ಬೆಂಗಳೂರು: ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಬಂದಾಗಿನಿಂದಲೂ ಕರ್ನಾಟಕದಲ್ಲಿ ಪ್ರತಿಭಟನೆ ಹಾಗೂ ಬಂದ್ಗಳು ನಡೆಯುತ್ತಿವೆ. ಶುಕ್ರವಾರ (ಸೆ.29) ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ಕನ್ನಡ ಚಿತ್ರರಂಗ ಕೂಡ ಸಾಥ್ ನೀಡಿದೆ. ಇದೀಗ ವಿವಾದಕ್ಕೆ (Cauvery water dispute) ಸಂಬಂಧಿಸಿದಂತೆ ರಿಯಲ್ ಸ್ಟಾರ್ ಉಪೇಂದ್ರ (Actor Upendra) ಅವರು ಪೂರ್ಣಚಂದ್ರ ತೇಜಸ್ವಿಯವರ ಮಾತುಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಉಪೆಂದ್ರ ಪೋಸ್ಟ್‌ನಲ್ಲಿ ʻʻಯಾವುದೇ ಭೂಭಾಗಕ್ಕೆ ಅದರದ್ದೇ ಆದ ಅನುಕೂಲಗಳು ಮತ್ತು ಅನಾನುಕೂಲಗಳು ಇರುತ್ತವೆ. ಅಲ್ಲಿನ ನೈಸರ್ಗಿಕ ಸಂಪತ್ತಿನ ಒಡೆತನ ಮತ್ತು ಅದರ ಮೊದಲ ಬಳಕೆಯ ಹಕ್ಕು ಆಯಾ ಪ್ರದೇಶದ ಜನಸಮುದಾಯದ್ದಾಗಿರುತ್ತದೆ. ಭೂಮಿಯ ಮೇಲಿನ ಖನಿಜ ಸಂಪತ್ತು, ಭೂಮಿಯ ಮೇಲಿನ ಅರಣ್ಯ ಉತ್ಪನ್ನಗಳು ಹೇಗೆ ಆಯಾ ಸರ್ಕಾರದ ಆಸ್ತಿಯೋ ಹಾಗೆಯೇ ಆ ಪ್ರದೇಶದಲ್ಲಿ ಸುರಿಯುವಮಳೆ ಹಾಗೂ ಹರಿಯುವ ನೀರಿಗೂ ಆ ಪ್ರದೇಶದ ಜೀವ ವೈವಿಧ್ಯವೇ ಪ್ರಥಮ ಹಕ್ಕುದಾರ ಆಗಿರುತ್ತಾನೆ. ಹಾಗಾಗಿ ಕಾವೇರಿ ನೀರಿನ ಮೊದಲ ಹಕ್ಕು ನಿರ್ವಿವಾದವಾಗಿ ಕರ್ನಾಟಕದ್ದೇ ಆಗಿರುತ್ತದೆ. ನಮ್ಮ ಅಗತ್ಯತೆಯನ್ನು ಪೂರೈಸಿದ ನಂತರವಷ್ಟೇ ಇತರರಿಗೆ ನೆರವಾಗುವ ಪ್ರಶ್ನೆ ಉದ್ಭವಿಸುತ್ತದೆ’ ಎಂದು ಕೆಪಿ ಪೂರ್ಣಚಂದ್ರ ತೇಜಸ್ವಿ ಹೇಳಿದ ಮಾತನ್ನುʼʼ ಉಪೇಂದ್ರ ಬರೆದುಕೊಂಡಿದ್ದಾರೆ.
