Triptii Dimri: ತೃಪ್ತಿ ಡಿಮ್ರಿ ಬೆತ್ತಲೆ ಸೀನ್‌; 5 ನಿಮಿಷಕ್ಕೊಮ್ಮೆ ನಟಿಯ ಬಳಿ ರಣಬೀರ್ ಕೇಳಿದ್ದೇನು? - Vistara News

ಬಾಲಿವುಡ್

Triptii Dimri: ತೃಪ್ತಿ ಡಿಮ್ರಿ ಬೆತ್ತಲೆ ಸೀನ್‌; 5 ನಿಮಿಷಕ್ಕೊಮ್ಮೆ ನಟಿಯ ಬಳಿ ರಣಬೀರ್ ಕೇಳಿದ್ದೇನು?

Triptii Dimri: ಸಿನಿಮಾ ಸಕ್ಸಸ್‌ಗೆ ಹಲವಾರು ಕಾರಣಗಳಿದ್ದು, ಅವುಗಳಲ್ಲಿ ರಣಬೀರ್ ಕಪೂರ್ ಅವರ ತೃಪ್ತಿ ಡಿಮ್ರಿ ನಗ್ನವಾಗಿರುವ ಲಿಪ್-ಲಾಕ್ ದೃಶ್ಯ ಕೂಡ ಪ್ರಮುಖ ಕಾರಣ ಎನ್ನಲಾಗುತ್ತಿದೆ.

VISTARANEWS.COM


on

Triptii on intimate scene in animal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ (Triptii Dimri) ʼಅನಿಮಲ್‌ʼ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಎಲ್ಲಾ ದಾಖಲೆಗಳನ್ನು ಮುರಿದು ಮುನ್ನುಗ್ಗುತ್ತಿದೆ. ಇನ್ನೆರಡು ವಾರಗಳಲ್ಲಿ 900 ಕೋಟಿ ರೂ. ಗಳಿಸುವ ಹಂತಕ್ಕೆ ತಲುಪಿದೆ. ಈ ಚಿತ್ರದಲ್ಲಿ ರಣಬೀರ್ ಕಪೂರ್, ರಶ್ಮಿಕಾ ಮಂದಣ್ಣ, ಅನಿಲ್ ಕಪೂರ್, ಬಾಬಿ ಡಿಯೋಲ್, ತೃಪ್ತಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಹೆಚ್ಚಾಗಿ ಸಿನಿಮಾದಲ್ಲಿ ಸೌಂಡ್‌ ಮಾಡಿದ್ದು ನಟಿ ತೃಪ್ತಿ ಡಿಮ್ರಿ ಅವರ ಬೆತ್ತಲೆ ಸೀನ್‌. ಸಿನಿಮಾ ಸಕ್ಸೆಸ್‌ಗೆ ಹಲವಾರು ಕಾರಣಗಳಿದ್ದು, ಅವುಗಳಲ್ಲಿ ರಣಬೀರ್ ಕಪೂರ್ ಅವರ ಜತೆ ತೃಪ್ತಿ ಡಿಮ್ರಿ ನಗ್ನವಾಗಿರುವ ಲಿಪ್-ಲಾಕ್ ದೃಶ್ಯ ಕೂಡ ಪ್ರಮುಖ ಕಾರಣ ಎನ್ನಲಾಗುತ್ತಿದೆ.

ಚಿತ್ರದಲ್ಲಿ ತೃಪ್ತಿ ಡಿಮ್ರಿ ಅವರು ʻಜೋಯಾʼ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಪಾತ್ರದ ತೃಪ್ತಿ ಡಿಮ್ರಿ ಅಭಿನಯವನ್ನು ವಿಮರ್ಶಕರು ಮತ್ತು ಪ್ರೇಕ್ಷಕರು ಶ್ಲಾಘಿಸಿದ್ದಾರೆ. ಇತ್ತೀಚಿನ ಮಾಧ್ಯಮದ ಸಂದರ್ಶನವೊಂದರಲ್ಲಿ “ಜೋಯಾʼ ತಮ್ಮ ಬೋಲ್ಡ್‌ ಸೀನ್‌ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡರು. ಮಾತ್ರವಲ್ಲ ಬೋಲ್ಡ್‌ ಸೀನ್‌ ದೃಶ್ಯಗಳ ಚಿತ್ರೀಕರಣದ ಸಮಯದಲ್ಲಿ ರಣಬೀರ್‌ ಕಪೂರ್‌ ಅವರು ಹೇಗೆ ತಮಗೆ ಸಪೋರ್ಟಿವ್‌ ಆಗಿದ್ದರು ಎಂಬದನ್ನು ಬಹಿರಂಗಪಡಿಸಿದರು.

