Tootu Madike | ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ 'ತೂತು ಮಡಿಕೆ' ಅನಾವರಣಕ್ಕೆ ಕ್ಷಣಗಣನೆ! - Vistara News

ಸಿನಿಮಾ

Tootu Madike | ಸ್ಯಾಂಡಲ್‌ವುಡ್‌ನಲ್ಲಿ ಹೊಸಬರ ‘ತೂತು ಮಡಿಕೆ’ ಅನಾವರಣಕ್ಕೆ ಕ್ಷಣಗಣನೆ!

ಹೊಸಬರೇ ಸೇರಿಕೊಂಡು ಮಾಡಿದ ಚಿತ್ರ ತೂತು ಮಡಿಕೆ (Tootu Madike) ಈ ವಾರ ತೆರೆ ಕಾಣಲಿದೆ. ರಾಜ್ಯಾದ್ಯಂತ 80 ಥಿಯೇಟರ್‌ಗಳಲ್ಲಿ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ.

VISTARANEWS.COM


on

Tootu Madike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು : ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಹೊಸಬರ ಅಬ್ಬರ ಬಲು ಜೋರಾಗಿದೆ. ಅದರಲ್ಲೂ ಕೊರೊನಾ ಕಂಟಕ ತೊಲಗಿದ ನಂತರ ಚಂದನವನದ ಅಂಗಳದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಿದ್ದು, ಕನ್ನಡಿಗರಿಗೆ ಹೊಸ ಬಗೆಯ ಸಿನಿಮಾಗಳನ್ನು ವೀಕ್ಷಿಸುವ ಅವಕಾಶ ದೊರೆಯುತ್ತಿದೆ. ಇದೇ ಸಾಲಿಗೆ ‘ತೂತು ಮಡಿಕೆ’ (Tootu Madike) ಚಿತ್ರ ಕೂಡ ಸೇರ್ಪಡೆಯಾಗಿದೆ. ಟೈಟಲ್‌ ಮೂಲಕವೇ ಗಮನ ಸೆಳೆದಿರುವ ಈ ಚಿತ್ರ ಜುಲೈ 8ರಂದು ರಿಲೀಸ್‌ ಆಗಲಿದೆ.

ಪೋಸ್ಟರ್, ಟ್ರೇಲರ್ ಮತ್ತು ಹಾಡುಗಳ ಮೂಲಕ ನಿರೀಕ್ಷೆಗಳ ಭಾರ ಹೊತ್ತಿರುವ ‘ತೂತು ಮಡಿಕೆ’ ರಾಜ್ಯಾದ್ಯಂತ 80 ಥಿಯೇಟರ್‌ಗಳಲ್ಲಿ ಜುಲೈ 8ರಂದು ರಿಲೀಸ್‌ ಆಗಲಿದೆ. ಕನ್ನಡದಲ್ಲಿ ವಿಭಿನ್ನ ಟೈಟಲ್‌ ಅಡಿ, ಟ್ರೆಂಡಿಂಗ್‌ ಕಥೆಯನ್ನು ಹಿಡಿದು ಬರುವ ಹೊಸಬರ ತಂಡಗಳು ಸಾಕಷ್ಟು ಯಶಸ್ಸು ಗಳಿಸುತ್ತಿದ್ದು, ಸದ್ಯ ‘ತೂತು ಮಡಿಕೆ’ ಕೂಡ ಅದೇ ರೀತಿ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ | ನನ್ನ ಗಮನ ಏನಿದ್ದರೂ ಸಿನಿಮಾಗಳತ್ತ: ರಾಜಕೀಯ ಸೇರುವ ವದಂತಿ ತಳ್ಳಿ ಹಾಕಿರುವ ನಟ ವಿಶಾಲ್‌

