Site icon Vistara News

Vedha Movie | ಶಿವರಾಜ್‌ ಕುಮಾರ್‌ ನಟನೆಯ ವೇದ ಕ್ರಿಸ್‌ಮಸ್‌ಗೆ ತೆರೆಗೆ!

Vedha Movie

ಬೆಂಗಳೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌ ನಟನೆಯ ʻವೇದʼ (Vedha Movie) ಸಿನಿಮಾದ ಮತ್ತೊಂದು ಪೋಸ್ಟರ್‌ ರಿವೀಲ್‌ ಆಗಿದೆ. ಶಿವಣ್ಣ ರಕ್ತಸಿಕ್ತವಾದ ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ರಿಸ್‌ಮಸ್‌ಗೆ ಚಿತ್ರ ತೆರೆಗೆ ಬರಲಿದೆ ಎಂದು ಸೋಷಿಯಲ್‌ ಮೀಡಿಯಾ ಮೂಲಕ ಶಿವಣ್ಣ ಹೇಳಿಕೊಂಡಿದ್ದಾರೆ.

ʻವೇದʼ ಗೀತಾ ಪಿಕ್ಚರ್ಸ್‌ ಲಾಂಛನದಲ್ಲಿ ಮೂಡಿ ಬರುತ್ತಿದ್ದು, ಶಿವರಾಜ್‌ ಕುಮಾರ್‌ ಅಭಿನಯದ 125ನೇ ಸಿನಿಮಾ ಆಗಿದೆ. ಎ ಹರ್ಷ ಹಾಗೂ ಶಿವರಾಜ್‌ಕುಮಾರ್‌ ಕಾಂಬಿನೇಷನ್‌ನಲ್ಲಿ ನಾಲ್ಕನೇ ಸಿನಿಮಾ ಇದಾಗಿದೆ.

ಶಿವರಾಜ್‌ಕುಮಾರ್‌ ಜನ್ಮದಿನದಂದು ಚಿತ್ರದ ಟೀಸರ್‌ ಅನ್ನು ಬಿಡುಗಡೆಗೊಳಿಸಲಾಗಿತ್ತು. ಈ ಚಿತ್ರಕ್ಕೆ ಜೀ ಸ್ಟುಡಿಯೊ ಕೈ ಜೋಡಿಸಿದೆ. ಗಾನವಿ ಚಿತ್ರದ ನಾಯಕಿಯಾಗಿದ್ದು, ಅರ್ಜುನ್‌ ಜನ್ಯಾ ಸಂಗೀತ ಚಿತ್ರಕ್ಕಿದೆ. ವೇದ ಚಿತ್ರ 1960ರ ದಶಕದಲ್ಲಿ ನಡೆಯುವ ಕ್ರೂರ ಕಥೆಯನ್ನು ಹೊಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಈ ಚಿತ್ರದಲ್ಲಿ ಶಿವಣ್ಣನ ಮಗಳಾಗಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಲಿದ್ದಾರೆ.

ಇದನ್ನೂ ಓದಿ | Vedha Movie | ಶಿವರಾಜ್‌ ಕುಮಾರ್‌ 125ನೇ ಚಿತ್ರದ ನಿರ್ಮಾಪಕಿ ಗೀತಾ; ಪೋಸ್ಟರ್‌ ರಿಲೀಸ್‌

ಈ ಹಿಂದೆ ಬೆಂಗಳೂರು ಅರಮನೆ ಆವರಣದಲ್ಲಿ ವೇದ ಚಿತ್ರದ ಟೈಟಲ್ ಲಾಂಚ್ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿತ್ತು. ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಹಾಗೂ ಅವರ ಇಬ್ಬರು ಮಕ್ಕಳಾದ ವಂದಿತಾ ರಾಜಕುಮಾರ್, ದೃತಿ ರಾಜಕುಮಾರ್ ಕೂಡ ಇದ್ದರು. ಇವರಲ್ಲದೆ, ಅರುಣ್ ಸಾಗರ್, ದುನಿಯಾ ವಿಜಯ್, ನಿರ್ಮಾಪಕ ಕೆ.ಪಿ. ಶ್ರೀಕಾಂತ್, ರಾಕ್‌ಲೈನ್ ವೆಂಕಟೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ | Shivaraj Kumar Birthday | ಜನುಮದಿನದ ಸಂಭ್ರಮದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌

Exit mobile version