ಬೆಂಗಳೂರು: ಹ್ಯಾಟ್ರಿಕ್ ಹೀರೊ ಶಿವರಾಜ್ಕುಮಾರ್ ಅಭಿನಯದ ವೇದ ಸಿನಿಮಾದ (Vedha Movie ) ಏಳೇಳು ಬೆಟ್ಟ ದಾಟ್ಕೊಂಡು ಬರ್ತಾವ್ನೆ ‘ಗಿಲ್ಲಕ್ಕೋ ಶಿವ’ ಲಿರಿಕಲ್ ಹಾಡು ಬಿಡುಗಡೆಗೊಂಡಿದೆ. ಈ ಹಾಡನ್ನು ಸೌತ್ ಸ್ಟಾರ್ ಮಂಗ್ಲಿ ಅವರು ಹಾಡಿದ್ದಾರೆ. ಕೇಳುಗರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು, ಕಮೆಂಟ್ ಮೂಲಕ ಸೂಪರ್ ಸಾಂಗ್ ಎನ್ನುತ್ತಿದ್ದಾರೆ. ಈಗಾಗಲೇ ಸಿನಿಮಾದ ಟೀಸರ್ ಬಿಡುಗಡೆಗೊಂಡಿದೆ.
ʻವೇದʼ ಸಿನಿಮಾ ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಮೂಡಿ ಬರುತ್ತಿದೆ. ನಿರ್ದೇಶಕ ಎ ಹರ್ಷ ಹಾಗೂ ಶಿವರಾಜ್ಕುಮಾರ್ ಕಾಂಬಿನೇಶನ್ನ ನಾಲ್ಕನೇ ಸಿನಿಮಾ ಇದಾಗಿದೆ.
ಇದನ್ನೂ ಓದಿ | Literature Festival | ಜೈಪುರ ಸಾಹಿತ್ಯ ಉತ್ಸವ 2023ಕ್ಕೆ ವೇದಿಕೆ ಸಜ್ಜು; ಜ. 19ರಿಂದ ಪ್ರಾರಂಭ
ಈ ಚಿತ್ರಕ್ಕೆ ಜೀ ಸ್ಟುಡಿಯೊ ಕೈ ಜೋಡಿಸಿದೆ. ಗಾನವಿ ಚಿತ್ರದ ನಾಯಕಿಯಾಗಿದ್ದು, ಅರ್ಜುನ್ ಜನ್ಯ ಸಂಗೀತ ಈ ಚಿತ್ರಕ್ಕಿದೆ. ವೇದ ಚಿತ್ರ 1960ರ ದಶಕದಲ್ಲಿ ನಡೆಯುವ ಕ್ರೂರ ಕಥೆಯನ್ನು ಹೊಂದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿ ಶಿವಣ್ಣನ ಮಗಳಾಗಿ ಅರುಣ್ ಸಾಗರ್ ಪುತ್ರಿ ಅದಿತಿ ಸಾಗರ್ ಕಾಣಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ಕುರಿ ಪ್ರತಾಪ್, ಜಗ್ಗಪ್ಪ, ಉಮಾಶ್ರೀ ಪ್ರಮುಖ ಪಾತ್ರದಲ್ಲಿ ಕಾಣಿಸಲಿದ್ದಾರೆ.
ಇದನ್ನೂ ಓದಿ | Vedha Movie | ಶಿವಣ್ಣ ಅಭಿನಯದ 125ನೇ ಚಿತ್ರ ʻವೇದʼ ಟೀಸರ್ ಔಟ್!