ್’ ಸೇರಿ ಅನೇಕ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಹಿಟ್ ಆಗಿವೆ. ಈ ವರ್ಷ ರಿಲೀಸ್ ಆಗಲಿರುವ ಪ್ಯಾನ್ ಇಂಡಿಯಾ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.
ಮಾರ್ಟಿನ್
ಈ ಸಿನಿಮಾ 2023ರಲ್ಲೇ ರಿಲೀಸ್ ಆಗಲಿದೆ. ಎಪಿ ಅರ್ಜುನ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಕ್ಲೈಮ್ಯಾಕ್ಸ್ನ 50 ದಿನಗಳ ಕಾಲ ಶೂಟ್ ಮಾಡಲಾಗಿದೆ. ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿರುವ ಮಾರ್ಟಿನ್ ಸಿನಿಮಾದಲ್ಲಿ ಮಾಸ್ ಆಗಿ ಧ್ರುವ ಸರ್ಜಾ ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂನಲ್ಲಿ ಮೂಡಿ ಬರುತ್ತಿದೆ. ಅದ್ಧೂರಿ ಬಜೆಟ್ ಮತ್ತು ಮೇಕಿಂಗ್‌ನಿಂದಾಗಿ ಸದ್ದು ಮಾಡುತ್ತಿರುವ ಈ ಸಿನಿಮಾ ಕ್ಲೈಮ್ಯಾಕ್ಸ್ ಆ್ಯಕ್ಷನ್ ದೃಶ್ಯಗಳಿಗೆ ರಾಮ್-ಲಕ್ಷ್ಮಣ್ ಮತ್ತು ರವಿವರ್ಮ ಸಾಹಸ ನಿರ್ದೇಶನ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಒಂದು ಸಿನಿಮಾದ ಕ್ಲೈಮ್ಯಾಕ್ಸ್‌ಗಾಗಿ ಮೂರು ಸಾಹಸ ನಿರ್ದೇಶಕರು ಕೆಲಸ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ʻಘೋಸ್ಟ್’
ದಸರಾ ಪ್ರಯುಕ್ತ ಈ ಚಿತ್ರ ಅಕ್ಟೋಬರ್ 19ರಂದು (Ghost Release On Oct19th) ರಿಲೀಸ್ ಆಗಲಿದೆ.ಶಿವರಾಜಕುಮಾರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. ಮುಖ ಪಾತ್ರದಲ್ಲಿ ಕೆಜಿಎಫ್ ಖ್ಯಾತಿಯ ನಟಿ ಅರ್ಚನಾ ಜೋಯಿಸ್ ಕಾಣಿಸಿಕೊಳ್ಳಲಿದ್ದಾರೆ. ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್ ಮಾಂಕ್ ಸಿನಿಮಾ ಖ್ಯಾತಿಯ ಎಂ.ಜಿ.ಶ್ರೀನಿವಾಸ್ ಅವರು ಘೋಸ್ಟ್ ಸಿನಿಮಾನವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾಗೆ ಅರ್ಜುನ್ ಜನ್ಯ ಸಂಗೀತ ಇದ್ದರೆ, ಸಂದೇಶ್ ನಾಗರಾಜ್ ನಿರ್ಮಾಪಕರಾಗಿದ್ದಾರೆ.
ಖುಷಿ
ಇದೇ ಸೆಪ್ಟೆಂಬರ್ 1ರಂದು ಸಿನಿಮಾ ವಿಶ್ವಾದ್ಯಂತ ಬಿಡುಗಡೆಯಾಗುತ್ತಿದೆ.2018ರ ಮಹಾನಟಿ ಚಿತ್ರದ ನಂತರ ವಿಜಯ್ ಹಾಗೂ ಸ್ಯಾಮ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಖುಷಿ ಚಿತ್ರವನ್ನು ಶಿವ ನಿರ್ವಾಣ ನಿರ್ದೇಶಿಸುತ್ತಿದ್ದಾರೆ. ಕಳೆದ ವರ್ಷ ಸಮಂತಾ ಅವರ ಮೈಯೋಸಿಟಿಸ್ ನಿಂದಾಗಿ ಖುಷಿ ಸಿನಿಮಾ ರಿಲೀಸ್ ವಿಳಂಬವಾಗಬಹುದು ಎಂಬ ವದಂತಿಗಳು ಹಬ್ಬಿದ್ದವು. ವಿಜಯ್ ದೇವರಕೊಂಡ, ಸಮಂತಾ, ಜಯರಾಮ್, ಸಚಿನ್ ಖೇಡಕರ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್, ಶರಣ್ ಮುಂತಾದ ಅದ್ಭುತ ನಟ, ನಟಿಯರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ, ಪೀಟರ್ ಹೆನ್ಸ್ ಸಾಹಸ ನಿರ್ದೇಶನ, ಪ್ರವೀನ್ ಪುಡಿ ಅವರ ಸಂಕಲನ, ಜಿ ಮುರಳಿ ಕ್ಯಾಮೆರಾ ಕೆಲಸ ಮಾಡಿದೆ. ಹೇಶಮ್ ಅಬ್ದುಲ್ ವಹಾಬ್ ಅವರ ಸಂಗೀತವಿದೆ.ಮೈತ್ರಿ ಮೂವಿ ಮೇಕರ್ಸ್ ಈ ಚಿತ್ರವನ್ನು ನಿರ್ಮಿಸುತ್ತಿದೆ.
