Viduthalai: ಈಗ ಕನ್ನಡದಲ್ಲಿಯೂ ಒಟಿಟಿಗೆ ಬಂತು ‘ವಿಡುದಲೈ’ ಸಿನಿಮಾ - Vistara News

ಒಟಿಟಿ

Viduthalai: ಈಗ ಕನ್ನಡದಲ್ಲಿಯೂ ಒಟಿಟಿಗೆ ಬಂತು ‘ವಿಡುದಲೈ’ ಸಿನಿಮಾ

ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಪ್ರಕಾಶ್ ರೈ, ಗೌತಮ್ ಮೆನನ್ ಸೇರಿದಂತೆ ಹಲವರು ನಟಿಸಿರುವ ಈ ಚಿತ್ರ ಈಗ ಕನ್ನಡದಲ್ಲಿಯೂ ಲಭ್ಯವಿದೆ.

VISTARANEWS.COM


on

Viduthalai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ತಮಿಳು ಚಿತ್ರರಂಗದ ಮಾಸ್ ಡೈರೆಕ್ಟರ್ ವೆಟ್ರಿಮಾರನ್ ನಿರ್ದೇಶನದ ವಿಡುದಲೈ (Viduthalai) ಸಿನಿಮಾ Zee5 ಒಟಿಟಿಯಲ್ಲಿ ಪ್ರದರ್ಶನ ಕಾಣುತ್ತಿದೆ. ವಿಜಯ್ ಸೇತುಪತಿ, ಸೂರಿ, ಕನ್ನಡದ ಸರ್ದಾರ್ ಸತ್ಯ, ಪ್ರಕಾಶ್ ರೈ, ಗೌತಮ್ ಮೆನನ್ ಸೇರಿದಂತೆ ಹಲವರು ನಟಿಸಿರುವ ಈ ಚಿತ್ರ ಈಗ ಕನ್ನಡದಲ್ಲಿಯೂ ಲಭ್ಯವಿದೆ.

ಇತ್ತೀಚೆಗೆ ಪರಭಾಷೆ ಚಿತ್ರಗಳನ್ನು ಕನ್ನಡಕ್ಕೆ ಡಬ್ ಮಾಡಿ ಬಿಡುಗಡೆ ಮಾಡಲಾಗುತ್ತಿದ್ದು, ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ ವ್ಯಕ್ತವಾಗುತ್ತಿವೆ. ಈಗ ವಿಡುದಲೈ ಭಾಗ-1 ಸಿನಿಮಾ ಕೂಡ ಕನ್ನಡದಲ್ಲಿ ನೋಡುವ ಅವಕಾಶ ದೊರೆತಿದೆ. ಮೂಲ ತಮಿಳಿನ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಿ Zee5 ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ.

ಆರ್‌.ಎಸ್‌. ಇನ್ಫೋಟೈನ್‌ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಎಸ್. ಎಲ್ರೆಡ್ ಕುಮಾರ್ ಅದ್ಧೂರಿಯಾಗಿ ವಿಡುದಲೈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಪೊಲೀಸ್‌ ಕಾನ್‌ಸ್ಟೇಬಲ್‌ ಹಾಗೂ ಸಶಸ್ತ್ರ ಕ್ರಾಂತಿಕಾರಿ ಹೋರಾಟಗಾರನೊಬ್ಬನ ನಡುವಿನ ಸಂಬಂಧದ ಕತೆಯನ್ನು ಒಳಗೊಂಡ ಈ ಚಿತ್ರ ಎರಡು ಭಾಗಗಳಲ್ಲಿ ತೆರೆಗೆ ಬರುತ್ತಿದೆ. ಮೊದಲ ಭಾಗಕ್ಕೆ ಈಗಾಗಲೇ ಭಾರೀ ರೆಸ್ಪಾನ್ಸ್ ಸಿಕ್ಕಿದ್ದು, ಸದ್ಯ ಎರಡನೇ ಭಾಗದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಇದನ್ನೂ ಓದಿ: Madhuri Dixit Birthday: ʼDhak-Dhak Girlʼ ಮಾಧುರಿ ದೀಕ್ಷಿತ್ ಬ್ಲಾಕ್‌ಬಾಸ್ಟರ್‌ ಮೂವಿಗಳ ವಿವರ ಇಲ್ಲಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಾಲಿವುಡ್

Aavesham Releases On OTT: ಸದ್ದಿಲ್ಲದೆ ಒಟಿಟಿಗೆ ಎಂಟ್ರಿ ಕೊಟ್ಟ ಫಹಾದ್ ಫಾಸಿಲ್ ಅಭಿನಯದ ʻಆವೇಶಂʼ!

Aavesham Releases On OTT: ಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

VISTARANEWS.COM


on

Aavesham Releases On OTT Fahadh Faasil Hit Malayalam Film
Koo

ಬೆಂಗಳೂರು: ಫಹಾದ್ ಫಾಸಿಲ್ (Fahadh Faasil) ಅಭಿನಯದ ಬ್ಲಾಕ್‌ಬಸ್ಟರ್‌ ಮಲಯಾಳಂ ಸಿನಿಮಾ ʻಆವೇಶಂʼ ಒಟಿಟಿಗೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದೆ. ಏಪ್ರಿಲ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ʻಆವೇಶಂʼ (Aavesham Releases On OTT) ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಥಿಯೇಟರ್‌ನಲ್ಲಿ ಬಿಡುಗಡೆಯಾದ ಒಂದು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ, ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ.

ʻಆವೇಶಂʼ ಸಿನಿಮಾವು ಭಾರತದಲ್ಲಿ 93.9 ಕೋಟಿ ರೂ. ಗಳಿಕೆ ಮಾಡಿತ್ತು. ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 146.9 ಕೋಟಿ ರೂ. ಗಳಿಕೆ ಕಂಡಿತ್ತು. ಈ ಚಿತ್ರದ ಬಜೆಟ್‌ 30 ಕೋಟಿ ರೂ. ಆಗಿತ್ತು. ಇದೀಗ ಅಮೆಜಾನ್‌ ಪ್ರೈಂನಲ್ಲಿ ಸಿನಿಮಾ ಸ್ಟ್ರೀಮಿಂಗ್‌ ಆಗುತ್ತಿದೆ. ಡಬ್ಬಿಂಗ್ ಆವೃತ್ತಿಗಳ ಕುರಿತು ಇನ್ನೂ ಯಾವುದೇ ಅಪಡೇಟ್‌ ಬಂದಿಲ್ಲ. ಫ್ರಂಟ್ ರೋ ಅವರ ಟ್ವೀಟ್ ಪ್ರಕಾರ, ಆವೇಶಂನ ಡಿಜಿಟಲ್ ಹಕ್ಕುಗಳು 35 ಕೋಟಿ ರೂಪಾಯಿಗಳಿಗೆ ಮಾರಾಟವಾಗಿವೆ. ಈ ಮೂಲಕ ದುಲ್ಕರ್ ಸಲ್ಮಾನ್ ಅವರ ʻಕಿಂಗ್ ಆಫ್ ಕೋಥಾʼದ ದಾಖಲೆಯನ್ನು ಮುರಿದಿದೆ ಎಂದು ವರದಿಯಾಗಿದೆ. ʻಕಿಂಗ್ ಆಫ್ ಕೋಥಾʼ 32 ಕೋಟಿ ರೂಪಾಯಿಗಳಿಗೆ ಮಾರಾಟ ಮಾಡಲಾಗಿತ್ತು.

