Site icon Vistara News

V Manohar: 23 ವರ್ಷಗಳ ನಂತರ ಡೈರೆಕ್ಟರ್ ಕ್ಯಾಪ್ ತೊಟ್ಟ ವಿ.ಮನೋಹರ್

Darbar Film

ಬೆಂಗಳೂರು: 23 ವರ್ಷಗಳ ನಂತರ ವಿ.ಮನೋಹರ್ (V Manohar) ನಿರ್ದೇಶನಕ್ಕೆ ಇಳಿದಿದ್ದಾರೆ. ಜೂನ್ 9ರಂದು ಚಿತ್ರಮಂದಿರಗಳಲ್ಲಿ `ದರ್ಬಾರ್‌’ ಸಿನಿಮಾ ಬಿಡುಗಡೆಯಾಗಲಿದೆ. 80 ರಿಂದ 100 ಥಿಯೇಟರ್‌ಗಳಲ್ಲಿ ಸಿನಿಮಾ ಬಿಡುಗಡೆಯಾಗುತ್ತಿದೆ. ಇದೀಗ ಚಿತ್ರದ ಪ್ರಚಾರ ಕಾರ್ಯ ಭರದಿಂದ ಸಾಗಿದೆ.

ಈ ಕುರಿತಂತೆ ಸಂಗೀತ ನಿರ್ದೇಶಕ ವಿ.ಮನೋಹರ್ ಮಾತನಾಡಿ, “ಸುಮಾರು 23 ವರ್ಷಗಳ ನಂತರ ನಾನು ಮತ್ತೆ ಸಿನಿಮಾ ನಿರ್ದೇಶನಕ್ಕೆ ಕೈ ಹಾಕಿದ್ದೇನೆ. ಅದಕ್ಕೆ ಕಾರಣ ಈ ಸಿನಿಮಾದ ನಟ ಸತೀಶ್‌. ಸಿನಿಮಾರಂಗಕ್ಕೆ ಬರುವುದಕ್ಕೂ ಮುನ್ನ ನಾನು ಕೆಲ ದಿನಪತ್ರಿಕೆಗಳಿಗೆ ಕಾರ್ಟೂನ್ ಬರೆಯುತ್ತಿದ್ದೆ. ಆಗಿಂದಲೇ ನಾನು ರಾಜಕೀಯದ ಬಗ್ಗೆ ತಿಳಿದುಕೊಂಡಿದ್ದೆ. ರಾಜಕೀಯ ವಿಡಂಬನೆಯ ಕಥೆಯನ್ನು “ದರ್ಬಾರ್ ಸಿನಿಮಾದ ಮೂಲಕ ಪ್ರೇಕ್ಷಕರ ಮುಂದೆ ತರುತ್ತಿದ್ದೇವೆʼʼ ಎಂದರು.

ʻʻದರ್ಬಾರ್’ ಸಿನಿಮಾ ಶುರುವಾದ ನಂತರ ಕೋವಿಡ್ ಹಚ್ಚಾಯಿತು, ಆ ಭಯದಲ್ಲಿಯೇ ಸಿನಿಮಾದ ಶೂಟಿಂಗ್‌ ಮುಗಿಸಿದ್ದೆವು. ಮದ್ದೂರು ಬಳಿಯ ಹಳ್ಳಿಯೊಂದರಲ್ಲಿ ಸಿನಿಮಾದ ಬಹುತೇಕ ಶೂಟಿಂಗ್‌ ನಡೆಸಲಾಗಿದೆ. ಈ ಚಿತ್ರದಲ್ಲಿ ಹಲವಾರು ಕಲಾ ಬಳಗ ಹಾಗೂ ರಂಗ ಕಲಾವಿದರ ತಂಡ ಇದೆʼʼಎಂದು ನಿರ್ಮಾಪಕ ಸತೀಶ್‌ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Manoj Bajpayee: ಹೊಸ ದಾಖಲೆ ಬರೆದ ಮನೋಜ್​ ಬಾಜಪೇಯಿ ಸಿನಿಮಾ!

3.5 ಕೋಟಿ ರೂ. ವೆಚ್ಚದಲ್ಲಿ ಸಿನಿಮಾ ನಿರ್ಮಾಣ ಮಾಡಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಮದ್ದೂರು ತಾಲೂಕಿನ ಮಾರದೇವನಹಳ್ಳಿ, ಚನ್ನಸಂದ್ರ, ಆತಗೂರು ತೈಲೂರು, ನಿಡಘಟ್ಟ ಸುತ್ತಮುತ್ತ ಚಿತ್ರೀಕರಣ ನಡೆದಿದೆ.

Exit mobile version