ಬೆಂಗಳೂರು : ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ಸಿನಿಮಾ ʻವಿಜಯಾನಂದʼ (Vijayananda Film ) ಡಿಸೆಂಬರ್ 9ಕ್ಕೆ ಪಂಚ ಭಾಷೆಯಲ್ಲಿ ತೆರೆ ಕಾಣಲಿದೆ. ಈಗಾಗಲೇ ಚಿತ್ರದ ಟ್ರೈಲರ್ ಹಾಗೂ ಟೀಸರ್‌ನಿಂದ ಸಿನಿಪ್ರಿಯರನ್ನು ಗಮನ ಸೆಳೆದಿದ್ದು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದೆ. ಇನ್ನು ಈ ಸಿನಿಮಾದಲ್ಲಿ ನಟ ನಿಹಾಲ್ ಹಾಗೂ ನಟಿ ಸಿರಿ ಪ್ರಹ್ಲಾದ್ ಜೋಡಿಯಾಗಿ ನಟಿಸಿದ್ದಾರೆ. ವಿಶ್ವಾದ್ಯಂತ ಸಿನಿಮಾ ಬಿಡುಗಡೆಯಾಗುತ್ತಿದ್ದು, ಥಿಯೇಟರ್ ಲಿಸ್ಟ್ ಪ್ರಕಟಗೊಂಡಿದೆ. ಅಮೆರಿಕ, ಇಂಗ್ಲೆಂಡ್, ಆಸ್ಟ್ರೇಲಿಯಾ ಸೇರಿದಂತೆ ಹಲವು ಕಡೆ ಸಿನಿಮಾ ಭರ್ಜರಿ ಓಪನಿಂಗ್ ಪಡೆದುಕೊಳ್ಳಲಿದೆ.
ಡಾ. ವಿಜಯ ಸಂಕೇಶ್ವರರ ಬಯೋಪಿಕ್ ಅನ್ನು ವಿಆರ್‌ಎಲ್ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸುತ್ತಿದ್ದಾರೆ. ‘ಟ್ರಂಕ್’ ಖ್ಯಾತಿಯ ನಿರ್ದೇಶಕಿ ರಿಷಿಕಾ ಶರ್ಮಾ ನಿರ್ದೇಶಿಸುತ್ತಿದ್ದಾರೆ. ಡಾ. ವಿಜಯ ಸಂಕೇಶ್ವರರ ಪಾತ್ರದಲ್ಲಿ ನಿಹಾಲ್ ರಜಪೂತ್, ಶ್ರೀಮತಿ ಲಲಿತಾ ಸಂಕೇಶ್ವರರ ಪಾತ್ರದಲ್ಲಿ ಸಿರಿ ಪ್ರಹ್ಲಾದ್, ಡಾ. ವಿಜಯ ಸಂಕೇಶ್ವರರ ತಂದೆ ಬಿ.ಜಿ. ಸಂಕೇಶ್ವರರ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್, ಡಾ. ಆನಂದ ಸಂಕೇಶ್ವರರ ಪಾತ್ರದಲ್ಲಿ ಭರತ್ ಬೋಪಣ್ಣ ಹಾಗೂ ವಿಜಯ ಸಂಕೇಶ್ವರರ ಗುರುಗಳ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ. ʻವಿಜಯಾನಂದ’ ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಡಿಸೆಂಬರ್ 9ರಂದು ಬಿಡುಗಡೆಯಾಗಲಿದೆ.
ಇದನ್ನೂ ಓದಿ | vijayanand kashappanavar | 2ನೇ ಮದುವೆ ಊಹಾಪೋಹ, ಹೊಟ್ಟೆಕಿಚ್ಚಿನಿಂದ ಅಪಪ್ರಚಾರ: ವಿಜಯಾನಂದ ಕಾಶಪ್ಪನವರ್
ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ, ಹಳೇಬೀಡು, ಬೇಲೂರು ಸೇರಿದಂತೆ 10ಕ್ಕೂ ಹೆಚ್ಚು ಪ್ರೇಕ್ಷಣೀಯ ಸ್ಥಳಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಹೆಸರಾಂತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ.
ಇದನ್ನೂ ಓದಿ | Vijayananda Film | ʻವಿಜಯಾನಂದʼ ಟ್ರೈಲರ್ ಲಾಂಚ್ ಇವೆಂಟ್: ಸಾಧನೆಯ ಹಾದಿ ನೆನೆದ ವಿಜಯ ಸಂಕೇಶ್ವರ