‘ತೂತು ಮಡಿಕೆ’ ಮೂಲಕ ರಂಗಭೂಮಿ ಕಲಾವಿದ ಚಂದ್ರಕೀರ್ತಿ ನಿರ್ದೇಶಕರಾಗಲಿದ್ದಾರೆ. ಜತೆಗೆ ಹೀರೋ ಆಗಿಯೂ ಪ್ರೇಕ್ಷಕರ ಮುಂದೆ ಹಾಜರಾಗಲಿದ್ದಾರೆ. ಸಿನಿಮಾ ಬಿಡುಗಡೆಗೆ ಕೌಂಟ್‌ಡೌನ್ ಶುರುವಾಗಿದ್ದು, ಚಿತ್ರತಂಡ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ರಾಜ್ಯದ ವಿವಿಧೆಡೆ ಭರ್ಜರಿಯಾಗಿ ಪ್ರಮೋಷನ್‌ ಕಾರ್ಯ ನಡೆಸುವುದರಲ್ಲಿ ಚಿತ್ರ ತಂಡ ಬಿಜಿಯಾಗಿದೆ.

ತಾರೆಗಳ ಸಾಥ್..!‌

‘ತೂತು ಮಡಿಕೆ’ ಸಿನಿಮಾ ಹೊಸಬರ ಹೊಸ ಪ್ರಯತ್ನವಾಗಿದ್ದರೂ, ಚಿತ್ರಕ್ಕೆ ದೊಡ್ಡ ತಾರಾಬಳಗವೇ ಸಾಥ್‌ ನೀಡಿದೆ. ‘ತೂತು ಮಡಿಕೆ’ ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆಯನ್ನು ಚಂದ್ರಕೀರ್ತಿ ಅವರೇ ಬರೆದಿದ್ದಾರೆ. ಇನ್ನು ಚಂದ್ರಕೀರ್ತಿಗೆ ಜೋಡಿಯಾಗಿ ಗೊಂಬೆಗಳ ಲವ್ ಖ್ಯಾತಿಯ ಪಾವನಾ ಗೌಡ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಪ್ರಮೋದ್ ಶೆಟ್ಟಿ, ಉಗ್ರಂ ಮಂಜು, ಗಿರೀಶ್ ಶಿವಣ್ಣ, ಶಂಕರ್ ಅಶ್ವತ್ಥ್, ಸಿತಾರಾ ನರೇಶ್ ಭಟ್ ಸೇರಿದಂತೆ ದೊಡ್ಡ ತಾರಾಬಳಗ ಈ ಚಿತ್ರದಲ್ಲಿದೆ.

ನಿರ್ಮಾಪಕ ಶಿವಕುಮಾರ್‌ ಹೊಸಬರಿಗೆ ಈ ಚಿತ್ರ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಸರ್ವತ ಸಿನಿ ಗ್ಯಾರೇಜ್ & ಸ್ಪ್ರೆಡಾನ್ ಸ್ಟುಡಿಯೋ ನಿರ್ಮಾಣ ಮಾಡುತ್ತಿದೆ. ಮಧುಸೂದನ್ ಮತ್ತು ಗಿರಿಬಸವ ಪ್ರೊಡಕ್ಷನ್ಸ್ ಬಂಡವಾಳ ಹೂಡಿದ್ದಾರೆ. ನವೀನ್ ಚಲ್ಲ ಛಾಯಾಗ್ರಾಹಣ, ಉಜ್ವಲ್ ಚಂದ್ರ ಸಂಕಲನ ‘ತೂತು ಮಡಿಕೆ’ ಸಿನಿಮಾಗೆ ಇದೆ. ಜುಲೈ 8ಕ್ಕೆ ಕನ್ನಡಿಗರು ಹೊಸಬರ ಹೊಸ ಪ್ರಯತ್ನವನ್ನು ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ | ಎಂಗೇಜ್‌ ಆದ ತಿಥಿ ಸಿನಿಮಾ ಖ್ಯಾತಿಯ ಪೂಜಾ, ಡಿಸೆಂಬರ್‌ನಲ್ಲಿ ಮದುವೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

