Viduthalai | ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ವಿಜಯ್​ ಸೇತುಪತಿ ಮತ್ತು ಸೂರಿ ನಟನೆಯ ವಿಡುತಲೈ! - Vistara News

ಕಾಲಿವುಡ್

Viduthalai | ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ವಿಜಯ್​ ಸೇತುಪತಿ ಮತ್ತು ಸೂರಿ ನಟನೆಯ ವಿಡುತಲೈ!

ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುತಲೈ’ (Viduthalai) ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಪೋಸ್ಟ್​ಪ್ರೊಡಕ್ಷನ್​ ಕೆಲಸಗಳು ನಡೆಯುತ್ತಿವೆ.

VISTARANEWS.COM


on

Viduthalai
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಜಯ್​ ಸೇತುಪತಿ ಮತ್ತು ಸೂರಿ ನಟಿಸುತ್ತಿರುವ ತಮಿಳು ಚಿತ್ರ ‘ವಿಡುತಲೈ’ (Viduthalai) ಇದೀಗ ಎರಡು ಭಾಗಗಳಲ್ಲಿ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಕಾಲಿವುಡ್‌ನ ಹೆಸರಾಂತ ನಿರ್ದೇಶಕ ವೆಟ್ರಿಮಾರನ್ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದಾರೆ. ಈ ಚಿತ್ರದ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಇತ್ತು. ಕ್ರಮೇಣ ಜನಪ್ರಿಯ ಕಲಾವಿದರು ಮತ್ತು ತಂತ್ರಜ್ಞರು ಚಿತ್ರತಂಡಕ್ಕೆ ಸೇರ್ಪಡೆಯಾಗುತ್ತಿದ್ದಂತೆಯೇ ಈ ಚಿತ್ರದ ಬಗ್ಗೆ ನಿರೀಕ್ಷೆಗಳು ಹೆಚ್ಚಾಗಿವೆ.

ʻವಿಡುತಲೈʼ ಚಿತ್ರದ ಭಾಗ ಒಂದರ ಚಿತ್ರೀಕರಣ ಸಂಪೂರ್ಣವಾಗಿದ್ದು, ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳು ಪ್ರಗತಿಯಲ್ಲಿವೆ. ಎರಡನೆಯ ಭಾಗದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದ್ದು ಸಿರುಮಲೈ, ಕೊಡೈಕೆನಾಲ್​ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ದೊಡ್ಡ ಬಜೆಟ್‌ ಸಿನಿಮಾ ʻವಿಡುತಲೈʼ!
ಎರಡು ಭಾಗಗಳಲ್ಲಿ ಬಿಡುಗಡೆಯಾಗುವ ಈ ಚಿತ್ರ ದೊಡ್ಡ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿದೆ. ತಮಿಳಿನ ದುಬಾರಿ ಚಿತ್ರಗಳ ಪೈಕಿಗೆ ‘ವಿಡುತಲೈ’ ಸೇರ್ಪಡೆಯಾಗಲಿದೆ. ಈ ಚಿತ್ರವನ್ನು ಕೋಟ್ಯಂತರ ವೆಚ್ಚದಲ್ಲಿ ಅದ್ಧೂರಿಯಾಗಿ ನಿರ್ಮಿಸಲಾಗಿದ್ದು, ಚಿತ್ರಕ್ಕಾಗಿ ವಿಶೇಷವಾಗಿ 10 ಕೋಟಿ ರೂ. ವೆಚ್ಚದ ರೈಲು ಮತ್ತು ರೈಲ್ವೇ ಸೇತುವೆಯ ಸೆಟ್​ ನಿರ್ಮಾಣ ಮಾಡಲಾಗಿದೆ ಎಂದು ವರದಿ ಆಗಿತ್ತು. ನಿಜವಾದ ರೈಲ್ವೆ ಬೋಗಿಗಳು ಮತ್ತು ಸೇತುವೆಯನ್ನು ನಿರ್ಮಿಸುವುದಕ್ಕೆ ಬಳಸಲಾಗುವ ಪರಿಕರಗಳನ್ನೇ ಈ ಸೆಟ್​ ನಿರ್ಮಾಣಕ್ಕೂ ಬಳಸಲಾಗಿದೆ ಎನ್ನಲಾಗಿದೆ.

Viduthalai


ಕೊಡೈಕೆನಾಲ್​ನಲ್ಲಿ ಪೀಟರ್​ ಹೇನ್ಸ್​ ನಿರ್ದೇಶನದಲ್ಲಿ ಸಾಹಸಮಯ ದೃಶ್ಯಗಳನ್ನು ಚಿತ್ರೀಕರಿಸುವುದಕ್ಕೆ ತಯಾರಿ ನಡೆಸಲಾಗಿದ್ದು, ಇದಕ್ಕಾಗಿ ಬಲ್ಗೇರಿಯಾದಿಂದ ಸಾಹಸ ಕಲಾವಿದರನ್ನು ಕರೆಸಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ | ಕಮಲ್‌ ಹಾಸನ್‌ ನಟನೆಯ ವಿಕ್ರಮ್‌ ಚಿತ್ರಕ್ಕೆ ಸಿಕ್ಕಿತು ಪ್ರಮಾಣ ಪತ್ರ

