Site icon Vistara News

Shiva Rajkumar: ಭಾರಿ ಮೊತ್ತಕ್ಕೆ ಸೇಲ್‌ ಆಯ್ತು ʻಘೋಸ್ಟ್ ಚಿತ್ರದ ಥಿಯೇಟ್ರಿಕಲ್, ಸ್ಯಾಟಲೈಟ್, ಡಿಜಿಟಲ್ ಹಕ್ಕು!

Theatrical, satellite and digital rights of Ghost

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವ ರಾಜ್‌ಕುಮಾರ್ (Shiva Rajkumar) ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ “ಘೋಸ್ಟ್” ಚಿತ್ರದ ಥಿಯೇಟ್ರಿಕಲ್, ಸ್ಯಾಟಲೈಟ್ ಹಾಗೂ ಡಿಜಿಟಲ್ ಹಕ್ಕು ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಕನ್ನಡದ ಖ್ಯಾತ ನಿರ್ಮಾಣ ಸಂಸ್ಥೆ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ಎನ್ ನಿರ್ಮಿಸಿರುವ, ಶ್ರೀನಿ ನಿರ್ದೇಶನದ ಈ ಸಿನಿಮಾ ಮತ್ತೆ ಸುದ್ದಿಯಲ್ಲಿದೆ .”ಆರ್ ಆರ್ ಆರ್”, “ಜವಾನ್” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ವಿತರಣೆ ಮಾಡಿರುವ ಪೆನ್ ಸ್ಟುಡಿಯೊ ಸಂಸ್ಥೆ ಈಗ “ಘೋಸ್ಟ್” ಚಿತ್ರದ ವಿತರಣಾ ಹಕ್ಕನ್ನು ಪಡೆದುಕೊಂಡಿದೆ.

ಈಗ ‘ಘೋಸ್ಟ್’ ಚಿತ್ರದ ತೆಲುಗು ಹಾಗೂ ಹಿಂದಿಯ ವಿತರಣಾ ಹಕ್ಕನ್ನು ಪಡೆದುಕೊಂಡಿದೆ ಎಂದು ಸಂದೇಶ್ ತಿಳಿಸಿದ್ದಾರೆ. ಅಂದಹಾಗೆ, ಎಷ್ಟು ಕೋಟಿ ಬಿಸ್ನೆಸ್ ಆಗಿದೆ ಎನ್ನುವ ಲೆಕ್ಕಾಚಾರವನ್ನು ತಂಡದವರು ನೀಡಿಲ್ಲ. ಇತ್ತೀಚೆಗೆ ಪೆನ್ ಸ್ಟುಡಿಯೊ ಸಂಸ್ಥೆ ಮುಖ್ಯಸ್ಥರಾದ ಜಯಂತಿ ಲಾಲ್ ಗಡ ಹಾಗೂ ನಿರ್ಮಾಪಕ ಸಂದೇಶ್ ಈ ಕುರಿತು ಮಾತನಾಡಿದ್ದರು. ಅಕ್ಟೋಬರ್ ಮೊದಲವಾರ “ಘೋಸ್ಟ್” ಚಿತ್ರದ ಪ್ರಚಾರಕ್ಕಾಗಿ ಶಿವ ರಾಜ್‌ಕುಮಾರ್ ಮುಂಬೈ, ದೆಹಲಿ ಮುಂತಾದ ಕಡೆ ತೆರಳುತ್ತಿದ್ದಾರೆ ಎಂದು ನಿರ್ಮಾಪಕರು ಮಾಹಿತಿ ನೀಡಿದ್ದಾರೆ‌.

ಬಾಲಿವುಡ್‌ ನಟ ಅನುಪಮ್‌ ಖೇರ್‌, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಕೆಜಿಎಫ್‌ ಖ್ಯಾತಿಯ ನಟಿ ಅರ್ಚನಾ ಜೋಯಿಸ್ ಕಾಣಿಸಿಕೊಳ್ಳಲಿದ್ದಾರೆ. ಟೋಪಿವಾಲ, ಶ್ರೀನಿವಾಸ ಕಲ್ಯಾಣ, ಓಲ್ಡ್‌ ಮಾಂಕ್‌ ಸಿನಿಮಾ ಖ್ಯಾತಿಯ ಎಂ.ಜಿ.ಶ್ರೀನಿವಾಸ್‌ ಅವರು ಘೋಸ್ಟ್‌ ಸಿನಿಮಾನವನ್ನು ನಿರ್ದೇಶಿಸುತ್ತಿದ್ದಾರೆ. ಸಿನಿಮಾಗೆ ಅರ್ಜುನ್‌ ಜನ್ಯಾ ಸಂಗೀತ ಇದ್ದರೆ, ಸಂದೇಶ್‌ ನಾಗರಾಜ್‌ ನಿರ್ಮಾಪಕರಾಗಿದ್ದಾರೆ.ಅಕ್ಟೋಬರ್ 19ರಂದು ಸಿನಿಮಾ ರಿಲೀಸ್ ಆಗಲಿದೆ.

ಇದನ್ನೂ ಓದಿ: Shivarajkumar: ಘೋಸ್ಟ್‌ ಸಿನಿಮಾದ ಮೋಷನ್‌ ಪೋಸ್ಟರ್‌ ಹಂಚಿಕೊಂಡ ಶಿವಣ್ಣ, ಟ್ರೈಲರ್‌ ರಿಲೀಸ್‌ ಯಾವಾಗ?

ಶೂಟಿಂಗ್‌ ಶುರುವಾದ `ಭೈರತಿ ರಣಗಲ್’

ಜೈಲರ್‌ ಸಿನಿಮಾದಿಂದ ಶಿವಣ್ಣನ ಖ್ಯಾತಿ ಹೆಚ್ಚಿದೆ. ಅಷ್ಟೇ ಅಲ್ಲದೇ ಹಲವು ಸಿನಿಮಾಗಳಲ್ಲಿ ಹ್ಯಾಟ್ರಿಕ್‌ ಹೀರೊ ಬ್ಯುಸಿಯಾಗಿದ್ದಾರೆ. ‘ಮಫ್ತಿ’ ಸಿನಿಮಾದಲ್ಲಿ ಭೈರತಿ ರಣಗಲ್ ಆಗಿ ಸಾಕಷ್ಟು ಗಮನ ಸೆಳೆದಿದ್ದರು ಶಿವಣ್ಣ (Shiva Rajkumar). ಶಿವಣ್ಣ ಅವರ ಹೋಂ ಬ್ಯಾನರ್​ನಲ್ಲಿ ಚಿತ್ರ ಮೂಡಿ ಬರುತ್ತಿದೆ. ‘ಗೀತಾ ಪಿಕ್ಚರ್ಸ್​’ನಲ್ಲಿ ಮೂಡಿ ಬರುತ್ತಿರುವ ಎರಡನೇ ಸಿನಿಮಾ ಇದಾಗಿದೆ. ʻಮಫ್ತಿ’ ಸಿನಿಮಾ ತೆರೆಗೆ ಬಂದಿದ್ದು 2017ರಲ್ಲಿ. ಅಲ್ಲಿಂದ ಇಲ್ಲಿಯವರೆಗೆ ನರ್ತನ್ ಅವರು ಯಾವುದೇ ಸಿನಿಮಾ ಘೋಷಣೆ ಆಗಿಲ್ಲರಲಿಲ್ಲ.

Exit mobile version