‘ಜವಾನ್’
ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಜವಾನ್ ಪ್ರಿವ್ಯೂ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸುತ್ತಿದ್ದು, ಅಟ್ಲಿಯವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರದ ಮ್ಯೂಸಿಕ್ ರೈಟ್ಸ್ ಈಗಾಗಲೇ 36 ಕೋಟಿ ರೂ. ಮಾರಾಟವಾಗಿದೆ ಎಂದು ವರದಿಯಾಗಿದೆ.
ಶಾರುಖ್ ಜತೆಗೆ, ಜವಾನ್ ಸಿನಿಮಾದಲ್ಲಿ ನಯನತಾರಾ, ವಿಜಯ್ ಸೇತುಪತಿ ಮತ್ತು ಸನ್ಯಾ ಮಲ್ಹೋತ್ರಾ ಕೂಡ ನಟಿಸಿದ್ದಾರೆ. ಈ ಹಿಂದೆ ದೀಪಿಕಾ ಪಡುಕೋಣೆ ಕೂಡ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಇದೀಗ ದೀಪಿಕಾ ನಟಿಸುತ್ತಿರುವುದು ಕನ್‌ಫರ್ಮ್ ಆಗಿದೆ. ಈ ಹಿಂದೆ ಬಿಡುಗಡೆಯಾದ ಟೀಸರ್‌ನಲ್ಲಿ ಶಾರುಖ್ ಬ್ಯಾಂಡೇಜ್‌ನಲ್ಲಿ ಕಾಣಿಸಿಕೊಂಡಿದ್ದರು. ಜವಾನ್ ಶಾರುಖ್ ಖಾನ್ ಸಿನಿಮಾವೇ ಆದರೂ ಇದು ದಕ್ಷಿಣ ಭಾರತದ ನಾಯಕಿ, ನಿರ್ದೇಶಕ ಮತ್ತು ತಂತ್ರಜ್ಞರನ್ನು ಒಳಗೊಂಡಿರುವುದರಿಂದ ಇದು ದಕ್ಷಿಣ ಭಾರತದ ಪ್ರೊಡಕ್ಟ್ ಆಗಿಯೂ ಗಮನ ಸೆಳೆದಿದೆ.
ಇದನ್ನೂ ಓದಿ: Kannada New Movie: ’ತುಕ್ರ-ತನಿಯ’ ಸಿನಿಮಾಗೆ ದುನಿಯಾ ವಿಜಯ್ ಸಾಥ್!
ಚಂದ್ರಮುಖಿ 2
ಪಿ ವಾಸು ಅವರು ನಿರ್ದೇಶನ ಮಾಡಿರುವ ಚಂದ್ರಮುಖಿ 2 ಸಿನಿಮಾ ಐದು ಭಾಷೆಗಳಲ್ಲಿ ಈ ಗಣೇಶ ಚತುರ್ಥಿ ಹಬ್ಬಕ್ಕೆ ಬಿಡುಗಡೆಯಾಗುತ್ತದೆ. ಚಂದ್ರಮುಖಿ ಸಿನಿಮಾದಲ್ಲಿ ರಜನಿಕಾಂತ್ ಮತ್ತು ನಟಿ ಜ್ಯೋತಿಕಾ ಅವರು ನಟಿಸಿದ್ದರು. ಕನ್ನಡದ ಆಪ್ತಮಿತ್ರ ಸಿನಿಮಾವನ್ನೇ ಚಂದ್ರಮುಖಿ ಸಿನಿಮಾವನ್ನಾಗಿ ರಿಮೇಕ್ ಮಾಡಲಾಗಿತ್ತು. ಇದೀಗ ಚಂದ್ರಮುಖಿ 2 ಸಿನಿಮಾದಲ್ಲಿ ರಜನಿಕಾಂತ್ ಅವರ ವೆಟ್ಟೈಯಾನ್ ಪಾತ್ರವನ್ನು ರಾಘವ್ ಅವರು ನಿಭಾಯಿಸಿದ್ದಾರೆ.
ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಹಾಡಿನ ಮೂಲಕ ಆಸ್ಕರ್ ಪ್ರಶಸ್ತಿಯನ್ನು ಪಡೆದುಕೊಂಡಿರುವ ಸಂಗೀತ ಸಂಯೋಜಕ ಎಂಎಂ ಕೀರವಾಣಿ ಅವರು ಈ ಸಿನಿಮಾಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಾಘವ, ಕಂಗನಾ ರಣಾವತ್ ಮೊದಲಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.
‘ಸಲಾರ್: ಪಾರ್ಟ್-1 ಸೀಸ್ಫೈರ್’
ಈ ಸಿನಿಮಾ ಸೆಪ್ಟೆಂಬರ್ 28ರಂದು ರಿಲೀಸ್ ಆಗುತ್ತಿದೆ. ತೆಲುಗು, ಕನ್ನಡ ಸೇರಿ ಐದು ಭಾಷೆಗಳಲ್ಲಿ ಸಿನಿಮಾ ಬಿಡುಗಡೆ ಆಗಲಿದೆ. ದೊಡ್ಡ ಪಾತ್ರವರ್ಗದ ಕಾರಣದಿಂದಲೂ ಚಿತ್ರ ಗಮನ ಸೆಳೆಯುತ್ತಿದೆ. ಕನ್ನಡದ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ.ಎಲ್ಲೆಡೆ ಸಿನಿಮಾ ಬಿಡುಗಡೆಗೆ ಮೊದಲೇ ಭಾರೀ ಸದ್ದು ಮಾಡುತ್ತಿದ್ದು, ಈ ಸಿನಿಮಾ ಪ್ರಭಾಸ್‌ಗೆ ಮತ್ತೆ ಒಳ್ಳೆಯ ಫೇಮ್ ಒಂದನ್ನು ತಂದುಕೊಡುವ ನಿರೀಕ್ಷೆಯಿದೆ. ಬಹು ನಿರೀಕ್ಷೆಯ ಸಲಾರ್ ಸಿನಿಮಾದಲ್ಲಿ ನಟಿ ಶ್ರುತಿ ಹಾಸನ್ ಅವರು ನಾಯಕ ನಟಿಯಾಗಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್ ಸೇರಿ ಅನೇಕರು ಈ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಗೇಮ್ ಚೇಂಜರ್
2019 ರಲ್ಲಿ ಬಿಡುಗಡೆಯಾದ ವಿನಯ ವಿಧೇಯ ರಾಮ ಚಿತ್ರದ ನಂತರ ರಾಮ್ ಚರಣ್ ಮತ್ತು ಕಿಯಾರಾ ಆಡ್ವಾಣಿ ಈ ಸಿನಿಮಾದಲ್ಲಿ ಮತ್ತೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಜಯರಾಮ್, ಅಂಜಲಿ ಸುನೀಲ್, ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್ ಥಮನ್ ಚಿತ್ರದ ಹಾಡುಗಳು ಮತ್ತು ಹಿನ್ನೆಲೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ತಿರು ಮತ್ತು ಆರ್.ರತ್ನವೇಲು ಛಾಯಾಗ್ರಹಣ, ಶಮೀರ್ ಮಹಮ್ಮದ್ ಸಂಕಲನ ಚಿತ್ರಕ್ಕಿದೆ. ಖ್ಯಾತ ನಿರ್ದೇಶಕ ಶಂಕರ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ಲಿಯೋ
ದಳಪತಿ ವಿಜಯ್ ನಟನೆಯ ‘ಲಿಯೋ’ ಸಿನಿಮಾದ ಕೆಲಸಗಳು ಭರದಿಂದ ಸಾಗುತ್ತಿವೆ. ಈ ವರ್ಷವೇ ಚಿತ್ರವನ್ನು ತೆರೆಗೆ ತರಬೇಕು ಎನ್ನುವ ಗುರಿಯನ್ನು ಲೋಕೇಶ್ ಕನಗರಾಜ್ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ಹಲವು ಭಾಷೆಗಳಲ್ಲಿ ರಿಲೀಸ್ ಆಗಲಿದೆ.
