Actress Haripriya: ತೆಲಂಗಾಣದಲ್ಲಿ ವಸಿಷ್ಠ ಸಿಂಹಗೆ ಹರಿಪ್ರಿಯಾ ನೀಡಿದ ಸರ್‌ಪ್ರೈಸ್‌ ಏನು? - Vistara News

South Cinema

Actress Haripriya: ತೆಲಂಗಾಣದಲ್ಲಿ ವಸಿಷ್ಠ ಸಿಂಹಗೆ ಹರಿಪ್ರಿಯಾ ನೀಡಿದ ಸರ್‌ಪ್ರೈಸ್‌ ಏನು?

ಮದುವೆಯಾಗಿ ಎರಡು ತಿಂಗಳ ನಂತರ ವಿಶೇಷ ಫೋಟೊಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಮದುವೆ ಬಳಿಕ ಹರಿಪ್ರಿಯಾ (Actress Haripriya) ಅವರು ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ವಸಿಷ್ಠ ಸಿಂಹಗೆ ಹರಿಪ್ರಿಯಾ ನೀಡಿದ ಸರ್‌ಪ್ರೈಸ್‌ ಏನು?

VISTARANEWS.COM


on

vasishta simha gave surprise to wife hariprriya
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ನಟಿ ಹರಿಪ್ರಿಯಾ (Actress Haripriya) ಮತ್ತು ನಟ ವಸಿಷ್ಠ ಸಿಂಹ ಜನವರಿ 26ರಂದು (Actress Haripriya) ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆಯಾಗಿ ಎರಡು ತಿಂಗಳ ನಂತರ ವಿಶೇಷ ಫೋಟೊಗಳನ್ನು ದಂಪತಿ ಹಂಚಿಕೊಂಡಿದ್ದಾರೆ. ಮದುವೆ ಬಳಿಕ ಹರಿಪ್ರಿಯಾ ಅವರು ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ವಸಿಷ್ಠ ಸಿಂಹ ಕೂಡ ಶೂಟಿಂಗ್‌ಗೆಂದು ತೆಲಂಗಾಣಕ್ಕೆ ತೆರಳಿದ್ದರು. ಪತ್ನಿ ಹರಿಪ್ರಿಯಾ ಅವರು ಅಲ್ಲಿಗೆ ಸರ್​ಪ್ರೈಸ್ ವಿಸಿಟ್ ಕೊಟ್ಟಿದ್ದಾರೆ. ಈ ಮೂಲಕ ಪತಿಗೆ ಅಚ್ಚರಿ ಮೂಡಿಸಿದ್ದಾರೆ. ಅದಕ್ಕೆ ನಟ ಫೋಟೊಗಳನ್ನು ಶೇರ್ ಮಾಡಿ ಪತ್ನಿಗೆ ಥ್ಯಾಂಕ್ಸ್ ಹೇಳಿದ್ದಾರೆ.

ಸರ್‌ಪ್ರೈಸ್‌ ವಿಸಿಟ್‌ ಬಗ್ಗೆ ವಸಿಷ್ಠ ಸಿಂಹ ಪೋಸ್ಟ್‌ ಹಂಚಿಕೊಂಡಿದ್ದು, ಸಂತಸ ಹಂಚಿಕೊಂಡಿದ್ದಾರೆ. ಇಷ್ಟೇ ಅಲ್ಲ ವಸಿಷ್ಠ ಸಿಂಹ ಹಾಗೂ ಅವರ ಸಿಬ್ಬಂದಿಗೆ ವಿಶೇಷ ಅಡುಗೆ ಮಾಡಿ ಹರಿಪ್ರಿಯಾ ಉಣಬಡಿಸಿದ್ದಾರೆ. ಈ ಫೋಟೊಗಳನ್ನು ಹಂಚಿಕೊಂಡು ವಸಿಷ್ಠ ಸಿಂಹ ಧನ್ಯವಾದ ಅರ್ಪಿಸಿದ್ದಾರೆ.