ಇಂಟಿಮೇಟ್ ದೃಶ್ಯದ ಕುರಿತು ತೃಪ್ತಿ ಡಿಮ್ರಿ ಮಾತನಾಡಿ ʻʻಪ್ರಾಜೆಕ್ಟ್‌ಗೆ ಸಹಿ ಮಾಡುವಾಗ ಈ ರೀತಿ ಒಂದು ಬೋಲ್ಡ್‌ ದೃಶ್ಯವಿದೆ ಎಂದಿದ್ದರು ನಿರ್ದೇಶಕರು. ಶೂಟ್‌ ಮಾಡುವ ಮುಂಚೆ ಕೂಡ ಪಾತ್ರದ ಬಗ್ಗೆ ಅದೆಷ್ಟೋ ಬಾರಿ ನನಗೆ ನಿರ್ದೇಶಕರು ವಿವರಿಸಿದ್ದರು. ಇಂತಹ ದೃಶ್ಯಗಳನ್ನು ಶೂಟ್‌ ಮಾಡುವಾಗ ಸುತ್ತಮುತ್ತಲಿನ ಪರಿಸರವೂ ಬಹಳ ಮುಖ್ಯ. ನಿಮ್ಮ ಸುತ್ತಲಿನ ಜನರು ಮೊದಲು ನಿಮಗೆ ಕಮ್‌ಫರ್ಟ್‌ ಆಗಿರಬೇಕು. ಆಗ ಮಾತ್ರ ಇಂತಹ ದೃಶ್ಯಗಳನ್ನು ಶೂಟ್‌ ಮಾಡಲು ಸಾದ್ಯʼʼ ಎಂದರು.

ಇದನ್ನೂ ಓದಿ: Animal Cast Fees: ‘ಅನಿಮಲ್’ ಚಿತ್ರಕ್ಕೆ ರಣಬೀರ್ ಕಪೂರ್ ಪಡೆದ ಸಂಭಾವನೆ ಎಷ್ಟು?

ಇಂಟಿಮೇಟ್ ದೃಶ್ಯ ಮಾಡುವಾಗೆಲ್ಲ ರಣಬೀರ್ ಪ್ರತಿ 5 ನಿಮಿಷಗಳಿಗೊಮ್ಮೆ ಬಂದು ʻʻare you Okay” ಎಂದು ಎಷ್ಟೋ ಬಾರಿ ಬಂದು ಕೇಳಿದ್ದೂ ಇದೆ. ಚಿತ್ರೀಕರಣದ ಸಮಯದಲ್ಲಿ ನಿರ್ದೇಶಕರು, ಡಿಒಪಿ (ಛಾಯಾಗ್ರಹಕರು) ಮತ್ತು ನಟರು ಸೇರಿದಂತೆ 5ಕ್ಕಿಂತ ಹೆಚ್ಚು ಜನರಿರಲಿಲ್ಲ. ಸೆಟ್‌ನಲ್ಲಿ ಬೇರೆಯವರಿಗೆ ಅವಕಾಶ ಕೂಡ ನೀಡಲಿಲ್ಲ, ಎಲ್ಲಾ ಮಾನಿಟರ್‌ಗಳನ್ನು ಮುಚ್ಚಲಾಗಿತ್ತು. ಯಾವುದೇ ಹಂತದಲ್ಲಿ ನೀವು ಅಹಿತಕರವೆಂದು ಭಾವಿಸಿದರೆ, ನಮಗೆ ತಿಳಿಸಿ ಎಂದು ನಿರ್ದೇಶಕರು ನನಗೆ ಕೇರ್‌ ಮಾಡಿ ಈ ದೃಶ್ಯವನ್ನು ತೆಗೆದರುʼʼ ಎಂದರು. ರಣಬೀರ್ ಆಗಾಗ ನನ್ನನ್ನು ವಿಚಾರಿಸುತ್ತಾ, ‘ನೀವು ಆರಾಮದಾಯಕವಾಗಿದ್ದೀರಾ?’ ಎಂದು ಕೇಳುತ್ತಿದ್ದರು, ಈ ವಿಷಯಗಳು ನಿಜವಾಗಿಯೂ ಮುಖ್ಯವೆಂದು ನಾನು ಭಾವಿಸುತ್ತೇನೆʼʼ ಎಂದರು.

ಇದನ್ನೂ ಓದಿ: Sam Bahadur Box Office: ʻಅನಿಮಲ್‌ʼ ಭರ್ಜರಿ ಓಪನಿಂಗ್‌; ವಿಕ್ಕಿ ಕೌಶಲ್ ಸಿನಿಮಾದ ವೇಗಕ್ಕೆ ಬ್ರೇಕ್‌

ʻʻಈ ರೀತಿ ಶೂಟ್‌ಗಳನ್ನು ಪ್ರೇಕ್ಷಕರು ನೋಡದ ಕಾರಣ ಹಲವು ಬಾರಿ ನನಗೆ ನೆಗೆಟಿವ್‌ ಆಗಿ ಪ್ರಶ್ನಿಸಿದ್ದಾರೆ. ಆದರೆ ಅಂತಹ ಬೋಲ್ಡ್‌ ದೃಶ್ಯಗಳನ್ನು ಮಾಡುವಾಗ ಸೆಟ್‌ಗಳಲ್ಲಿ ಅತ್ಯಂತ ಸೂಕ್ಷ್ಮವಾಗಿರುತ್ತಾರೆ. ನನಗೆ ತುಂಬಾ ಆರಾಮದಾಯಕವಾಗುವಂತೆ ಈ ಸೀನ್‌ ಮಾಡಲಾಯಿತು. ಸ್ವಲ್ಪವೂ ನನಗೆ ಸಮಸ್ಯೆಯಾಗಲಿಲ್ಲʼʼ ಎಂದಿದ್ದಾರೆ.