ಜಿತು ಮಾಧವನ್ ನಿರ್ದೇಶನದ ಈ ಚಿತ್ರದಲ್ಲಿ ಆಶಿಶ್ ವಿದ್ಯಾರ್ಥಿ, ಮನ್ಸೂರ್ ಅಲಿ ಖಾನ್ ಮತ್ತು ಸಜಿನ್ ಗೋಪು ಕೂಡ ನಟಿಸಿದ್ದಾರೆ. ಮಲಯಾಳಂ ಸಿನಿಮಾದ ಪ್ರಮುಖ ಕಥೆ ಬೆಂಗಳೂರಿನಲ್ಲಿ ನಡೆಯುತ್ತದೆ. ಓದಲೆಂದು ಬೆಂಗಳೂರಿಗೆ ಬರುವ ಮೂವರು ಹುಡುಗರು ಅಲ್ಲಿ ಜಗಳದಲ್ಲಿ ಸಿಕ್ಕಿ ಬಿದ್ದು ಸ್ಥಳೀಯ ದರೋಡೆಕೋರನ ನೆರವಿನಿಂದ ಗೆಲುವು ಪಡೆಯಲು ಪ್ರಯತ್ನಿಸುವಂತಹ ಕಥೆ ಹೊಂದಿದೆ. ಆ ಸ್ಥಳೀಯ ದರೋಡೆಕೋರ ಬೇರಾರು ಅಲ್ಲ, ಫಹಾದ್‌ ಫಾಸಿಲ್‌.

ಸಂಪೂರ್ಣ ಬಿಳಿ ಉಡುಗೆಯಲ್ಲಿ, ಚಿನ್ನದ ಸರಗಳೊಂದಿಗೆ, ದಪ್ಪ ಮೀಸೆಯನ್ನು ಹೊಂದಿರುವ ಫಹಾದ್‌ ಪಾತ್ರ ಪ್ರೇಕ್ಷಕರಿಂದ ಸಾಕಷ್ಟು ಪ್ರೀತಿಯನ್ನು ಪಡೆದಿದೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಫಹಾದ್ ಅವರು ರಂಗಾ ಪಾತ್ರವನ್ನು ಏಕೆ ಆಯ್ಕೆ ಮಾಡಿಕೊಂಡೆ ಎಂಬುದರ ಕುರಿತು ಈ ಮುಂಚೆ ಹೇಳಿಕೊಂಡಿದ್ದರು. ʻʻನಾನು ಈ ಮೊದಲು ಅಂತಹ ಪಾತ್ರಗಳನ್ನು ಮಾಡಿಲ್ಲ. ಆದ್ದರಿಂದ ಈ ಕಥೆ ನನ್ನ ಬಳಿಗೆ ಬಂದಾಗ, ನಾನು ಹೌದು ಎಂದು ಹೇಳಿದೆ. ಈ ಹಿಂದೆ ನಾನು ಮಾಡಿದ್ದ ಪಾತ್ರಗಳಿಗಿಂತ ಭಿನ್ನವಾಗಿ ಇತ್ತು. ಅಲ್ಲದೆ, ನಾನು ಕನ್ನಡ ಮತ್ತು ಮಲಯಾಳಂ ಮಿಶ್ರಿತ ಭಾಷೆ ಮಾತನಾಡಬೇಕು ಎಂದು ಮನೋರಮಾ ಹೇಳಿದ್ದರುʼʼ ಎಂದರು. ಇವು 2024ರಲ್ಲಿ ಅತ್ಯಧಿಕ ಗಳಿಕೆ ಮಾಡಿದ ನಾಲ್ಕನೇ ಮಲಯಾಳ ಸಿನಿಮಾವೆಂಬ ಖ್ಯಾತಿಗೆ ಪಾತ್ರವಾಗಿತ್ತು.

ಇದನ್ನೂ ಓದಿ: Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

ಇನ್ನು ಫಹಾದ್‌ ಫಾಸಿಲ್‌ ಹಲವು ಬಹು ನಿರೀಕ್ಷಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲು ಅರ್ಜುನ್ ಅವರ ಪ್ಯಾನ್‌ ಇಂಡಿಯಾ ಚಿತ್ರ ‌ʼಪುಷ್ಪ 2: ದಿ ರೂಲ್‌ʼ ಸಿನಿಮಾದ ಮುಖ್ಯ ಪಾತ್ರದಲ್ಲಿ ಫಹಾದ್‌ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಾಯಕಿಯಾಗಿರುವ ಈ ಚಿತ್ರದ ಮೊದಲ ಭಾಗ ಸೂಪರ್‌ ಹಿಟ್‌ ಆಗಿತ್ತು. ಅಲ್ಲದೆ ಅಲ್ಲು ಅರ್ಜುನ್‌ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನೂ ತಂಡು ಕೊಟ್ಟಿತ್ತು. ಕಥೆಗೆ ಟ್ವಿಸ್ಟ್‌ ಕೊಡುವ ಪಾತ್ರದಲ್ಲಿ ಫಹಾದ್‌ ನಟಿಸಿದ್ದರು. ಎರಡನೇ ಭಾಗದಲ್ಲಿನ ಅವರ ಪಾತ್ರದ ಬಗ್ಗೆ ಕುತೂಹಲ ಮೂಡಿದೆ.

ಇದರ ಜತೆಗೆ ಹಲವು ವರ್ಷಗಳ ಬಳಿಕ ತೆರೆ ಮೇಲೆ ಒಂದಾಗುತ್ತಿರುವ ಸೂಪರ್‌ ಸ್ಟಾರ್‌ಗಳಾದ ರಜನಿಕಾಂತ್‌- ಅಮಿತಾಭ್‌ ಬಚ್ಚನ್‌ ಅವರ ʼವೆಟ್ಟೈಯನ್‌ʼ ಸಿನಿಮಾದಲ್ಲಿ ಫಹಾದ್‌ ಅಭಿನಯಿಸುತ್ತಿದ್ದಾರೆ. ಇದನ್ನು ಟಿ.ಜೆ.ಜ್ಞಾನವೇಲ್ ನಿರ್ದೇಶಿಸುತ್ತಿದ್ದಾರೆ. ರಾಣಾ ದಗ್ಗುಬಾಟಿ, ಮಂಜು ವಾರಿಯರ್‌, ರಿತಿಕಾ ಸಿಂಗ್‌, ದುಶಾರಾ ವಿಜಯನ್‌ ಮತ್ತಿತರರು ಮುಖ್ಯ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಅಲ್ಲದೆ ಫಾಹದ್‌ ಮಲಯಾಳಂನ ʼಆವೇಶಮ್‌ʼ, ʼಪಾಟ್ಟುʼ, ʼಹನುಮಾನ್‌ ಗೇರ್‌ʼ ಮತ್ತಿತರ ಚಿತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಒಟಿಟಿ

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

The Goat Life ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ.

