Veerendra Heggade | ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ - Vistara News

ಸಿನಿಮಾ

Veerendra Heggade | ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ವೀರೇಂದ್ರ ಹೆಗ್ಗಡೆ

ಎಸ್.ವಿ.ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade) ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. 

VISTARANEWS.COM


on

Veerendra Heggade
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು : ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade ) ಅವರು ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವೀರ ಕಂಬಳ’ ಸಿನಿಮಾದಲ್ಲಿ ಅವರು ಅತಿಥಿ ಪಾತ್ರವನ್ನು ಮಾಡುತ್ತಿದ್ದಾರೆ. ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ಮೇಕಪ್‌ ಮಾಡುತ್ತಿರುವ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

‘ವೀರ ಕಂಬಳ’ ಸಿನಿಮಾ ಕನ್ನಡ, ತುಳು ಸೇರಿದಂತೆ ಹಲವು ಭಾಷೆಗಳಲ್ಲಿ ಮೂಡಿ ಬರಲಿರುವುದು ವಿಶೇಷ. ಸಂಪೂರ್ಣವಾಗಿ ಕಂಬಳ ಕ್ರೀಡೆಯನ್ನು ಹಿನ್ನೆಲೆಯಾಗಿಟ್ಟುಕೊಂಡು ಮೂಡಿ ಬರುತ್ತಿರುವ ಸಿನಿಮಾ ಇದಾಗಿದೆ. ಕಂಬಳ ಕೋಣ ಓಡಿಸುವುದರಲ್ಲೇ ಪರಿಣಿತಿ ಹೊಂದಿರುವ ಶ್ರೀನಿವಾಸ್ ಗೌಡ ಕೂಡ ಈ ಸಿನಿಮಾದಲ್ಲಿ ಪಾತ್ರ ಮಾಡಿದ್ದಾರೆ. ಇವರೊಂದಿಗೆ ಕಲಾವಿದ ಸ್ವರಾಜ್ ಶೆಟ್ಟಿ ಕೂಡ ಕಂಬಳದ ಕೋಣ ಓಡಿಸುವ ದೃಶ್ಯದಲ್ಲಿ ಕಾಣಿಸಿಕೊಳ್ಳುತ್ತಿರುವುದು ಮತ್ತೊಂದು ವಿಶೇಷ. ರವಿಶಂಕರ್, ರಾಧಿಕಾ ಚೇತನ್, ನವೀನ್ ಪಡೀಲ್ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದ ತಾರಾಗಣದಲ್ಲಿ ಇದ್ದಾರೆ. 

ತುಳು ಭಾಷೆಯಲ್ಲೂ ಚಿತ್ರವನ್ನು ಏಕಕಾಲದಲ್ಲಿ ನಿರ್ದೇಶಿಸಲಿದ್ದು, ಇದಕ್ಕೆ ‘ಬರ್ದೆದ್‌ ಕಂಬಳ’ ಎಂಬ ಹೆಸರನ್ನಿಟ್ಟಿದ್ದಾರೆ. ಇದರರ್ಥ ಬಿರುಸಿನ ಕಂಬಳ. ಅಲ್ಲದೆ, ಇನ್ನಿತರ ಹಲವು ಭಾಷೆಗಳಿಗೆ ಡಬ್‌ ಮಾಡಲಿದ್ದಾರೆ.

ಇದನ್ನೂ ಓದಿ | Vivek Agnihotri | ವಿವೇಕ್ ಅಗ್ನಿಹೋತ್ರಿಯ ʻದಿ ವ್ಯಾಕ್ಸಿನ್ ವಾರ್ʼ ಸಿನಿಮಾ ಸೆಟ್‌ನಲ್ಲಿ ಅನುಪಮ್‌ ಖೇರ್‌

Veerendra Heggade

ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬರಲಿದ್ದು, ವೀರ ಕಂಬಳ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ಈಗ ನಡೆಯುತ್ತಿದೆ. ಈ ಭಾಗದ ಚಿತ್ರೀಕರಣದಲ್ಲಿ ವೀರೇಂದ್ರ ಹೆಗ್ಗಡೆ ಅವರು ಪಾಲ್ಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಯಾವ ಪಾತ್ರ ಎಂಬುದೂ ರಿವೀಲ್‌ ಆಗಿಲ್ಲ. ಮಂಗಳೂರು, ಉಡುಪಿ, ಮೂಡುಬಿದರೆ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ | Ajith Kumar | ಅಜಿತ್‌ ಕುಮಾರ್‌ ಆ್ಯಕ್ಷನ್‌ ಥ್ರಿಲ್ಲರ್‌ ಸಿನಿಮಾ ʻತುನಿವುʼ ಹೊಸ ಪೋಸ್ಟರ್‌ ಔಟ್‌ !

