Site icon Vistara News

Vijay Raghavendra: ವಿಜಯ್‌ ರಾಘವೇಂದ್ರ ʻಜೋಗ್ 101ʼ ಚಿತ್ರದ ಫಸ್ಟ್ ಲುಕ್ ಔಟ್‌!

Vijay Raghavendra Jog 101 Movie First Look

ಬೆಂಗಳೂರು: ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ್‌ ರಾಘವೇಂದ್ರ (Vijay Raghavendra) ʻಜೋಗ್ 101ʼ ಚಿತ್ರದಲ್ಲಿ ( Jog 101 Movie) ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ.

ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು(ರಾಘವೇಂದ್ರ )ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರದ ನಿರ್ದೇಶಕರು. ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ “ಜೋಗ್ 101” ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೈಲರ್‌ ಸಹ ಬರಲಿದೆ.

ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ. ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ವಿಜಯ್‌ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ “ಜೋಗ್ 101” ಚಿತ್ರದ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Vijay Raghavendra: ವಿಜಯ್‌ ರಾಘವೇಂದ್ರ ಅಭಿನಯದ ʻಕದ್ದ ಚಿತ್ರʼ ರಿಲೀಸ್‌ ಡೇಟ್‌ ಅನೌನ್ಸ್‌!

ವಿಜಯ್‌ ರಾಘವೇಂದ್ರ ಅಭಿನಯದ ʻಕದ್ದ ಚಿತ್ರʼ ರಿಲೀಸ್‌ ಡೇಟ್‌ ಅನೌನ್ಸ್‌

 ವಿಜಯ್‌ ರಾಘವೇಂದ್ರ (Vijay Raghavendra) ನಾಯಕನಾಗಿ ನಟಿಸಿರುವ ‘ಕದ್ದ ಚಿತ್ರ’ (Kadda Chitra) ಸಿನಿಮಾ ವರಮಹಾಲಕ್ಷ್ಮಿ ಹಬ್ಬಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ವಿಜಯ್‌ ಅವರ ಪತ್ನಿ ಸ್ಪಂದನಾ ಹಠಾತ್‌ ನಿಧನದಿಂದಾಗಿ ಸಿನಿಮಾ ಮುಂದೂಡಲಾಗಿತ್ತು. ಈಗಾಗಲೇ ‘ಕದ್ದ ಚಿತ್ರ’ ಟ್ರೈಲರ್‌ (Kadda Chitra Trailer Release) ರಿಲೀಸ್‌ ಆಗಿದೆ. ಇದೀಗ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಅನೌನ್ಸ್‌ ಮಾಡಿದೆ. ಇದೇ ಸೆಪ್ಟೆಂಬರ್‌ 8ರಂದು ರಾಜ್ಯಾದ್ಯಂತ ʻಕದ್ದ ಚಿತ್ರʼ ಸಿನಿಮಾ ತೆರೆ ಕಾಣಲಿದೆ.

ಸೆಪ್ಟೆಂಬರ್ 7ರಂದು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಜೊತೆ ‘ಕದ್ದ ಚಿತ್ರ’ ಸ್ಪರ್ಧೆ ಮಾಡಬೇಕಿದೆ. ಶೀರ್ಷಿಕೆಯಲ್ಲಿಯೇ ವೈಶಿಷ್ಟ್ಯವನ್ನು ಬಚ್ಚಿಟ್ಟುಕೊಂಡಿರುವ ಈ ಚಿತ್ರವನ್ನು ಸುಹಾಸ್ ಕೃಷ್ಣ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಒಂದು ಹಾಡು ಮತ್ತು ಟೀಸರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಟ್ರೈಲರ್‌ ಕೂಡ ಸಖತ್‌ ಸಸ್ಪೆನ್ಸ್‌ನಿಂದ ಕೂಡಿದ್ದು, ಇದೇ ಮೊದಲ ಬಾರಿಗೆ ವಿಜಯ್‌ ರಾಘವೇಂದ್ರ ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಶೀರ್ಷಿಕೆಯಲ್ಲೇ ಸಿನೆಮಾದಲ್ಲಿ ಏನೋ ಗಮ್ಮತ್ತಿದೆ ಅನಿಸುವ ಈ ‘ಕದ್ದ ಚಿತ್ರ’ ಸೈಕಲಾಜಿಕಲ್ ಥ್ರಿಲ್ಲರ್ ಜಾನರಿನ ಕಥಾಹಂದರದಲ್ಲಿ ತಯಾರಾಗಿದೆ. ಚಿತ್ರದಲ್ಲಿ ನಾಯಕ ವಿಜಯ್ ರಾಘವೇಂದ್ರ ಮೂರು ಶೇಡ್‌ಗಳ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಈವರೆಗೂ ನಟಿಸದ, ಕಾಣಿಸದ ಪಾತ್ರದ ಮೂಲಕ ಚಿನ್ನಾರಿ ಮುತ್ತ ಮೋಡಿ ಮಾಡಲಿದ್ದಾರೆ.

Exit mobile version