ಬೆಂಗಳೂರು : ನಟ ವಿಜಯ್ ರಾಘವೆಂದ್ರ (Vijay Raghavendra) ‘ರಾಘು’ ಸಿನಿಮಾ ಮೂಲಕ ತಮ್ಮ ಸಿನಿ ಕೆರಿಯರ್‌ನಲ್ಲೇ ಹೊಸದೊಂದು ಪ್ರಯೋಗಕ್ಕೆ ಇಳಿದಿದ್ದಾರೆ. ಈ ಸಿನಿಮಾ ಸೋಲೋ ಆ್ಯಕ್ಟಿಂಗ್ ಸಿನಿಮಾವಾಗಿದ್ದು ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.
ಯುವ ನಿರ್ದೇಶಕ ಎಂ. ಆನಂದ್ ರಾಜ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರ ವಿಜಯ ರಾಘವೇಂದ್ರ ಅವರು ಸಿನಿ ಕೆರಿಯರ್‌ನ ವಿಭಿನ್ನ ಸಿನಿಮಾ ಆಗಿದೆ ಎಂದು ಚಿತ್ರತಂಡ ಆರಂಭದಿಂದ ಹೇಳಿಕೊಂಡು ಬಂದಿತ್ತು. ಇದೀಗ ಅದಕ್ಕೆ ಸಾಕ್ಷಿ ಎನ್ನುವಂತೆ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿ ಸಿನಿ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ.
ಹೊಸ ರೀತಿಯ ಥ್ರಿಲ್ಲರ್ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ಪೂರ್ತಿ ಸಿನಿಮಾ ವಿಜಯ ರಾಘವೇಂದ್ರ ಒಬ್ಬರೇ ನಟಿಸಿದ್ದಾರೆ. ‘ಆನ’ ಹಾಗೂ ‘ಬ್ಯಾಂಗ್’ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ ಅನುಭವ ಇರುವ ಎಂ. ಆನಂದ್ ರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸಂಪೂರ್ಣ ಹೊಸತನದಿಂದ ಕೂಡಿರುವ ಈ ಸಿನಿಮಾ ಕನ್ನಡದಲ್ಲಿ ಹೊಸ ಪ್ರಯೋಗ.
ಇದನ್ನೂ ಓದಿ | Puneeth Parva | ಅಪ್ಪುವಿನ ಮಾಸ್ ಡೈಲಾಗ್ ಹೇಳಿದ ಧ್ರುವ ಸರ್ಜಾ: ದುನಿಯಾ ವಿಜಯ್ ಭಾವುಕ
ʻʻʻತಾಂತ್ರಿಕವಾಗಿ ಹಾಗೂ ಕ್ವಾಲಿಟಿ ವಿಚಾರದಲ್ಲಿ ಯಾವುದೇ ಕಾಂಪ್ರಮೈಸ್ ಆಗದೇ ಶ್ರೀಮಂತವಾಗಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ಅದಕ್ಕೆಂದೇ ಹೊಸ ಟೆಕ್ನಾಲಜಿ ಕ್ಯಾಮೆರಾಗಳು, ಅದ್ಧೂರಿ ಸೆಟ್ ನಿರ್ಮಾಣ ಮಾಡಿ ‘ರಾಘು’ ಸಿನಿಮಾ ಚಿತ್ರೀಕರಣ ಮಾಡಲಾಗಿದೆ. ಚಿತ್ರಕ್ಕಾಗಿ ಸೌಂಡ್ ಡಿಸೈನಿಂಗ್ ಹೊಸ ರೀತಿಯ ಪ್ರಯೋಗವನ್ನು ಮಾಡಲಾಗಿದೆʼʼಎಂದು ಚಿತ್ರತಂಡ ಹೇಳಿಕೊಂಡಿದೆ.
ರಾಘು ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪೂರ್ಣಗೊಂಡಿದ್ದು, ಚಿತ್ರದ ಪ್ರಚಾರ ಕಾರ್ಯವನ್ನು ಚಿತ್ರತಂಡ ಆರಂಭಿಸಿದೆ. ಸದ್ಯದಲ್ಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅನೌನ್ಸ್ ಮಾಡಲಿದೆ. ಡಿ ಕೆ ಎಸ್ ಸ್ಟುಡಿಯೊ, ಕೋಟಾ ಫಿಲ್ಮ್ ಫ್ಯಾಕ್ಟರಿ ಪ್ರೊಡಕ್ಷನ್ ಹೌಸ್‌ನಡಿ ಸಿನಿಮಾ ನಿರ್ಮಾಣವಾಗಿದೆ.
ರಣ್ವಿತ್ ಶಿವಕುಮಾರ್, ಅಭಿಷೇಕ್ ಕೋಟ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ವಿಜೇತ್ ಚಂದ್ರ ಸಂಕಲನ, ಉದಯ್ ಲೀಲಾ ಕ್ಯಾಮೆರಾ ವರ್ಕ್, ಹಾಡುಗಳಿಗೆ ಸೂರಜ್ ಜೋಯಿಸ್ ಸಂಗೀತ ಸಂಯೋಜನೆ ಮಾಡಿದ್ದು, ರಿತ್ವಿಕ್ ಮುರಳಿಧರ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ.
ಇದನ್ನೂ ಓದಿ | Vijay Raghavendra | ಕೇಸ್ ಆಫ್ ಕೊಂಡಾಣ ಹಿಂದೆ ಬಿದ್ದ ವಿಜಯ್ ರಾಘವೇಂದ್ರ!