“ನಾನು ಸಂದೀಪ್ ಸರ್ ಅವರೊಂದಿಗೆ ಪಾತ್ರಕ್ಕಾಗಿ ಚರ್ಚೆ ನಡೆಸಿದಾಗ, ಇದು ನೆಗೆಟಿವ್‌ ಪಾತ್ರ ಎಂದು ಅವರು ಹೇಳಿದರು. ನಾನು ಸಂಪೂರ್ಣವಾಗಿ ನೆಗೆಟಿವ್‌ ಆಗಿ ತೋರಿಸುವುದಿಲ್ಲ. ಬದಲಿಗೆ, ಜನರು ಜೋಯಾ ಪಾತ್ರದ ಮುಗ್ಧತೆಯನ್ನು ನೋಡಬೇಕು ಎಂದಿದ್ದರುʼʼ ಎಂದು ಹೇಳಿದರು.

ಚಲನಚಿತ್ರ ವಿಮರ್ಶಕ ಮತ್ತು ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಕೂಡ ʻಅನಿಮಲ್‌ʼ ಸಿನಿಮಾ ರಣಬೀರ್ ಅವರ ವೃತ್ತಿಜೀವನದ ಅತಿದೊಡ್ಡ ಓಪನರ್ ಎಂದು ಭವಿಷ್ಯ ನುಡಿದಿದ್ದರು. ’ಕಬೀರ್ ಸಿಂಗ್’ ನಂತರ ‘ಅನಿಮಲ್’ ಸಂದೀಪ್ ರೆಡ್ಡಿ ವಂಗಾ ಅವರ ಎರಡನೇ ಬಾಲಿವುಡ್ ಚಿತ್ರವಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಫ್ಯಾಷನ್

Nita Ambani: ಮಗನ ಮದುವೆ: ಕೈ ಮಗ್ಗದ ಕಾಂಚೀವರಂ ಸೀರೆಯುಟ್ಟು ಮಿಂಚಿದ ನೀತಾ ಅಂಬಾನಿ!

ಭಾರತೀಯ ಕಲೆ ಮತ್ತು ಸಂಸ್ಕೃತಿಯ ಅಪ್ಪಟ ಪ್ರೇಮಿಯಾಗಿರುವ ನೀತಾ ಅಂಬಾನಿ ಅವರು ಅನಂತ್- ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದ ಸಂದರ್ಭದಲ್ಲೂ ಸ್ಥಳೀಯ ಕಲಾವಿದರ ಅಮೋಘ ಕಲಾ ಕೌಶಲದ ಕಡೆಗೆ ಗಮನ ಸೆಳೆಯುವುದಕ್ಕೆ ಪ್ರಯತ್ನಿಸಿದರು.

VISTARANEWS.COM


on

Nita Ambani Kanchipuram sari at Anant-Radhika pre-wedding
Koo

ಅನಂತ್ ಅಂಬಾನಿ (Nita Ambani) ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ನೀತಾ ಅಂಬಾನಿ ಅವರು ಕೈಮಗ್ಗದ ಕಾಂಚೀಪುರಂ ಸೀರೆಯನ್ನು ಧರಿಸಿದ್ದರು. ಈ ಸೀರೆಯ ವಿಶೇಷತೆ ಏನೆಂದರೆ, ಇದು ದಕ್ಷಿಣ ಭಾರತದ ನೇಕಾರರು ಕೈಯಿಂದಲೇ ಸಿದ್ಧಪಡಿಸಿದ್ದಾಗಿದೆ. ಇದನ್ನು ಕೈ ಮಗ್ಗದ ಸೀರೆ ಎನ್ನಲಾಗುತ್ತದೆ. ಯಂತ್ರಗಳಿಂದ ಅಲ್ಲದೆ, ಕುಶಲಕರ್ಮಿಗಳು ತಮಗೆ ತಲೆತಲಾಂತರದಿಂದ ಬಂದಂಥ ಅದ್ಭುತ ಕಲೆಯನ್ನು ಮೂಡಿಸಿರುವಂಥ ಮೇರು ಕಲಾಕೃತಿ ಇದು. ಭಾರತೀಯ ಸಾಂಪ್ರದಾಯಿಕ ಕರಕುಶಲತೆ ಬಗ್ಗೆ ನೀತಾ ಅಂಬಾನಿ ಅವರಿಗೆ ಇರುವಂಥ ಗೌರವ, ಪ್ರೀತಿಯನ್ನು ವ್ಯಕ್ತಪಡಿಸುವುದಕ್ಕೆ ಇದು ಇನ್ನೊಂದು ಸುಮಧುರ ಕ್ಷಣವಾಗಿತ್ತು.

ಭಾರತೀಯ ಕಲೆ ಮತ್ತು ಸಂಸ್ಕೃತಿಯ ಅಪ್ಪಟ ಪ್ರೇಮಿಯಾಗಿರುವ ನೀತಾ ಅಂಬಾನಿ ಅವರು ಅನಂತ್- ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದ ಸಂದರ್ಭದಲ್ಲೂ ಸ್ಥಳೀಯ ಕಲಾವಿದರ ಅಮೋಘ ಕಲಾ ಕೌಶಲದ ಕಡೆಗೆ ಗಮನ ಸೆಳೆಯುವುದಕ್ಕೆ ಪ್ರಯತ್ನಿಸಿದರು.

ರಿಲಯನ್ಸ್ ನ ಸ್ವದೇಶ್ ಎಂಬ ಉಪಕ್ರಮವು ಸಮುದಾಯಗಳ ಕೈ ಬಲಪಡಿಸುತ್ತದೆ ಹಾಗೂ ಪಾರಂಪರಿಕ ಕರಕುಶಲತೆಯ ಸಂರಕ್ಷಣೆ ಮಾಡುತ್ತದೆ.

