Vasishta Simha and Haripriya: ಸಿಂಹಪ್ರಿಯಾ ಅದ್ಧೂರಿ ಆರತಕ್ಷತೆ; ಶುಭಕೋರಿದ ಗಣ್ಯರು - Vistara News

ಸಿನಿಮಾ

Vasishta Simha and Haripriya: ಸಿಂಹಪ್ರಿಯಾ ಅದ್ಧೂರಿ ಆರತಕ್ಷತೆ; ಶುಭಕೋರಿದ ಗಣ್ಯರು

ಪರಸ್ಪರ ಪ್ರೀತಿಸುತ್ತಿದ್ದ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜನವರಿ 26ರಂದು ಮೈಸೂರಿನಲ್ಲಿ ಮದುವೆಯಾಗಿದ್ದಾರೆ. ಬೆಂಗಳೂರಿನಲ್ಲಿ ಜನವರಿ 28ರಂದು ಅವರ ಆರತಕ್ಷತೆ ಕಾರ್ಯಕ್ರಮ ನೆರವೇರಿದೆ.

VISTARANEWS.COM


on

vasishta simha and haripriya reception
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಜನವರಿ 26ರಂದು ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಹರಿಪ್ರಿಯಾ-ವಸಿಷ್ಠ ಸಿಂಹ ಜೋಡಿಯ ಆರತಕ್ಷತೆ ಬೆಂಗಳೂರಿನ ದಾಸನಪುರದ ಬಳಿ ಖಾಸಗಿ ರೆಸಾರ್ಟ್​​ನಲ್ಲಿ ಅದ್ಧೂರಿಯಾಗಿ ನಡೆಯಿತು. ಈ ನವದಂಪತಿಯ ರಿಸಪ್ಷನ್​​ಗೆ ಸ್ಯಾಂಡಲ್​ವುಡ್​​ನ ಹಲವು ಗಣ್ಯರು ಶುಭಕೋರಿದರು. ಗುರು ದೇಶಪಾಂಡೆ, ಗೋಲ್ಡನ್ ಸ್ಟಾರ್​ ಗಣೇಶ್​, ಹಿರಿಯ ನಟ ಶ್ರೀನಾಥ್, ರಮೇಶ್ ಅರವಿಂದ್, ಲಹರಿ ವೇಲು, ಮಾಲಾಶ್ರೀ, ಅಮೂಲ್ಯ, ಶರಣ್, ಶ್ರುತಿ, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ನಿರ್ದೇಶಕ ಚೇತನ್ ಕುಮಾರ್, ಹಂಸಲೇಖ, ಲತಾ ಹಂಸಲೇಖ, ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ಅಭಿಷೇಕ್ ಅಂಬರೀಷ್ ಮತ್ತು ಇತರ ಗಣ್ಯರು ಆಗಮಿಸಿ ಶುಭ ಹಾರೈಸಿದ್ದಾರೆ.

ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರು ಜನವರಿ 26, ಗುರುವಾರ ಮೈಸೂರಿನ (Mysore) ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಮದುವೆ ಆಗಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಸೇರಿದಂತೆ ಅನೇಕ ಗಣ್ಯ ವ್ಯಕ್ತಿಗಳು ಮದುವೆಯಲ್ಲಿ ಭಾಗಿಯಾಗಿದ್ದರು. ನಟ ಶಿವರಾಜ್​ಕುಮಾರ್​, ಸಂಸದ ಪ್ರತಾಪ್​ ಸಿಂಹ, ಬಿಜೆಪಿ ಶಾಸಕ ಎಸ್​.ಎ.ರಾಮದಾಸ್​ ಇತರರು ಮದುವೆಯಲ್ಲಿ ಪಾಲ್ಗೊಂಡು ಶುಭಕೋರಿದ್ದರು.

