Site icon Vistara News

Vijay Raghavendra: ವಿಜಯ್‌ ರಾಘವೇಂದ್ರ ಅಭಿನಯದ ʻಕದ್ದ ಚಿತ್ರʼ ರಿಲೀಸ್‌ ಡೇಟ್‌ ಅನೌನ್ಸ್‌!

Vijay Raghavendra Kadda Chitra Poster

ಬೆಂಗಳೂರು:  ವಿಜಯ್‌ ರಾಘವೇಂದ್ರ (Vijay Raghavendra) ನಾಯಕನಾಗಿ ನಟಿಸಿರುವ ‘ಕದ್ದ ಚಿತ್ರ’ (Kadda Chitra) ಸಿನಿಮಾ ವರಮಹಾಲಕ್ಷ್ಮಿ ಹಬ್ಬಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ವಿಜಯ್‌ ಅವರ ಪತ್ನಿ ಸ್ಪಂದನಾ ಹಠಾತ್‌ ನಿಧನದಿಂದಾಗಿ ಸಿನಿಮಾ ಮುಂದೂಡಲಾಗಿತ್ತು. ಈಗಾಗಲೇ ‘ಕದ್ದ ಚಿತ್ರ’ ಟ್ರೈಲರ್‌ (Kadda Chitra Trailer Release) ರಿಲೀಸ್‌ ಆಗಿದೆ. ಇದೀಗ ಚಿತ್ರತಂಡ ಸಿನಿಮಾ ಬಿಡುಗಡೆ ದಿನಾಂಕವನ್ನು ಅನೌನ್ಸ್‌ ಮಾಡಿದೆ. ಇದೇ ಸೆಪ್ಟೆಂಬರ್‌ 8ರಂದು ರಾಜ್ಯಾದ್ಯಂತ ʻಕದ್ದ ಚಿತ್ರʼ ಸಿನಿಮಾ ತೆರೆ ಕಾಣಲಿದೆ.

ಸೆಪ್ಟೆಂಬರ್ 7ರಂದು ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಕೂಡ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಜೊತೆ ‘ಕದ್ದ ಚಿತ್ರ’ ಸ್ಪರ್ಧೆ ಮಾಡಬೇಕಿದೆ. ಶೀರ್ಷಿಕೆಯಲ್ಲಿಯೇ ವೈಶಿಷ್ಟ್ಯವನ್ನು ಬಚ್ಚಿಟ್ಟುಕೊಂಡಿರುವ ಈ ಚಿತ್ರವನ್ನು ಸುಹಾಸ್ ಕೃಷ್ಣ ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಒಂದು ಹಾಡು ಮತ್ತು ಟೀಸರ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ಟ್ರೈಲರ್‌ ಕೂಡ ಸಖತ್‌ ಸಸ್ಪೆನ್ಸ್‌ನಿಂದ ಕೂಡಿದ್ದು, ಇದೇ ಮೊದಲ ಬಾರಿಗೆ ವಿಜಯ್‌ ರಾಘವೇಂದ್ರ ಖಡಕ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಶೀರ್ಷಿಕೆಯಲ್ಲೇ ಸಿನೆಮಾದಲ್ಲಿ ಏನೋ ಗಮ್ಮತ್ತಿದೆ ಅನಿಸುವ ಈ ‘ಕದ್ದ ಚಿತ್ರ’ ಸೈಕಲಾಜಿಕಲ್ ಥ್ರಿಲ್ಲರ್ ಜಾನರಿನ ಕಥಾಹಂದರದಲ್ಲಿ ತಯಾರಾಗಿದೆ. ಚಿತ್ರದಲ್ಲಿ ನಾಯಕ ವಿಜಯ್ ರಾಘವೇಂದ್ರ ಮೂರು ಶೇಡ್‌ಗಳ ಪಾತ್ರಕ್ಕೆ ಬಣ್ಣ ಹಚ್ಚಿದ್ದು, ಈವರೆಗೂ ನಟಿಸದ, ಕಾಣಿಸದ ಪಾತ್ರದ ಮೂಲಕ ಚಿನ್ನಾರಿ ಮುತ್ತ ಮೋಡಿ ಮಾಡಲಿದ್ದಾರೆ.

ಇದನ್ನೂ ಓದಿ: Vijay Raghavendra: ‘ಕದ್ದಚಿತ್ರ’ ಟ್ರೈಲರ್‌ ಔಟ್‌; ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ವಿಜಯ್‌ ರಾಘವೇಂದ್ರ!

ಈಗಾಗಲೇ ತೆಲುಗು ಸಿನಿಮಾವೊಂದರಲ್ಲಿ ನಟಿಸಿ, ಶಿವಾಜಿ ಸುರತ್ಕಲ್, ಮಿರ್ಚಿ ಮಂಡಕ್ಕಿ ಖಡಕ್ ಚಾಯ್ ಮುಂತಾದ ಸಿನಿಮಾಗಳ ಮೂಲಕ ಒಂದಷ್ಟು ಹೆಸರು ಮಾಡಿರುವ ನಮ್ರತಾ ಸುರೇಂದ್ರನಾಥ್ (Namrata Surendranath) ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ.

ನಿರ್ದೇಶಕನಾಗಿಯೂ ಹೆಸರು ಮಾಡಿರುವ ರಾಘು ಶಿವಮೊಗ್ಗ ಪಬ್ಲಿಷರ್ ಪಾತ್ರಕ್ಕೆ ಜೀವ ತುಂಬಿದ್ದಾರೆ. ವಿಜಯ್ ಮಗಳ ಪಾತ್ರದಲ್ಲಿ ಬೇಬಿ ಆರಾಧ್ಯ ನಟಿಸಿದ್ದಾಳೆ. ಸುಜಿತ್ ಸುಪ್ರಭ, ಸ್ಟೀಫನ್, ವಿನಯ್ ಕುಮಾರ್ ನೆಗೆಟಿವ್ ಶೇಡಿನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ, ಗೌತಮ್ ಮನು ಸಂಕಲನ, ಸ್ಟೀಫನ್ ಕೊರಿಯೋಗ್ರಫಿ, ದುಷ್ಯಂತ್ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

Exit mobile version