ಬೆಂಗಳೂರು : ಸ್ಯಾಂಡಲ್‌ವುಡ್‌ನಲ್ಲಿ ಕಾಮಿಡಿ ಕಿಂಗ್ ಎಂದೇ ಖ್ಯಾತರಾಗಿರುವ ಚಿಕ್ಕಣ್ಣ ಈಗ ನಾಯಕನಾಗಿ ಮೋಡಿ ಮಾಡಲು ಸಜ್ಜಾಗಿದ್ದಾರೆ.
ನಟ ಶರಣ್ ಹಾಗೂ ಚಿಕ್ಕಣ್ಣ ಅಭಿನಯದ ಕಾಮಿಡಿ ಬ್ಲಾಕ್ ಬಸ್ಟರ್ ಸಿನಿಮಾ ಅಧ್ಯಕ್ಷ. ಅದರಲ್ಲಿ ಉಪಾಧ್ಯಕ್ಷರಾಗಿದ್ದವರು ಚಿಕ್ಕಣ್ಣ. ಆ ಪಾತ್ರದ ಮೂಲಕ ಚಿಕ್ಕಣ್ಣ ಜನರಿಗೆ ಬಹಳ ಹತ್ತಿರವಾಗಿದ್ದರು. ಅದೇ ಹೆಸರಿನ ಸಿನಿಮಾ ಇದೀಗ ಸೆಟ್ಟೇರಿದ್ದು ಮೂಹರ್ತವಾಗಿದೆ. ಇದೀಗ ಉಪಾಧ್ಯಕ್ಷ (Upadhyaksha Movie) ಸಿನಿಮಾ ಸೆಟ್ಟೇರಲು ಸಜ್ಜಾಗಿದೆ.
ಬೆಂಗಳೂರಿನ ಬನಶಂಕರಿ ದೇವಿಯ ಸನ್ನಿಧಿಯಲ್ಲಿ ಚಿತ್ರಕ್ಕೆ ಚಾಲನೆ ನೀಡಲಾಗಿದ್ದು, ಸ್ಮಿತಾ ಉಮಾಪತಿ ಹಾಗೂ ನಿರ್ಮಲಾ ಶ್ರೀನಿವಾಸ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನ ಪ್ರಸಿದ್ದ ಬನಶಂಕರಿ ದೇವಸ್ಥಾನದಲ್ಲಿ ನೆರವೇರಿದ್ದು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕಿ ಸ್ಮಿತಾ ಉಮಾಪತಿ ಹಾಗೂ ನಾಯಕ ಚಿಕ್ಕಣ್ಣ ಅವರ ತಾಯಿ ಆಕ್ಷನ್ ಹೇಳಿದ್ದಾರೆ. ಇನ್ನು ಈ ನಟ ಸಾಧುಕೋಕಿಲ ಅವರು ಈ ಸಂದರ್ಭದಲ್ಲಿ ಕ್ಯಾಮೆರಾ ಚಾಲನೆ ಮಾಡಿದ್ದು, ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಅಲ್ಲದೇ ಮುಹೂರ್ತ ಕಾರ್ಯಕ್ರಮದಲ್ಲಿ ಚಿತ್ರರಂಗದ ಹಲವಾರು ಗಣ್ಯರು ಭಾಗವಹಿಸಿ ಚಿಕ್ಕಣ್ಣ ಅವರಿಗೆ ಹಾಗೂ ಚಿತ್ರತಂಡಕ್ಕೆ ವಿಶ್ ಮಾಡಿದ್ದಾರೆ.
ಇದನ್ನೂ ಓದಿ | Trivikrama Cinema : ಸಿನಿಮಾ ನೋಡಿದರೆ ಪರೀಕ್ಷೆಯಲ್ಲಿ 5 ಮಾರ್ಕ್ಸ್ ಗ್ರೇಸ್ ಅಂತೆ!
ಇನ್ನು ಮುಹೂರ್ತದ ನಂತರ ಮಾತನಾಡಿದ ಸಿನಿಮಾದ ನಿರ್ದೇಶಕ ಅನಿಲ್ ಕುಮಾರ್ . ಆ ಚಿತ್ರದಲ್ಲಿ ಎಲ್ಲಿ ಕಥೆ ನಿಂತಿತ್ತು, ಅಲ್ಲಿಂದ ಈ ಚಿತ್ರದ ಕಥೆ ಆರಂಭವಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಇದೊಂದು ಕಾಮಿಡಿ ಸಿನಿಮಾವಾಗಿದ್ದು, ಮೊದಲ ಸೀನ್ನಿಂದ ಹಿಡಿದು ಕ್ಲೈಮ್ಯಾಕ್ಸ್ ತನಕ ಜನರನ್ನು ನಗಿಸುತ್ತದೆ. ಒಳ್ಳೆಯ ಮನರಂಜನೆ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಕಾಮಿಡಿ ಸಿನಿಮಾವಾದರೂ ಸಹ ಇದರಲ್ಲಿ ಭಾವನಾತ್ಮಕ ಸನ್ನಿವೇಶಗಳು ಸಹ ಇದೆ. ಜನರಿಗೆ ಇಷ್ಟವಾಗುತ್ತದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಈಗಾಗಲೇ ಸಿದ್ದವಾಗಿರುವ ಮನೆಯ ಸೆಟ್ ನಲ್ಲಿ ಮೂವತ್ತೆರಡು ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಆನಂತರ ಬೆಂಗಳೂರು, ಮುಂತಾದ ಕಡೆ ಶೂಟಿಂಗ್ ಮಾಡಲು ಚಿತ್ರತಂಡ ನಿರ್ಧರಿಸಿದ್ದು, ಆಗಸ್ಟ್ ಕೊನೆಯಲ್ಲಿ ಚಿತ್ರೀಕರಣ ಮುಗಿಯಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಈ ಚಿತ್ರಕ್ಕೆ ಮ್ಯೂಸಿಕ್ ಮಾಂತ್ರಿಕ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಶೇಖರ್ ಚಂದ್ರ ಅವರ ಛಾಯಾಗ್ರಹಣವಿದೆ.
ಮತ್ತೊಂದು ಮುಖ್ಯವಾದ ವಿಚಾರ ಎಂದರೆ ಅಧ್ಯಕ್ಷ ಚಿತ್ರದಲ್ಲಿ ಅಭಿನಯಿಸಿದ್ದ ಬಹುತೇಕ ಕಲಾವಿದರು ಈ ಚಿತ್ರದಲ್ಲಿರುತ್ತಾರೆ.
ಇದನ್ನೂ ಓದಿ | Dollu Teaser| ಅಂತಾರಾಷ್ಟ್ರೀಯ ಖ್ಯಾತಿ ಪಡೆದ ಡೊಳ್ಳು ಸಿನಿಮಾ ಟೀಸರ್ ಔಟ್