ವಸಿಷ್ಠ ಸಿಂಹ ಪೋಸ್ಟ್‌ನಲ್ಲಿ ʻʻಎರಡು ತಿಂಗಳು ಕಳೆದವು. ನಿಜ, ಸಮಯವು ಬೇಗ ಹೋಗುತ್ತದೆ. ನಮ್ಮ ಮದುವೆಯ ಕ್ಷಣಗಳನ್ನು ನೆನಪಿಸಿಕೊಳ್ಳುವುದು ಮತ್ತು ಮದುವೆಯ ನಂತರದ ನಮ್ಮ ಜೀವನವು ಉತ್ತಮ ಪ್ರಯಾಣವಾಗಿದೆ. ಇದು ನನಗೆ ಖುಷಿಯನ್ನು ತಂದುಕೊಟ್ಟ ಕಾರಣ ಈ ಚಿತ್ರಗಳನ್ನು ಪೋಸ್ಟ್ ಮಾಡಿದೆ. ನಾನು ತೆಲಂಗಾಣದಲ್ಲಿ ಶೂಟಿಂಗ್ ಮಾಡುತ್ತಿದ್ದಾಗ ನೀವು ಶೂಟಿಂಗ್ ಸೆಟ್‌ಗೆ ಅನಿರೀಕ್ಷಿತ ಭೇಟಿ ನೀಡಿ ನನಗೆ ಮತ್ತು ನನ್ನ ಸಿಬ್ಬಂದಿಗೆ ಅಡುಗೆ ಮಾಡಿಕೊಟ್ಟಿದ್ದೀರಿ. ಮನೆಯಿಂದ ತುಂಬ ದಿನ ದೂರವಿದ್ದ ಕಾರಣ ಮನೆಯ ಫುಡ್‌ಗಾಗಿ ಹಂಬಲಿಸುತ್ತಿದ್ದೆ. ಅಷ್ಟೇ ಅಲ್ಲ ನಿಮ್ಮನ್ನು ನೋಡಬೇಕೆಂಬ ಆಸೆಯನ್ನು ಹೊಂದಿದ್ದೆ. ಈ ಮೂಲಕ ಮನೆಯೇ ಇಲ್ಲಿ ಬಂದಂಗಾಯ್ತುʼʼ ಎಂದು ಬರೆದುಕೊಂಡಿದ್ದಾರೆ.

ವಸಿಷ್ಠ ಸಿಂಹ ಪೋಸ್ಟ್‌

ಇದನ್ನೂ ಓದಿ: Actress Haripriya: ಗುಡ್‌ ನ್ಯೂಸ್‌ ಅಂದ್ರು ಹರಿಪ್ರಿಯಾ, ಮರಿ ಸಿಂಹ ಆಗಮನನಾ ಅಂತ ಕೇಳಿದ್ರು ನೆಟ್ಟಿಗರು!

ಇತ್ತೀಚೆಗೆ ದಂಪತಿ ಅವರು ಯುಗಾದಿ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದರು. ಫೋಟೊಗಳನ್ನೂ ಹಂಚಿಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Latest