”ವಿಡುತಲೈ’ ಚಿತ್ರದಲ್ಲಿ ವಿಜಯ್​ ಸೇತುಪತಿ, ಸೂರಿ, ಭವಾನಿ ಶ್ರೀ, ಪ್ರಕಾಶ್​ ರಾಜ್​, ಗೌತಮ್​ ವಾಸುದೇವ ಮೆನನ್, ರಾಜೀವ್​ ಮೆನನ್​ ಮುಂತಾದವರು ನಟಿಸುತ್ತಿದ್ದಾರೆ. ಸಾವಿರಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಇಳಯರಾಜ ಅವರು ಈ ಚಿತ್ರದ ಸಂಗೀತದ ಜವಾಬ್ದಾರಿ ಹೊತ್ತಿದ್ದಾರೆ. ವೇಲ್​ರಾಜ್​ ಛಾಯಾಗ್ರಹಣ ಮಾಡುತ್ತಿದ್ದಾರೆ.
ಈ ಚಿತ್ರದ ವಿತರಣೆಯ ಜವಾಬ್ದಾರಿಯನ್ನು ರೆಡ್​ ಜೈಂಟ್​ ಮೂವೀಸ್​ ವಹಿಸಿಕೊಂಡಿದ್ದು, ಸದ್ಯದಲ್ಲೇ ‘ವಿಡುತಲೈ’ ಮೊದಲ ಭಾಗದ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಇದನ್ನೂ ಓದಿ | ಕಾಲಿವುಡ್​ ನಿರ್ಮಾಪಕರಿಗೆ ಸೇರಿದ ಸ್ಥಳಗಳಲ್ಲಿ ಐಟಿ ರೇಡ್​; 200 ಕೋಟಿ ರೂ ಅಕ್ರಮ ಆದಾಯ ಪತ್ತೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

South Cinema

Thug Life Movie: ಕಮಲ್‌ ಹಾಸನ್‌ ಸಿನಿಮಾಗೆ ಕಾಲಿವುಡ್‌ ನಟ ಸಿಂಬು ಎಂಟ್ರಿ!

Thug Life Movie: ಈಗಾಗಲೇ ನವದೆಹಲಿಯಲ್ಲಿ ಕಮಲ್ ಹಾಸನ್ ಜತೆಗೆ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ ಸಿಂಬು. ದೆಹಲಿಯಲ್ಲಿ ನಡೆಯುತ್ತಿರುವ ಈ ಶೆಡ್ಯೂಲ್ ಮೇ 12 ರವರೆಗೆ ನಡೆಯಲಿದೆ. ಪ್ರೋಮೊದಲ್ಲಿ ಸಿಂಬು ಅತ್ಯಂತ ವೇಗದಲ್ಲಿ ಕಾರು ಓಡಿಸುವುದನ್ನು ನೋಡಬಹುದು. ದುಲ್ಕರ್ ಸಲ್ಮಾನ್ ಈ ಪಾತ್ರದಲ್ಲಿ ನಟಿಸಬೇಕಿತ್ತು ಎನ್ನಲಾಗಿತ್ತು. ಅವರ ಬದಲಿಗೆ ಸಿಂಬು ಬಂದಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Thug Life Simbu is the new gun wielding gangster in town
Koo

ಬೆಂಗಳೂರು:  ಕಾಲಿವುಡ್‌ ನಟ ಸಿಂಬು (Simbu Birthday), ಅವರ ನಿಜವಾದ ಹೆಸರು ಸಿಲಂಬರಸನ್ ಸಿಂಗು ರಾಜೇಂದರ್ (Silambarasan Thesingu Rajendar). ತಮಿಳು ಚಿತ್ರರಂಗದಲ್ಲಿ ನಟನಾಗಿ, ಕಥೆಗಾರ, ಸಂಗೀತ ನಿರ್ದೇಶಕ, ಬರಹಗಾರ, ಗಾಯಕ, ನೃತ್ಯಗಾರ, ನಿರ್ದೇಶಕ, ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ.  ಕಮಲ್ ಹಾಸನ್ (Thug Life Movie) ಮತ್ತು ಮಣಿರತ್ನಂ ಅವರು 1987ರ ʻನಾಯಗನ್ʼ ಚಿತ್ರದ ಬಳಿಕ ಮತ್ತೊಮ್ಮೆ ಕೈಜೋಡಿಸುತ್ತಿದ್ದಾರೆ. ಕಮಲ್ ಹಾಗೂ ಮಣಿರತ್ನಂ ಜೋಡಿಯ ಸಿನಿಮಾಗೆ ʼಥಗ್ ಲೈಫ್ʼ ಎಂಬ ಶೀರ್ಷಿಕೆ ಇಡಲಾಗಿದೆ. ಇದೀಗ ಸಿಂಬು ಈ ಸಿನಿಮಾದಲ್ಲಿ ನಟಿಸುತ್ತಿರುವುದು ಪಕ್ಕಾ ಆಗಿದೆ. ಇದೀಗ ತಂಡ ಹೊಸ ಪ್ರೋಮೊ ಹಂಚಿಕೊಂಡಿದ್ದು ಸಿಂಬು ರಗಡ್‌ ಆಗಿ ಕಂಡಿದ್ದಾರೆ.