ಇದನ್ನೂ ಓದಿ: Bangalore Bandh: ತಮಿಳುನಾಡು ಬಸ್‌ಗಳು ಗಡಿ ಭಾಗದಿಂದಲೇ ವಾಪಸ್, ಬಾಯ್ ಬಾಯ್ ಎಂದ ಕಂಡಕ್ಟರ್
🙏🙏🙏 pic.twitter.com/UJeTdyNGtO
— Upendra (@nimmaupendra) September 27, 2023
ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಸಾಥ್
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ಎಂ ಸುರೇಶ್ ಮಾಧ್ಯಮದೊಂದಿಗೆ ಮಾತನಾಡಿ ʻʻಚಿತ್ರರಂಗದಿಂದ ನೆಲ ಜಲ ಭಾಷೆ ವಿಚಾರವಾಗಿ ಯಾವಾಗಲೂ ಬೆಂಬಲ ಇದ್ದೆ ಇರುತ್ತದೆ. ಶುಕ್ರವಾರದ ಬಂದ್‌ಗೆ ನಮ್ಮ ಬೆಂಬಲ ಇದೆ. ಆದರೆ ನಮ್ಮ ಹೋರಾಟ ಹೇಗೆ ಎಂಬುದರ ಬಗ್ಗೆ ಇವತ್ತು ಸಭೆ ಮಾಡುತ್ತೇವೆ. ಪ್ರತ್ಯೇಕವಾಗಿ ಭಾಗಿಯಾಗಬೇಕಾ..? ಕನ್ನಡ ಸಂಘಟನೆಗಳ ಜತೆಯೇ ಮಾಡಬೇಕಾ ಎವುದನ್ನು ಚರ್ಚೆ ಮಾಡುತ್ತೇವೆ. ಕಲಾವಿದರ ಭಾಗಿ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆ ಮಾಡಿ ತಿಳಿಸುತ್ತೇವೆ. ಈಗಾಗಲೇ ಶಿವಣ್ಣ ಅವರನ್ನು ಸಂಪರ್ಕ ಮಾಡುತ್ತ ಇದ್ದೇವೆ. ಇವತ್ತಿನ ಸಭೆಯಲ್ಲಿ ಎಲ್ಲಾ ನಿರ್ಧಾರ ಆಗಲಿದೆʼ ʼಎಂದರು. ಈಗಾಗಲೇ ಕನ್ನಡ ಚಿತ್ರರಂಗದಿಂದ ಶಿವರಾಜ್ಕುಮಾರ್, ದರ್ಶನ್, ಉಪೇಂದ್ರ, ಸುದೀಪ್ ಮೊದಲಾದ ಸ್ಟಾರ್ ಹೀರೊಗಳು ಕಾವೇರಿ ಪರವಾಗಿ ಧ್ವನಿ ಎತ್ತಿದ್ದಾರೆ.
ಉಪೇಂದ್ರ ಅವರು ಕೆಲವು ದಿನಗಳ ಹಿಂದೆಯಷ್ಟೇ ಯುಐ ಟೀಸರ್ ಬಿಡುಗಡೆಗೊಳಿಸಿದ್ದರು. ಸದ್ಯ ಕನ್ನಡದಲ್ಲಿ ನಿರ್ಮಾಣ ಆಗುತ್ತಿರುವ ಹೈ ಬಜೆಟ್ ಸಿನಿಮಾಗಳಲ್ಲಿ ‘UI’ ಕೂಡ ಒಂದು. ತನ್ನ ಕನಸನ್ನು ಸಿನಿಪ್ರಿಯರು ಒಟಿಟಿಯಲ್ಲಿ ಅಲ್ಲದೆ ಥಿಯೇಟರ್‌ನಲ್ಲೇ ಸಿನಿಮಾ ನೋಡಬೇಕು ಅಂತ ಉಪ್ಪಿ ಆಸೆ ಪಟ್ಟು ಅದ್ಧೂರಿಯಾಗಿ ಈ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ಟಗರು, ಸಲಗ ಖ್ಯಾತಿಯ ಕೆ.ಪಿ. ಶ್ರೀಕಾಂತ್ ಹಾಗೂ ಲಹರಿ ಸಂಸ್ಥೆಯವರು ನಿರ್ಮಾಣ ಜವಾಬ್ದಾರಿಯನ್ನು ಹೊತ್ತಿಕೊಂಡಿದ್ದಾರೆ.