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

VISTARANEWS.COM


on

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ ಕುಟುಂಬದಲ್ಲಿ ಸಂಭ್ರಮ ಮನೆಮಾಡಿದೆ. ಅಟ್ಲಿ ಅವರ ಪತ್ನಿ ಪ್ರಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಅಟ್ಲಿ ಹಾಗೂ ಅವರ ಪತ್ನಿ ಪ್ರಿಯಾ ಅವರ ಮನೆಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗಿದೆ. ಈ ದಂಪತಿ ಎರಡನೇ ಬಾರಿಗೆ ಪೋಷಕರಾಗಿದ್ದು, ಮುದ್ದಾದ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದಾರೆ. ವಿಶೇಷವೆಂದರೆ, ಅಟ್ಲಿ ನಿರ್ದೇಶನದ ‘ರಾಕಾ’ ಚಿತ್ರದ ನಾಯಕಿ ದೀಪಿಕಾ ಪಡುಕೋಣೆ ಅವರು ತಮ್ಮ ಎರಡನೇ ಪ್ರೆಗ್ನೆನ್ಸಿ ಸುದ್ದಿಯನ್ನು ಹಂಚಿಕೊಂಡ ಮರುದಿನವೇ ಅಟ್ಲೀ ಕೂಡ ಈ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಪ್ರಿಯಾ ಅಟ್ಲಿ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅಟ್ಲಿ ಮತ್ತು ಪ್ರಿಯಾ, ತಮ್ಮ ಮನೆಗೆ ಹೆಣ್ಣು ಮಗುವಿನ ಆಗಮನವಾಗಿರುವುದನ್ನು ಖಚಿತಪಡಿಸಿದ್ದಾರೆ. ಈ ಪೋಸ್ಟ್‌ ಗೆ ‘ಧನ್ಯತೆಯ ಭಾವ ಮೂಡಿದೆ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ತಮ್ಮ ಮೊದಲ ಪುತ್ರ ಮೀರ್ ಈಗ ದೊಡ್ಡ ಅಣ್ಣನ ಜವಾಬ್ದಾರಿ ವಹಿಸಿಕೊಳ್ಳಲು ಸಜ್ಜಾಗಿರುವ ಮುದ್ದಾದ ಪೋಸ್ಟರ್ ಒಂದನ್ನೂ ಹಂಚಿಕೊಂಡಿರುವುದು ಕುತೂಹಲ ಮೂಡಿಸಿದೆ.
ಅಟ್ಲಿ ಅವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಇಡೀ ದೇಶದ ಚಿತ್ರರಂಗದ ಗಣ್ಯರು ಮತ್ತು ಅಭಿಮಾನಿಗಳು ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಅಟ್ಲಿ ಮತ್ತು ಪ್ರಿಯಾ ಹಲವು ವರ್ಷಗಳ ಕಾಲ ಪ್ರೀತಿಸಿ 2014ರಲ್ಲಿ ವಿವಾಹವಾಗಿದ್ದರು. ಮದುವೆಯಾದ ಎಂಟು ವರ್ಷಗಳ ನಂತರ 2023ರ ಜನವರಿ 31ರಂದು ದಂಪತಿಗೆ ಮೊದಲ ಪುತ್ರ ಮೀರ್ ಜನಿಸಿದ್ದ. ಈಗ ಎರಡನೇ ಮಗುವಿನ ಆಗಮನವಾಗಿದೆ.
ಚಿತ್ರರಂಗದಲ್ಲಿಯೂ ಅಟ್ಲಿ ಅವರಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಈಗ ಅವರು ‘ರಾಕಾ’ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಟಾಲಿವುಡ್ ಸ್ಟಾರ್ ನಟ ಅಲ್ಲು ಅರ್ಜುನ್ ಮತ್ತು ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ನಟಿಸುತ್ತಿದ್ದಾರೆ.

Continue Reading

Latest

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

VISTARANEWS.COM


on

ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟಕ್ಕೆ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್, ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ ಬಗ್ಗೆ ಅಭಿಮಾನಿಗಳಲ್ಲಿ ಇದ್ದ ಕುತೂಹಲಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ಇತ್ತೀಚೆಗೆ ಅಮೆರಿಕದ ಲಾಸ್ ವೇಗಾಸ್‌ನಲ್ಲಿ ನಡೆದ ‘ಸಿನಿಮಾಕಾನ್ 2026’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯಶ್, ಈ ಸಿನಿಮಾ ಕೇವಲ ರಕ್ತಪಾತದ ಗ್ಯಾಂಗ್‌ಸ್ಟರ್ ಕಥೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮೇಲ್ನೋಟಕ್ಕೆ ಇದು ಆಕ್ಷನ್ ಸಿನಿಮಾದಂತೆ ಕಂಡರೂ, ಕಥೆಯ ಒಳಗೆ ಮಾನವನ ಮನಸ್ಥಿತಿಯ ಆಳವಾದ ಪದರಗಳಿವೆ ಮತ್ತು ಇದು ಪ್ರತಿಯೊಬ್ಬರಿಗೂ ಹತ್ತಿರವಾಗುವಂತಹ ಭಾವನಾತ್ಮಕ ಕಥೆಯನ್ನು ಹೊಂದಿದೆ ಎಂದು ಅವರು ಅಚ್ಚರಿಯ ಮಾಹಿತಿ ಹಂಚಿಕೊಂಡಿದ್ದಾರೆ.

ವಿಶೇಷವೆಂದರೆ, ‘ಟಾಕ್ಸಿಕ್’ ಕೇವಲ ಭಾರತೀಯ ಭಾಷೆಗಳಿಗೆ ಸೀಮಿತವಾಗಿಲ್ಲ. ಈ ಚಿತ್ರವನ್ನು ಕನ್ನಡದ ಜೊತೆಗೆ ನೇರವಾಗಿ ಇಂಗ್ಲಿಷ್ ಭಾಷೆಯಲ್ಲೂ ಚಿತ್ರೀಕರಿಸಲಾಗಿದ್ದು, ಅಂತರರಾಷ್ಟ್ರೀಯ ಪ್ರೇಕ್ಷಕರನ್ನು ಸೆಳೆಯುವ ಗುರಿ ಹೊಂದಿದೆ. ಜಾಗತಿಕ ಮಟ್ಟದ ತಂತ್ರಜ್ಞರು ಈ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದು, ದೃಶ್ಯ ವೈಭವದ ಜೊತೆಗೆ ಪ್ರೇಕ್ಷಕರನ್ನು ಆಳವಾಗಿ ಯೋಚಿಸುವಂತೆ ಮಾಡುವ ವಿಭಿನ್ನ ಶೈಲಿಯ ಸಿನಿಮಾ ಇದಾಗಲಿದೆ ಎಂಬ ಭರವಸೆಯನ್ನು ಯಶ್ ನೀಡಿದ್ದಾರೆ. ಈ ಸುದ್ದಿಯು ಯಶ್ ಅವರ ಅಭಿಮಾನಿಗಳಲ್ಲಿ ಸಿನಿಮಾದ ಮೇಲಿರುವ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ.