#image_title

ಇದನ್ನೂ ಓದಿ: Vasishta simha and Haripriya: ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಸಿಷ್ಠ ಸಿಂಹ-ಹರಿಪ್ರಿಯಾ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

VISTARANEWS.COM


on

ತಮಿಳುನಾಡು ಚುನಾವಣೆ ಮುಗಿದು ಫಲಿತಾಂಶಕ್ಕೆ ದಿನಗಣನೆ ಎದುರಾಗಿದೆ. ಇದೇ ವೇಳೆ ಟಿವಿಕೆ ಯ ಪ್ರಮುಖ ನಾಯಕ ‘ದಳಪತಿ’ ಖ್ಯಾತಿಯ ವಿಜಯ್‌ ಆಸ್ತಿ ವಿವಾದ ಮಾತ್ರ ಮತ್ತೆ ಮತ್ತೆ ಮುನ್ನೆಲೆಗೆ ಬರುತ್ತಲೇ ಇದೆ. ಈ ಬಾರಿ ವಿವಾದದ ಕೇಂದ್ರಬಿಂದುವಾಗಿರುವುದು ಚುನಾವಣೆಗೂ ಮುನ್ನ ಸಲ್ಲಿಕೆಯಾದ ಅಫಿಡವಿಟ್‌ನಲ್ಲಿನ ಅಂಶಗಳು. ವಿಶೇಷವಾಗಿ, ವಿಜಯ್‌ ತಮ್ಮ ಪತ್ನಿಗೆ ನೀಡಿದ್ದಾರೆ ಎನ್ನಲಾದ 12 ಕೋಟಿ ರೂಪಾಯಿಗಳ ಸಾಲದ ವಿವರವು ಈಗ ರಾಜಕೀಯ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ಈ 12 ಕೋಟಿ ರೂಪಾಯಿ ಸಾಲದ ಮೂಲ ಯಾವುದು ಮತ್ತು ಇಷ್ಟು ದೊಡ್ಡ ಮೊತ್ತವನ್ನು ಪತ್ನಿಗೆ ನೀಡಲು ಕಾರಣವೇನು ಎಂಬ ಪ್ರಶ್ನೆಯನ್ನು ವಿರೋಧ ಪಕ್ಷದ ನಾಯಕರು ಎತ್ತುತ್ತಿದ್ದಾರೆ. ಚುನಾವಣಾ ಕಣದಲ್ಲಿ ಈ ಆಸ್ತಿ ವಿವರಗಳು ದೊಡ್ಡ ಪ್ರಚಾರದ ವಸ್ತುವಾಗಿದ್ದವು, ಆದರೆ ಚುನಾವಣೆ ಮುಗಿದ ನಂತರವೂ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ರಾಜಕೀಯ ವೇದಿಕೆಗಳಲ್ಲಿ ಈ ಕುರಿತಾದ ಟೀಕೆಗಳು ಮತ್ತು ಕೆಸರೆರಚಾಟಗಳು ಮುಂದುವರಿದಿವೆ. ಇದು ಕೇವಲ ವೈಯಕ್ತಿಕ ಹಣಕಾಸಿನ ವಿಚಾರವಲ್ಲ, ಇದರ ಹಿಂದೆ ಬೇರೆಯದೇ ಆದ ಆರ್ಥಿಕ ಮೂಲಗಳಿವೆ ಎಂಬುದು ವಿರೋಧಿಗಳ ಆರೋಪ.

ಸದ್ಯಕ್ಕೆ ದಳಪತಿ ಕುಟುಂಬವು ಈ ಎಲ್ಲಾ ಆರೋಪಗಳನ್ನು ತಳ್ಳಿಹಾಕಿದ್ದು, ಕಾನೂನುಬದ್ಧವಾಗಿಯೇ ಎಲ್ಲಾ ವಿವರಗಳನ್ನು ನೀಡಲಾಗಿದೆ ಎಂದು ಸಮರ್ಥಿಸಿಕೊಳ್ಳುತ್ತಿದೆ. ಆದರೂ, ಜನರ ನಡುವೆ ಈ 12 ಕೋಟಿಯ ಲೆಕ್ಕಾಚಾರವು ಭಾರಿ ಕುತೂಹಲ ಮೂಡಿಸಿದೆ. ರಾಜಕೀಯ ಮೇಲಾಟಗಳ ನಡುವೆ ವಿಜಯ್‌ ಆಸ್ತಿ ಮತ್ತು ಸಾಲದ ವಿವಾದವು ಅಂತಿಮವಾಗಿ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದು ಈಗ ಎಲ್ಲರ ಗಮನ ಸೆಳೆದಿದೆ.