ಇದನ್ನೂ ಓದಿ: Nita Ambani: ಅನಂತ್ ಅಂಬಾನಿ ಮದುವೆ: ವಿಶ್ವಂಭರಿ ಸ್ತುತಿಗೆ ನೀತಾ ಅಂಬಾನಿ ಅದ್ಭುತ ನೃತ್ಯ!

ವಿಶ್ವಂಭರಿ ಸ್ತುತಿಗೆ ಅದ್ಭುತ ನೃತ್ಯ ಪ್ರದರ್ಶನ ನೀಡಿದ ನೀತಾ ಅಂಬಾನಿ

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಮಗ ಅನಂತ್ ಹಾಗೂ ರಾಧಿಕಾ ಮರ್ಚಂಟ್ ವಿವಾಹ ಪೂರ್ವ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದಿದೆ. ನೀತಾ ಅಂಬಾನಿ ಹಾಗೂ ಅವರ ಜತೆಗೆ ಇತರರು ಸೇರಿ ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಿದ್ದಾರೆ. ವಿಶ್ವಂಭರಿ ಸ್ತುತಿಗೆ ನೃತ್ಯ ಮಾಡಿದ್ದು, ವಿಶಾಲವಾದ ವೇದಿಕೆಯಲ್ಲಿ ಈ ಸಮಾರಂಭಕ್ಕೆ ಇನ್ನಷ್ಟು ಕಳೆ ಕಟ್ಟುವಂತೆ ಮಾಡಿದ್ದಾರೆ.

ಅಂದ ಹಾಗೆ, ಅನಂತ್ ಅಂಬಾನಿ ಅವರ ಭಾವೀ ಪತ್ನಿ ರಾಧಿಕಾ ಮರ್ಚಂಟ್ ಸಹ ಅತ್ಯುತ್ತಮ ನೃತ್ಯಪಟು. ಹಾಗೂ ಕುಟುಂಬದ ಕಾರ್ಯಕ್ರಮಗಳಲ್ಲಿ ಸ್ವತಃ ನೀತಾ ಅಂಬಾನಿ ಅವರು ಈ ಹಿಂದೆಯೂ ಸಹ ನೃತ್ಯ ಪ್ರದರ್ಶನವನ್ನು ನೀಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಭಾರತೀಯ ಸಂಪ್ರದಾಯದಂತೆ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಅತಿಥಿ ಸತ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವತಾ ಆರಾಧನೆ ಹೀಗೆ ವಿವಿಧ ರೀತಿಯ ಆಚರಣೆಗಳನ್ನು ಮಾಡಲಾಗುತ್ತದೆ.

Continue Reading

ಬಾಲಿವುಡ್

Aaradhya Bachchan: ಅಬ್ಬಾ.. ಅಂತೂ ಐಶ್ವರ್ಯಾ ರೈ ಪುತ್ರಿ ಹಣೆ ನೋಡಿದ್ವಲ್ಲ! ನಿಟ್ಟುಸಿರು ಬಿಟ್ಟ ನೆಟ್ಟಿಗರು!

Aaradhya Bachchan: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರ ಹೇರ್‌ಸ್ಟೈಲ್‌ ಹೈಲೈಟ್‌ ಆಗಿದೆ. ಅಂತೂ ಹೇರ್‌ ಸ್ಟೈಲ್‌ ಚೇಂಜ್‌ ಆಯ್ತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ ನೆಟ್ಟಿಗರು!

VISTARANEWS.COM


on

Aaradhya Bachchan flaunts new hairstyle for Ambanis bash
Koo

ಬೆಂಗಳೂರು: ಬಚ್ಚನ್ ಕುಟುಂಬ ಭಾನುವಾರ ಸಂಜೆ (ಮಾ.3) ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಪೂರ್ವ ಸಮಾರಂಭದಲ್ಲಿ ಭಾಗವಹಿಸಿದ್ದರು. ಕುಟುಂಬ ಸದಸ್ಯರ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಬಚ್ಚನ್ ಅವರ ಹೇರ್‌ಸ್ಟೈಲ್‌ ಹೈಲೈಟ್‌ ಆಗಿದೆ. ಅಂತೂ ಹೇರ್‌ ಸ್ಟೈಲ್‌ ಚೇಂಜ್‌ ಆಯ್ತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ ನೆಟ್ಟಿಗರು!

ಕೆಲವು ವರ್ಷಗಳಿಂದ ಆರಾಧ್ಯ ಅವರು ಯಾವಾಗಲೂ ಒಂದೇ ಹೇರ್‌ಸ್ಟೈಲ್‌ನೊಂದಿಗೆ ಕಾಣಿಸಿಕೊಳ್ಳುತ್ತಿದ್ದರು. ಈಗ ಫ್ರೀ ಹೇರ್ಸ್‌ ಬಿಟ್ಟು ಕ್ಯೂಟ್‌ ಆಗಿ ಪೋಸ್‌ ಕೊಟ್ಟಿದ್ದಾರೆ ಆರಾಧ್ಯ. ಆರಾಧ್ಯ ಅವರ ಹೊಸ ಕೇಶ ವಿನ್ಯಾಸಕ್ಕೆ ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ. ವ್ಯಕ್ತಿಯೊಬ್ಬರು, “ಆ ಬ್ಯಾಂಗ್ಸ್ ಇಲ್ಲದೆ ಆರಾಧ್ಯ ತುಂಬಾ ಸುಂದರವಾಗಿ ಕಾಣುತ್ತಾಳೆ” ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಬ್ಬರು ʻಐಶ್ವರ್ಯಾ ಅವರ ಪ್ರತಿರೂಪ. ಈಗ ಐಶ್ವರ್ಯಾ ಚಿಕ್ಕವಳಂತೆ ಕಾಣುತ್ತಾಳೆʼʼಎಂದು ಕಮೆಂಟ್‌ ಮಾಡಿದ್ದಾರೆ.