VISTARANEWS.COM


on

The Goat Life OTT Release Date Fix
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ಮಲಯಾಳಂ ಚಿತ್ರ ʻಆಡುಜೀವಿತಂʼ (The Goat Life) ಬಿಡುಗಡೆಯಾದ ದಿನವೇ ಒಳ್ಳೆಯ ಗಳಿಕೆ ಕಂಡಿತ್ತು. ಪೃಥ್ವಿರಾಜ್ ಸುಕುಮಾರನ್ ಮುಖ್ಯ ಭೂಮಿಕೆಯಯ ಈ ಸಿನಿಮಾ 150 ಕೋಟಿ ರೂ. ಗಳಿಕೆ ಕಂಡಿತ್ತು. ನೈಜ ಘಟನೆಗಳನ್ನು ಆಧರಿಸಿ ಬರೆದ ಕಾದಂಬರಿಯನ್ನು ತೆರೆಗೆ ತಂದು ಚಿತ್ರತಂಡ ಸಕ್ಸಸ್ ಕಂಡಿತ್ತು. ಸಾಕಷ್ಟು ಜನ ಈ ಚಿತ್ರವನ್ನು ಒಟಿಟಿಯಲ್ಲಿ ವೀಕ್ಷಿಸಲು ಕಾಯುತ್ತಿದ್ದಾರೆ. ಡಿಸ್ನಿ ಪ್ಲಸ್ ಹಾಟ್‌ಸ್ಟರ್‌ಗೆ ಚಿತ್ರದ ಒಟಿಟಿ ರೈಟ್ಸ್ ಮಾರಾಟವಾಗಿದೆ ಎನ್ನುವ ಚರ್ಚೆ ನಡೀತಿದೆ.

ಬ್ಲೆಸ್ಸಿ ನಿರ್ದೇಶನದ ಈ ಚಿತ್ರ ಆರು ದಿನಗಳಲ್ಲಿ ಭಾರತದಲ್ಲಿ ಸುಮಾರು 40.4 ಕೋಟಿ ರೂ. ಸಂಗ್ರಹಿಸಿತ್ತು. ಮೊದಲ ದಿನ, ʻಆಡುಜೀವಿತಂʼ ಭಾರತದಲ್ಲಿ ಒಟ್ಟು ಎಲ್ಲಾ ಭಾಷೆಗಳು ಸೇರಿದಂತೆ 7.6 ಕೋಟಿ ರೂ. ಸಂಗ್ರಹಿಸಿದರೆ, ಎರಡನೇ ದಿನ ದಿನ 6.25 ಕೋಟಿ ರೂ. ಮೂರನೇ ದಿನ 7.75 ಕೋಟಿ ರೂ. ನಾಲ್ಕು ಮತ್ತು ಐದನೇ ದಿನ 8.7 ಕೋಟಿ ರೂ. ಮತ್ತು ಆರನೇ ದಿನ 4. 5 ಕೋಟಿ ರೂ. ವ್ಯವಹಾರ ಮಾಡಿತ್ತು.

ಆಡು ಜೀವಿತಂʼ (Aadujeevitham Movie ) `ದಿ ಗೋಟ್ ಲೈಫ್’ ಸಿನಿಮಾದಲ್ಲಿ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬೆನ್ಯಾಮಿನ್ ಅವರ ಗೋಟ್ ಡೇಸ್ ಕಾದಂಬರಿ ಆಧರಿಸಿದ ಸಿನಿಮಾ ಇದಾಗಿದೆ. ಒಂದು ದಶಕದ ಪ್ರಯತ್ನದ ನಂತರ, ಮಲಯಾಳಂ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಈ ಸಿನಿಮಾ ನೈಜ ಕಥೆ ಆಧರಿಸಿದ ಚಿತ್ರವಾಗಿದೆ.

ಆಡು ಜೀವಿತಂʼ ಚಿತ್ರದ ಕಥೆ ವಲಸಿಗರ ಸಮಸ್ಯೆ ಸುತ್ತ ಸುತ್ತುತ್ತದೆ. ದುಡಿಮೆಗಾಗಿ ಸೌದಿ ಅರೇಬಿಯಾಗೆ ವಲಸೆ ಹೋಗುವ ನಸೀಬ್ ಮೊಹಮ್ಮದ್ ಎನ್ನುವ ಕೇರಳದ ವ್ಯಕ್ತಿ ಅಲ್ಲಿ ಪಟ್ಟಂತ ಕಷ್ಟಗಳು ಆತನ ಪಾಸ್‌ಪೋರ್ಟ್‌ ಕಸಿದು ಆತನಿಗೆ ಕೊಟ್ಟಂತಹ ಹಿಂಸೆಗಳು, ಆ ಬಿಸಿಲಿನ ಮರುಭೂಮಿಯಲ್ಲಿ ಆತ ಅನುಭವಿಸಿದ ಸಂಕಷ್ಟಗಳ ಕಥನವೇ ಈ ಆಡು ಜೀವಿತಂ.

ಇದನ್ನೂ ಓದಿ: Ranjani Raghavan: ರಂಜನಿ ರಾಘವನ್ ಸಿನಿಮಾದಲ್ಲಿ ಇರಲಿದೆ ಪಂಜುರ್ಲಿ ದೈವದ ಕಥೆ! ಬಿಡುಗಡೆ ಯಾವಾಗ?

ಒಟಿಟಿಗೆ ಯಾವಾಗ?

ಮೇ 10ಕ್ಕೆ ಸಿನಿಮಾ ಒಟಿಟಿ ಬರುತ್ತದೆ ಎನ್ನಲಾಗುತ್ತಿದೆ. ಮೇ 26ಕ್ಕೆ ಡಿಸ್ನಿ ಹಾಟ್‌ಸ್ಟರ್‌ನಲ್ಲಿ ಸಿನಿಮಾ ಸ್ಟ್ರೀಮಿಂಗ್ ಎನ್ನುವ ಚರ್ಚೆ ಕೂಡ ಇದೆ. ಆದರೆ ಯಾವಾಗ ಎನ್ನುವುದು ಶೀಘ್ರದಲ್ಲೇ ರಿವೀಲ್ ಆಗಲಿದೆ.