Continue Reading

Latest

‘ಟಾಕ್ಸಿಕ್’ ಬೋಲ್ಡ್ ದೃಶ್ಯದ ವಿವಾದಕ್ಕೆ ರಾಕಿಂಗ್ ಸ್ಟಾರ್ ಖಡಕ್ ರಿಯಾಕ್ಷನ್: ಟೀಕಾಕಾರರಿಗೆ ತಮ್ಮದೇ ಸ್ಟೈಲ್‌ನಲ್ಲಿ ಉತ್ತರ ಕೊಟ್ಟ ಯಶ್

VISTARANEWS.COM


on

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಟೀಸರ್‌ನಲ್ಲಿನ ಕೆಲವು ಬೋಲ್ಡ್ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ ಹಾಗೂ ಆಕ್ಷೇಪಗಳಿಗೆ ಕಾರಣವಾಗಿದ್ದವು. ಈ ವಿವಾದದ ಕುರಿತು ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನೆಮಾಕಾನ್ 2026’ ಮೇಳದಲ್ಲಿ ಮಾತನಾಡಿದ ಯಶ್, ಟೀಕಾಕಾರರಿಗೆ ತಮ್ಮದೇ ಶೈಲಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಚಿತ್ರದ ಪಾತ್ರವಾದ ‘ರಾಯಾ’ನ ಡಾರ್ಕ್ ಶೇಡ್ ಮತ್ತು ಸ್ಮಶಾನದ ಎದುರಿನ ದೃಶ್ಯಗಳ ಬಗ್ಗೆ ಎದ್ದಿದ್ದ ಪರ-ವಿರೋಧದ ಮಾತುಗಳಿಗೆ ಅವರು ಈಗ ಫುಲ್ ಸ್ಟಾಪ್ ಇಟ್ಟಿದ್ದಾರೆ.

ವಿವಾದಾತ್ಮಕ ದೃಶ್ಯಗಳನ್ನು ಸಮರ್ಥಿಸಿಕೊಂಡ ಯಶ್, ಆಕ್ಷನ್ ಸಿನಿಮಾಗಳನ್ನು ಕೇವಲ ಪುರುಷ ನಿರ್ದೇಶಕರ ದೃಷ್ಟಿಕೋನದಿಂದ ನೋಡಿ ನಮಗೆ ಅಭ್ಯಾಸವಾಗಿದೆ, ಆದರೆ ಒಬ್ಬ ಮಹಿಳಾ ನಿರ್ದೇಶಕಿ (ಗೀತು ಮೋಹನ್‌ದಾಸ್) ಆಕ್ಷನ್ ಚಿತ್ರವನ್ನು ಕಟ್ಟಿಕೊಡುತ್ತಿರುವ ರೀತಿ ತುಂಬಾ ಹೊಸತನದಿಂದ ಕೂಡಿದೆ ಎಂದಿದ್ದಾರೆ. ಕಥೆಯಲ್ಲಿ ಹೆಣ್ಣಿನ ದೃಷ್ಟಿಕೋನದಿಂದ ಭಾವನೆಗಳನ್ನು ಮತ್ತು ಬಯಕೆಗಳನ್ನು ಹೇಗೆ ಆಳವಾಗಿ ತೋರಿಸಬಹುದು ಎಂಬ ಹೊಸ ಪ್ರಯತ್ನವನ್ನು ಈ ಸಿನಿಮಾ ಮಾಡಿದೆ ಎಂದು ಅವರು ವಿವರಿಸಿದ್ದಾರೆ.

ನಿರ್ದೇಶಕಿ ಗೀತು ಮೋಹನ್‌ದಾಸ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ರಾಕಿಂಗ್ ಸ್ಟಾರ್, ಈ ಚಿತ್ರವು ಈವರೆಗಿನ ಆಕ್ಷನ್ ಸಿನಿಮಾಗಳಿಗಿಂತ ಬಹಳ ವಿಭಿನ್ನವಾಗಿರಲಿದೆ ಎಂದು ಭರವಸೆ ನೀಡಿದ್ದಾರೆ. ಕಥೆಯ ಬೇಡಿಕೆಗೆ ತಕ್ಕಂತೆ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆಯೇ ಹೊರತು ಅನಗತ್ಯವಾಗಿ ಅಲ್ಲ ಎಂಬ ಸಂದೇಶವನ್ನು ಅವರು ರವಾನಿಸಿದ್ದಾರೆ. ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಜೂನ್ 4 ರಂದು ವಿಶ್ವಾದ್ಯಂತ ತೆರೆಕಾಣಲು ಸಜ್ಜಾಗಿದೆ.