ಪಾರ್ಟಿಗಾಗಿ ಆರಾಧ್ಯ ಗುಲಾಬಿ ಮತ್ತು ಬಿಳಿ ಉಡುಪಿನಲ್ಲಿ ಕಾಣಿಸಿಕೊಂಡರು. ಐಶ್ವರ್ಯಾ ಕ್ರೀಂ ಕಲರ್‌ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದರು.

ಇದನ್ನೂ ಓದಿ: Aaradhya Bachchan: ಆರಾಧ್ಯ ಬಚ್ಚನ್‌ ಬಗ್ಗೆ ಇರುವ ಸುಳ್ಳು ವಿಡಿಯೊಗಳನ್ನು ತೆಗೆದುಹಾಕಿ: ಯೂಟ್ಯೂಬ್‌ಗೆ ಹೈಕೋರ್ಟ್‌ ಸೂಚನೆ

ಶಾರುಖ್‌, ಸಲ್ಮಾನ್ ಮತ್ತು ಆಮೀರ್ ಹೊರತುಪಡಿಸಿ, ಹಲವಾರು ಬಾಲಿವುಡ್ ತಾರೆಯರು ಈವೆಂಟ್‌ನಲ್ಲಿ ಕಾಣಿಸಿಕೊಂಡರು. ಇವರಲ್ಲಿ ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಆಡ್ವಾಣಿ, ಸೈಫ್ ಅಲಿ ಖಾನ್, ಕರೀನಾ ಕಪೂರ್ ಖಾನ್, ವರುಣ್ ಧವನ್, ಅನಿಲ್ ಕಪೂರ್, ಸಾರಾ ಅಲಿ ಖಾನ್, ಇಬ್ರಾಹಿಂ ಅಲಿ ಖಾನ್, ಅನನ್ಯ ಪಾಂಡೆ ಮತ್ತು ಆದಿತ್ಯ ರಾಯ್ ಕಪೂರ್ ಸೇರಿದ್ದಾರೆ. ರಾಣಿ ಮುಖರ್ಜಿ, ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ಹಾಜರಿದ್ದರು. ಎಂಎಸ್ ಧೋನಿ, ರೋಹಿತ್ ಶರ್ಮಾ ಮತ್ತು ಸಚಿನ್ ತೆಂಡೂಲ್ಕರ್ ಅವರಂತಹ ಕ್ರೀಡಾಪಟುಗಳು ಕೂಡ ಆಚರಣೆಯಲ್ಲಿ ಭಾಗವಹಿಸಿದ್ದರು.

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ, ವಿಶ್ವದ ಶ್ರೀಮಂತರಲ್ಲಿ ಒಬ್ಬರಾದ ಉದ್ಯಮಿ ಮುಕೇಶ್‌ (Mukesh Ambani) ಅಂಬಾನಿ ಪುತ್ರ ಅನಂತ್‌ ಅಂಬಾನಿ (Anant Ambani) ಹಾಗೂ ಉದ್ಯಮಿ ವಿರೇನ್‌ ಮರ್ಚಂಟ್‌ ಅವರ ಪುತ್ರಿ ರಾಧಿಕಾ ಮರ್ಚಂಟ್‌ (Radhika Merchant) ವಿವಾಹ ಪೂರ್ವ ಸಂಭ್ರಮದ ಹಿನ್ನೆಲೆಯಲ್ಲಿ ಗುಜರಾತ್‌ನ ಜಾಮ್‌ನಗರದಲ್ಲಿ ಸ್ವರ್ಗವೇ ಧರೆಗಿಳಿದಿತ್ತು. ಸಾವಿರಾರು ಗಣ್ಯರ ಆಗಮನದ ಮಧ್ಯೆಯೇ ಅದ್ಧೂರಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು.

Continue Reading

ಬಾಲಿವುಡ್

Nita Ambani: ಅನಂತ್ ಅಂಬಾನಿ ಮದುವೆ: ವಿಶ್ವಂಭರಿ ಸ್ತುತಿಗೆ ನೀತಾ ಅಂಬಾನಿ ಅದ್ಭುತ ನೃತ್ಯ!

Nita Ambani: ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚಂಟ್ ಸಹ ಅತ್ಯುತ್ತಮ ನೃತ್ಯಪಟು. ಕುಟುಂಬದ ಕಾರ್ಯಕ್ರಮಗಳಲ್ಲಿ ಸ್ವತಃ ನೀತಾ ಅಂಬಾನಿ ಅವರು ಈ ಹಿಂದೆಯೂ ಸಹ ನೃತ್ಯ ಪ್ರದರ್ಶನವನ್ನು ನೀಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು.