ಏನಿದೆ ಆಡುಜೀವಿತಂ ಸಿನಿಮಾ ಕಥೆ?

ಹಣ ಸಂಪಾದಿಸಲು ಸೌದಿ ಅರೇಬಿಯಾಕ್ಕೆ ಹೋದ ಭಾರತೀಯ ವಲಸೆ ಕಾರ್ಮಿಕ ನಜೀಬ್ ಮುಹಮ್ಮದ್ ನಿಜ ಜೀವನದ ಘಟನೆ ಇದು ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ. ವಿಧಿಯ ವೈಚಿತ್ರ್ಯದಿಂದಾಗಿ ನಜೀಬ್‌ ಗುಲಾಮನ ಬದುಕನ್ನು ಬದುಕಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತದೆ. ಅವನು ಮರುಭೂಮಿಯ ಮಧ್ಯದಲ್ಲಿ ಮೇಕೆಗಳನ್ನು ಮೇಯಿಸಬೇಕಾಗುತ್ತದೆ. ಆಡು ಜೀವಿತಂ ಅಂದರೆ ಆಡಿನ ಬದುಕು ಅಂಥ ಅರ್ಥ. ಇಂಗ್ಲಿಷ್‌ನಲ್ಲಿ ಇದರ ಟೈಟಲ್‌ GOAT LIFE ಎಂದಿದೆ.

ಪರ್ಷಿಯನ್ ಕೊಲ್ಲಿ ರಾಷ್ಟ್ರಗಳಲ್ಲಿ ಕೆಲಸ ಮಾಡಿ ಮನೆಗೆ ಕಳುಹಿಸುವಷ್ಟು ಹಣ ಸಂಪಾದಿಸುವುದು ನಜೀಬ್ ಅವರ ಕನಸಾಗಿತ್ತು. ಆದರೆ, ಸೌದಿ ಮರುಭೂಮಿಯ ಮಧ್ಯದಲ್ಲಿ ಆಡುಗಳನ್ನು ಮೇಯಿಸುವ ಗುಲಾಮಗಿರಿಯ ಕೆಲಸಕ್ಕೆ ಒಡ್ಡಿಕೊಳ್ಳಬೇಕಾದ ಅನಿವಾರ್ಯತೆ ಏನು ಬಂತು? ಅವನು ಕೊನೆಗೂ ತನ್ನನ್ನು ತಾನು ಹೇಗೆ ಬಂಧಮುಕ್ತಗೊಳಿಸಿಕೊಳ್ಳುತ್ತಾನೆ ಎನ್ನುವುದೊಂದು ದೊಡ್ಡ ಹೋರಾಟದ ಕಥೆ. ಅವನು ಸೆರೆಮನೆ ಸೇರಿ, ಅಲ್ಲಿಂದ ತಪ್ಪಿಸಿಕೊಳ್ಳುವ ಸಾಹಸ ಈ ಚಿತ್ರದಲ್ಲಿ ಇರಲಿದೆ ಎನ್ನಲಾಗಿದೆ.

ಈ ಸಿನಿಮಾಕ್ಕಾಗಿ ನಿರ್ದೇಶಕ ಬ್ಲೆಸ್ಸಿ ಅವರು ತುಂಬಾ ಅಧ್ಯಯನ ಮಾಡಿದ್ದಾರೆ. ಈ ಕಥೆ ಅವರನ್ನು ಕಳೆದ 15 ವರ್ಷಗಳಿಂದ ಕೊರೆಯುತ್ತಿತ್ತಂತೆ. ಅಂತೆಯೇ ಅವರ ಕನಸಿನಲ್ಲಿ ಬಂದ ಚಿತ್ರದಂತೆ ತಮ್ಮನ್ನು ಮಾರ್ಪಾಡು ಮಾಡಿಕೊಂಡು ಹೊಸ ವ್ಯಕ್ತಿಯ ರೂಪದಲ್ಲಿ ಹೊಸ ಲುಕ್‌ನಲ್ಲಿ ಬಂದಿದ್ದಾರೆ ನಟ ಪೃಥ್ವಿರಾಜ್ ಸುಕುಮಾರನ್.

Continue Reading

ಒಟಿಟಿ

Ajay Devgn: ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗ್ತಾ ಇದೆ ಅಜಯ್‌ ದೇವಗನ್‌ ʻಶೈತಾನ್ʼ ಸಿನಿಮಾ

Ajay Devgn: ʻಶೈತಾನ್’ ಗುಜರಾತಿ ಚಿತ್ರದ ‘ವಾಶ್’ ಶೀರ್ಷಿಕೆಯ ರಿಮೇಕ್ ಆಗಿದೆ. ‘ಶೈತಾನ್’ ಬ್ಲಾಕ್ ಮ್ಯಾಜಿಕ್ ಸುತ್ತ ಕಥೆ ಇದೆ. ಎರಡು ದಶಕಗಳಿಗೂ ಹೆಚ್ಚು ಸಮಯದ ನಂತರ ಬಾಲಿವುಡ್‌ಗೆ ಮರಳಿರುವ ಜ್ಯೋತಿಕಾ ಅವರು ʻಶೈತಾನ್ʼ ಸಿನಿಮಾ ಮೂಲಕ ಭರ್ಜರಿ ಜಯಭೇರಿ ಭಾರಿಸಿದ್ದರು. ಇದು ಜ್ಯೋತಿಕಾ ಅವರ ಪಾಲಿಗೆ 100 ಕೋಟಿ ರೂ. ಕ್ಲಬ್‌ ಸೇರಿದ ಮೊದಲ ಹಿಂದಿ ಸಿನಿಮಾ ಆಗಿತ್ತು.

VISTARANEWS.COM


on

Ajay Devgn 'Shaitaan' to stream on OTT
Koo

ಬೆಂಗಳೂರು:  ಅಜಯ್ ದೇವಗನ್ (Ajay Devgn) ಅವರ ಸೂಪರ್ ನ್ಯಾಚುರಲ್ ಥ್ರಿಲ್ಲರ್ ʻಶೈತಾನ್ʼ (Shaitaan box office ) ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂ. ಕ್ಲಬ್ ಪ್ರವೇಶಿಸಿ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ಶೈತಾನ್‌ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ. ಅಜಯ್ ದೇವಗನ್, ಆರ್ ಮಾಧವನ್ (R Madhavan) ಮತ್ತು ಜ್ಯೋತಿಕಾ ( Jyotika) ಅಭಿನಯದ ಚಿತ್ರ ಮೇ 4 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅವರ ʻಫೈಟರ್ʼ ಮತ್ತು ಶಾಹಿದ್ ಕಪೂರ್ ಮತ್ತು ಕೃತಿ ಸನೂನ್ ಅಭಿನಯದ ʻತೇರಿ ಬಾಟನ್ ಮೇ ಐಸಾ ಉಲ್ಜಾ ಜಿಯಾʼ (Teri Baaton Mein Aisa Uljha Jiya) ಬಳಿಕ ಈ ವರ್ಷ ಒಳ್ಳೆಯ ಮೈಲೇಜ್‌ ನೀಡಿದ ಮೂರನೇ ಹಿಂದಿ ಸಿನಿಮಾವಾಗಿ ಶೈತಾನ್‌ ಹೊರಹೊಮ್ಮಿತ್ತು. ಶೈತಾನ್‌ ತೆರೆ ಕಂಡ ಬಳಿಕ ಒಟ್ಟೂ 149.49 ಕೋಟಿ ರೂ. ಗಳಿಕೆ ಕಂಡಿತ್ತು. ಅಜಯ್ ದೇವಗನ್ ಅವರ ಸತತ ಮೂರನೇ ಸಕ್ಸೆಸ್‌ ಸಿನಿಮಾ ಇದಾಗಿದೆ.