ಚಿತ್ರದ ಬಿಡುಗಡೆ ವಿಚಾರಕ್ಕೆ ಬರುವುದಾದರೆ, ಈ ಹಿಂದೆ ಮಧ್ಯಪ್ರಾಚ್ಯದ ಉದ್ವಿಗ್ನ ಪರಿಸ್ಥಿತಿಯಿಂದಾಗಿ ಸಿನಿಮಾ ವಿಳಂಬವಾಗಬಹುದು ಎಂಬ ವದಂತಿಗಳಿದ್ದವು. ಆದರೆ, ಸದ್ಯಕ್ಕೆ ಲಭ್ಯವಿರುವ ಮಾಹಿತಿಯ ಪ್ರಕಾರ ಎಲ್ಲ ಅಡೆತಡೆಗಳನ್ನು ದಾಟಿ ಸಿನಿಮಾ ಜೂನ್ 4, 2026 ರಂದು ಅದ್ಧೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲು ಸಜ್ಜಾಗಿದೆ. ಕಿಯಾರಾ ಅಡ್ವಾಣಿ, ನಯನತಾರಾ ಅವರಂತಹ ಘಟಾನುಘಟಿ ಕಲಾವಿದರ ದಂಡೇ ಈ ಸಿನಿಮಾದಲ್ಲಿದ್ದು, ಜೂನ್ ತಿಂಗಳಿನಲ್ಲಿ ‘ಟಾಕ್ಸಿಕ್’ ಹವಾ ಶುರುವಾಗುವುದು ಗ್ಯಾರಂಟಿ ಎನ್ನಲಾಗುತ್ತಿದೆ.

Continue Reading

ಸಿನಿಮಾ

Dolly Dhananjay: ಕೋಟೆ ನಾಡಿನ ಕನ್ಯೆ ಜತೆಗೆ ಸಪ್ತಪದಿ ತುಳಿಯಲ್ಲಿದ್ದಾರೆ ಡಾಲಿ ಧನಂಜಯ್‌

Dolly Dhananjay : ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಟ ಧನಂಜಯ್ ಹಾಗೂ ವೈದ್ಯೆ ಧನ್ಯತಾ ಜೋಡಿ ಹಸೆಮಣೆ ಏರಲಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ ಡಾಲಿ ಧನಂಜಯ್‌ ತಮ್ಮ ಬಾಳಸಂಗಾತಿಯನ್ನು ಪರಿಚಯಿಸಿದ್ದಾರೆ.

VISTARANEWS.COM


on

Dolly Dhananjay

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ನಟರಾಕ್ಷಸ ಡಾಲಿ ಧನಂಜಯ್‌ (Dolly Dhananjay) ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿ ನೀಡಿದ್ದಾರೆ.

Sandalwood star Dali Dhananjay And dhanya They are getting married next year

ಹಲವು ದಿನಗಳ ಮೌನಕ್ಕೆ ತೆರೆ ಎಳೆದಿರುವ ಧನಂಜಯ್ ಬೆಳಕಿನ ಹಬ್ಬ ದೀಪಾವಳಿಯಂದು ಬಾಳ ಸಂಗತಿಯನ್ನು ಪರಿಚಯಿಸಿದ್ದಾರೆ.

Sandalwood star Dali Dhananjay And dhanya They are getting married next year

ಡಾಕ್ಟರ್ ಧನ್ಯತಾ ಜತೆಗೆ ಸಪ್ತಪದಿ ತುಳಿಯಲಿದ್ದಾರೆ. ಕೋಟೆ ನಾಡು ಚಿತ್ರದುರ್ಗದ ಧನ್ಯತಾ ಅವರೊಂದಿಗೆ ಮುಂದಿನ ವರ್ಷ ಫೆಬ್ರವರಿ 16 ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ.