VISTARANEWS.COM


on

Nita Ambani Dances At Anant-Radhika Pre-Wedding Bash
Koo

ಬೆಂಗಳೂರು: ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಮಗ ಅನಂತ್ ಹಾಗೂ ರಾಧಿಕಾ ಮರ್ಚಂಟ್‌ ವಿವಾಹ ಪೂರ್ವ ಕಾರ್ಯಕ್ರಮಗಳು ಶಾಸ್ತ್ರೋಕ್ತವಾಗಿ ನಡೆದಿದೆ. ನೀತಾ ಅಂಬಾನಿ ಹಾಗೂ ಅವರ ಜತೆಗೆ ಇತರರು ಸೇರಿ ಶಾಸ್ತ್ರೀಯ ನೃತ್ಯ ಪ್ರದರ್ಶನ ನೀಡಿದ್ದಾರೆ. ವಿಶ್ವಂಭರಿ ಸ್ತುತಿಗೆ ನೃತ್ಯ ಮಾಡಿದ್ದು, ವಿಶಾಲವಾದ ವೇದಿಕೆಯಲ್ಲಿ ಈ ಸಮಾರಂಭಕ್ಕೆ ಇನ್ನಷ್ಟು ಕಳೆ ಕಟ್ಟುವಂತೆ ಮಾಡಿತ್ತು.

ಅಂದ ಹಾಗೆ, ಅನಂತ್ ಅಂಬಾನಿ ಅವರ ಭಾವಿ ಪತ್ನಿ ರಾಧಿಕಾ ಮರ್ಚಂಟ್ ಸಹ ಅತ್ಯುತ್ತಮ ನೃತ್ಯಪಟು. ಹಾಗೂ ಕುಟುಂಬದ ಕಾರ್ಯಕ್ರಮಗಳಲ್ಲಿ ಸ್ವತಃ ನೀತಾ ಅಂಬಾನಿ ಅವರು ಈ ಹಿಂದೆಯೂ ನೃತ್ಯ ಪ್ರದರ್ಶನವನ್ನು ನೀಡಿದ್ದರು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಭಾರತೀಯ ಸಂಪ್ರದಾಯದಂತೆ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಅತಿಥಿ ಸತ್ಕಾರ, ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವತಾ ಆರಾಧನೆ ಹೀಗೆ ವಿವಿಧ ರೀತಿಯ ಆಚರಣೆಗಳನ್ನು ಮಾಡಲಾಗಿದೆ.

ಅನಂತ್ ಹಾಗೂ ರಾಧಿಕಾ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಎಲ್ಲವನ್ನೂ ಭಾರತೀಯ ಸಂಪ್ರದಾಯದಂತೆಯೇ ಮಾಡಲಾಗುತ್ತಿದೆ. ದೇಶ- ವಿದೇಶಗಳಿಂದ ವಿಶೇಷವಾದ ಅತಿಥಿಗಳು ಬಂದಿದ್ದರು. ಸ್ಥಳೀಯ ಕಲಾವಿದರು ಅದ್ಭುತವಾಗಿ ಜಾಮ್ ನಗರದಲ್ಲಿ ಮದುವೆ ಪೂರ್ವ ಕಾರ್ಯಕ್ರಮ ನಡೆಯುವ ಸ್ಥಳವನ್ನು ಸಿದ್ಧಗೊಳಿಸಲಾಗಿತ್ತು. ಅಂಬಾನಿ ಕುಟುಂಬದ ಸದಸ್ಯರೇ ಸ್ವತಃ ಸ್ಥಳೀಯರಿಗೆ ಅನ್ನ- ಸಂತರ್ಪಣೆಯನ್ನು ಮಾಡಿದ್ದರು.

ಇದನ್ನೂ ಓದಿ: Nita Ambani: ಮುಂಬಯಿ ಸಾಂಸ್ಕೃತಿಕ ಕೇಂದ್ರದಲ್ಲಿ ನೀತಾ ಅಂಬಾನಿ ನೃತ್ಯ; ’ರಘುಪತಿ ರಾಘವ’ ಹಾಡಿಗೆ ಭರತನಾಟ್ಯ

ಇದೀಗ ನೀತಾ ಅಂಬಾನಿ ಮತ್ತು ಅವರ ಜತೆಗೆ ದೊಡ್ಡ ತಂಡವೊಂದು ತುಂಬ ಸುಂದರವಾದ ವೇದಿಕೆ ಮೇಲೆ ವಿಶ್ವಂಭರಿ ಸ್ತುತಿಗೆ ನೃತ್ಯ ಮಾಡುತ್ತಾ, ತಾಯಿ ಭಗವತಿ ಹಾಗೂ ಸ್ತ್ರೀ ಶಕ್ತಿಯ ಅದ್ಭುತವನ್ನು ತಿಳಿಸುವಂಥ ಪ್ರದರ್ಶನವನ್ನು ನೀಡಿದ್ದಾರೆ.

Continue Reading

ಬಾಲಿವುಡ್

Anant-Radhika Pre-wedding: ಅನಂತ ಅಂಬಾನಿ ಮದುವೆ: 3ನೇ ದಿನ ಗಣ್ಯರು ಕಾಣಿಸಿಕೊಂಡಿದ್ದು ಹೀಗೆ…

Anant-Radhika Pre-wedding: ಅದ್ಧೂರಿ ವಿವಾಹ ಪೂರ್ವ ಆಚರಣೆಗಳು ಮಾರ್ಚ್ 1ರಂದು ಪ್ರಾರಂಭವಾಗಿ ಮಾರ್ಚ್ 3 ರಂದು ಮುಕ್ತಾಯಗೊಂಡಿದೆ. ಮೂರನೇ ದಿನ ತಾರೆಯರು, ನವಜೋಡಿಗಳು ಸೇರಿದಂತೆ ಅನೇಕ ಗಣ್ಯರು ಟ್ರೆಡಿಷನಲ್‌ ಆಗಿ ಸಖತ್‌ ಆಗಿ ಕಂಡರು.

