ಬೆಂಗಳೂರು: ಲೋಕೇಶ್ ಕನಕರಾಜ್ ನಿರ್ದೇಶನ ಹಾಗೂ ದಳಪತಿ ವಿಜಯ್ ಅಭಿನಯದ ಲಿಯೋ ಒಟಿಟಿ (Leo OTT Release) ಬಿಡುಗಡೆಯ ದಿನಾಂಕ ಪ್ರಕಟಗೊಂಡಿದೆ. ಅಕ್ಟೋಬರ್ 19ರಂದು ಬಿಡುಗಡೆಯಾದ ಚಿತ್ರವು ಮಿಶ್ರ ಪ್ರತಿಕ್ರಿಯೆ ಪಡೆದುಕೊಂಡಿದೆ. ಇಡೀ ಪ್ರಪಂಚದ ಲೆಕ್ಕಾಚಾರ ನೋಡಿದರೆ ಲಿಯೋ ಮೊದಲ ದಿನವೇ 140 ಕೋಟಿ ರೂ. ಗಳಿಕೆ ಮಾಡಿ ದಾಖಲೆ ಬರೆದಿದೆ. ವಿಶ್ವಾದ್ಯಂತ ಈ ಚಿತ್ರ 550 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ‘ಲಿಯೋ’ ರಿಲೀಸ್ ಆಗಿ ನಾಲ್ಕು ವಾರಗಳಲ್ಲಿ ಈ ಚಿತ್ರ ಒಟಿಟಿಗೆ ಬರುತ್ತಿದೆ. ಈ ಸಿನಿಮಾ ನವೆಂಬರ್ 16ರಿಂದ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗಬೇಕಿತ್ತು. ಆದರೆ ಅದು ಸಾಧ್ಯವಾಗಿಲ್ಲ. ನವೆಂಬರ್ 21ರಿಂದ ಚಿತ್ರ ಸ್ಟ್ರೀಮ್ ಆಗಲಿದೆ ಎಂದು ಅಧಿಕೃತವಾಗಿ ಘೋಷಿಸಲಾಗಿದೆ.
ಮೊದಲ ದಿನ ಲಿಯೋ ಭಾರತದಲ್ಲಿ 64.8 ಕೋಟಿ ಗಳಿಸಿತ್ತು. ತಮಿಳು ಭಾಷೆಯಲ್ಲಿ 48.96 ಕೋಟಿ ರೂ, ತೆಲುಗಿನಲ್ಲಿ 12.9 ಕೋಟಿ ರೂ.; ಹಿಂದಿಯಲ್ಲಿ 2.8 ಕೋಟಿ ರೂ; ಕನ್ನಡ: 1.4 ಕೋಟಿ ರೂ ಸಂಗ್ರಹಿಸಿದೆ. ಆರಂಭಿಕ ಅಂದಾಜಿನ ಪ್ರಕಾರ, ಶುಕ್ರವಾರ, ಲಿಯೋ ತನ್ನ ಎರಡನೇ ದಿನದಲ್ಲಿ ಭಾರತದಲ್ಲಿ 36 ಕೋಟಿ ರೂ. ಗಳಿಸಿದೆ.
ಲಿಯೋ’ 2023ರ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದೆ. ಚಿತ್ರವು ತಮಿಳು, ತೆಲುಗು, ಮಲಯಾಳಂ, ಕನ್ನಡ ಮತ್ತು ಹಿಂದಿ ಸೇರಿದಂತೆ ಬಹು ಭಾಷೆಗಳಲ್ಲಿ ಬಿಡುಗಡೆಯಾಗಿತ್ತು. 2021ರಲ್ಲಿ ಬಿಡುಗಡೆಯಾದ ʻಮಾಸ್ಟರ್ʼ ಚಿತ್ರದ ಭಾರಿ ಯಶಸ್ಸಿನ ನಂತರ ದಳಪತಿ ವಿಜಯ್ ಮತ್ತು ನಿರ್ದೇಶಕ ಲೋಕೇಶ್ ಕನಕರಾಜ್ ಅವರು ಈ ‘ಲಿಯೋ’ ಸಿನಿಮಾ ಮೂಲಕ ಮತ್ತೆ ಒಂದಾಗಿದ್ದಾರೆ. ಹಲವು ವರ್ಷಗಳ ನಂತರ ವಿಜಯ್ ಜತೆ ತ್ರಿಷಾ ನಾಯಕಿಯಾಗಿ ಈ ಸಿನಿಮಾ ಮೂಲಕ ಮಿಂಚಿದ್ದಾರೆ. ಕೀರ್ತಿ ಸುರೇಶ್, ಅರ್ಜುನ್, ಮಿಶಾ ಘೋಷಾಲ್, ಪ್ರಿಯಾ ಆನಂದ್, ಮನ್ಸೂರ್ ಅಲಿ ಖಾನ್ ಮತ್ತು ಸಂಜಯ್ ತಾರಾ ಬಳಗವಿದೆ.
ಇದನ್ನೂ ಓದಿ: Shiva Rajkumar: ನಾಳೆ ಶಿವಣ್ಣ ʻಘೋಸ್ಟ್ʼ ಅದ್ಧೂರಿ ತೆರೆಗೆ; ಲಿಯೋ ಸಿನಿಮಾಗೆ ಹೆಚ್ಚು ಸ್ಕ್ರೀನ್!
ಈ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೊದ ಲಲಿತ್ ಕುಮಾರ್ ನಿರ್ಮಿಸಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ. ʻಲಿಯೋʼ ಚಿತ್ರಕ್ಕೆ ಮನೋಜ್ ಪರಮಹಂಸ ಅವರ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಅವರ ಸಂಕಲನವಿದೆ.