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್’

VISTARANEWS.COM


on

ಜಪಾನ್‌ಗೆ ಲಗ್ಗೆ ಇಡಲು ಸಜ್ಜಾದ ʼಧುರಂಧರ್'

ಆದಿತ್ಯ ಧರ್ ನಿರ್ದೇಶನದ ʼಧುರಂಧರ್’ (ಭಾಗ 1) ಈಗ ಜಪಾನ್‌ನಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. 2025ರ ಡಿಸೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರ ಬರೋಬ್ಬರಿ 1328 ಕೋಟಿ ರೂಪಾಯಿಗಳಿಗೂ ಹೆಚ್ಚು ಸಂಗ್ರಹ ಮಾಡಿ ದಾಖಲೆ ಬರೆದಿತ್ತು. ಇದೀಗ ಜುಲೈ 10, 2026 ರಂದು ಜಪಾನ್‌ನಲ್ಲಿ ಅದ್ಧೂರಿಯಾಗಿ ತೆರೆಗೆ ಬರಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ರಣವೀರ್ ಸಿಂಗ್ ಅವರ ಪವರ್‌ಫುಲ್ ಆಕ್ಷನ್ ಮತ್ತು ಅದ್ಭುತ ಮೇಕಿಂಗ್‌ನಿಂದಾಗಿ ಈ ಸಿನಿಮಾ ಜಪಾನ್ ಪ್ರೇಕ್ಷಕರನ್ನು ಸೆಳೆಯುವ ಭರವಸೆ ಮೂಡಿಸಿದೆ. ಈ ಚಿತ್ರದಲ್ಲಿ ರಣವೀರ್ ಸಿಂಗ್ ಜೊತೆಗೆ ಸಂಜಯ್ ದತ್, ಅಕ್ಷಯ್ ಖನ್ನಾ, ಆರ್. ಮಾಧವನ್ ಮತ್ತು ಅರ್ಜುನ್ ರಾಂಪಾಲ್ ಅವರಂತಹ ಘಟಾನುಘಟಿ ಕಲಾವಿದರು ಅಭಿನಯಿಸಿದ್ದಾರೆ.

Continue Reading

Latest

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

VISTARANEWS.COM


on

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟ ಡಾಲಿ ಧನಂಜಯ್ ಹಾಗೂ ಅವರ ಪತ್ನಿ ಡಾ. ಧನ್ಯತಾ ಈಗ ಹೊಸ ಸಂಭ್ರಮದಲ್ಲಿದ್ದಾರೆ. ಮದುವೆಯಾದ ಕೆಲವು ತಿಂಗಳುಗಳ ನಂತರ ಈ ದಂಪತಿ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಅಧಿಕೃತವಾಗಿ ತಿಳಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಸುಂದರವಾದ ಪೋಸ್ಟ್ ಹಂಚಿಕೊಂಡಿರುವ ಅವರು, Our universe is expanding ಎಂದು ಬರೆಯುವ ಮೂಲಕ ತಂದೆ-ತಾಯಿ ಆಗುತ್ತಿರುವ ಸಂತಸದ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ನಟ ಧನಂಜಯ್ ಅವರು 2025ರ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾ. ಧನ್ಯತಾ ಅವರೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇವರ ಅದ್ಧೂರಿ ಮದುವೆಯಲ್ಲಿ ಚಿತ್ರರಂಗ ಹಾಗೂ ರಾಜಕೀಯದ ಗಣ್ಯರು ಭಾಗವಹಿಸಿ ಶುಭ ಹಾರೈಸಿದ್ದರು. ಇದೀಗ ಡಾಲಿ ದಂಪತಿ ನೀಡಿರುವ ಈ ಗುಡ್ ನ್ಯೂಸ್ ಕೇಳಿ ಅವರ ಅಭಿಮಾನಿಗಳು ಮತ್ತು ಸ್ಯಾಂಡಲ್‌ವುಡ್‌ನ ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

Continue Reading

Latest

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

VISTARANEWS.COM


on

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಏಪ್ರಿಲ್‌ 27 ರಂದು ದರ್ಶನ್ ಪರ ವಕೀಲ ರಂಜಿತ್ ರೋಹಟಗಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 4ಕ್ಕೆ ನಿಗದಿಪಡಿಸಿದೆ.