ʻಶೈತಾನ್’ ಗುಜರಾತಿ ಚಿತ್ರದ ‘ವಾಶ್’ ಶೀರ್ಷಿಕೆಯ ರಿಮೇಕ್ ಆಗಿದೆ. ‘ಶೈತಾನ್’ ಬ್ಲಾಕ್ ಮ್ಯಾಜಿಕ್ ಸುತ್ತ ಕಥೆ ಇದೆ. ಎರಡು ದಶಕಗಳಿಗೂ ಹೆಚ್ಚು ಸಮಯದ ನಂತರ ಬಾಲಿವುಡ್‌ಗೆ ಮರಳಿರುವ ಜ್ಯೋತಿಕಾ ಅವರು ʻಶೈತಾನ್ʼ ಸಿನಿಮಾ ಮೂಲಕ ಭರ್ಜರಿ ಜಯಭೇರಿ ಭಾರಿಸಿದ್ದರು. ಇದು ಜ್ಯೋತಿಕಾ ಅವರ ಪಾಲಿಗೆ 100 ಕೋಟಿ ರೂ. ಕ್ಲಬ್‌ ಸೇರಿದ ಮೊದಲ ಹಿಂದಿ ಸಿನಿಮಾ ಆಗಿತ್ತು.

ಇದನ್ನೂ ಓದಿ: Ajay Devgn:‌ ಕನ್ನಡಿಗನ ಕಥೆ ಕದ್ದರಾ ಅಜಯ್‌ ದೇವಗನ್‌? ‘ಮೈದಾನ್’ ಚಿತ್ರಕ್ಕೆ ಕೋರ್ಟ್ ತಡೆ!

ಅಜಯ್ ದೇವಗನ್ ಹಾಗೂ ಆರ್ ಮಾಧವನ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ‘ಶೈತಾನ್’ ಚಿತ್ರಕ್ಕಾಗಿ ಒಂದಾಗಿ ಗಮನ ಸೆಳೆದಿದ್ದರು. ಮಾಧವನ್ ಅವರು ಮಾಂತ್ರಿಕನ ಪಾತ್ರದಲ್ಲಿ ಗಮನ ಸೆಳೆದಿದ್ದರು.

2023ರಲ್ಲಿ ರಿಲೀಸ್ ಆದ ‘ವಶ್’ ಹೆಸರಿನ ಗುಜರಾತಿ ಸಿನಿಮಾದ ರಿಮೇಕ್ ಆಗಿ ‘ಶೈತಾನ್’ ಮೂಡಿ ಬಂದಿತ್ತು. ಅಜಯ್ ದೇವಗನ್ ಜೊತೆ ಜ್ಯೋತಿಕಾ, ಆರ್​ ಮಾಧವನ್ ಪ್ರಮುಖ ಪಾತ್ರ ಮಾಡಿದ್ದರು. ದೇವಗನ್ ಫಿಲ್ಮ್ಸ್, ಜಿಯೋ ಸ್ಟುಡಿಯೋ ಹಾಗೂ ಪನೋರಮಾ ಸ್ಟುಡಿಯೋ ಒಟ್ಟಾಗಿ ಸಿನಿಮಾ ನಿರ್ಮಾಣ ಮಾಡಿತ್ತು.

Continue Reading

ಒಟಿಟಿ

Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

Movie Release: ಹಾಸ್ಯದಿಂದ ಥ್ರಿಲ್ಲರ್‌ಗಳವರೆಗೆ, ರೋಮ್ಯಾಂಟಿಕ್‌ನಿಂದ ಅಪರಾಧ ಸರಣಿಗಳವರೆಗೆ ಪ್ರತಿಯೊಬ್ಬರಿಗೂ ಇಷ್ಟವಾಗುವ ಚಿತ್ರಗಳು, ಸರಣಿಗಳು ಒಟಿಟಿಗೆ ಕಾಲಿಟ್ಟಿದ್ದು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Movie Release
Koo

ಈ ಬಾರಿ ವಿಭಿನ್ನ ಪ್ರಕಾರದ ಚಲನಚಿತ್ರಗಳು (Movie Release) ಒಟಿಟಿಯಲ್ಲಿ (OTT) ಬಿಡುಗಡೆಗೆ ಸಿದ್ಧವಾಗಿದೆ. ಹಾಸ್ಯದಿಂದ (Comedy) ಆಕ್ಷನ್ (Action), ಥ್ರಿಲ್ಲರ್‌ಗಳವರೆಗೆ ( Thriller), ರೋಮ್ಯಾಂಟಿಕ್‌ನಿಂದ ಅಪರಾಧ ಸರಣಿಗಳವರೆಗೆ ಹೀಗೆ ಪ್ರತಿಯೊಬ್ಬರಿಗೂ ಇಷ್ಟವಾಗುವ ಚಿತ್ರಗಳನ್ನು ಮನೆಯಲ್ಲೇ ಕುಳಿತು ವೀಕ್ಷಿಸಬಹುದು. ಹೆಚ್ಚು ಇಷ್ಟಪಡುವ ಕೆಲವು ಹೊಸ ಚಲನಚಿತ್ರಗಳು ಮತ್ತು ಸರಣಿಗಳು ಈ ವಾರ ವಿವಿಧ ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿ ಬಿಡುಗಡೆಯಾಗಲಿದೆ.

