ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ʼವೆಟ್ಟೈಯಾನ್ʼ (Vettaiyan Movie) ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿತ್ತು. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕ ಫಿಕ್ಸ್ ಆಗಿದ್ದು, ಅಕ್ಟೋಬರ್ ತಿಂಗಳಲ್ಲಿ ವೆಟ್ಟೈಯಾನ್ ಸಿನಿಮಾ ಬೆಳ್ಳಿತೆರೆಗೆ ಲಗ್ಗೆ ಇಡಲಿದೆ.
ತಮಿಳು ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ನಿರ್ದೇಶಕ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ. ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.
Kuri vechachu. 🎯 VETTAIYAN 🕶️ is all set to take charge in cinemas 📽️ this OCTOBER 🗓️ Get ready to chase down the prey! 🦅😎#VETTAIYAN 🕶️ @rajinikanth @SrBachchan @tjgnan @anirudhofficial @LycaProductions #Subaskaran @gkmtamilkumaran #FahadhFaasil @RanaDaggubati @ManjuWarrier4… pic.twitter.com/VXvhN8ZBdm
— Lyca Productions (@LycaProductions) April 7, 2024
‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ.
ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ಇದನ್ನೂ ಓದಿ | Kannada New Movie: 25 ದಿನ ಪೂರೈಸಿದ ದೀಕ್ಷಿತ್ ಶೆಟ್ಟಿಯ ‘ಬ್ಲಿಂಕ್’ ಸಿನಿಮಾ!
ಇಂಡಿಯನ್, ಖೈದಿ ನಂಬರ್ 150, ರೋಬೋ 2.0, ದರ್ಬಾರ್ ಇತ್ತೀಚೆಗೆ ಪೊನ್ನಿಯಿನ್ ಸೆಲ್ವನ್ ನಂತಹ ಹಿಟ್ ಸಿನಿಮಾಗಳನ್ನು ನಿರ್ಮಿಸಿರುವ ಲೈಕಾ ಪ್ರೊಡಕ್ಷನ್ ವೆಟ್ಟೈಯಾನ್ ಸಿನಿಮಾ ನಿರ್ಮಿಸುತ್ತಿದೆ.
ಅಥೆನ್ಸ್ ಅಂತಾರಾಷ್ಟ್ರೀಯ ಕಲಾ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಗೆದ್ದ ನಾನಿ-ಮೃಣಾಲ್ ಸಿನಿಮಾ!
ಬೆಂಗಳೂರು: ನಿರ್ದೇಶಕ ಶೌರ್ಯುವ್ ಅವರ ಚೊಚ್ಚಲ ಚಿತ್ರ, ನಾನಿ ಮತ್ತು ಮೃಣಾಲ್ ಠಾಕೂರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ `ಹಾಯ್ ನಾನ್ನʼ (Hi Nanna) ಅಥೆನ್ಸ್ ಅಂತಾರಾಷ್ಟ್ರೀಯ ಕಲಾ ಚಲನಚಿತ್ರೋತ್ಸವದಲ್ಲಿ (Athens International Art Film Festival) ʻಅತ್ಯುತ್ತಮ ಚಲನಚಿತ್ರʼ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ʻʻಹಾಯ್ ಡ್ಯಾಡ್ʼʼ (Hi Dad) ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಿಡುಗಡೆಯಾದ ಈ ಚಿತ್ರ ಅಥೆನ್ಸ್ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.