VISTARANEWS.COM


on

‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕುರಿತು ದಿನಕ್ಕೊಂದು ಹೊಸ ಸುದ್ದಿ ಬರ್ತಿದೆ. ಇದೀಗ ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಚಿತ್ರದ ನಾಯಕಿ ಕಿಯಾರಾ ಅಡ್ವಾಣಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಚಿತ್ರೀಕರಣಕ್ಕೂ ಮೊದಲು ನಿರ್ದೇಶಕರು ಈ ದೃಶ್ಯಗಳು ನಟಿಯ ಕಂಫರ್ಟ್ ಜೋನ್ ಒಳಗೇ ಇರುತ್ತವೆ ಎಂದು ಭರವಸೆ ನೀಡಿದ್ದರು ಎನ್ನಲಾಗಿದೆ. ಆದರೆ, ಚಿತ್ರೀಕರಣ ಮುಗಿದ ನಂತರ ಔಟ್‌ಪುಟ್ ನೋಡಿದ ಕಿಯಾರಾ ಅವರಿಗೆ ಆ ದೃಶ್ಯಗಳು ತೆರೆಯ ಮೇಲೆ ಅತಿ ಎನಿಸಿದೆಯಂತೆ. ಈ ಕಾರಣದಿಂದ ಅವರು ದೃಶ್ಯಗಳನ್ನು ಎಡಿಟ್ ಮಾಡಲು ಕೇಳಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾವನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮತ್ತು ‘ಮಾನ್ಸ್‌ಟರ್ ಮೈಂಡ್ ಕ್ರಿಯೇಷನ್ಸ್’ ಜಂಟಿಯಾಗಿ ನಿರ್ಮಾಣ ಮಾಡುತ್ತಿವೆ. ಜೂನ್ 4ರಂದು ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ರಿಲೀಸ್ ದಿನಾಂಕ ಸದ್ಯಕ್ಕೆ ಮುಂದೂಡಿಕೆ ಆಗಿದೆ. ಹೊಸ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾತುರದಿಂದ ಕಾಯುತ್ತಿದ್ದಾರೆ.

Continue Reading

Latest

ಜೂನಿಯರ್‌ ಡಾಲಿ ಎಂಟ್ರಿ.. ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ

VISTARANEWS.COM


on

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿಗೆ ಗಂಡು ಮಗುವಿನ ಜನನವಾಗಿದೆ. ಗಂಡು ಮಗು ಜನಿಸಿದ ವಿಚಾರವನ್ನು ಧನಂಜಯ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಮಗುವಿನ ಪುಟ್ಟ ಕೈಗಳ ಫೋಟೋ ಶೇರ್‌ ಮಾಡಿದ್ದಾರೆ. ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ 2025ರ ಫೆಬ್ರವರಿ 16ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಮದುವೆಯಾದ ಒಂದು ವರ್ಷದ ಸಂಭ್ರಮದ ಬೆನ್ನಲ್ಲೇ ಈ ಜೋಡಿ ಈಗ ಗಂಡು ಮಗುವನ್ನು ಸ್ವಾಗತಿಸಿದೆ.

Continue Reading

Latest

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

VISTARANEWS.COM


on

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್'

ಆದಿತ್ಯ ಧರ್ ನಿರ್ದೇಶನದ ʼಧುರಂಧರ್’ (ಭಾಗ 1) ಈಗ ಜಪಾನ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬರೋಬ್ಬರಿ 1328 ಕೋಟಿ ರೂಪಾಯಿಗಳಿಗೂ ಹೆಚ್ಚು ಸಂಗ್ರಹ ಮಾಡಿ ದಾಖಲೆ ಬರೆದಿತ್ತು. ಇದೀಗ ಜುಲೈ 10, 2026 ರಂದು ಜಪಾನ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ರಣವೀರ್ ಸಿಂಗ್ ಅವರ ಪವರ್‌ಫುಲ್ ಆಕ್ಷನ್ ಮತ್ತು ಅದ್ಭುತ ಮೇಕಿಂಗ್‌ನಿಂದಾಗಿ ಈ ಸಿನಿಮಾ ಜಪಾನ್ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಅವರಂತಹ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

