ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್ (Dolly Dhanjay) ತಮ್ಮದೇ ಡಾಲಿ ಪಿಕ್ಚರ್ಸ್‌ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ ಶೂಟಿಂಗ್ ಮುಕ್ತಾಯಗೊಂಡಿದೆ. ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜತೆ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಳೆದ ನವೆಂಬರ್ ನಲ್ಲಿ ಸೆಟ್ಟೇರಿದ ಟಗರು ಪಲ್ಯ ಸಿನಿಮಾ ಶೂಟಿಂಗ್ ಈಗ ಮುಗಿದಿದ್ದು, ಕುಂಬಳಕಾಯಿ ಒಡೆದು ಪೂರ್ಣಗೊಳಿಸಲಾಗಿದೆ.
ಮಂಡ್ಯ, ಮಳವಳ್ಳಿ, ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಮೂರನೇ ಕೊಡುಗೆ ಟಗರು ಪಲ್ಯ. ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
ಡಾಲಿ ಧನಂಜಯ್ ಪೋಸ್ಟ್
ಡಾಲಿ ಧನಂಜಯ್ ಪೋಸ್ಟ್ ಮಾಡಿ ʻʻ“ಟಗರುಪಲ್ಯ” ಚಿತ್ರೀಕರಣ ಮುಕ್ತಾಯ. ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ. ಕನ್ನಡಕ್ಕೊಬ್ಬ ಹೊಸ ಪ್ರತಿಭಾನ್ವಿತ ನಿರ್ದೇಶಕ, ನಾಯಕನಾಗಿ ನಾಗಭೂಷಣ, ನಾಯಕಿಯಾಗಿ ಅಮೃತಾ ಪ್ರೇಮ್ ಮತ್ತು ಹೊಸ ಪ್ರತಿಭಾನ್ವಿತರ ದಂಡು, ಜತೆಗೆ ರಂಗಾಯಣ ರಘು ಸರ್, ತಾರಮ್ಮ, ಬಿರಾದರ್ ಅವರಂತಹ ಮೇರು ಕಲಾವಿದರ ಹೆಗಲು. ವಾಸುಕಿ ವೈಭವ್ ಸಂಗೀತ ನಿರ್ದೇಶನ ಮತ್ತು ಎಸ್. ಕೆ. ರಾವ್ ಛಾಯಗ್ರಹಣ. ಸದ್ಯದಲ್ಲೆ ನಿಮ್ಮ ಮುಂದೆʼʼಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Vasishta simha and Haripriya: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ ಸಿಂಹ-ಹರಿಪ್ರಿಯಾ
‘ಟಗರು ಪಲ್ಯ’ ಚಿತ್ರದಲ್ಲಿ ಅಮೃತಾ ಪ್ರೇಮ್ ಹಳ್ಳಿ ಹುಡುಗಿ ಪಾತ್ರವನ್ನು ನಿಭಾಯಿಸಿದ್ದಾರೆ. ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡು, ವರ್ಕ್ ಶಾಪ್ ಮೂಲಕ ಸಾಕಷ್ಟು ಕಲಿತು ಹಳ್ಳಿ ಹುಡುಗಿ ಪಾತ್ರಕ್ಕೆ ಜೀವ ತುಂಬಿದ್ದಾರೆ. ಮಂಡ್ಯ ಭಾಗದ ಕಥೆಯನ್ನೊಳ್ಳಗೊಂಡ ಈ ಚಿತ್ರದಲ್ಲಿ ಅಲ್ಲಿನ ಸೊಗಡಿನ ಭಾಷೆ ಕಲಿತು ಅಷ್ಟೇ ಚೆನ್ನಾಗಿ ಅಭಿನಯಿಸಿದ್ದಾರೆ ಎಂದು ಚಿತ್ರತಂಡ ಹೇಳಿಕೊಂಡಿದೆ. ‘ಟಗರು ಪಲ್ಯ’ ಕಟೆಂಟ್ ಆಧಾರಿತ ಸಿನಿಮಾವಾಗಿದ್ದು, ವಾಸುಕಿ ವೈಭವ್ ಸಂಗೀತ ನಿರ್ದೇಶನ, ಎಸ್. ಕೆ. ರಾವ್ ಕ್ಯಾಮೆರಾ ವರ್ಕ್ ಇದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಒಳಗೊಂಡ ದೊಡ್ಡ ತಾರಾಬಳಗ ಸಿನಿಮಾದಲ್ಲಿದೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.