ಫಿಯಾಸ್ಕೋ

ಇಗೊರ್ ಗೋಟ್ಸ್‌ಮನ್ ಬರೆದು ನಿರ್ದೇಶಿಸಿರುವ ಫ್ರೆಂಚ್ ಹಾಸ್ಯ ಸರಣಿ ಫಿಯಾಸ್ಕೋ. ಇದರಲ್ಲಿ ನೈನಿ, ಫ್ರಾಂಕೋಯಿಸ್ ಸಿವಿಲ್, ಗೋಟ್ಸ್‌ಮನ್, ಜೆರಾಲ್ಡಿನ್ ನಕಾಚೆ, ಲೂಯಿಸ್ ಕೋಲ್ಡೆಫಿ, ಲೆಸ್ಲಿ ಮೆಡಿನಾ, ಪಾಸ್ಕಲ್ ಡೆಮೊಲನ್, ಜೂಲಿಯೆಟ್ ಗ್ಯಾಸ್ಕೆಟ್, ಡಿಜಿಮೊ, ಮೇರಿ-ಕ್ರಿಸ್ಟಿನ್ ಬರಾಲ್ಟ್ ಮತ್ತು ವಿನ್ಸೆಂಟ್ ಕ್ಯಾಸೆಲ್ ಪ್ರಮುಖ ಪಾತ್ರಗಳಲ್ಲಿದ್ದಾರೆ.


2024ರ ಏಪ್ರಿಲ್ 8ರಂದು ಕ್ಯಾನೆಸರೀಸ್ ಫೆಸ್ಟಿವಲ್‌ನಲ್ಲಿ ಪ್ರಥಮ ಪ್ರದರ್ಶನಗೊಂಡಿರುವ ಫಿಯಾಸ್ಕೋ ಸರಣಿಯು ಅಜ್ಜಿಗೆ ಗೌರವ ಸಲ್ಲಿಸಲು ರಾಫೆಲ್ ವಾಲಾಂಡೆ ಅವರ ನಿರ್ದೇಶಿಸುವ ಚೊಚ್ಚಲ ಸಿನಿಮಾದ ಸುತ್ತ ಸುತ್ತುತ್ತದೆ. ತಂಡದ ಸದಸ್ಯರು ಚಲನಚಿತ್ರವನ್ನು ಹಾಳುಮಾಡಲು ಪ್ರಯತ್ನಿಸಿದಾಗ ಅದು ದುಃಸ್ವಪ್ನವಾಗುತ್ತದೆ. ನೆಟ್‌ಫ್ಲಿಕ್ಸ್ ಈ ಸರಣಿಯು ಏಪ್ರಿಲ್ 30ರಿಂದ ಪ್ರದರ್ಶನ ಕಾಣಲಿದೆ.

ಇದನ್ನೂ ಓದಿ: Vettaiyan Movie: ರಜನಿಕಾಂತ್ ಸಿನಿಮಾದಲ್ಲಿ ಅನಿರುದ್ಧ್ ರವಿಚಂದರ್; ಲೀಕ್‌ ಆಯ್ತು ಫೋಟೊ!


ಅಕಾಪುಲ್ಕೊ ಸೀಸನ್ 3

ಅಮೆರಿಕನ್ ಸ್ಪ್ಯಾನಿಷ್ ಮತ್ತು ಇಂಗ್ಲಿಷ್ ಭಾಷೆಯ ಹಾಸ್ಯ ಸರಣಿ ಅಕಾಪುಲ್ಕೊದ ಮೂರನೇ ಸರಣಿ ಒಟಿಟಿ ಪ್ಲಾಟ್‌ಫಾರ್ಮ್ ಮೇಲೆ ಬರಲು ಸಜ್ಜಾಗಿದೆ. ಇದನ್ನು ಆಸ್ಟಿನ್ ವಿನ್ಸ್‌ಬರ್ಗ್, ಎಡ್ವರ್ಡೊ ಸಿಸ್ನೆರೋಸ್ ಮತ್ತು ಜೇಸನ್ ಶುಮನ್ ರಚಿಸಿದ್ದಾರೆ. ಈ ಸರಣಿಯು ಹೌ ಟು ಬಿ ಎ ಲ್ಯಾಟಿನ್ ಲವರ್ (2017) ನಿಂದ ಸ್ಫೂರ್ತಿ ಪಡೆದಿದೆ. ಇದರ ಮೊದಲ ಸೀಸನ್ 2021ರ ಅಕ್ಟೋಬರ್ 8ರಂದು ಬಿಡುಗಡೆಯಾಗಿತ್ತು. ಅನಂತರ ಎರಡನೇ ಸೀಸನ್ 2022ರ ಅಕ್ಟೋಬರ್ ನಲ್ಲಿ ಬಿಡುಗಡೆಯಾಯಿತು. ಈಗ ಮೂರನೇ ಸೀಸನ್ ಬಿಡುಗಡೆಗೆ ಸಿದ್ಧವಾಗಿದೆ. Apple TV+ ನಲ್ಲಿ ಈ ಸರಣಿ ಮೇ 1ರಿಂದ ಪ್ರದರ್ಶನ ಕಾಣಲಿದೆ.


T・P ಬಾನ್

T・P BON ಎಂಬುದು ಬಾನ್ ಮೇಲೆ ಕೇಂದ್ರೀಕರಿಸುವ ನಾಮಸೂಚಕ ಮಂಗಾದ ಅನಿಮೆ ರೂಪಾಂತರ. ಬಾನ್ ಹೈಸ್ಕೂಲ್ ವಿದ್ಯಾರ್ಥಿಯಾಗಿದ್ದು, ಟೈಮ್ ಪ್ಯಾಟ್ರೋಲ್ ಎಂದು ಕರೆಯಲ್ಪಡುವ ಟೈಮ್-ಟ್ರಾವೆಲಿಂಗ್ ಸ್ಕ್ವಾಡ್‌ನ ಸದಸ್ಯರಾಗಿದ್ದಾರೆ. ಪ್ರಪಂಚದಾದ್ಯಂತದ ವಿವಿಧ ಸಮಯ ಮತ್ತು ಸ್ಥಳಗಳ ಮೂಲಕ ಜನರನ್ನು ಪ್ರಮುಖ ಐತಿಹಾಸಿಕ ಕ್ಷಣಗಳಿಂದ ರಕ್ಷಿಸುವ ಮೂಲಕ ಇದು ನೋಡಲು ಆಹ್ಲಾದಕರವಾದ ಆದರೆ ಪ್ರಮುಖವಾದ ಮಿಷನ್ ಅನ್ನು ನಿರೂಪಿಸುತ್ತದೆ. ಬಾನ್ ಮತ್ತು ಅವನ ಸಂಗಡಿಗರು ಸಮಯ ಪ್ರಯಾಣದ ಜಟಿಲತೆಗಳನ್ನು ಪರಿಶೀಲಿಸಿದಾಗ ಅವರು ತಮ್ಮ ನಿರ್ಣಯವನ್ನು ಪರೀಕ್ಷಿಸುವ ಸವಾಲುಗಳನ್ನು ಎದುರಿಸುತ್ತಾರೆ ಮತ್ತು ಇತಿಹಾಸದ ಬಗ್ಗೆ ಅವರ ಒಳನೋಟವನ್ನು ಆಳವಾಗಿಸುತ್ತಾರೆ. ನೆಟ್‌ಫ್ಲಿಕ್ಸ್ ನಲ್ಲಿ ಈ ಸರಣಿ ಮೇ 2ರಿಂದ ತೆರೆ ಕಾಣಲಿದೆ.