ಸಾಂಸ್ಕೃತಿಕ ನಗರಿ ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಧನ್ಯತಾ ಹಾಗೂ ಧನಂಜಯ್‌ ವಿವಾಹ ನಡೆಯಲಿದೆ.

Sandalwood star Dali Dhananjay And dhanya They are getting married next year

ಸೌತ್ ಸಿನಿಮಾ ಇಂಡಸ್ಟ್ರಿ ತಾರೆಯರು ಹಾಗು ಹಲವು ರಾಜಕೀಯ ಗಣ್ಯರು ಡಾಲಿ ಧನಂಜಯ್ ವಿವಾಹಕ್ಕೆ ಸಾಕ್ಷಿಯಾಗಲಿದ್ದಾರೆ.

Sandalwood star Dali Dhananjay And dhanya They are getting married next year

ವಿಭಿನ್ನ ರೀತಿಯ ಫೋಟೊಶೂಟ್‌ ನಡೆಸಿ ತಮ್ಮ ಹುಡುಗಿಯನ್ನು ಪರಿಚಯಿಸಿದ ಡಾಲಿ ಧನಂಜಯ್‌

Sandalwood star Dali Dhananjay And dhanya They are getting married next year
Continue Reading

ಸಿನಿಮಾ

Actor Darshan: ಈ ಕಾರಣಕ್ಕೆ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು; 6 ವಾರಗಳ ನಂತ್ರ ಮತ್ತೆ ಜೈಲು!

Actor Darshan: ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, 6 ವಾರಗಳ ನಂತ್ರ ಮತ್ತೆ ಸರೆಂಡರ್‌ ಆಗಬೇಕಿದೆ

VISTARANEWS.COM


on

Hc grants interim bail to actor Darshan

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 5 ತಿಂಗಳ ಬಳಿಕ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ಸಿಕ್ಕಿದೆ. ಮಧ್ಯಂತರ ಜಾಮೀನು ನೀಡಿ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಪೀಠದಿಂದ ಆದೇಶ ಹೊರಡಿದೆ. ಇನ್ನು ನಟ ದರ್ಶನ್‌ಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಸಿಕ್ಕಿಲ್ಲ. ಬದಲಾಗಿ ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್‌ ಆದೇಶ ನೀಡಿದೆ.

ಬೆನ್ನುಹುರಿ ಚಿಕಿತ್ಸೆಗೆ ದರ್ಶನ್‌ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಅಂಗೀಕಾರವಾಗಿದೆ. ದರ್ಶನ್ ಇಚ್ಛಿಸಿದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆಗೆ ಅವಕಾಶ ಕಲ್ಪಿಸಲಾಗಿದೆ. ಒಂದು ವಾರದಲ್ಲಿ ಯಾವ ರೀತಿಯ ಚಿಕಿತ್ಸೆ ಎಂಬ ವರದಿಯನ್ನು ನೀಡಬೇಕು. ದರ್ಶನ್ ತನ್ನ ಪಾಸ್‌ಪೋರ್ಟ್ ಸರಂಡರ್ ಮಾಡಬೇಕೆಂದು ನ್ಯಾ . ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ಆದೇಶಿಸಿದೆ.

ಏನಿದು ಕೊಲೆ ಕೇಸ್‌?

ಜೂನ್ 9ರಂದು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಸಂಬಂಧ ಜೂನ್ 11ರಂದು ಮೈಸೂರಿನಲ್ಲಿ ಎ2 ದರ್ಶನ್ ಅರೆಸ್ಟ್ ಆಗಿದ್ದರು. ಜೂನ್ 22ರಂದು ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು. ಜೂ.22ರಂದು ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಆದರೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನೆಲೆಯಲ್ಲಿ ಅಲ್ಲಿಂದ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ದರ್ಶನ್ ಶಿಫ್ಟ್ ಮಾಡಲಾಗಿತ್ತು. ಆ.29ರಂದು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ನೋವು ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ದರ್ಶನ್‌ಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶಿಸಿದೆ.

ಪವಿತ್ರಾಗೌಡ ಖುಷಿ

ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ಖುಷಿ ಆಗಿದ್ದಾರೆ. ತನ್ನಿಂದಾಗಿ ದರ್ಶನ್ ಜೈಲು ಸೇರಿದ ಎಂಬ ಬೇಸರವಿತ್ತು. ದರ್ಶನ್‌ಗೆ ಜಾಮೀನು ಸಿಕ್ಕಿದೆ ಎಂದು ಪವಿತ್ರಾ ಖುಷಿಯಾಗಿದ್ದು, ತನಗೂ ಬೇಲ್ ಸಿಗುತ್ತೆಂಬ ವಿಶ್ವಾಸದಲ್ಲಿದ್ದಾರೆ.

