ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ (Tribble Riding) ಸಿನಿಮಾದ Yatta Yatta (ಯಟ್ಟಾ ಯಟ್ಟಾ) ಸಾಂಗ್ ರಿಲೀಸ್ ಮಾಡಿದೆ ಚಿತ್ರತಂಡ. ಗೋಲ್ಡನ್ ಸ್ಟಾರ್ ಗಣೇಶ್ ಜತೆ ಮೂವರು ನಾಯಕಿಯರು ಕಾಣಿಸಿಕೊಂಡಿರುವುದು ವಿಶೇಷ. ಮೇಘಾ ಶೆಟ್ಟಿ, ಅದಿತಿ ಪ್ರಭುದೇವ ಮತ್ತು ರಚನಾ ಇಂದರ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.
ಕನ್ನಡ ರ್‍ಯಾಪರ್ ಚಂದನ್ ಶೆಟ್ಟಿ ಬರೆದ ಈ ಹಾಡಿನಲ್ಲಿ ತುಂಬಾ ಚೆನ್ನಾಗಿ ಹಾಡನ್ನು ನಿಭಾಯಿಸಿದ್ದಾರೆ. ಚಂದನ್ ಶೆಟ್ಟಿ ಹಾಡಿರುವ ಈ ಹಾಡನ್ನು ತೆಲುಗು ಸಂಗೀತ ನಿರ್ದೇಶಕ ಸಾಯಿ ಕಾರ್ತಿಕ್ ಸಂಯೋಜನೆ ಮಾಡಿದ್ದಾರೆ. ಯಟ್ಟಾ ಯಟ್ಟಾ ಹಾಡಿಗೆ ಟ್ರೆಂಡಿ ರಿಲಿಕ್ಸ್ ಬರೆದ ಚಂದನ್ ಇದೀಗ ಹಾಡು ಜನರನ್ನು ಸೆಳೆಯುತ್ತಿದೆ. ಚಿತ್ರತಂಡ ಸಿನಿಮಾದ ಶೂಟಿಂಗ್ ವೇಳೆ ನಡೆದ ಘಟನಾವಳಿಗಳನ್ನ ಮೆಲಕು ಹಾಕಿದೆ. ಗಣೇಶ್ ಕೊಂಚ ಅನಾರೋಗ್ಯದ ನಡುವೆಯೂ ಕಾರ್ಯಕ್ರಮದಲ್ಲಿ ಹಾಜರಾಗಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ | Ismart ಜೋಡಿ | ಶೋ ಮೂಲಕ ರಂಜಿಸಲು ಬರುತ್ತಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್
ಕಾಮಿಡಿ, ಪ್ರೇಮಕಥೆ, ಆಕ್ಷನ್ ಹಾಗೂ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರವಿರುವ ಈ ಚಿತ್ರವನ್ನು ಮಹೇಶ್ ಗೌಡ ನಿರ್ದೇಶಿಸುತ್ತಿದ್ದಾರೆ. ‘ಕೃಪಾಳು ಎಂಟರ್‌ಟೈನ್‌ಮೆಂಟ್’ ಲಾಂಛನದಲ್ಲಿ ರಾಮ್ ಗೋಪಾಲ್ ವೈ ಎಂ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಸಾಯಿಕಾರ್ತಿಕ್ ಸಂಗೀತ ನಿರ್ದೇಶನ, ಆನಂದ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿಕ್ರಂ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ರಾಜು, ಭೂಷಣ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಜಯಂತ್ ಕಾಯ್ಕಿಣಿ, ಡಾ. ವಿ. ನಾಗೇಂದ್ರ ಪ್ರಸಾದ್, ಚೇತನ್ ಕುಮಾರ್, ಮಹೇಶ್ ಗೌಡ ಈ ಚಿತ್ರದ ಹಾಡುಗಳನ್ನು ರಚಿಸಿದ್ದಾರೆ. ರಾಜಶೇಖರ್, ಮಹೇಶ್ ಗೌಡ ಸಂಭಾಷಣೆ ಬರೆದಿದ್ದಾರೆ. ಗಣೇಶ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯ ಆಯ್ಕೆ ನಡೆಯುತ್ತಿದೆ. ಸಾಧು ಕೋಕಿಲ, ರವಿಶಂಕರ್, ಕುರಿ ಪ್ರತಾಪ್ ಮುಂತಾದ ತಾರಾಬಳಗ ‘ತ್ರಿಬಲ್ ರೈಡಿಂಗ್’ ಚಿತ್ರದಲ್ಲಿ ಇರಲಿದೆ.
ಇದನ್ನೂ ಓದಿ | Dollu Kannada Movie | ಡೊಳ್ಳು ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಗೋಲ್ಡನ್ ಸ್ಟಾರ್ ಗಣೇಶ್