ದಿ ಐಡಿಯಾ ಆಫ್ ಯು

2024ರ ಅಮೇರಿಕನ್ ರೊಮ್ಯಾಂಟಿಕ್ ಹಾಸ್ಯ ಚಲನಚಿತ್ರ ದಿ ಐಡಿಯಾ ಆಫ್ ಯು. ಇದನ್ನು ಮೈಕೆಲ್ ಶೋಲ್ಟರ್ ನಿರ್ದೇಶಿಸಿದ್ದಾರೆ. ಈ ಚಲನಚಿತ್ರವನ್ನು ಜೆನ್ನಿಫರ್ ವೆಸ್ಟ್‌ಫೆಲ್ಡ್ ಜೊತೆ ಸಹ-ಬರೆದಿದ್ದಾರೆ ಮತ್ತು ಚಲನಚಿತ್ರವು ರಾಬಿನ್ನೆ ಲೀ ಅವರ ಅದೇ ಹೆಸರನ್ನು ಆಧರಿಸಿದೆ. ಇದು ಅನ್ನಿ ಹ್ಯಾಥ್‌ವೇ ಮತ್ತು ನಿಕೋಲಸ್ ಗ್ಯಾಲಿಟ್‌ಜಿನ್ ಒಬ್ಬ ತಾಯಿ ಮತ್ತು ಜನಪ್ರಿಯ ಬಾಯ್ ಬ್ಯಾಂಡ್‌ನ ಪ್ರಮುಖ ಗಾಯಕ ಮತ್ತು ಪ್ರಮುಖ ಗಾಯಕ ನಡುವಿನ ಪ್ರೇಮಕಥೆಯನ್ನು ನಿರೂಪಿಸುತ್ತದೆ. ಪ್ರಧಾನ ವಿಡಿಯೋ ನಲ್ಲಿ ಮಾರ್ಚ್ 16ರಿಂದ ಚಿತ್ರ ತೆರೆ ಕಾಣುತ್ತಿದೆ.


ಶೈತಾನ್

ಶೈತಾನ್ 2024ರ ಭಾರತೀಯ ಹಿಂದಿ ಭಾಷೆಯ ಅಲೌಕಿಕ ಹಾರರ್ ಥ್ರಿಲ್ಲರ್ ಚಲನಚಿತ್ರವಾಗಿದೆ. ಚಿತ್ರವನ್ನು ವಿಕಾಸ್ ಬಹ್ಲ್ ನಿರ್ದೇಶಿಸಿದ್ದಾರೆ ದೇವಗನ್ ಫಿಲ್ಮ್ಸ್, ಪನೋರಮಾ ಸ್ಟುಡಿಯೋಸ್ ಮತ್ತು ಜಿಯೋ ಸ್ಟುಡಿಯೋಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್, ಆರ್. ಮಾಧವನ್, ಜ್ಯೋತಿಕಾ, ಅಂಗದ್ ರಾಜ್ ಮತ್ತು ಜಾಂಕಿ ಬೋಡಿವಾಲಾ ನಟಿಸಿದ್ದಾರೆ. ತಮ್ಮ ಹಿರಿಯ ಮಗಳು ಮಾಟಮಂತ್ರದ ಮಾಟಕ್ಕೆ ಸಿಲುಕಿದಾಗ ಅವರ ಜೀವನವು ಅಸ್ತವ್ಯಸ್ತವಾಗಿರುವ ಕುಟುಂಬದ ಸುತ್ತ ಚಲನಚಿತ್ರವು ಸುತ್ತುತ್ತದೆ. ನೆಟ್‌ಫ್ಲಿಕ್ಸ್ ನಲ್ಲಿ ಈ ಚಿತ್ರ ಮೇ 3ರಿಂದ ತೆರೆ ಕಾಣಲಿದೆ.


ಟಿಲ್ಲು 2

ಟಿಲ್ಲು ಸ್ಕ್ವೇರ್ ಭಾರತೀಯ ತೆಲುಗು ಭಾಷೆಯ ರೋಮ್ಯಾಂಟಿಕ್ ಕ್ರೈಮ್ ಹಾಸ್ಯ ಚಲನಚಿತ್ರವಾಗಿದ್ದು, ಇದನ್ನು ಮಲ್ಲಿಕ್ ರಾಮ್ ನಿರ್ದೇಶಿಸಿದ್ದಾರೆ. ಸಿತಾರಾ ಎಂಟರ್‌ಟೈನ್‌ಮೆಂಟ್ಸ್ ಮತ್ತು ಫಾರ್ಚೂನ್ ಫೋರ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಸೂರ್ಯದೇವರ ನಾಗ ವಂಶಿ ನಿರ್ಮಿಸಿದ್ದಾರೆ. 2022 ರ ಡಿ.ಜೆ. ಟಿಲ್ಲು ಚಿತ್ರದ ಮುಂದುವರಿದ ಭಾಗವಾಗಿದ್ದು, ಸಿದ್ದು ಜೊನ್ನಲಗಡ್ಡ ಅವರು ಹಿಂದಿನ ಚಿತ್ರದಲ್ಲಿ ತಮ್ಮ ಪಾತ್ರವನ್ನು ಪುನರಾವರ್ತಿಸಿದರೆ, ಅನುಪಮಾ ಪರಮೇಶ್ವರನ್ ನಾಯಕಿಯಾಗಿ ನಟಿಸಿದ್ದಾರೆ. ಮಾರ್ಚ್ 26ರಿಂದ ನೆಟ್ ಫ್ಲಿಕ್ಸ್ ನಲ್ಲಿ ಬಿಡುಗಡೆಯಾಗಲಿದೆ.


ಭೀಮಾ

ಆಕ್ಸನ್ ಚಿತ್ರವಾಗಿರುವ ಭೀಮಾದಲ್ಲಿ ಗೋಪಿಚಂದ್ ಡಬಲ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಿಯಾ, ಭವಾನಿ ಶಂಕರ್, ಮಾಳವಿಕಾ ಶರ್ಮ ಸೇರಿದಂತೆ ಹಲವು ಪ್ರಮುಖರು ಚಿತ್ರದಲ್ಲಿ ಕಂಡಿಸಿಕೊಂಡಿದ್ದಾರೆ. ಎ. ಹರ್ಷ ನಿರ್ದೇಶನದ ಈ ಚಿತ್ರವನ್ನು ಕೆ.ಕೆ. ರಾಧಾಮೋಹನ್ ನಿರ್ಮಿಸಿದ್ದಾರೆ. 28 ಕೋಟಿ ಬಜೆಟ್‌ನ ಈ ಚಿತ್ರ ಹಾಟ್ ಸ್ಟಾರ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿದೆ.