ʼಲಿಯೋʼ ಚಿತ್ರದಲ್ಲಿ ಸಂಜಯ್ ದತ್ ಅಣ್ಣನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ದಳಪತಿ ವಿಜಯ್ (Thalathy Vijay) ಹಾಗೂ ಲೋಕೇಶ್ ಕನಕರಾಜ್ ಲಿಯೋ ಸಿನಿಮಾ ಸಖತ್ ಹೈಪ್ ಕ್ರಿಯೇಟ್ ಮಾಡುತ್ತಿದೆ. ಈಗಾಗಲೆ ಸಿನಿಮಾದ ಫಸ್ಟ್ ಲುಕ್ ಹಾಗೂ ಮೊದಲ ಸಾಂಗ್ ʻನಾ ರೆಡಿʼ ಬಿಡುಗಡೆಗೊಂಡಿದೆ. ಮಾಸ್ಟರ್ʼ ಸಿನಿಮಾ ಬಳಿಕ ವಿಜಯ್ ಮತ್ತು ಲೋಕೇಶ್ ಕನಕರಾಜ್ ಮತ್ತೆ ಈ ಸಿನಿಮಾ ಮೂಲಕ ಒಂದಾಗಿದ್ದಾರೆ. ಲಿಯೋದಲ್ಲಿ ತ್ರಿಶಾ, ಸಂಜಯ್ ದತ್, ಅರ್ಜುನ್, ಪ್ರಿಯಾ ಆನಂದ್, ಗೌತಮ್ ವಾಸುದೇವ್ ಮೆನನ್, ಮನ್ಸೂರ್ ಅಲಿ ಖಾನ್, ಸ್ಯಾಂಡಿ ಮತ್ತು ಮಿಸ್ಕಿನ್ ಸಹ ನಟಿಸಿದ್ದಾರೆ.
ದೇವರ
2016ರಲ್ಲಿ ಇವರು ಜನತಾ ಗ್ಯಾರೇಜ್ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ಅದರಲ್ಲಿ ಕೂಡ ಜ್ಯೂನಿಯರ್ ಎನ್‌ಟಿಆರ್ ನಾಯಕನಾಗಿದ್ದರು. ಅದಾದ ಮೇಲೆ ಕೊರಟಾಲ ಶಿವ ಅವರೊಟ್ಟಿಗೆ ಜ್ಯೂ.ಎನ್‌ಟಿಆರ್ ಯಾವುದೇ ಸಿನಿಮಾವನ್ನೂ ಮಾಡಿರಲಿಲ್ಲ. ಇದೀಗ ‘ದೇವರ’ ಮೂಲಕ ಒಂದಾಗಿದ್ದಾರೆ. ದೇವರ ಸಿನಿಮಾದಲ್ಲಿ ಜ್ಯೂನಿಯರ್ ಎನ್‌ಟಿಆರ್ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ವದಂತಿಯೂ ಇದೆ. ಅಪ್ಪ-ಮಗ ಎರಡೂ ಪಾತ್ರದಲ್ಲಿ ಇವರೇ ಅಭಿನಯ ಮಾಡಲಿದ್ದಾರಂತೆ. ಇದೊಂದು ಪಕ್ಕಾ ಆ್ಯಕ್ಷನ್ ಚಿತ್ರದಂತೆ ಕಾಣಿಸುತ್ತಿದೆ. ಈ ಸಿನಿಮಾ 2024ರ ಏಪ್ರಿಲ್ 5ರಂದು ತೆಲುಗು, ತಮಿಳು, ಹಿಂದಿ, ಕನ್ನಡ ಮತ್ತು ಮಲಯಾಳಂಗಳಲ್ಲಿ ಬಿಡುಗಡೆಯಾಗಲಿದೆ.ಯುವಸುಧಾ ಆರ್ಟ್ಸ್ ಮತ್ತು ಜ್ಯೂನಿಯರ್ ಎನ್‌ಟಿಆರ್ ಆರ್ಟ್ಸ್ ಈ ಚಿತ್ರವನ್ನು ನಿರ್ಮಿಸಿದ್ದು, ನಂದಮೂರಿ ಕಲ್ಯಾಣ್ ರಾಮ್ ಅವರು ಪ್ರಸ್ತುತಪಡಿಸಿದ್ದಾರೆ.