VISTARANEWS.COM


on

SRK-Gauri wore what at Anant-Radhika’s pre-wedding festivities
Koo

ಕೈಗಾರಿಕೋದ್ಯಮಿ ವೀರೇನ್ ಮರ್ಚೆಂಟ್ ಅವರ ಪುತ್ರಿ ರಾಧಿಕಾ ಮರ್ಚೆಂಟ್ (Anant-Radhika Pre-wedding) ಮತ್ತು ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಅವರ ವಿವಾಹ ಪೂರ್ವ ಸಮಾರಂಭ ಅದ್ಧೂರಿಯಾಗಿ ಮೂರು ದಿನಗಳ ಕಾಲ ನೆರವೇರಿತು.

ಅದ್ಧೂರಿ ವಿವಾಹ ಪೂರ್ವ ಆಚರಣೆಗಳು ಮಾರ್ಚ್ 1ರಂದು ಪ್ರಾರಂಭವಾಗಿ ಮಾರ್ಚ್ 3 ರಂದು ಮುಕ್ತಾಯಗೊಂಡಿದೆ. ಮೂರನೇ ದಿನ ತಾರೆಯರು, ನವಜೋಡಿಗಳು ಸೇರಿದಂತೆ ಅನೇಕ ಗಣ್ಯರು ಟ್ರೆಡಿಷನಲ್‌ ಆಗಿ ಸಖತ್‌ ಆಗಿ ಕಂಡರು.

ಈ ಸಂಭ್ರಮದಲ್ಲಿ ಪ್ರಮುಖ ಅತಿಥಿಗಳು ಗುಜರಾತ್‌ನ ಜಾಮ್‌ನಗರಕ್ಕೆ ಆಗಮಿಸಿದ್ದರು. ಉದ್ಯಮಿಗಳು, ರಾಜಕಾರಣಿಗಳು, ಹಾಲಿವುಡ್ ಮತ್ತು ಬಾಲಿವುಡ್ ತಾರೆಗಳು ಮತ್ತು ಕ್ರಿಕೆಟಿಗರು ಭಾಗಿಯಾಗಿದ್ದರು.

ಕೊನೆಯ ದಿನ ಆಲಿಯಾ ಭಟ್ ಗೋಲ್ಡನ್ ಲೆಹೆಂಗಾದಲ್ಲಿ ಸುಂದರವಾಗಿ ಕಾಣುತ್ತಿದ್ದರು. ರಣಬೀರ್ ಬಿಳಿ ಶೆರ್ವಾನಿಯಲ್ಲಿ ಕಂದು ಬಣ್ಣದ ಬೂಟುಗಳನ್ನು ಧರಿಸಿದ್ದರು.

ಇದನ್ನೂ ಓದಿ: FSL Report : FSL ವರದಿ ಬಿಡುಗಡೆ ಮಾಡಿದ ಬಿಜೆಪಿ; ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆಗೆ ಸಾಕ್ಷಿ

ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರು ತಮ್ಮ ಹಿರಿಯ ಮಗ ತೈಮೂರ್​​ ಜತೆಗೆ ಫೋಟೋಗೆ ಪೋಸ್ ನೀಡಿದರು.

ಸುಹಾನಾ ಖಾನ್ ಕಸೂತಿ ಮಾಡಿದ ಸೀರೆಯನ್ನು ಆಫ್ ಶೋಲ್ಡರ್ ಬ್ಲೌಸ್‌ನೊಂದಿಗೆ ಧರಿಸಿದ್ದರು.

ಟ್ರೆಡಿಷನಲ್‌ ಡ್ರೆಸ್‌ನಲ್ಲಿ ಪೋಸ್‌ ಕೊಟ್ಟ ಬಿಲ್ ಗೇಟ್ಸ್ ದಂಪತಿ.

ಪತ್ನಿಯೊಂದಿಗೆ ಸಖತ್‌ ಲುಕ್‌ನಲ್ಲಿ ಸಚಿನ್ ತೆಂಡೂಲ್ಕರ್.

ಶಾರುಖ್ ಕ್ರೀಮ್ ಕುರ್ತಾ, ಪೈಜಾಮ ಧರಿಸಿದ್ದರು. ಗೌರಿ ಕಡು ನೀಲಿ ಬಣ್ಣದ ಉಡುಪನ್ನು ಧರಿಸಿದ್ದರು. ಅಬ್ರಾಮ್ ಖಾನ್ ಕಪ್ಪು ಕುರ್ತಾ ಮತ್ತು ಪೈಜಾಮಾದಲ್ಲಿ ಮುದ್ದಾಗಿ ಕಾಣುತ್ತಿದ್ದರು.

ಲೆಹೆಂಗಾದಲ್ಲಿ ಕಂಗೊಳಿಸಿದ ಅನನ್ಯಾ ಪಾಂಡೆ.

ಭಾರತದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಬಿಳಿ ಬಣ್ಣದ ಕುರ್ತಾ-ಪೈಜಾಮಾ ಧರಿಸಿದ್ದರು. ಪತ್ನಿ ಸಾಕ್ಷಿ ಹಳದಿ ಮತ್ತು ಕೆಂಪು ಬಣ್ಣದ ಮುದ್ರಿತ ಸಲ್ವಾರ್ ಸೂಟ್‌ ಧರಿಸಿದ್ದರು.

