ಚೆನ್ನೈ: ವೀರಪ್ಪನ್ ಮಗಳು ವಿಜಯಲಕ್ಷ್ಮೀ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದೀಗ ವಿಜಯಲಕ್ಷ್ಮೀ (Veerappan Daughter) ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ.. ʼಮಾವೀರನ್ ಪಿಳ್ಳೈʼ (Maaveeran Pillai) ಎಂಬ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈಗಾಗಲೇ ಚೆನ್ನೈನಲ್ಲಿ ಆಡಿಯೊ ರಿಲೀಸ್ ಕಾರ್ಯಕ್ರಮ ನೆರವೇರಿದೆ. ತಮಿಳುನಾಡಿನ ಭಾರತೀಯ ಜನತಾ ಪಕ್ಷದ ಯುವ ಘಟಕದ ಉಪಾಧ್ಯಕ್ಷೆಯಾಗಿರುವ ವಿಜಯಲಕ್ಷ್ಮೀ, ರಾಜಕೀಯ ರಂಗದಿಂದ ಸಿನಿಮಾರಂಗದಲ್ಲಿ ಮಿಂಚಲು ರೆಡಿಯಾಗಿದ್ದಾರೆ.
ಈ ಕಾರ್ಯಕ್ರಮದಲ್ಲಿ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀ, ಆಲ್ ಪೀಪಲ್ಸ್ ಪೊಲಿಟಿಕಲ್ ಪಾರ್ಟಿ ಅಧ್ಯಕ್ಷೆ ರಾಜೇಶ್ವರಿ ಪ್ರಿಯಾ, ನಟ ಕೂಲ್ ಸುರೇಶ್, ನಿರ್ದೇಶಕ ಪೇರರಸು, ನಿರ್ಮಾಪಕ ಕೆ.ಎನ್.ಆರ್. ರಾಜ ಮೊದಲಾದವರು ಭಾಗವಹಿಸಿದ್ದರು. ವಿಜಯಲಕ್ಷ್ಮೀ ಮಾತನಾಡಿ ʻʻನನಗೆ ಮೊದಲಿನಿಂದಲೂ ಸಿನಿಮಾಗಳಲ್ಲಿ ನಟಿಸಬೇಕು ಎನ್ನುವ ಆಸೆಯಿತ್ತು. ಕುಡಿತದ ಪರಿಣಾಮದ ಮೇಲೆ ಬೆಳಕು ಚೆಲ್ಲುವ ಕಥೆ ಇದಾಗಿದೆ. ಪ್ರತಿ ಮನೆಯಲ್ಲೂ ಗಂಡಸರ ಕುಡಿತದ ಕಾರಣದಿಂದ ಹೆಣ್ಣುಮಕ್ಕಳು ಸಂಕಷ್ಟ ಅನುಭವಿಸುತ್ತಿದ್ದಾರೆ. ಅಂತಹ ಮಹಿಳೆಯರ ಸ್ಥಿತಿಯ ಮೇಲೆ ಬೆಳಕು ಚೆಲ್ಲುವ ಪಾತ್ರ ಇದಾಗಿದೆ. ಆ ಕಾರಣಕ್ಕೆ ಸಿನಿಮಾದಲ್ಲಿ ನಟಿಸಲು ಒಪ್ಪಿಕೊಂಡೆʼ ಎಂದಿದ್ದಾರೆ.
ಇದನ್ನೂ ಓದಿ: Actor Suriya: ಸಚಿನ್ ತೆಂಡೂಲ್ಕರ್ ಭೇಟಿ ಮಾಡಿದ ಕಾಲಿವುಡ್ ನಟ ಸೂರ್ಯ: ಫೋಟೊ ವೈರಲ್
ಆಡಿಯೊ ಲಾಂಚ್ ಇವೆಂಟ್
ಸಿನಿಮಾದ ಬಗ್ಗೆ ಮಾತನಾಡಿದ ನಿರ್ದೇಶಕ ಪೇರರಸು ʼಸಿನಿಮಾ ಎಂದರೆ ಅದರಲ್ಲಿ ಯಾರು ನಟಿಸುತ್ತಾರೆ, ಯಾರು ಚಿತ್ರವನ್ನು ನಿರ್ದೇಶನ ಮಾಡುತ್ತಾರೆ ಎಂಬುದನ್ನು ಮುಖ್ಯವಾಗುವುದಿಲ್ಲ. ಸಿನಿಮಾದ ಎಂದರೆ ಕಥೆಯೇ ಜೀವಾಳʼ ಎಂದಿದ್ದಾರೆ.
ಈ ಚಿತ್ರಕ್ಕೆ ಮಂಜುನಾಥ ಅವರ ಛಾಯಾಗ್ರಹಣ ಮತ್ತು ರವಿವರ್ಮ ಸಂಗೀತವಿದೆ. ಪ್ರೇಮ್ ಹಿನ್ನೆಲೆ ಸಂಗೀತ ಸಂಯೋಜಿಸಿದರೆ, ಜೂಲಿಯನ್ ಸಂಕಲನವಿದೆ.