ಪುಷ್ಪ 2
ಪಾರ್ಟ್ ಈಗಾಗಲೇ ರಿಲೀಸ್ ಆಗಿ ಭರ್ಜರಿ ಮೆಚ್ಚುಗೆ ಪಡೆದಿದೆ. ಎರಡನೇ ಪಾರ್ಟ್ ಕೂಡ ರಿಲೀಸ್ಗೆ ರೆಡಿ ಆಗುತ್ತಿದೆ. ಸುಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮೊದಲಾದವರು ನಟಿಸಿದ್ದಾರೆ.
ಇದನ್ನೂ ಓದಿ: Sanjay Dutt: ಸೌತ್ ಸಿನಿಮಾ ಆಯ್ತು ಈಗ ಪಂಜಾಬಿ ಸಿನಿಮಾದತ್ತ ಸಂಜಯ್ ದತ್!
ಇಂಡಿಯನ್ 2
‘ವಿಕ್ರಮ್’ ಗೆಲುವಿನ ಬಳಿಕ ಕಮಲ್ ಹಾಸನ್ ಅವ ಚಾರ್ಮ್ ಹೆಚ್ಚಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರಕ್ಕೆ ಶಂಕರ್ ನಿರ್ದೇಶನ ಇದೆ.
ಸಿದ್ಧಾರ್ಥ್ ಇಂಡಿಯನ್ 2 ಸಿನಿಮಾದಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ವರದಿ ಪ್ರಕಾರ, ಅವರು ಕಮಲ್ ಹಾಸನ್ ಪಾತ್ರದಲ್ಲಿ ಮೊಮ್ಮಗನಾಗಿ ಕಾಣಿಸಿಕೊಳ್ಳಲಿದ್ದಾರೆ. 2003ರಲ್ಲಿ ತಮಿಳು ಚಲನಚಿತ್ರ ಬಾಯ್ಸ್ ಸಿನಿಮಾದಲ್ಲಿ ಸಿದ್ಧಾರ್ಥ್ ನಟಿಸಿದ್ದರು. ವಿಶೇಷ ಅಂದರೆ ಈ ಸಿನಿಮಾ ನಿರ್ದೇಶಿಸಿದ್ದು ಶಂಕರ್. ಇದೀಗ ಎರಡನೇ ಬಾರಿಗೆ ಶಂಕರ್ ಹಾಗೂ ಸಿದ್ಧಾರ್ಥ್ ಒಟ್ಟಿಗೆ ಕೆಲಸ ಮಾಡುವಂತಾಗಿದೆ.
ಕಲ್ಕಿ 2898 ಎಡಿ
. ‘ಪ್ರಾಜೆಕ್ಟ್ ಕೆ’ ಚಿತ್ರದಲ್ಲಿ ಪ್ರಭಾಸ್ ಅವರು ಕಲ್ಕಿ ಅವತಾರ ತಾಳಿದ್ದಾರೆ. ಈ ಸಿನಿಮಾದಲ್ಲಿ ಅನೇಕ ಸೂಪರ್ ಹೀರೊ ಮಾದರಿಯ ಪಾತ್ರಗಳು ಕಾಣಿಸಿವೆ. ದೀಪಿಕಾ ಪಡುಕೋಣೆ ಅವರು ಕೂಡ ‘ಕಲ್ಕಿ 2898-ಎಡಿ’ ಚಿತ್ರದಲ್ಲಿದ್ದಾರೆ. ಅವರ ಪಾತ್ರ ಕೂಡ ಇಲ್ಲಿ ಕಾಣಿಸಿದೆ.ಅಮಿತಾಭ್ ಬಚ್ಚನ್ ಅವರ ಮುಖವನ್ನು ಮಾತ್ರ ತೋರಿಸಲಾಗಿದೆ. ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರ ಈ ವರ್ಷವೇ ರಿಲೀಸ್ ಆಗಲಿದೆಯೇ ಇಲ್ಲವೋ ಎಂಬುದು ಚಿತ್ರತಂಡ ಮಾಹಿತಿ ಹಂಚಿಕೊಂಡಿಲ್ಲ.