Site icon Vistara News

Vijay Raghavendra: ʻರಾಘು’ ಟ್ರೈಲರ್‌ ರಿಲೀಸ್: ಸೋಲೋ ಆ್ಯಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಶಿವಣ್ಣ ಸಾಥ್

Vijay Raghavendra film Rgahu Trailer Out

ಬೆಂಗಳೂರು: ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜತೆ ಜತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇದೇ ಸಾಲಿಗೆ ಒಂದಿಷ್ಟು ಕೌತುಕಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿರುವ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಏಪ್ರಿಲ್‌ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ (Vijay Raghavendra) ಹೊಸ ಬಗೆಯ ʻರಾಘುʼ ಚಿತ್ರದ ಟ್ರೈಲರ್‌ ಅನಾವರಣಗೊಂಡಿದೆ.

‘ರಾಘು’ಗೆ ಶಿವಣ್ಣ ಬಲ

ಯುವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ರಾಘು ಸಿನಿಮಾ ಕನ್ನಡದ ಮಟ್ಟಿಗೆ ಪ್ರಯೋಗಾತ್ಮಕ ಚಿತ್ರವಾಗಿದೆ. ಹೊಸ ಬಗೆ ಥ್ರಿಲ್ ನೀಡುವ ಈ ಸಿನಿಮಾ ಪೂರ್ತಿ ವಿಜಯ್ ರಾಘವೇಂದ್ರ ಒಬ್ಬರೇ ಇರಲಿದ್ದಾರೆ. ಇದನ್ನು ಸೋಲೋ ಆ್ಯಕ್ಟಿಂಗ್ ಸಿನಿಮಾ ಎನ್ನಬಹುದು. ಸೋಲೋ ಆಗಿ ಬರುತ್ತಿರುವ ಚಿನ್ನಾರಿ ಮುತ್ತನಿಗೆ ಶಿವಣ್ಣ ಸಾಥ್ ಕೊಟ್ಟಿದ್ದಾರೆ. ʻರಾಘುʼ ಟ್ರೈಲರ್‌ಗೆ ಶಿವಣ್ಣನ ಪವರ್ ಫುಲ್ ವಾಯ್ಸ್ ಸಿಕ್ಕಿದ್ದು, ಚಿತ್ರದ ಖದರ್ ಮತ್ತಷ್ಟು ಹೆಚ್ಚಿದೆ. ಶಿವಣ್ಣನ ವಾಯ್ಸ್, ವಿಜಯ್ ರಾಘವೇಂದ್ರ ಆ್ಯಕ್ಟಿಂಗ್, ಉದಯ್ ಲೀಲಾ ಛಾಯಾಗ್ರಹಣ, ಸೂರಜ್ ಜೋಯಿಸ್ ಸಂಗೀತ ನೋಡುಗರ ಗಮನಸೆಳೆಯುತ್ತಿದೆ.

ಟ್ರೈಲರ್‌ ರಿಲೀಸ್ ಬಳಿಕ ಮಾತನಾಡಿದ ವಿಜಯ್ ರಾಘವೇಂದ್ರ, “ರಾಘು ಸಿನಿಮಾ ಬಗ್ಗೆ ಮಾತಾನಾಡಲು ತುಂಬಾ ಅಂಶವಿದೆ. ಸಿನಿಮಾ ಹಿಂದೆ ಪಟ್ಟಿರುವ ಶ್ರಮ ಸೇರಿದಂತೆ ತುಂಬಾ ವಿಚಾರಗಳ ಬಗ್ಗೆ ಮಾತಾಡಬೇಕು. 28ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಸೋಲೋ ಆ್ಯಕ್ಟರ್ ಚಿತ್ರವಾಗಿದ್ದು, ಒಬ್ಬನೇ ಕಲಾವಿದ ಇಡೀ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಾರೆ. 28ಕ್ಕೆ ಥಿಯೇಟರ್‌ಗೆ ಬಂದು ಸಿನಿಮಾ ನೋಡಿ ಬೆಂಬಲಿಸಿʼʼ ಎಂದರು.

ನಿರ್ದೇಶಕ ಎಂ.ಆನಂದ್ ರಾಜ್ ಮಾತನಾಡಿ, ʻʻರಾಘು ಪಯಣಕ್ಕೆ ಬೆಂಬಲ ಕೊಟ್ಟ ನಿರ್ಮಾಪಕರಿಗೆ ಧನ್ಯವಾದ. ಎಲ್ಲಾ ಆ್ಯಕ್ಟರ್ಸ್ಸ್ ಹಾಕಿಕೊಂಡು ಸಿನಿಮಾ ಮಾಡಿದಾಗ ನಿರ್ಮಾಪಕರು ಸಿಗುವುದು ಕಷ್ಟ. ಇನ್ನೂ ಸೋಲೋ ಆ್ಯಕ್ಟರ್ ಇಟ್ಟುಕೊಂಡು ಕಥೆ ಹೆಣೆದು ಸಿನಿಮಾ ಮಾಡುವುದು ತುಸು ಕಷ್ಟವೇ. ಇದು ಸಂಪೂರ್ಣ ಟೆಕ್ನಿಕಲ್ ಚಿತ್ರವಾಗಿದ್ದು, ಸೋಲೋ ಆ್ಯಕ್ಟರ್ ಕಥೆಯಾಗಿದ್ದರೂ ಸಾಂಗ್ಸ್, ಫೈಟ್ಸ್, ಟ್ವಿಸ್ಟ್ ಎಲ್ಲವೂ ಇದೆʼʼಎಂದರು.

ಇದನ್ನೂ ಓದಿ; Vijay Raghavendra: ವಿಜಯ್‌ ರಾಘವೇಂದ್ರ ಅಭಿನಯದ ‘ರಾಘು’ ರಿಲೀಸ್ ಡೇಟ್ ಫಿಕ್ಸ್!

ಡಿಕೆ ಎಸ್ ಸ್ಟುಡಿಯೋ, ಕೋಟಾ ಫಿಲಂ ಫ್ಯಾಕ್ಟರಿ ಪ್ರೊಡಕ್ಷನ್‌ನಡಿ ರಾಘು ಸಿನಿಮಾವನ್ನು ರನ್ವಿತ್ ಶಿವಕುಮಾರ್ ಹಾಗೂ ಅಭಿಷೇಕ ಕೋಟ ನಿರ್ಮಾಣ ಮಾಡಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದ್ದು, ಉದಯ್ ಲೀಲಾ ಛಾಯಾಗ್ರಹಣ, ವಿಜತೇತ್ ಚಂದ್ರ ಸಂಕಲನ, ರಿತ್ವಿಕ್ ಮುರುಳಿದರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಸೂರಜ್ ಜೋಯಿಸಿ ಸಂಗೀತ ನಿರ್ದೇಶನ ಮಾಡಿರುವ ಚಿತ್ರದ ಎರಡು ಹಾಡುಗಳಿಗೆ ವಾಸುಕಿ ವೈಭವ್ ಹಾಗೂ (ಆಲ್‌ ಒಕೆ) all ok ಧ್ವನಿಯಾಗಿದ್ದಾರೆ.

Exit mobile version