Continue Reading

Latest

ಬದುಕು ಸುಂದರವಾಗಿರಲು ಮದುವೆ-ಮಕ್ಕಳೇ ಬೇಕಿಲ್ಲ! ವೈಯಕ್ತಿಕ ಜೀವನದ ಬಗ್ಗೆ ನಿತ್ಯಾ ಮೆನನ್ ಹಂಚಿಕೊಂಡ ಮನದಾಳದ ಮಾತು

VISTARANEWS.COM


on

ದಕ್ಷಿಣ ಭಾರತದ ಪ್ರತಿಭಾವಂತ ನಟಿ ನಿತ್ಯಾ ಮೆನನ್ ತಮ್ಮ ನೇರ ನುಡಿ ಹಾಗೂ ವೈಚಾರಿಕ ನಿಲುವುಗಳಿಂದ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಕನ್ನಡ ನಟಿ ಭಾವನಾ ರಾಮಣ್ಣ ಅವರು ಮದುವೆಯಾಗದೆ ಐವಿಎಫ್ (IVF) ಮೂಲಕ ಮಗು ಪಡೆದ ವಿಷಯದ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ, ಮದುವೆ ಮತ್ತು ಮಾತೃತ್ವದ ಕುರಿತು ನಿತ್ಯಾ ಮೆನನ್ ಈ ಹಿಂದೆ ನೀಡಿದ್ದ ಹೇಳಿಕೆಗಳು ಮತ್ತೆ ಮುನ್ನಲೆಗೆ ಬಂದಿದ್ದು, ಭಾರೀ ವೈರಲ್ ಆಗುತ್ತಿವೆ. ಮದುವೆಯಾಗದೆಯೇ ಮಕ್ಕಳನ್ನು ಹೊಂದುವ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳುವ ಮೂಲಕ ಅವರು ಆಧುನಿಕ ಬದುಕಿನ ಆಯ್ಕೆಗಳನ್ನು ಸಮರ್ಥಿಸಿಕೊಂಡಿದ್ದಾರೆ.

ತಮಿಳಿನ ‘ಕಾದಲಿಕ್ಕಾ ನೇರಮಿಲ್ಲೈ’ ಸಿನಿಮಾದ ಪ್ರಚಾರದ ವೇಳೆ ನೀಡಿದ ಸಂದರ್ಶನವೊಂದರಲ್ಲಿ ಅವರು ಈ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. “ಮದುವೆಗಿಂತ ಮೊದಲು ಅಥವಾ ನಂತರ ಗರ್ಭಿಣಿಯಾಗುವುದು ಎನ್ನುವುದಕ್ಕಿಂತ, ಮದುವೆಯೇ ಇಲ್ಲದೆ ಗರ್ಭಿಣಿಯಾಗುವುದು ಅಥವಾ ಮಗು ಪಡೆಯುವುದರಲ್ಲಿ ತಪ್ಪೇನಿಲ್ಲ” ಎಂಬುದು ನಿತ್ಯಾ ಅವರ ಅಭಿಪ್ರಾಯ. ಒಬ್ಬ ಹೆಣ್ಣಿಗೆ ಮಗು ಬೇಕು ಎನಿಸಿದರೆ, ಆದರೆ ಮದುವೆಯ ಬಂಧನ ಇಷ್ಟವಿಲ್ಲದಿದ್ದರೆ ಅವಳು ಮಗು ಪಡೆಯುವ ನಿರ್ಧಾರ ಮಾಡಬಹುದು. ಇದಕ್ಕೆ ಈಗ ವೈದ್ಯಕೀಯವಾಗಿ ಸಾಕಷ್ಟು ಅವಕಾಶಗಳಿವೆ ಮತ್ತು ಹಲವರು ಇದನ್ನು ಯಶಸ್ವಿಯಾಗಿ ಅನುಸರಿಸುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ಕೇವಲ ಮಕ್ಕಳ ಬಗ್ಗೆ ಮಾತ್ರವಲ್ಲದೆ, ಮದುವೆಯಾದ ನಂತರ ಮಕ್ಕಳಿಲ್ಲದ ದಂಪತಿಗಳ ಬಗ್ಗೆಯೂ ನಿತ್ಯಾ ಮೆನನ್ ಸಂವೇದನಾಶೀಲವಾಗಿ ಮಾತನಾಡಿದ್ದಾರೆ. “ಮದುವೆಯಾದ ಮೇಲೆ ಮಕ್ಕಳಾಗಲೇಬೇಕು ಎಂಬ ಹಠ ಬೇಡ, ಮಕ್ಕಳಿಲ್ಲದಿದ್ದರೂ ಬದುಕು ಸುಂದರವಾಗಿರಲು ಸಾಧ್ಯವಿದೆ” ಎಂಬುದು ಅವರ ನಿಲುವು. ಸಮಾಜದ ಅಲಿಖಿತ ನಿಯಮಗಳನ್ನು ಪ್ರಶ್ನಿಸಿರುವ ಅವರು, ಪ್ರತಿಯೊಬ್ಬರಿಗೂ ತಮ್ಮ ಜೀವನದ ಬಗ್ಗೆ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಹಕ್ಕಿದೆ ಎಂದು ಒತ್ತಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಇವರ ಈ ‘ಬೋಲ್ಡ್’ ಹೇಳಿಕೆಗಳು ಈಗ ಯುವಜನತೆಯ ಮೆಚ್ಚುಗೆಗೆ ಪಾತ್ರವಾಗುತ್ತಿವೆ.

Continue Reading

Latest

ರಾಜಕುಮಾರ್‌ ಸಮಾಧಿಗೆ ಭೂಮಿ: ವಿವಾದ ಹುಟ್ಟು ಹಾಕಿದ ನಟ ಚೇತನ್‌ ವಿರುದ್ಧ ಅಭಿಮಾನಿಗಳ ಆಕ್ರೋಶ; ದೂರು ದಾಖಲು

VISTARANEWS.COM


on

ಬೆಂಗಳೂರು: ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಸ್ಥಳಕ್ಕೆ ಕಂಠೀರವ ಸ್ಟುಡಿಯೋ ಆವರಣದಲ್ಲಿ 2.5 ಎಕರೆ ಭೂಮಿ ನೀಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ರಾಜ್ಯಾದ್ಯಂತ ರಾಜ್‌ಕುಮಾರ್‌ ಅಭಿಮಾನಿಗಳು ಚೇತನ್‌ ವಿರುದ್ಧ ತಿರುಗಿ ಬಿದ್ದಿದ್ದಾರೆ. ಅನೇಕ ಸಂಘ ಸಂಸ್ಥೆಗಳು ಅವರ ವಿರುದ್ಧ ದೂರು ದಾಖಲಿಸಿವೆ.
ರಾಜ್‌ಕುಮಾರ್ ಅಭಿಮಾನಿಗಳ ಸಂಘಟನೆ ರಾಜ್‌ಕುಮಾರ್ ಸೇನೆ ಬಸವೇಶ್ವರನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ನಟ ಚೇತನ್ ಅಹಿಂಸಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಪಡಿಸಿದೆ. ರಾಜ್‌ಕುಮಾರ್ ಅಭಿಮಾನಿಗಳಾದ ನಮಗೆ ಅವಮಾನ ಉಂಟಾಗಿದ್ದು, ಚೇತನ್‌ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ‌.
ಡಾ. ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಭೂಮಿಯನ್ನು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಅಣ್ಣಾವ್ರ ಜನ್ಮದಿನದಂದೇ ಸಾಮಾಜಿಕ ಜಾಲತಾಣಗಳಲ್ಲಿ ಚೇತನ್ ಪೋಸ್ಟ್ ಮಾಡಿದ್ದರು
ತಮ್ಮ ಅಭಿಪ್ರಾಯ ಕುರಿತು ಪ್ರತಿಕ್ರಿಯೆ ನೀಡಿರುವ ಚೇತನ್, ನಾನು ಆಕ್ಷೇಪ ಎತ್ತಿದ್ದು ರಾಜ್ ಕುಮಾರ್ ಅವರಿಗೆ ಸಂಬಂಧಿಸಿದ್ದಲ್ಲ. ನಾನು ಅಮೆರಿಕಾದಲ್ಲಿ ಇದ್ದಾಗಲೂ ಅವರ ಸಿನೆಮಾ ನೋಡಿಕೊಂಡು ಬೆಳೆದಿದ್ದೇನೆ. ಚಿತ್ರರಂಗಕ್ಕೆ ಅವರು ಕೊಟ್ಟ ಕೊಡುಗೆ ಅಪಾರ. ಆದರೆ ಅವರ ಕಾಲಾನಂತರ ಅವರ ಹೆಸರಲ್ಲಿ ಸರ್ಕಾರ ಭೂಮಿ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದೇನೆ. ಮತ ಗಳಿಕೆಯ ಉದ್ದೇಶದಿಂದಲೇ ಸರ್ಕಾರ ಭೂಮಿ ಕೊಟ್ಟಿದೆ. ಅದರ ಬಗ್ಗೆ ಪ್ರಶ್ನೆ ಎತ್ತಿದ್ದೇನೆ. ಚಿತ್ರರಂಗದಲ್ಲಿ ಸಾಕಷ್ಟು ಮಂದಿ ಕೊಡುಗೆ ಕೊಟ್ಟಿದ್ದಾರೆ ಎಂದಿದ್ದಾರೆ.
