Site icon Vistara News

Samantha Ruth Prabhu: ವಿಜಯ್​ ದೇವರಕೊಂಡ – ಸಮಂತಾ ಒಡನಾಟ ಹೆಚ್ಚಾಗುತ್ತಿದೆಯಾ? ವಿಡಿಯೊದಲ್ಲಿ ಏನಿದೆ?

Vijay Deverakonda gets extra romantic with Samantha Ruth Prabhu

ಬೆಂಗಳೂರು: ಟಾಲಿವುಡ್ ನಟ ವಿಜಯ್ ದೇವರಕೊಂಡ (Vijay Deverakonda) ಹುಟ್ಟುಹಬ್ಬದ ಅಂಗವಾಗಿ ʻಖುಷಿʼ ಸಿನಿಮಾದ ಮೊದಲ ಹಾಡು ರಿಲೀಸ್ ಆಗಿತ್ತು. ಇದರ ಬೆನ್ನಲ್ಲೇ ಇದೀಗ ಹೊಸ ಅಪಡೇಟ್‌ವೊಂದು ಚಿತ್ರತಂಡ ಹಂಚಿಕೊಂಡಿದೆ. ವಿಜಯ್ ದೇವರಕೊಂಡ ಅವರು ಸಹ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅವರಿಗೆ ತಿಳಿಯದಂತೆ ಚಿತ್ರೀಕರಿಸಲಾದ ವಿಡಿಯೊವನ್ನು ಇನ್‌ಸ್ಟಾದಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ವಿಜಯ್ ಅವರ ವಿಡಿಯೊವನ್ನು ಇಷ್ಟಪಟ್ಟಿದ್ದಾರೆ. ಜೋಡಿ ಮುದ್ದಾಗಿದೆ ಎಂದು ನೆಟ್ಟಿಗರು ಹೇಳಲಾರಂಭಿಸಿದ್ದಾರೆ.

ವಿಜಯ್​ ದೇವರಕೊಂಡ ಮತ್ತು ಸಮಂತಾ ನಡುವೆ ಆಪ್ತತೆ ಬೆಳೆದಿದೆ ಎಂಬ ಗಾಸಿಪ್‌ ಕೆಲವು ದಿನಗಳಿಂದ ವೈರಲ್‌ ಆಗುತ್ತಿದೆ. ‘ಖುಷಿ’ ಸಿನಿಮಾದ ಶೂಟಿಂಗ್​ ವೇಳೆ ಅವರಿಬ್ಬರ ಒಡನಾಟ ಹೆಚ್ಚಾಗಿದೆ ಎನ್ನಲಾಗುತ್ತಿದೆ. ಇದೀಗ ವಿಜಯ್‌ ದೇವರಕೊಂಡ .ʻ ನಾ ರೋಜಾ ನುವ್ವೆʼ ಹಾಡಿನ ಚಿತ್ರದ ಚಿತ್ರೀಕರಣದ ವೇಳೆ ಮಾಡಿದ ಇನ್‌ಸ್ಟಾ ರೀಲ್‌ ಪೋಸ್ಟ್ ಮಾಡಿದ್ದಾರೆ. ನಾ ರೋಜಾ ನುವ್ವೆಯ ಆಡಿಯೊ ವಿಡಿಯೊಗೆ ಹೊಂದಿಸಲಾಗಿದೆ. ಅಭಿಮಾನಿಗಳು ವಿಡಿಯೊವನ್ನು ಇಷ್ಟಪಟ್ಟಿದ್ದಾರೆ. ಒಬ್ಬ ಅಭಿಮಾನಿ, “ನೀವು ಈ ವಿಡಿಯೊವನ್ನು ಇದನ್ನು ಎಷ್ಟು ಬಾರಿ ವೀಕ್ಷಿಸಿದ್ದೀರಿ? ಎಂದು ಕಾಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ; Vijay Devarakonda: ವಿಜಯ್ ದೇವರಕೊಂಡ-ಸಮಂತಾ ಅಭಿನಯದ ಖುಷಿ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌

ವಿಜಯ್‌ ದೇವರಕೊಂಡ ವಿಡಿಯೊ

ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗಿರುವ ʻಖುಷಿʼ ಸಿನಿಮಾ ತೆಲುಗು, ಕನ್ನಡ, ಹಿಂದಿ, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿಯೂ ತೆರೆಗೆ ಬರಲಿದೆ. ಮೈತ್ರಿ ಮೂವಿ ಬ್ಯಾನರ್ ಅಡಿಯಲ್ಲಿ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರಕ್ಕೆ ʻಮಜಿಲಿʼ ಸಿನಿಮಾದ ಹಿಟ್ ನಿರ್ದೇಶಕ ಶಿವ ನಿರ್ವಾಣ ನಿರ್ದೇಶಿಸುತ್ತಿದ್ದಾರೆ. ರೊಮ್ಯಾಂಟಿಕ್ ಲವ್ ಎಂಟರ್ಟೈನರ್‌ ಕಥಾಹಂದರ ಹೊಂದಿರುವ ʻಖುಷಿʼ ಸಿನಿಮಾ ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. 2018ರ ಮಹಾನಟಿ ಚಿತ್ರದ ನಂತರ ವಿಜಯ್‌ ಹಾಗೂ ಸ್ಯಾಮ್‌ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.

ವಿಜಯ್ ದೇವರಕೊಂಡ, ಸಮಂತಾ, ಜಯರಾಮ್, ಸಚಿನ್ ಖೇಡಕರ್, ಮುರಳಿ ಶರ್ಮಾ, ಲಕ್ಷ್ಮೀ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ, ಶ್ರೀಕಾಂತ್ ಅಯ್ಯಂಗಾರ್, ಶರಣ್ ಮುಂತಾದ ಅದ್ಭುತ ನಟ, ನಟಿಯರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ, ಪೀಟರ್ ಹೆನ್ಸ್ ಸಾಹಸ ನಿರ್ದೇಶನ, ಪ್ರವೀನ್ ಪುಡಿ ಅವರ ಸಂಕಲನ, ಜಿ ಮುರಳಿ ಕ್ಯಾಮೆರಾ ಕೆಲಸ ಮಾಡಿದೆ. ಹೇಶಮ್ ಅಬ್ದುಲ್ ವಹಾಬ್ ಅವರ ಸಂಗೀತವಿದೆ.

Exit mobile version