Continue Reading

Latest

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

VISTARANEWS.COM


on

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ 'ಟಾಕ್ಸಿಕ್' ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ದಿ ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದೂಡಿಕೆಯಾಗಿದೆ. ಈ ಹಿಂದೆ ಮಾರ್ಚ್ 19ಕ್ಕೆ ಸಿನಿಮಾ ತೆರೆಗೆ ಬರಬೇಕಿತ್ತು, ಆದರೆ ಕೆಲವು ಕಾರಣಗಳಿಂದ ಜೂನ್ 4ಕ್ಕೆ ಬಿಡುಗಡೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು. ಇದೀಗ ಜೂನ್ ತಿಂಗಳಲ್ಲೂ ಸಿನಿಮಾ ಬಿಡುಗಡೆಯಾಗುತ್ತಿಲ್ಲ ಎಂಬ ಮಾಹಿತಿಯನ್ನು ನಟ ಯಶ್ ಹಂಚಿಕೊಂಡಿದ್ದಾರೆ. ಚಿತ್ರತಂಡ ಶೀಘ್ರದಲ್ಲೇ ಹೊಸ ದಿನಾಂಕವನ್ನು ಪ್ರಕಟಿಸುವುದಾಗಿ ತಿಳಿಸಿದೆ.

ಈ ಹಿಂದೆ ಸಿನಿಮಾ ವಿಳಂಬವಾಗಲು ಮಧ್ಯಪ್ರಾಚ್ಯದಲ್ಲಿನ ಯುದ್ಧದ ಉದ್ವಿಗ್ನ ಪರಿಸ್ಥಿತಿ ಪ್ರಮುಖ ಕಾರಣವಾಗಿತ್ತು ಎಂದು ಹೇಳಲಾಗಿತ್ತು. ಸಿನಿಮಾದ ಟೀಸರ್, ಟ್ರೈಲರ್ ಮತ್ತು ನಟ-ನಟಿಯರ ಲುಕ್ ಈಗಾಗಲೇ ಬಿಡುಗಡೆಯಾಗಿ ಸಿನಿಪ್ರಿಯರಲ್ಲಿ ಭಾರಿ ಕುತೂಹಲ ಮೂಡಿಸಿವೆ. ಪದೇ ಪದೇ ಬಿಡುಗಡೆ ದಿನಾಂಕ ಬದಲಾಗುತ್ತಿರುವುದು ಅಭಿಮಾನಿಗಳಿಗೆ ಕೊಂಚ ಬೇಸರ ತರಿಸಿದ್ದರೂ, “ಯಶ್ ಅವರು ಅದ್ಭುತವಾದ ಸಿನಿಮಾ ನೀಡಲು ಸಮಯ ತೆಗೆದುಕೊಳ್ಳುತ್ತಿದ್ದಾರೆ, ನಾವು ಕಾಯಲು ಸಿದ್ಧ” ಎಂದು ಅನೇಕ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರದ ನಿರ್ದೇಶಕಿ ಗೀತು ಮೋಹನ್‌ ದಾಸ್‌ ಅವರ ಬಗ್ಗೆ ಮಾತನಾಡಿರುವ ಯಶ್, ಗ್ಯಾಂಗ್‌ಸ್ಟರ್ ಕಥೆಯನ್ನು ಅವರು ವಿಭಿನ್ನವಾಗಿ ಕಟ್ಟಿಕೊಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಮಹಿಳಾ ನಿರ್ದೇಶಕಿಯೊಬ್ಬರು ಬೋಲ್ಡ್ ದೃಶ್ಯಗಳನ್ನು ಮತ್ತು ಕಥೆಯ ಗಂಭೀರತೆಯನ್ನು ವಿನ್ಯಾಸಗೊಳಿಸಿರುವ ರೀತಿ ತಮಗೆ ಅಚ್ಚರಿ ಮತ್ತು ಖುಷಿ ತಂದಿದೆ ಎಂದು ಅವರು ಹೇಳಿದ್ದಾರೆ.

Continue Reading
Advertisement
Latest10 hours ago

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಏರಿಕೆ: ಒಂದೇ ದಿನ 993 ರೂ ಹೆಚ್ಚಳ

Latest1 day ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest1 day ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest1 day ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest1 day ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest1 day ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest1 day ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest1 day ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest1 day ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest2 days ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