ಸೂಪರ್‌ಸ್ಟಾರ್ ರಜನಿಕಾಂತ್ ಅವರು ಬಿಳಿ ಶರ್ಟ್ ಜತೆಗೆ ಪಂಚೆ ಧರಿಸಿ ಫ್ಯಾಮಿಲಿ ಜತೆ ಪೋಸ್‌ ಕೊಟ್ಟರು.

ಅಮೆರಿಕದ ಮಾಜಿ ಅಧ್ಯಕ್ಷ, ಡೊನಾಲ್ಡ್ ಟ್ರಂಪ್ ಅವರ ಪುತ್ರಿ, ಇವಾಂಕಾ ಟ್ರಂಪ್ ಹಳದಿ ಬಣ್ಣದ ಲೆಹೆಂಗಾ ಚೋಲಿ ಸೆಟ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡರು. ಅವರ ಮಗಳು ಅರಬೆಲ್ಲಾ ಹಳದಿ ಲೆಹೆಂಗಾದಲ್ಲಿ ಕಾಣಿಸಿಕೊಂಡರು. ಇವಾಂಕಾ ಅವರ ಪತಿ, ಜೇರೆಡ್ ಕುಶ್ನರ್ ಅವರು ನೀಲಿ ಬಣ್ಣದ ಶರ್ಟ್ ಧರಿಸಿ, ಬಿಳಿ ಕೋಟ್‌ನೊಂದಿಗೆ ಸುಂದರವಾಗಿ ಕಾಣುತ್ತಿದ್ದರು.

Continue Reading
Advertisement
Missile Attack
ವಿದೇಶ7 mins ago

Missile Attack: ಇಸ್ರೇಲ್‌ ಮೇಲೆ ಕ್ಷಿಪಣಿ ದಾಳಿ; ಕೇರಳ ಮೂಲದ ವ್ಯಕ್ತಿ ಸಾವು

Raja Marga Column Beena das2
ಸ್ಫೂರ್ತಿ ಕತೆ2 hours ago

Raja Marga Column : ಕ್ರಾಂತಿ ಸಿಂಹಿಣಿ ಬೀನಾ ದಾಸ್! ಅನಾಥ ಶವದ ಪರ್ಸಲ್ಲಿತ್ತು ಸುಭಾಸ್ ಚಿತ್ರ!

Best Ways To Clean Fruits
ಆಹಾರ/ಅಡುಗೆ2 hours ago

Best Ways To Clean Fruits: ಹಣ್ಣುಗಳನ್ನು ತಿನ್ನುವ ಮೊದಲು ನೀವು ಈ ವಿಧಾನದಲ್ಲಿ ತೊಳೆದುಕೊಂಡಿದ್ದೀರಾ?

Sunny weather across the karnataka
ಮಳೆ3 hours ago

Karnataka Weather: ರಾಜ್ಯಾದ್ಯಂತ ಇಂದು ಬಿಸಿಲಿನ ವಾತಾವರಣ

Supreme Court On Udhayanidhi Stalin
ದೇಶ3 hours ago

ವಿಸ್ತಾರ ಸಂಪಾದಕೀಯ: ‘ಅಧರ್ಮ’ ಹೇಳಿಕೆಯ ಸ್ಟಾಲಿನ್‌ಗೆ ಸುಪ್ರೀಂ ಚಾಟಿ; ಇನ್ನಾದರೂ ಬುದ್ಧಿ ಬರಲಿ

Dina Bhavishya
ಭವಿಷ್ಯ4 hours ago

Dina Bhavishya: ಈ ರಾಶಿಯವರಿಗೆ ಕೂಡಿ ಬರಲಿದೆ ಕಂಕಣಭಾಗ್ಯ

Water tanker to be seized if not registered by March 7‌ says DK Shivakumar
ಪ್ರಮುಖ ಸುದ್ದಿ9 hours ago

Water Crisis: ಮಾ. 7ರೊಳಗೆ ನೋಂದಣಿ ಮಾಡಿಸದಿದ್ರೆ ನೀರಿನ ಟ್ಯಾಂಕರ್‌ ಸೀಜ್, ಸರ್ಕಾರದಿಂದಲೇ ದರ ನಿಗದಿ: ಡಿಕೆಶಿ

Seema Haider Sachin Meena
ದೇಶ9 hours ago

3 ಕೋಟಿ ರೂ. ಕೇಳಿ ಪಾಕ್‌ನಿಂದಲೇ ನೋಟಿಸ್‌ ಕಳುಹಿಸಿದ ಸೀಮಾ ಹೈದರ್‌ ಮೊದಲ ಪತಿ!

Accused sent to police custody for raising pro-Pakistan slogans
ಪ್ರಮುಖ ಸುದ್ದಿ10 hours ago

Sedition Case: ಪಾಕ್‌ ಪರ ಘೋಷಣೆ ಕೂಗಿದವರಿಗೆ 3 ದಿನ ಪೊಲೀಸ್‌ ಕಸ್ಟಡಿ: ಕೋರ್ಟ್‌ ಆದೇಶ

Mouth Freshner
ದೇಶ10 hours ago

Mouth Freshener: ರೆಸ್ಟೋರೆಂಟ್‌ನಲ್ಲಿ ಮೌತ್‌ ಫ್ರೆಶ್‌ನರ್‌ ಬಳಸಿದ ಐವರಿಗೆ ರಕ್ತದ ವಾಂತಿ!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ16 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ19 hours ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