ಚೇತನ್‌ ಹೇಳಿಕೆಯಲ್ಲಿ ಏನಿದೆ?
ಸರ್ಕಾರಗಳು ಭೂಮಿಯನ್ನು ಮಂಜೂರು ಮಾಡುವಾಗ ಕೇವಲ ಮತ ಬ್ಯಾಂಕ್ ಮೇಲೆ ಕಣ್ಣಿಡಬಾರದು. ಅದರ ಬದಲು ದೂರದೃಷ್ಟಿ ಮತ್ತು ಸಾರ್ವಜನಿಕ ಉಪಯುಕ್ತತೆಯನ್ನು ಗಮನಿಸಬೇಕು. 21ನೇ ಶತಮಾನದ ಭಾರತದಲ್ಲಿ ಭೂಮಿಗಾಗಿ ದೊಡ್ಡ ಹೋರಾಟವೇ ನಡೆಯುತ್ತಿದೆ. ಕೇವಲ ರಾಜಕೀಯ ಲಾಭಕ್ಕಾಗಿ ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರಿಯಲ್ಲ ಎಂದು ಪರೋಕ್ಷವಾಗಿ ಟೀಕಿಸಿದ್ದಾರೆ.
ಪುಟ್ಟಣ್ಣ ಕಣಗಾಲ್, ಸರೋಜಾ ದೇವಿ, ವಿಷ್ಣುವರ್ಧನ್ ಸೇರಿದಂತೆ ಅನೇಕ ಮಂದಿ ಕೊಡುಗೆ ನೀಡಿದ್ದಾರೆ. ಆದರೆ ಅವರ ಸಮಾಧಿಗಳಿಗೆ ಜಾಗ ಕೊಟ್ಟಿಲ್ಲ. ಕುವೆಂಪು ಅವರ ಸಮಾಧಿಯನ್ನೇ ಕುಪ್ಪಳ್ಳಿಯಲ್ಲಿ ಮಾಡಲಾಗಿದೆ. ರಾಜ್‌ಕುಮಾರ್‌ ಅವರ ಸಮಾಧಿಯನ್ನು ಗಾಜನೂರಿನಲ್ಲಿ ಮಾಡಬಹುದಿತ್ತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮಗೆ ರಾಜ್‌ಕುಮಾರ್ ಅವರ ಮೇಲೆ ಒಬ್ಬ ಶ್ರೇಷ್ಠ ಕಲಾವಿದ ಎಂಬ ಗೌರವವಿದೆ. ಆದರೆ, ಸ್ಮಾರಕ ಸಂಕೀರ್ಣಕ್ಕಾಗಿ ಬೆಂಗಳೂರಿನ ಪ್ರಮುಖ ಜಾಗದಲ್ಲಿ 2.5 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದು ಎಷ್ಟು ಸಮಂಜಸ? ಎಂದು ಪ್ರಶ್ನಿಸಿದ್ದಾರೆ.
ಅಣ್ಣಾವ್ರ ಕನ್ನಡ ಭಾಷೆ, ಕಲೆ ಮತ್ತು ನಾಡಿಗೆ ನೀಡಿದ ಕೊಡುಗೆಯನ್ನು ಅರಿಯದೆ ಚೇತನ್ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಅಭಿಮಾನಿಗಳು ಕಿಡಿಕಾರಿದ್ದಾರೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳಗಳಿಗೆ ಎಕರೆಗಟ್ಟಲೆ ಜಾಗ ನೀಡಿದಾಗ ಚೇತನ್ ಅವರಿಗೆ ಸಾರ್ವಜನಿಕ ಉಪಯುಕ್ತತೆ ನೆನಪಾಗಲಿಲ್ಲವೇ? ಕೋಟ್ಯಂತರ ಕನ್ನಡಿಗರ ಆರಾಧ್ಯ ದೈವದ ಸ್ಮಾರಕದ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ನೆಟ್ಟಿಗರು ತಿರುಗೇಟು ನೀಡಿದ್ದಾರೆ.
ಈ ಹಿಂದೆಯೂ ಚೇತನ್‌ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಕಾನೂನು ಸಂಕಷ್ಟ ಎದುರಿಸಿದ್ದರು. ಅನೇಕ ರಾಜಕೀಯ ಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದರು.

