Site icon Vistara News

The Vaccine War Movie: ದಿ ವ್ಯಾಕ್ಸಿನ್ ವಾರ್ ಸಿನಿಮಾ ಟ್ರೈಲರ್ ಔಟ್, ಜನರಿಂದ ಸಖತ್ ರೆಸ್ಪಾನ್ಸ್!

The Vaccine War

ನವದೆಹಲಿ: ದಿ ಕಾಶ್ಮೀರ್ ಫೈಲ್ಸ್ (The Kashmir Files) ಚಿತ್ರದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ನಿರ್ದೇಶನದ ದಿ ವ್ಯಾಕ್ಸಿನ್ ವಾರ್ (the vaccine war trailer) ಚಿತ್ರದ ಟ್ರೈಲರ್ ಮಂಗಳವಾರ ಲಾಂಚ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸಿದೆ. ಕಾಂತಾರ ಚಿತ್ರದ ನಟಿ ಸಪ್ತಮಿ ಗೌಡ (Saptami Gowda) ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ದಿ ವ್ಯಾಕ್ಸಿನ್ ವಾರ್ ಸಿನಿಮಾ ಇದೇ ತಿಂಗಳು 28ಕ್ಕೆ ತೆರೆಗೆ ಅಪ್ಪಳಿಸಲಿದೆ. ಟ್ರೈಲರ್ ಲಾಂಚ್ ಆದ ಕೆಲವೇ ಗಂಟೆಗಳಲ್ಲಿ 20 ಲಕ್ಷಕ್ಕೂ ಅಧಿಕ ವೀವ್ಸ್ ಕಂಡಿದೆ. ಈ ಚಿತ್ರದಲ್ಲಿ ಅನುಪಮ್ ಖೇರ್, ನಾನಾ ಪಾಟೇಕರ್ ಹಾಗೂ ಪಲ್ಲವಿ ಜೋಶಿ ಕೂಡ ಅಭಿನಯಿಸಿದ್ದಾರೆ.

ದಿ ವ್ಯಾಕ್ಸಿನ್ ವಾರ್ ಚಿತ್ರವು ಹಿಂದಿ, ಇಂಗ್ಲಿಷ್, ತೆಲುಗು, ತಮಿಳು, ಮಲಯಾಳಂ, ಕನ್ನಡ, ಭೋಜ್‌ಪುರಿ, ಪಂಜಾಬಿ, ಗುಜರಾತಿ, ಮರಾಠಿ ಮತ್ತು ಬೆಂಗಾಲಿ ಸೇರಿದಂತೆ 10 ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

ಟ್ರೈಲರ್‌ಗೆ ಭಾರೀ ಮೆಚ್ಚುಗೆ

ದಿ ವ್ಯಾಕ್ಸಿನ್ ವಾರ್ ಚಿತ್ರದ ಟ್ರೈಲರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ಭಾರತ ಸರ್ಕಾರವು ದಿಟ್ಟ ನಿಲುವ ತಾಳಿ, ದೇಶಿಯವಾಗಿ ಕೋವಿಡ್ ಲಸಿಕೆ ಸಿದ್ಧಪಡಿಸಲು ನೆರವು ನೀಡಿತು. ಈ ವೇಳೆ, ಕೆಲವರು ಭಾರತದ ಔಷಧಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದರು. ದೇಶದ ವಿಜ್ಞಾನಿಗಳು, ಕೇಂದ್ರ ಸರ್ಕಾರವು ಹೇಗೆ ಕಷ್ಟದ ಸಮಯದಲ್ಲಿ ಯಶಸ್ಸನ್ನು ಕಂಡವು ಎಂಬುದನ್ನು ಈ ಸಿನಿಮಾ ತೋರಿಸುತ್ತದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಬಿಡುಗಡೆಯಾಗಿದ್ದ ಟೀಸರ್‌ಗೂ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು.

ಈ ಸುದ್ದಿಯನ್ನೂ ಓದಿ: Salaar Movie : ಸಲಾರ್ ವಿರುದ್ಧ ಅಗ್ನಿಹೋತ್ರಿಯ ವ್ಯಾಕ್ಸಿನ್ ‘ವಾರ್​’

ಬಾಲಿವುಡ್‌ನಲ್ಲಿ ಸಪ್ತಮಿ ಗೌಡ

ಸಪ್ತಮಿ ಗೌಡ ಅವರಿಗೆ ಇದು ಮೊದಲನೇ ಬಾಲಿವುಡ್‌ ಸಿನಿಮಾ. ಅಷ್ಟೇ ಅಲ್ಲದೇ ಯಂಗ್‌ ರೆಬೆಲ್‌ ಸ್ಟಾರ್‌ ಅಭಿಷೇಕ್‌ ಅಂಬರೀಶ್‌ ಅವರ ʼಕಾಳಿʼ ಸಿನಿಮಾದಲ್ಲಿಯೂ ಸಪ್ತಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಪೈಲ್ವಾನ್‌, ಗಜಕೇಸರಿ, ಹೆಬ್ಬುಲಿ ಚಿತ್ರವನ್ನು ನಿರ್ದೇಶಿಸಿರುವ ಕೃಷ್ಣ ಅವರು ʼಕಾಳಿʼ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್‌ ಅವರ ಕಿರಿಯ ಮಗ ಯುವ ರಾಜ್‌ಕುಮಾರ್‌ ಅವರ ಚೊಚ್ಚಲ ಸಿನಿಮಾ ʻಯುವʼ ಸಿನಿಮಾಗೂ ಸಪ್ತಮಿ ನಾಯಕಿಯಾಗಿ ನಟಿಸುತ್ತಿದ್ದಾರೆ.

ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version