`ಹಾಯ್ ನಾನ್ನʼ ನಿರ್ದೇಶಕರು ಶೌರ್ಯುವ್ ಎಕ್ಸ್‌ನಲ್ಲಿ ಹೀಗೆ ಬರೆದಿದ್ದಾರೆ, “`ಹಾಯ್ ನಾನ್ನʼ ಸಿನಿಮಾ ʻʻಹಾಯ್ ಡ್ಯಾಡ್ʼʼ ಆಗಿ ಬಿಡುಗಡೆಯಾಯಿತು. ಮಾರ್ಚ್ 2024ರ ಆವೃತ್ತಿಯಲ್ಲಿ ಅಥೆನ್ಸ್ ಅಂತಾರಾಷ್ಟ್ರೀಯ ಕಲಾ ಚಲನಚಿತ್ರೋತ್ಸವದಲ್ಲಿ ಅತ್ಯುತ್ತಮ ಚಲನಚಿತ್ರಕ್ಕಾಗಿ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಈ ಪ್ರಶಸ್ತಿಯನ್ನು ಸ್ವೀಕರಿಸಲು ನಮಗೆ ತುಂಬ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ. ಈ ಸಾಧನೆಯು ಸಾಂಸ್ಕೃತಿಕ ಗಡಿಗಳನ್ನು ಮೀರಲು ಮತ್ತು ವಿಶ್ವಾದ್ಯಂತ ಪ್ರೇಕ್ಷಕರೊಂದಿಗೆ ಇನ್ನಷ್ಟು ಸಂಪರ್ಕ ಸಾಧಿಸಲು ಪ್ರೋತ್ಸಾಹ ನೀಡುತ್ತದೆ. ಸಂಘಟಕರು, ತೀರ್ಪುಗಾರರು ಮತ್ತು ನಮ್ಮ ʻಹಾಯ್ ನಾನ್ನʼ ಚಿತ್ರತಂಡಕ್ಕೆ ತಂಡಕ್ಕೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ʻಹಾಯ್ ನಾನ್ನʼ ತಂಡದ ಉತ್ಸಾಹ ಮತ್ತು ಸೃಜನಶೀಲತೆ ಜೀವ ತುಂಬಿದೆʼʼ ಎಂದು ಬರೆದುಕೊಂಡಿದ್ದಾರೆ.
TELUGU CINEMA✨
— Shouryuv (@shouryuv) December 8, 2023
Happy to be a part of, happy to contribute!
CINEMA ni intha preminchey desam lo, rasthralo puttinchinandhuku aa devudiki ellapudu badhrudnai unta ✨
Thank you for your love towards CINEMA 🙏🏽✨
Anthey 🙂 pic.twitter.com/mNJgTrY7rT
ಶೌರ್ಯುವ್ ನಿರ್ದೇಶನದ ನಾನಿ ಮತ್ತು ಮೃಣಾಲ್ ಠಾಕೂರ್ ಅಭಿನಯದ ʻಹಾಯ್ ನಾನ್ನʼ (Hi Nanna Trailer) ಚಿತ್ರ 2023ರ ಡಿಸೆಂಬರ್ 7 ರಂದು ಬಿಡುಗಡೆಯಾಗಿತ್ತು. ಹಾಯ್ ನಾನ್ನ ಎಂಬ ತೆಲುಗು ಸಾಲಿನ ಅರ್ಥ ‘ಹಾಯ್ ಅಪ್ಪ’ ಎಂಬುದಾಗಿದೆ. ಸೌತ್ ಭಾಷೆಯಲ್ಲಿ ಒಂದೇ ಟೈಟಲ್ ಇರಲಿ ಎಂಬ ಉದ್ದೇಶದಿಂದ ಚಿತ್ರತಂಡ ಕನ್ನಡ, ತಮಿಳು, ಮಲಯಾಳಂ ಭಾಷೆಯಲ್ಲಿಯೂ ಹಾಯ್ ನಾನ್ನ ಎಂದೇ ಶೀರ್ಷಿಕೆ ಫಿಕ್ಸ್ ಮಾಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಂಡಿದ್ದರು. ಶ್ರುತಿ ಹಾಸನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.
ಇದನ್ನೂ ಓದಿ: Hi Nanna: ನಾನಿ ಅಭಿನಯದ ʻಹಾಯ್ ನಾನ್ನ’ ಒಟಿಟಿಗೆ ಎಂಟ್ರಿ ಯಾವಾಗ?
ವೈರ ಎಂಟರ್‌ಟೇನ್‌ಮೆಂಟ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್, ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿದೆ.