Site icon Vistara News

Rashmika Mandanna: ಫೆಬ್ರವರಿಯಲ್ಲಿ ರಶ್ಮಿಕಾ-ವಿಜಯ್ ದೇವರಕೊಂಡ ಎಂಗೇಜ್‌ಮೆಂಟ್‌ ?

Vijay Deverakonda and Rashmika Mandanna

ಬೆಂಗಳೂರು: ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಡೇಟಿಂಗ್ ಮಾಡುತ್ತಿದ್ದಾರೆ ಎಂಬುದುರ ಬಗ್ಗೆ ಗೊತ್ತೇ ಇದೆ. ಆದರೆ ಜೋಡಿ ಇದುವೆರೆಗೆ ತಾವಿಬ್ಬರೂ ಸಂಬಂಧದಲ್ಲಿ ಇದ್ದೇವೆ ಎಂದು ಸಾರ್ವಜನಿಕವಾಗಿ ಎಲ್ಲಿಯೂ ಹೇಳಿಕೊಂಡಿಲ್ಲ. ವರದಿ ಪ್ರಕಾರ 2024ರ ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ತಮ್ಮ ನಿಶ್ಚಿತಾರ್ಥದ ಬಗ್ಗೆ ಅನೌನ್ಸ್‌ ಮಾಡಲಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಜೋಡಿ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ತೆಲುಗು ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ನಡೆಸುತ್ತಿರುವ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಈ ಬಗ್ಗೆ ಇಬ್ಬರು ತುಟಿ ಬಿಚ್ಚದಿದ್ದರೂ ಅವರ ನಡುವಿನ ಒಡನಾಟ ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಇಬ್ಬರು ಒಟ್ಟಿಗೆ ಓಡಾಡುತ್ತಿರುವ ಫೋಟೊಗಳು ಹಲವು ಬಾರಿ ವೈರಲ್‌ ಆಗಿದ್ದವು. ಡೇಟಿಂಗ್ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲ ನಾವಿಬ್ಬರೂ ಜಸ್ಟ್ ಫ್ರೆಂಡ್ಸ್ ಎಂದೇ ಉತ್ತರಿಸಿದ್ದರು. ಕಳೆದ ಕೆಲವು ದಿನಗಳಿಂದ, ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ನಿಶ್ಚಿತಾರ್ಥದ ಬಗ್ಗೆ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫೆಬ್ರವರಿ ಎರಡನೇ ವಾರದಲ್ಲಿ ಇಬ್ಬರೂ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ ವರದಿಯಾಗಿದೆ.

ಇದನ್ನೂ ಓದಿ: Rashmika Mandanna: ರಶ್ಮಿಕಾ ಬಾಳಿಗೆ ವಿಶೇಷ ವ್ಯಕ್ತಿ ಎಂಟ್ರಿ; ವಿಜಯ್‌ ದೇವರಕೊಂಡ ಗತಿ ಏನು ಎಂದ ಫ್ಯಾನ್ಸ್‌!

ವದಂತಿಗಳು ಪ್ರಾರಂಭವಾದದ್ದು ಹೇಗೆ?

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಮೊದಲ ಬಾರಿಗೆ ಪರಶುರಾಮ್ ನಿರ್ದೇಶನದ 2018ರ ʻಗೀತ ಗೋವಿಂದಂʼ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಚಲನಚಿತ್ರ ಸೂಪರ್‌ ಸಕ್ಸಸ್ ಆಗಿತ್ತು. 2019 ರಲ್ಲಿ, ರಶ್ಮಿಕಾ ಮತ್ತು ವಿಜಯ್ ಮತ್ತೆ ʻಡಿಯರ್ ಕಾಮ್ರೇಡ್ʼ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡಿದರು. ಸಿನಿಮಾ ಹಿಟ್ ಆಗಿದ್ದು, ಮತ್ತೊಮ್ಮೆ ಇವರಿಬ್ಬರ ಕೆಮಿಸ್ಟ್ರಿ ಟಾಕ್ ಆಫ್ ದಿ ಟೌನ್ ಆಯಿತು. 2019ರ ಆರಂಭದಲ್ಲಿ, ರಶ್ಮಿಕಾ ಮತ್ತು ವಿಜಯ್ ಡೇಟಿಂಗ್ ವದಂತಿಗಳು ಹೊರಹೊಮ್ಮಲು ಶುರುವಾದವು. ಹಲವಾರು ಪಾರ್ಟಿಗಳಲ್ಲಿ ಮತ್ತು ಪ್ರಶಸ್ತಿ ಸಮಾರಂಭಗಳಲ್ಲಿ ಸೇರಿದಂತೆ ಹಲವಾರು ಸಂದರ್ಭಗಳಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಾಗ ಊಹಾಪೋಹಗಳು ಶುರುವಾದವು. ಆದಾಗ್ಯೂ, ಇಬ್ಬರೂ ವದಂತಿಗಳು ಶುರುವಾದಂತೆ ತಮ್ಮಿಬರ ಮಧ್ಯೆ ಏನೂ ಇಲ್ಲ. ಇಬ್ಬರು ಸ್ನೇಹಿತರು ಎಂದು ಸಮರ್ಥಿಸಿಕೊಂಡರು.

ಇದನ್ನೂ ಓದಿ: Rashmika Mandanna: ʻದಿಯಾʼ ಹೀರೊ ಜತೆ ರಶ್ಮಿಕಾ ಮಂದಣ್ಣ ರೊಮ್ಹಾನ್ಸ್‌!

ನಟಿ ರಶ್ಮಿಕಾ ಮಂದಣ್ಣ (Rashmika Mandanna) ‘ದಿ ಗರ್ಲ್‌ಫ್ರೆಂಡ್’ ಎಂಬ ರೋಮಾಂಚಕ ಪ್ರೇಮಕಥೆಯಲ್ಲಿ ನಾಯಕಿಯಾಗಿ ನಟಿಸಲು ಸಿದ್ಧರಾಗಿದ್ದಾರೆ. ಏಳು ವರ್ಷಗಳ ವೃತ್ತಿಜೀವನದಲ್ಲಿ ಇದು ನಟಿಯ 24ನೇ ಚಿತ್ರವಾಗಿದೆ. ರಶ್ಮಿಕಾ ಮಂದಣ್ಣ ‘ಅನಿಮಲ್’ ಸಿನಿಮಾ ಸಕ್ಸಸ್​ನಲ್ಲಿ ತೇಲುತ್ತಿದ್ದಾರೆ. ರಶ್ಮಿಕಾ ಬೋಲ್ಡ್ ದೃಶ್ಯಗಳಲ್ಲಿ ನಟಿಸಿರುವ ಬಗ್ಗೆಯೂ ಚರ್ಚೆ ಆಗುತ್ತಿದೆ. ರಶ್ಮಿಕಾ ಮಂದಣ್ಣ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಅವರು, ‘ರೇನ್ಬೋ, ‘ಡಿ 51’, ‘ಛಾವಾ’, ‘ಪುಷ್ಪ: ದಿ ರೂಲ್’, ಮತ್ತು ರವಿತೇಜಾ ಅವರೊಂದಿಗೆ ಹೆಸರಿಡದ ಚಿತ್ರದಲ್ಲಿ ಮುಂದಿನ ದಿನಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

Exit mobile version