Continue Reading
Advertisement
Latest4 hours ago

ಇತಿಹಾಸ ಬರೆಯಲು ಸಜ್ಜಾದ ರನ್ ಮಷೀನ್: ಐಪಿಎಲ್ ಕ್ರಿಕೆಟ್‌ನಲ್ಲಿ ಕೊಹ್ಲಿ ಹೊಸ ರೆಕಾರ್ಡ್‌

Latest4 hours ago

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಉಗ್ರ ಮೊಹಮ್ಮದ್ ಶಾರಿಕ್‌ಗೆ 10 ವರ್ಷ ಕಠಿಣ ಶಿಕ್ಷೆ ವಿಧಿಸಿದ NIA ನ್ಯಾಯಾಲಯ

Latest4 hours ago

ಪಾಕಿಸ್ತಾನಕ್ಕೆ ಮತ್ತೊಂದು ಆರ್ಥಿಕ ಪೆಟ್ಟು: 3.5 ಬಿಲಿಯನ್ ಡಾಲರ್ ಸಾಲ ಮರುಪಾವತಿಗೆ ಯುಎಇ ಸೂಚನೆ

ಸಿನಿಮಾ5 hours ago

ಎಲೆಕ್ಷನ್ ಮುಗಿದರೂ ಮುಗಿಯದ ದಳಪತಿ ಆಸ್ತಿ ಸಂಘರ್ಷ: ಹೆಂಡತಿಗೆ ಕೊಟ್ಟ 12 ಕೋಟಿ ಸಾಲದ ರಹಸ್ಯವೇನು?

Latest6 hours ago

ಹರಿಹರ ಪೀಠದಲ್ಲಿ ಲೆಕ್ಕ ಸಮರ: ವಚನಾನಂದ ಶ್ರೀ, ಟ್ರಸ್ಟಿಗಳ ನಡುವೆ ಆರೋಪ-ಪ್ರತ್ಯಾರೋಪ.

Latest7 hours ago

RCB v/s GT ಪಂದ್ಯದ ವೇಳೆ ಭದ್ರತಾ ವೈಫಲ್ಯ: 240 ಸಿಸಿಟಿವಿಗಳನ್ನು ನಿಷ್ಕ್ರಿಯಗೊಳಿಸಿದ್ದೇಕೆ? ಹೊರಬಿತ್ತು ಶಾಕಿಂಗ್‌ ಸತ್ಯ!

Latest7 hours ago

ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ: ಮೇ 1ರಿಂದ ಬದಲಾಗಲಿವೆ ಎಲ್‌ಪಿಜಿ ನಿಯಮಗಳು

Latest9 hours ago

ಮೇನಲ್ಲಿ ನಡೆಯಲಿದೆ ಪ್ಯಾನ್-ಐಐಟಿ ಬೆಂಗಳೂರು ಸಮ್ಮಿಟ್-2026

ಕರ್ನಾಟಕ10 hours ago

ಡಿಕೆಶಿ ಪದೇ ಪದೇ ದೆಹಲಿಗೆ ಹೋಗುತ್ತಿರುವುದೇಕೆ? ಸತೀಶ್ ಜಾರಕಿಹೊಳಿ ನೀಡಿದ ಆ ಗೊಂದಲದ ಹೇಳಿಕೆಯಲ್ಲಿದೆಯೇ ದೊಡ್ಡ ಸುಳಿವು

Latest11 hours ago

ಇರಾನ್‌ನಿಂದ ಹೊಸ ಶಾಂತಿ ಸಂಧಾನ: ಹಾರ್ಮುಜ್ ಜಲಸಂಧಿ ಮುಕ್ತಗೊಳಿಸಲು ಅಮೆರಿಕಕ್ಕೆ ಷರತ್ತುಬದ್ಧ ಪ್ರಸ್ತಾವನೆ ಸಲ್ಲಿಕೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