Continue Reading

Latest

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

VISTARANEWS.COM


on

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಡಾ. ಧನ್ಯತಾ ಈಗ ಹೊಸ ಸಂಭ್ರಮದಲ್ಲಿದ್ದಾರೆ. ಮದುವೆಯಾದ ಕೆಲವು ತಿಂಗಳುಗಳ ನಂತರ ಈ ದಂಪತಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸುಂದರವಾದ ಪೋಸ್ಟ್ ಹಂಚಿಕೊಂಡಿರುವ ಅವರು, Our universe is expanding ಎಂದು ಬರೆಯುವ ಮೂಲಕ ತಂದೆ-ತಾಯಿ ಆಗುತ್ತಿರುವ ಸಂತಸದ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನಟ ಧನಂಜಯ್ ಅವರು 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾ. ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಅದ್ಧೂರಿ ಮದುವೆಯಲ್ಲಿ ಚಿತ್ರರಂಗ ಹಾಗೂ ರಾಜಕೀಯದ ಗಣ್ಯರು ಭಾಗವಹಿಸಿ ಶುಭ ಹಾರೈಸಿದ್ದರು. ಇದೀಗ ಡಾಲಿ ದಂಪತಿ ನೀಡಿರುವ ಈ ಗುಡ್ ನ್ಯೂಸ್ ಕೇಳಿ ಅವರ ಅಭಿಮಾನಿಗಳು ಮತ್ತು ಸ್ಯಾಂಡಲ್‌ವುಡ್‌ನ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

Continue Reading
Advertisement
Latest5 seconds ago

ಬಿಜೆಪಿ ಬಂಗಾಳ ಗೆದ್ದಾಯ್ತು, ಸಿಎಂ ರೇಸ್‌ನಲ್ಲಿ ಯಾರು?

Latest10 minutes ago

ತಮಿಳುನಾಡು: ಬಹುಮತ ಪಡೆಯಲು ದಳಪತಿ ಮುಂದಿರುವ ತಂತ್ರಗಳೇನು?

Latest20 hours ago

ಪಶ್ಚಿಮ ಬಂಗಾಳದಲ್ಲಿ ಕೇಸರಿ, ತಮಿಳುನಾಡಲ್ಲಿ ದಳಪತಿ, ಕೇರಳಂನಲ್ಲಿ ಕಾಂಗ್ರೆಸ್‌ ದರ್ಬಾರ್‌

Latest21 hours ago

ಕೇರಳಂ: ಯುಡಿಎಫ್‌ ಗೆಲುವಿನ ಹಿಂದಿನ ಏಳು ರಣತಂತ್ರ!

Latest21 hours ago

ದಾವಣಗೆರೆ ದಕ್ಷಿಣ ʼಕೈʼ ವಶ, ಸಮರ್ಥ್‌ಗೆ ವಿಜಯಮಾಲೆ

Latest22 hours ago

ಬಾಗಲಕೋಟೆಯಲ್ಲಿ ಕಾಂಗ್ರೆಸ್‌‌‌ನ ಉಮೇಶ್‌ ಮೇಟಿ ಭರ್ಜರಿ ಗೆಲುವು

Latest24 hours ago

ದ್ರಾವಿಡ ನಾಡಲ್ಲಿ ʼದಳಪತಿʼ ಯುಗಾರಂಭ

Rakshit Shetty Richard Anthony Produce By Hombale
ಅವಿಭಾಗೀಕೃತ1 day ago

ಪಂಚರಾಜ್ಯ ವಿಧಾನಸಭಾ ಚುನಾವಣೆ , ಕರ್ನಾಟಕ ಉಪಚುನಾವಣೆ ಫಲಿತಾಂಶದ ಕ್ಷಣಕ್ಷಣದ ಅಪ್‌ಡೇಟ್‌

Latest2 days ago

‘ಟಾಕ್ಸಿಕ್’ ಸಿನಿಮಾದಲ್ಲಿ ಬೋಲ್ಡ್ ದೃಶ್ಯಕ್ಕೆ ಕತ್ತರಿ ಹಾಕಿ ಕಿಯಾರಾ ಅಡ್ವಾಣಿ ಮನವಿ?

Latest3 days ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಬಾಂಗ್ಲಾದೇಶಕ್ಕೆ ಏಕೆ ಟೆನ್ಶನ್‌?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