Continue Reading
Advertisement
Latest2 ಗಂಟೆಗಳು ago

ಹೆಣ್ಣು ಮಗುವಿನ ತಂದೆಯಾದ ಖ್ಯಾತ ನಿರ್ದೇಶಕ ಅಟ್ಲಿ; ಅಭಿನಂದನೆಗಳ ಮಹಾಪೂರ

Latest3 ಗಂಟೆಗಳು ago

ಮಹಿಳಾ ಮೀಸಲು ಮಸೂದೆ ಕಾಂಗ್ರೆಸ್‌ ಪಕ್ಷದ ಕನಸು ಮತ್ತು ಕೂಸು: ಡಿ.ಕೆ.ಶಿವಕುಮಾರ್

ಅವಿಭಾಗೀಕೃತ3 ಗಂಟೆಗಳು ago

ಕಾಶ್ಮೀರ: ಕಂದಕಕ್ಕೆ ಉರುಳಿದ ಬಸ್; 15 ಸಾವು, ಹಲವರ ಸ್ಥಿತಿ ಗಂಭೀರ

ದೇಶ3 ಗಂಟೆಗಳು ago

ದೇಶದ ಪ್ರಧಾನಿಗೆ ಕೈಯಾರ ಚುರುಮುರಿ ಕೊಟ್ಟರೂ ಇಲ್ಲ ಖುಷಿ! ಆ ತಪ್ಪು ಮಾಡಬಾರದಿತ್ತು ಅಂದ ವ್ಯಾಪಾರಿ

Latest3 ಗಂಟೆಗಳು ago

ಗ್ಯಾಂಗ್‌ಸ್ಟರ್ ಸಿನಿಮಾ ಎಂಬ ಭ್ರಮೆಯಲ್ಲಿದ್ದವರಿಗೆ ಶಾಕ್ ಕೊಟ್ಟ ಯಶ್; ‘ಟಾಕ್ಸಿಕ್’ ಹಿಂದಿದೆ ಬೇರೆಯದೇ ಪ್ಲ್ಯಾನ್‌!

ಅವಿಭಾಗೀಕೃತ3 ಗಂಟೆಗಳು ago

ಅಹಿಂದ ರಕ್ಷಣೆ ಹೊಣೆ ಹೊತ್ತ ಸಚಿವ ಜಾರಕಿಹೊಳಿ: ಇದರ ಮರ್ಮವೇನು?

Latest4 ಗಂಟೆಗಳು ago

ಸಾಧ್ವಿ ಸೈಲ್ ಮಿಸ್ ವರ್ಲ್ಡ್ ಪ್ರಶಸ್ತಿ ಗೆಲ್ಲಲಿ: ಸಿಎಂ ಸಿದ್ದರಾಮಯ್ಯ ಆಶಯ

Latest4 ಗಂಟೆಗಳು ago

ಮೋದಿ-ಸಿದ್ದರಾಮಯ್ಯ ಗುಸುಗುಸು: ಇಬ್ಬರೂ ಮಾತನಾಡಿದ ವಿಷಯ ಬಹಿರಂಗ

Latest5 ಗಂಟೆಗಳು ago

ಪ್ರಧಾನಿ ಮೋದಿ ಸಾಮಾಜಿಕ ನ್ಯಾಯದ ಪರವಾಗಿಲ್ಲ: ಸಿಎಂ ಸಿದ್ದರಾಮಯ್ಯ ಟೀಕೆ

Latest5 ಗಂಟೆಗಳು ago

ಬಸವಣ್ಣನವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬಾರದು: ಸಚಿವ ಸತೀಶ್‌ ಜಾರಕಿಹೊಳಿ

galipata neetu
ಕಿರುತೆರೆ2 ವರ್ಷಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 ವರ್ಷಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 ವರ್ಷಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 ವರ್ಷಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 ವರ್ಷಗಳು ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 ವರ್ಷಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವರ್ಷಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ವರ್ಷಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ವರ್ಷಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ವರ್ಷಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ವರ್ಷಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ವರ್ಷಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ವರ್ಷಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ವರ್ಷಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ವರ್ಷಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ವರ್ಷಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