ಈಗಾಗಲೇ ನವದೆಹಲಿಯಲ್ಲಿ ಕಮಲ್ ಹಾಸನ್ ಜತೆಗೆ ಚಿತ್ರದ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ ಸಿಂಬು. ದೆಹಲಿಯಲ್ಲಿ ನಡೆಯುತ್ತಿರುವ ಈ ಶೆಡ್ಯೂಲ್ ಮೇ 12 ರವರೆಗೆ ನಡೆಯಲಿದೆ. ಪ್ರೋಮೊದಲ್ಲಿ ಸಿಂಬು ಅತ್ಯಂತ ವೇಗದಲ್ಲಿ ಕಾರು ಓಡಿಸುವುದನ್ನು ನೋಡಬಹುದು. ದುಲ್ಕರ್ ಸಲ್ಮಾನ್ ಈ ಪಾತ್ರದಲ್ಲಿ ನಟಿಸಬೇಕಿತ್ತು ಎನ್ನಲಾಗಿತ್ತು. ಅವರ ಬದಲಿಗೆ ಸಿಂಬು ಬಂದಿದ್ದಾರೆ ಎಂದು ವರದಿಯಾಗಿದೆ.

ತಮಿಳಿನ ಹಿರಿಯ ನಟ ಕಾರ್ತಿಕ್ ಅವರ ಪುತ್ರ ಗೌತಮ್ ಕಾರ್ತಿಕ್ ಕೂಡ ಕಮಲ್‌ ಸಿನಿಮಾ ಪಾತ್ರವರ್ಗಕ್ಕೆ ಸೇರುತ್ತಿದ್ದಾರೆ. ವರದಿಗಳ ಪ್ರಕಾರ, ಅವರು ನಿರ್ವಹಿಸುತ್ತಿರುವ ಪಾತ್ರ ಬಹು ಮುಖ್ಯವಾದದ್ದು ಎನ್ನಲಾಗಿದೆ. ಪಕ್ಕಾ ಆ್ಯಕ್ಷನ್ ಎಂಟರ್ ಟೈನರ್ ಕಥಾನಕ ‘ಥಗ್ ಲೈಫ್’ ಸಿನಿಮಾದಲ್ಲಿ ತ್ರಿಷಾ ಕೃಷ್ಣನ್, ದುಲ್ಕರ್ ಸಲ್ಮಾನ್, ಜಯಂರವಿ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ರಾಜ್ ಕಮಲ್ ಇಂಟರ್ ನ್ಯಾಷನಲ್ ಫಿಲ್ಮ್ಸ್ ಹಾಗೂ ಮದ್ರಾಸ್ ಟಾಕೀಸ್ ನಡಿ ಕಮಲ್ ಹಾಸನ್, ಮಣಿರತ್ನಂ, ಆರ್.ಮಹೇಂದ್ರನ್ ಮತ್ತು ಶಿವ ಅನಂತಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇದನ್ನೂ ಓದಿ: Simbu Birthday: ನಟ ಸಿಂಬುಗೆ ಜನುಮದಿನದ ಸಂಭ್ರಮ; ಫಸ್ಟ್‌ ಲುಕ್‌ ಹಂಚಿಕೊಂಡ ಕಮಲ್‌ ಹಾಸನ್‌!

ಉದಯನಿಧಿ ಸ್ಟಾಲಿನ್ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಎ.ಆರ್.ರೆಹಮಾನ್ ಚಿತ್ರದ ಸಂಗೀತ ನಿರ್ದೇಶನ, ಶ್ರೀಕರ್ ಪ್ರಸಾದ್ ಸಂಕಲನ, ರವಿ ಕೆ. ಚಂದ್ರನ್ ಛಾಯಾಗ್ರಹಣ ʼಥಗ್ ಲೈಫ್ʼ ಸಿನಿಮಾದಲ್ಲಿದೆ. 1987ರಲ್ಲಿ ಕಮಲ್ ಹಾಸನ್ ನಟನೆಯ, ಮಣಿರತ್ನಂ ನಿರ್ದೇಶನದ ‘ನಾಯಕನ್’ ಸಿನಿಮಾ ರಿಲೀಸ್ ಆಗಿತ್ತು. ಇದಾದ ಬಳಿಕ ಸುಮಾರು 37 ವರ್ಷಗಳ ಬಳಿಕ ಸೂಪರ್ ಹಿಟ್ ಜೋಡಿ ಒಂದಾಗಿದ್ದು, ನಿರೀಕ್ಷೆ ಹೆಚ್ಚಿಸಿದೆ.

Continue Reading

ಕಾಲಿವುಡ್

Jyotika Trolled: ಆನ್​ಲೈನ್​ ಮೂಲಕ ವೋಟ್ ಮಾಡಿದ್ದಾರಂತೆ ಜ್ಯೋತಿಕಾ! ಟ್ರೋಲ್‌ ಆದ ಸೂರ್ಯ ಪತ್ನಿ!

Jyotika Trolled: ಸೂರ್ಯ ಪತ್ನಿ ಜ್ಯೋತಿಕಾ ಏಕೆ ಮತ ಹಾಕಲಿಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಶ್ರೀಕಾಂತ್ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ನಟಿ ಏಕೆ ಮತದಾನ ಮಾಡಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ʻಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆʼ ಎಂದು ನಟಿ ಉತ್ತರ ನೀಡಿದ್ದಾರೆ. ಹೀಗಾಗಿ ನಟಿ ಜ್ಯೋತಿಕಾ ಟ್ರೋಲ್ ಆಗಿದ್ದಾರೆ. ನಟಿ ಜ್ಯೋತಿಕಾ (Jyotika Trolled) ಅವರು ಹಿಂದಿಯ ‘ಶ್ರೀಕಾಂತ್’ ಹೆಸರಿನ ( Srikanth with Rajkummar Rao) ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

VISTARANEWS.COM


on

Jyotika Trolled For Claiming Online Private Voting
Koo

ಬೆಂಗಳೂರು: ನಟಿ ಜ್ಯೋತಿಕಾ (Jyotika Trolled) ಅವರು ಹಿಂದಿಯ ‘ಶ್ರೀಕಾಂತ್’ ಹೆಸರಿನ ( Srikanth with Rajkummar Rao) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇದೀಗ ಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆ ಎಂದು ಹೇಳುವ ಮೂಲಕ ಜ್ಯೋತಿಕಾ ಟ್ರೋಲ್ ಆಗಿದ್ದಾರೆ. ಕಳೆದ ತಿಂಗಳು, ನಟ ಸೂರ್ಯ ಚೆನ್ನೈನ ಮತಗಟ್ಟೆಯಲ್ಲಿ ಮತದಾನ ಮಾಡಲು ಆಗಮಿಸಿದ್ದರು. ಆದರೆ, ಅವರ ಪತ್ನಿ ಜ್ಯೋತಿಕಾ ಏಕೆ ಮತ ಹಾಕಲಿಲ್ಲ ಎಂದು ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದರು. ಶ್ರೀಕಾಂತ್ ಸಿನಿಮಾ ಪ್ರಚಾರ ಕಾರ್ಯಕ್ರಮವೊಂದರಲ್ಲಿ, ನಟಿ ಏಕೆ ಮತದಾನ ಮಾಡಲಿಲ್ಲ ಎಂಬ ಪ್ರಶ್ನೆ ಎದುರಾಗಿದೆ. ʻಆನ್​ಲೈನ್​ನಲ್ಲಿ ವೋಟ್ ಮಾಡಿದ್ದೇನೆʼ ಎಂದು ನಟಿ ಉತ್ತರ ನೀಡಿದ್ದಾರೆ. ಹೀಗಾಗಿ ನಟಿ ಜ್ಯೋತಿಕಾ ಟ್ರೋಲ್ ಆಗಿದ್ದಾರೆ.

ಈವೆಂಟ್‌ನ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ವರದಿಗಾರರೊಬ್ಬರು ಜ್ಯೋತಿಕಾ ಅವರಿಗೆ ಏಕೆ ವೋಟ್‌ ಮಾಡಲು ಬರಲಿಲ್ಲ? ಎಂದು ಕೇಳಿದ್ದರು. ಆಗ ನಟಿ ʻʻನಾನು ಪ್ರತಿ ವರ್ಷ ವೋಟ್‌ ಮಾಡುತ್ತೇನೆʼʼಎಂದಿದ್ದಾರೆ. ನಂತರ ಮತದಾನ ಪ್ರತಿ ವರ್ಷ ನಡೆಯಲ್ಲ ಎಂದು ಸಂದರ್ಶಕರು ಹೇಳಿದರು.ಇದನ್ನು ಜ್ಯೋತಿಕಾ ಒಪ್ಪಿಕೊಂಡಿದ್ದಾರೆ.

ಯಾಕೆ ಮತ ಹಾಕಲಿಲ್ಲ ಎಂಬುದನ್ನು ವಿವರಿಸಿದ ಜ್ಯೋತಿಕಾ ʻʻಕೆಲವೊಮ್ಮೆ ನಾವು ನಮ್ಮ ರಾಜ್ಯದಲ್ಲಿ ಇಲ್ಲದೆ ಬೇರೆ ರಾಜ್ಯಕ್ಕೆ ಹೋಗಿರಬಹುದು. ನಾವು ಅನಾರೋಗ್ಯಕ್ಕೆ ಒಳಗಾಗಬಹುದು, ಇದು ಖಾಸಗಿ ವಿಷಯವಾಗಿದೆʼʼಎಂದಿದ್ದಾರೆ ನಟಿ.

ಇದನ್ನೂ ಓದಿ: Jyotika and Suriya: ಸೂರ್ಯ ಜತೆ ಜಿಮ್‌ನಲ್ಲಿ ನಟಿ ಜ್ಯೋತಿಕಾ ಹೆವಿ ವರ್ಕೌಟ್!

ಇದೀಗ ಈ ವಿಡಿಯೊ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ನಟಿಯನ್ನು ಟ್ರೋಲ್‌ ಮಾಡಲು ಶುರು ಮಾಡಿದ್ದಾರೆ. ಒಬ್ಬರು ʻʻನಟಿಯ ಆರೋಗ್ಯ ಹದೆಗಟ್ಟಿದ್ದರಿಂದ ವೋಟ್‌ ಹಾಕದೇ ಇರಬಹುದುʼʼ ಎಂದು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ʻʻಇದೇನು ಬಿಗ್ ಬಾಸ್‌ನಲ್ಲಿ ಮತ ಚಲಾಯಿಸಿದಂತೆಯಾ?ʼʼಎಂದು ಕಮೆಂಟ್‌ ಮಾಡಿದ್ದಾರೆ. `ಜ್ಯೋತಿಕಾ ರೀತಿ ಆನ್​ಲೈನ್​ ವೋಟ್ ಮಾಡೋದು ಹೇಗೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.‘ಸಮಾಜ ಸುಧಾರಕಿ ಜ್ಯೋತಿಕಾ, ಅಶಿಕ್ಷಿತರಿಗೂ ಗೊತ್ತು ಚುನಾವಣೆ ಪ್ರತಿ ವರ್ಷಕ್ಕೆ ಅಲ್ಲ, 5 ವರ್ಷಕ್ಕೊಮ್ಮೆ ಎಂದು. ನಾನು ಭಾರತದಲ್ಲಿ ಈವರೆಗೆ ಆನ್‌ಲೈನ್ ಮತದಾನದ ಬಗ್ಗೆ ಕೇಳಿಲ್ಲ’ ಎಂದಿದ್ದಾರೆ ಅವರು. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ.

ಜ್ಯೋತಿಕಾ ಕೊನೆಯದಾಗಿ ʻಶೈತಾನ್‌ʼ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು.ಈ ಚಿತ್ರದಲ್ಲಿ ಆರ್ ಮಾಧವನ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸದ್ಯ ಹಿಂದಿಯ ‘ಶ್ರೀಕಾಂತ್’ ಹೆಸರಿನ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ತುಶಾರ್ ಹಿರಾನಂದನಿ ಇದನ್ನು ನಿರ್ದೇಶನ ಮಾಡಿದ್ದು, ರಾಜ್​ಕುಮಾರ್ ರಾವ್, ಅಲಾಯ ಎಫ್, ಶರದ್ ಕೇಲ್ಕರ್ ಈ ಚಿತ್ರದಲ್ಲಿ ನಟಿಸಿದ್ದಾರೆ.

Continue Reading

ಕಾಲಿವುಡ್

Annamalai Biopic: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಯೋಪಿಕ್‌ಗೆ ತಮಿಳು ಖ್ಯಾತ ನಟ ನಟನೆ!

Annamalai Biopic: ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

VISTARANEWS.COM


on

Annamalai Biopic Will Be Made In Kollywood Annamalai Biopic Will Be Made In Kollywood Annamalai Biopic Will Be Made In Kollywood
Koo

ಬೆಂಗಳೂರು: ಪೊಲೀಸ್ ಹುದ್ದೆಯಲ್ಲಿರುವಾಗ ತಮ್ಮ ಕಟ್ಟುನಿಟ್ಟಾದ ಕಾರ್ಯಶೈಲಿಯಿಂದ “ಸಿಂಗಂ ಅಣ್ಣ” ಎಂದು ಬಿರುದು ಪಡೆದ ನಿವೃತ್ತ ಪೊಲೀಸ್ ಅಧಿಕಾರಿ, ತಮಿಳುನಾಡಿನ ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ (k Annamalai) ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದರ ಮೂಲಕ ಲೋಕಸಭಾ ಚುನಾವಣೆಗೆ ಪದಾರ್ಪಣೆ ಮಾಡಿದ್ದಾರೆ. ಸದ್ಯ ಅಣ್ಣಾಮಲೈ ಕುರಿತು ತಮಿಳಿನಲ್ಲಿ ಬಯೋಪಿಕ್ ಸಿನಿಮಾ (Annamalai Biopic) ಮಾಡುವ ಬಗ್ಗೆ ಚರ್ಚೆ ಶುರುವಾಗಿದೆ. ತಮಿಳು ನಟ ವಿಶಾಲ್ ತೆರೆಮೇಲೆ ಅಣ್ಣಾಮಲೈ ಆಗಿ ನಟಿಸುತ್ತಾರೆ ಎನ್ನಲಾಗುತ್ತಿದೆ.

ಸದ್ಯ ವಿಶಾಲ್ ನಟನೆಯ ‘ರತ್ನಂ’ ಸಿನಿಮಾ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇತ್ತೀಚೆಗೆ ನಟ ವಿಶಾಲ್ ನಿರ್ದೇಶಕರಾಗಿಯೂ ಗುರ್ತಿಸಿಕೊಂಡಿದ್ದಾರೆ. ಇದೆಲ್ಲದರ ನಡುವೆ ಇದೀಗ ತೆರೆಮೇಲೆ ಅಣ್ಣಾಮಲೈ ಪಾತ್ರ ಮಾಡುತ್ತಾರೆ ಎನ್ನಲಾಗಿದೆ. 1984ರ ಜೂ.4ರಂದು ಹುಟ್ಟಿದ ಅಣ್ಣಾಮಲೈ ಮೂಲತಃ ತಮಿಳುನಾಡಿನ ಕೊಯಮತ್ತೂರಿನವರು. ಬಿಇ ಎಂಜಿನಿಯರಿಂಗ್‌ ಮಾಡಿ ಎಂಬಿಎ ಪೂರ್ಣಗೊಳಿಸಿದ ಅಣ್ಣಾಮಲೈ 2011ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ ಆಗಿದ್ದರು.

ಇತ್ತೀಚೆಗೆ ವಿಶಾಲ್ ಕೂಡ ರಾಜಕೀಯಕ್ಕೆ ಸೇರುವ ಸೂಚನೆ ನೀಡಿದ್ದಾರೆ. ಆದರೆ, ಯಾವ ಪಕ್ಷಕ್ಕೆ ಅವರು ಸೇರ್ಪಡೆ ಆಗುತ್ತಾರೆ ಎನ್ನುವ ಮಾಹಿತಿ ಸಿಕ್ಕಿಲ್ಲ.

ಇದನ್ನೂ ಓದಿ: K. Annamalai : ಪ್ರಚಾರ ಸಭೆಯಲ್ಲಿ ಅಣ್ಣಾಮಲೈ ಹೊಗಳಿದಾಗ ಕಣ್ಣೀರು ಹಾಕಿದ ವಿಜಯಪುರ ಅಭ್ಯರ್ಥಿ ಜಿಗಜಿಣಗಿ

ಅಣ್ಣಾಮಲೈ ಅವರ ಕುರಿತಾದ ಕೆಲವು ಕುತೂಹಲಕರ ಸಂಗತಿಗಳು ಇಲ್ಲಿವೆ

  • ಅಣ್ಣಾಮಲೈ ಅವರಿಗೆ ಈಗ ಕೇವಲ 39 ವರ್ಷ. 2021ರಲ್ಲಿ ಅವರು ತಮಿಳುನಾಡಿನ ಅತ್ಯಂತ ಕಿರಿಯ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದರು.
  • ಕೆ. ಅಣ್ಣಾಮಲೈ ಅವರು 2020ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ತಮಿಳುನಾಡಿನಲ್ಲಿ ಅವರು ಯುವಜನತೆಯ ಅಪಾರ ಬೆಂಬಲ ಪಡೆದಿದ್ದಾರೆ. ಈ ಮೂಲಕ ಅವರು ತಮಿಳುನಾಡಿನಲ್ಲಿ ಬಿಜೆಪಿಗೆ ಶಕ್ತಿ ತುಂಬಿದ್ದಾರೆ. ಬಹಳ ವೇಗವಾಗಿ ಜನಪ್ರಿಯತೆ ಪಡೆಯುತ್ತಿದ್ದಾರೆ.
  • ಕರ್ನಾಟಕ ಕೇಡರ್‌ನ 2011ರ ಬ್ಯಾಚ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅಪಾರ ಜನಪ್ರಿಯತೆ ಪಡೆದಿದ್ದರು. ನಕ್ಸಲ್‌ ಪೀಡಿತ ಪ್ರದೇಶಗಳಲ್ಲಿ ಅವರು ಜನರ ವಿಶ್ವಾಸ ಗಳಿಸಿದ್ದರು. ಬೆಂಗಳೂರು ದಕ್ಷಿಣ ಉಪ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದರು.
  • ಕೆ ಅಣ್ಣಾಮಲೈ ಅವರು ಸೆಪ್ಟೆಂಬರ್ 2019ರಲ್ಲಿ ಪೊಲೀಸ್ ಸೇವೆಯನ್ನು ತೊರೆದು ಅಚ್ಚರಿ ಮೂಡಿಸಿದ್ದರು.
  • ಇವರು ಎಂಜಿನಿಯರಿಂಗ್ ಪದವೀಧರರಾಗಿದ್ದು, ಐಐಎಂ ಲಕ್ನೋದಲ್ಲಿ ಎಂಬಿಎ ಓದಿದ್ದರು.
  • ಪೊಲೀಸ್ ಫೋರ್ಸ್‌ನಲ್ಲಿ ಕೆಲಸ ಮಾಡುವಾಗ ಕೆ ಅಣ್ಣಾಮಲೈ ಅವರ ಕಟ್ಟುನಿಟ್ಟಾದ ಕಾರ್ಯಶೈಲಿಯನ್ನು ಕಂಡು ಅವರನ್ನು “ಸಿಂಗಂ ಅಣ್ಣ” ಎಂದೇ ಕರೆಯಲಾಗಿತ್ತು.
  • ಅಣ್ಣಾಮಲೈ ಅವರು ಉಡುಪಿಯಲ್ಲಿ ಸೇವೆ ಸಲ್ಲಿಸುತ್ತಿರುವಾಗ ಧಾರ್ಮಿಕ ಗ್ರಂಥಗಳ ತಪ್ಪು ವ್ಯಾಖ್ಯಾನವನ್ನು ತಪ್ಪಿಸಲು ಮತ್ತು ಅವುಗಳನ್ನು ಸರಿಯಾಗಿ ಅರ್ಥಮಾಡಿಕೊಳ್ಳಲು ಇಸ್ಲಾಂ ಧರ್ಮದ ಬಗ್ಗೆ ಅಧ್ಯಯನ ಮಾಡಿದ್ದರು. ಧಾರ್ಮಿಕ ವಿದ್ವಾಂಸರ ಸಹಾಯದಿಂದ ಖುರಾನ್ ಮತ್ತು ಹದೀಸ್ ಅನ್ನು ಅಧ್ಯಯನ ಮಾಡಿದ್ದರು.
  • 2019ರಲ್ಲಿ ಪೊಲೀಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡುವಾಗ ರಾಜೀನಾಮೆ ಪತ್ರದಲ್ಲಿ, ಇದು ನಾನು ತಕ್ಷಣ ತೆಗೆದುಕೊಂಡು ನಿರ್ಧಾರವಲ್ಲ. 2018ರಲ್ಲಿ ಕೈಗೊಂಡಿದ್ದ ಕೈಲಾಸ ಮಾನಸ ಸರೋವರ ಪ್ರವಾಸವು ನನ್ನ ಜೀವನವನ್ನು ಹಿಂತಿರುಗಿ ನೋಡುವಂತೆ ಮಾಡಿದೆ ಎಂದು ಬರೆದಿದ್ದರು.
  • 2023ರಲ್ಲಿ ಅಣ್ಣಾಮಲೈ ಅವರು ‘ಎನ್‌ ಮನ್ ಎನ್ ಮಕ್ಕಳ್ (ನನ್ನ ಭೂಮಿ ನನ್ನ ಜನರು)’ ಯಾತ್ರೆಯನ್ನು ತಮಿಳುನಾಡು ರಾಜ್ಯಾದ್ಯಂತ ಯಶಸ್ವಿಯಾಗಿ ನಡೆಸಿದರು.
  • ಅಣ್ಣಾಮಲೈ ಅವರನ್ನು ಬಿಜೆಪಿಯ ಭರವಸೆಯ ಉದಯೋನ್ಮುಖ ತಾರೆ ಎಂದು ವ್ಯಾಖ್ಯಾನಿಸಲಾಗಿದೆ. ಅವರು ವಾಕ್ಚಾತುರ್ಯಕ್ಕೆ ಹೆಸರುವಾಸಿಯಾದ ಕಾರಣ ಅವರ ಭಾಷಣಗಳು ಸಾಮಾನ್ಯವಾಗಿ ವೈರಲ್ ಆಗುತ್ತವೆ.
Continue Reading

ಕಿರುತೆರೆ

Vijay Deverakonda: ಸಿನಿಮಾಗಳ ಸತತ ಸೋಲಿನ ಬೆನ್ನಲ್ಲೆ ಹೊಸ ಸಿನಿಮಾ ಅನೌನ್ಸ್‌ ಮಾಡಿದ ವಿಜಯ್‌ ದೇವರಕೊಂಡ!

Vijay Deverakonda: ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ.

VISTARANEWS.COM


on

Vijay Devarakonda announces new film
Koo

ಬೆಂಗಳೂರು: ʻಲೈಗರ್‌ʼ ಸಿನಿಮಾ ಸೋಲಿನ ಬಳಿಕ ನಟ ವಿಜಯ್‌ ದೇವರಕೊಂಡ (Vijay Deverakonda) ಯಾವ ಸಿನಿಮಾವನ್ನು ಮಾಡಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿತ್ತು. ಇದಾದ ಬಳಿ ಸಾಕಷ್ಟು ಸಿನಿಮಾಗಳು ತೆರೆ ಕಂಡವು. ʻಖುಷಿʼ ಹಾಗೂ ʻಫ್ಯಾಮಿಲಿ ಸ್ಟಾರ್‌ʼ ಸಿನಿಮಾಗಳು ರಿಲೀಸ್‌ ಆದರೂ ತಕ್ಕ ಮಟ್ಟಿಗೆ ಸಕ್ಸೆಸ್‌ ಏನು ಆಗಿಲ್ಲ. ಇದೀಗ ಹೊಸ ಸಿನಿಮಾ ಅನೌನ್ಸ್‌ ಮಾಡಿದ್ದಾರೆ ವಿಜಯ್‌ ದೇವರಕೊಂಡ.

ತೆಲುಗು ನಟ ವಿಜಯ್ ದೇವರಕೊಂಡ ಅವರು ದಿಲ್ ರಾಜು ಅವರೊಂದಿಗೆ ಹೈ-ಆಕ್ಟೇನ್ ಆಕ್ಷನ್ ಸಿನಿಮಾಗಾಗಿ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ರವಿ ಕರಣ್ ಕೋಲಾ (Ravi Kiran Kola) ನಿರ್ದೇಶನವಿದೆ. ರವಿಕಿರಣ್ ಕೋಲಾ ಅವರು ‘ರಾಜಾ ವರು ರಾಣಿ ಗಾರು’ (Raja Vaaru Rani Gaaru) ಮತ್ತು ‘ಅಶೋಕ ವನಮ್ಲೋ ಅರ್ಜುನ ಕಲ್ಯಾಣಂ'(Ashoka Vanamlo Arjuna Kalyanam) ಸಿನಿಮಾಗೆ ಹೆಸರುವಾಸಿಯಾಗಿದ್ದಾರೆ. ಚಿತ್ರದ ಶೀರ್ಷಿಕೆ, ತಾರಾಗಣ ಮತ್ತು ಬಿಡುಗಡೆಯ ದಿನಾಂಕ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ವಿಜಯ್ ದೇವರಕೊಂಡ (Vijay Deverakonda) ಮತ್ತು ಮೃಣಾಲ್ ಠಾಕೂರ್ ( Mrunal Thakur) ಅಭಿನಯದ ಚಿತ್ರ ʻಫ್ಯಾಮಿಲಿ ಸ್ಟಾರ್ʼ ಭಾರತದಲ್ಲಿ ಸಾಧಾರಣ ಓಪನಿಂಗ್‌ (Family Star Box Office) ಪಡೆದುಕೊಂಡಿತ್ತು. ಏಪ್ರಿಲ್ 26 ರಿಂದ ಅಮೆಜಾನ್‌ ಪ್ರೈಮ್‌ನಲ್ಲಿ ಸ್ಟ್ರೀಮಿಂಗ್‌ ಆಗಿತ್ತು.

ಇದನ್ನೂ ಓದಿ: Rashmika Mandanna: ವಿಜಯ್‌ ದೇವರಕೊಂಡ ಜತೆಗಿನ ಸಂಬಂಧ ಒಪ್ಪಿಕೊಂಡ್ರಾ ರಶ್ಮಿಕಾ ಮಂದಣ್ಣ?

