Site icon Vistara News

Shivarajkumar: ಶಿವಣ್ಣ ಅಭಿನಯದ ‘ವೇದ’ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್

vedha kannada movie OTT Release Date

ಬೆಂಗಳೂರು: ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ (Shivarajkumar) ಅಭಿನಯದ ‘ವೇದ’ ಸಿನಿಮಾ ಒಟಿಟಿಗೆ ಎಂಟ್ರಿ ಕೊಡಲು ಡೇಟ್ ಫಿಕ್ಸ್ ಆಗಿದೆ. ಶಿವಣ್ಣನ 125ನೇ ಸಿನಿಮಾ ಇದಾಗಿದ್ದು, ಗೀತಾ ಶಿವರಾಜಕುಮಾರ್ ನಿರ್ಮಾಣದ ಮೊದಲ ಸಿನಿಮಾ. ನಿರ್ದೇಶಕ ಎ.ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್‌ನಲ್ಲಿ ಮೂಡಿ ಬಂದ ನಾಲ್ಕನೇ ಸಿನಿಮಾ. ಹೀಗೆ ಸಾಕಷ್ಟು ವಿಶೇಷತೆಯೊಂದಿಗೆ ತೆರೆಕಂಡ ಈ ಚಿತ್ರ ದೊಡ್ಮನೆ ಅಭಿಮಾನಿಗಳ ಮನಗೆದ್ದಿತ್ತು. ಒಟಿಟಿ ಪ್ರೇಕ್ಷಕರ ಮನಗೆಲ್ಲಲು ‘ವೇದ’ ಚಿತ್ರ ರೆಡಿಯಾಗಿದ್ದು ಫೆಬ್ರವರಿ 10ಕ್ಕೆ ಜೀ5ನಲ್ಲಿ ಬಿಡುಗಡೆಯಾಗುತ್ತಿದೆ.

ದೊಡ್ಮನೆ ಅಭಿಮಾನಿಗಳಲ್ಲಿ, ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ‘ವೇದ’ ಚಿತ್ರ ಕಳೆದ ವರ್ಷ ಡಿಸೆಂಬರ್ 23ರಂದು ತೆರೆಕಂಡಿತ್ತು. ಚಿತ್ರಮಂದಿರದಲ್ಲಿ ದೊಡ್ಮನೆ ಅಭಿಮಾನಿ ಬಳಗ ಹಾಗೂ ಪ್ರೇಕ್ಷಕ ಪ್ರಭುಗಳ ಮನಗೆದ್ದ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿಯೂ ಸೂಪರ್ ಸಕ್ಸಸ್ ಕಂಡಿದ್ದು ಹಿಟ್ ಲಿಸ್ಟ್ ಸೇರಿದೆ. ಇದೀಗ ಒಟಿಟಿ ಪ್ರೇಕ್ಷಕರ ಮನಗೆಲ್ಲಲು ‘ವೇದ’ ಚಿತ್ರ ರೆಡಿಯಾಗಿದ್ದು ಫೆಬ್ರವರಿ 10ಕ್ಕೆ ಜೀ5ನಲ್ಲಿ ಬಿಡುಗಡೆಯಾಗುತ್ತಿದೆ.

ಇದನ್ನೂ ಓದಿ: Vedha Movie | ʻವೇದʼ ಸಿನಿಮಾ 3 ದಿನಗಳಲ್ಲಿ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಮಾಡಿದ್ದೆಷ್ಟು?

ಇದನ್ನೂ ಓದಿ: Shivarajkumar | ‘ವೇದ’ ಬಿಡುಗಡೆಯಾದ ಬೆನ್ನಲ್ಲೇ ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟ ಶಿವರಾಜ್‌ ಕುಮಾರ್‌!

ಗಾನವಿ ಲಕ್ಷ್ಮಣ್, ಶ್ವೇತಾ ಚೆಂಗಪ್ಪ, ಉಮಾಶ್ರೀ, ಅದಿತಿ ಸಾಗರ್, ವೀಣಾ ಪೊನ್ನಪ್ಪ, ಕುರಿ ಪ್ರತಾಪ್, ಲಾಸ್ಯ ನಾಗರಾಜ್ ಸೇರಿದಂತೆ ಬಹುದೊಡ್ಡ ತಾರಗಣ ‘ವೇದ’ ಚಿತ್ರದಲ್ಲಿದೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ‌ ಛಾಯಾಗ್ರಹಣ, ದೀಪು.ಎಸ್. ಕುಮಾರ್ ಸಂಕಲನ ಚಿತ್ರಕ್ಕಿದೆ.

Exit mobile version