ಕುಂಗ್ ಫು ಪಂಡಾ 4

ಅಮೆರಿಕನ್ ಅನಿಮೇಷನ್ ಚಿತ್ರ ಕುಂಗ್ ಫು ಪಂಡಾ 4 ಅನ್ನು ಡ್ರೀಮ್ ವರ್ಕ್ ಅನಿಮೇಷನ್ ನಿರ್ದೇಶಿಸಿದೆ. ಜೇಮ್ಸ್ ಹಾಂಗ್, ಬ್ರಯಾನ್ ಕ್ರೇನ್ಸ್ಟೋನ್, ಡುಸ್ಟಿನ್ ಹಾಫ್ಮ್ಯಾನ್, ಜೇಮ್ಸ್ ಹೊಂಗ್ ಸೇರಿದಂತೆ ಹಲವು ಪಾತ್ರಗಳು ಹಿಂದಿನ ಸರಣಿಯಂತೆ ಈ ಬಾರಿಯ ಸರಣಿಯಲ್ಲೂ ಕಾಣಿಸಿಕೊಳ್ಳಲಿದೆ. ಇದು ಬುಕ್ ಮೈ ಶೋ ನಲ್ಲಿ ಮಾರ್ಚ್ 26 ರಿಂದ ತೆರೆ ಕಾಣಲಿದೆ.


ದಿ ಫಿಲಂ ಸ್ಟಾರ್

ಅಮೆಜಾನ್ ಪ್ರೈಮ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿರುವ ವಿಜಯ್ ದೇವರಕೊಂಡ ಅಭಿನಯದ ಕೌಟುಂಬಿಕ ಪ್ರಧಾನ ಚಿತ್ರ ದಿ ಫಿಲಂ ಸ್ಟಾರ್. ಉತ್ತಮ ಜೀವನ ನಿರ್ವಹಣೆಗಾಗಿ ಮಾಡುವ ಸಾಹಸ ಚಿತ್ರದ ಮುಖ್ಯ ಕಥೆಯಾಗಿದೆ.


ಡೆಡ್ ಬಾಡಿ ಡಿಟೆಕ್ಟಿವ್

ನೆಟ್ ಫ್ಲಿಕ್ಸ್ ನಲ್ಲಿ ಮಾರ್ಚ್ 26ರಿಂದ ತೆರೆ ಕಾಣಲಿರುವ ಈ ಸರಣಿ ಸ್ಟೀವ್ ಯೊಕೆಯ್ ನಿರ್ದೇಶಿಸಿದ್ದಾರೆ. ಕ್ರೈಮ್ ನ ಕಾರಣಗಳನ್ನು ಹುಡುಕಿ ಕುತೂಹಲ ವಿಚಾರಗಳನ್ನು ವಿಶೇಷ ರೀತಿಯಲ್ಲಿ ತೆರೆದಿಡುವ ಸರಣಿ ಇದಾಗಿದೆ.

Continue Reading
Advertisement
Viral Video
ದೇಶ13 mins ago

Viral Video: ವಂದೇ ಭಾರತ್ ರೈಲಿನಡಿ ಸಿಲುಕಿದರೂ ಹಸು ಪ್ರಾಣಾಪಾಯದಿಂದ ಪಾರಾಗಿದ್ದು ಹೇಗೆ?

Sean Williams
ಪ್ರಮುಖ ಸುದ್ದಿ13 mins ago

Sean Williams : ಜಿಂಬಾಬ್ವೆ ತಂಡದ ಹಿರಿಯ ಆಲ್​ರೌಂಡರ್​ ಟಿ20 ಕ್ರಿಕೆಟ್​ನಿಂದ ನಿವೃತ್ತಿ

Hoax bomb threat
ಕರ್ನಾಟಕ26 mins ago

Hoax Bomb Threat: ದೆಹಲಿ ಬೆನ್ನಲ್ಲೇ ಬೆಂಗಳೂರಿನ ಪ್ರಮುಖ‌ ಆಸ್ಪತ್ರೆಗೆ ಹುಸಿ ಬಾಂಬ್ ಬೆದರಿಕೆ‌; ಆತಂಕ ಸೃಷ್ಟಿ

IPL 2024
ಕ್ರೀಡೆ35 mins ago

IPL 2024 : ಕೆಕೆಆರ್ ತಂಡದ ಇನ್ನೊಬ್ಬ ಆಟಗಾರನಿಗೆ ದಂಡ ವಿಧಿಸಿದ ಬಿಸಿಸಿಐ

Prajwal Revanna Case Basavaraj Bommai says DK Shivakumar should be questioned
ಕರ್ನಾಟಕ37 mins ago

Prajwal Revanna Case: ದಿಕ್ಕು ತಪ್ಪಿದೆ ಪ್ರಜ್ವಲ್ ರೇವಣ್ಣ ಕೇಸ್‌; ಡಿಕೆಶಿ ವಿಚಾರಣೆಯೂ ಆಗಲಿ ಎಂದ ಬಸವರಾಜ ಬೊಮ್ಮಾಯಿ

Bomb Threat
ದೇಶ54 mins ago

Bomb Threat:  ಏರ್​ಪೋರ್ಟ್​ ಸೇರಿ ದೆಹಲಿಯ ಹತ್ತಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ

BDA Complex
ಕರ್ನಾಟಕ1 hour ago

BDA Complex: ವಿರೋಧದ ನಡುವೆ ಖಾಸಗಿ ಕಂಪನಿ ತೆಕ್ಕೆಗೆ 7 ಬಿಡಿಎ ಕಾಂಪ್ಲೆಕ್ಸ್; ಆದಾಯದಲ್ಲಿ 70:30 ಪಾಲು

IPL 2024
ಐಪಿಎಲ್ 20242 hours ago

IPL 2024: ರಾಜಸ್ಥಾನ ವಿರುದ್ಧ ಗೆದ್ದು ಬೀಗಿದ ಚೆನ್ನೈ; ಪ್ಲೇಆಫ್‌ ಆಸೆ ಜೀವಂತ, ಆರ್‌ಸಿಬಿಗೆ ಹೆಚ್ಚಿದ ಒತ್ತಡ

French Yoga Teacher
ಮಹಿಳೆ2 hours ago

French Yoga Teacher: ಹಸಿರು ಸೀರೆ ಧರಿಸಿ ಪದ್ಮಶ್ರೀ ಸ್ವೀಕರಿಸಿದ 101 ವರ್ಷದ ವಿದೇಶಿ ಯೋಗ ಶಿಕ್ಷಕಿ!

Vande Bharat Express
ದೇಶ2 hours ago

Vande Bharat Express: ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರ ಪ್ರಾರಂಭ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ3 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ3 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ7 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ8 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ16 hours ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು1 day ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ2 days ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

ಟ್ರೆಂಡಿಂಗ್‌