ಕೆಲವರು ಇದು ಸರಾಸರಿಗಿಂತ ಕಡಿಮೆ ಚಿತ್ರ ಎಂದು ಹೇಳುತ್ತಿದ್ದರೆ, ಇನ್ನು ಕೆಲವರು ಈ ಚಿತ್ರಕ್ಕಿಂತ ಧಾರಾವಾಹಿ ಉತ್ತಮವಾಗಿದೆ ಎಂದು ಕಮೆಂಟ್ ಮಾಡಿದ್ದರು. ಸಂಗೀತ ಅಷ್ಟಾಗಿ ಆಕರ್ಷಣೀಯವಾಗಿಲ್ಲ ಎಂಬ ಮಾತು ಕೂಡ ಇದೆ. ಈ ಸಿನಿಮಾ ಅಷ್ಟೊಂದು ಪ್ರಭಾವಶಾಲಿಯಾಗಿಲ್ಲ, ಹೊಸತನವೇನೂ ಇಲ್ಲ ಎಂದಿದ್ದರು.

ಹಾಯ್ ನಾನ್ನʼ (2023), ʻಸೀತಾ ರಾಮಂʼ (2022)ಬಳಿಕ ಮೃಣಾಲ್ ಠಾಕೂರ್ ಅವರ ಮೂರನೇ ತೆಲುಗು ಚಿತ್ರ ಇದು. ʻಫ್ಯಾಮಿಲಿ ಸ್ಟಾರ್ʼ ಸಿನಿಮಾವನ್ನು ಪರುಶುರಾಮ್ ನಿರ್ದೇಶಿಸಿದ್ದಾರೆ. ಈ ಮುಂಚೆ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ʻಗೀತ ಗೋವಿಂದಂʼ (2018) ಸಿನಿಮಾಗೆ ನಿರ್ದೇಶನ ಮಾಡಿದ್ದರು.

Continue Reading
Advertisement
IPL 2024
ಪ್ರಮುಖ ಸುದ್ದಿ1 hour ago

IPL 2024 : ಮುಂಬೈ ವಿರುದ್ಧ 18 ರನ್ ಜಯ, ಪ್ಲೇಆಫ್​ ಪ್ರವೇಶಿಸಿದ ಕೆಕೆಆರ್​ ತಂಡ

car catches fire
ಕ್ರೈಂ2 hours ago

Car Catches Fire: ಕಾರಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ

jay Shah
ಪ್ರಮುಖ ಸುದ್ದಿ3 hours ago

Jay Shah : ದೇಶಿಯ ಕ್ರಿಕೆಟ್​ನಲ್ಲಿ ಭಾರೀ ಬದಲಾವಣೆಗಳ ಸೂಚನೆ ನೀಡಿದ ಜಯ್​ ಶಾ

ಬೆಂಗಳೂರು3 hours ago

Child Actor Master OM: ಓದಿಗೂ ಸೈ, ಮಾಡೆಲಿಂಗ್‌ಗೂ ಸೈ ಈ ಸೂಪರ್‌ ಟೀನ್‌ ಮಾಡೆಲ್‌ ಮಾಸ್ಟರ್‌ ಓಂ!

ಬೆಂಗಳೂರು3 hours ago

LuLu Fashion Week 2024: ಲುಲು ಫ್ಯಾಷನ್ ವೀಕ್ 2024; ಕಲರ್ ಫುಲ್ ಬಟ್ಟೆ ತೊಟ್ಟು ಕಂಗೊಳಿಸಿದ ನಾರಿಮಣಿಗಳು

IPL 2024
ಕ್ರಿಕೆಟ್4 hours ago

IPL 2024 : ಗುಜರಾತ್​ ತಂಡ ಸೇರಿದ ಗುರ್ನೂರ್ ಬ್ರಾರ್; ಎಲ್ಲಿಯ ಆಟಗಾರ ಇವರು?

Devarajegowda
ಕರ್ನಾಟಕ5 hours ago

ಮಹಿಳೆಗೆ ಲೈಂಗಿಕ ದೌರ್ಜನ್ಯ ಕೇಸ್;‌ ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

Murder Case
ಕರ್ನಾಟಕ5 hours ago

Murder Case: ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ; ಬಾಲಕಿಯ ಅಪಹರಿಸಿ ಕತ್ತು ಕೊಯ್ದ ಕಿರಾತಕರು

Richard Hansen
ಕರ್ನಾಟಕ6 hours ago

Selco India: ಸೌರವಿದ್ಯುತ್ ಪ್ರವರ್ತಕ ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

Legislative Council Election
ಕರ್ನಾಟಕ6 hours ago

ವಿಧಾನ ಪರಿಷತ್ ಚುನಾವಣೆ; 5 ಕ್ಷೇತ್ರ ಬಿಜೆಪಿಗೆ, 1 ಕ್ಷೇತ್ರ ಜೆಡಿಎಸ್‌ಗೆ; ಕಮಲ ಪಾಳಯದ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru News
ಬೆಂಗಳೂರು11 hours ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

Dina Bhavishya
ಭವಿಷ್ಯ21 hours ago

Dina Bhavishya : ಈ ದಿನ ಅತಿರೇಕದ ಮಾತುಗಳು ಅಪಾಯ ತರಬಹುದು

Physical Abuse The public prosecutor called the client woman to the lodge
ಕ್ರೈಂ1 day ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ2 days ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ2 days ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ2 days ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ2 days ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ2 days ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ2 days ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ3 days ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

ಟ್ರೆಂಡಿಂಗ್‌