ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಉದ್ಯಮಿ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ (Vijayananda Film) ಚಿತ್ರದ ಟ್ರೈಲರ್ ಶನಿವಾರ ನವೆಂಬರ್ 19ರಂದು ಬಿಡುಗಡೆಯಾಗಿದೆ. ಪ್ರಾರಂಭದಿಂದಲೂ ಸ್ಟಾರ್ ಕಾಸ್ಟ್, ಕಲಾವಿದರ ಲುಕ್, ಮೇಕಿಂಗ್, ಕುತೂಹಲ ಮೂಡಿಸುವ ಟೀಸರ್, ಬಹುಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಬಿಡುಗಡೆ ಯೋಜನೆ ಸೇರಿ ಹಲವು ಕಾರಣಕ್ಕೆ ಸುದ್ದಿ ಮಾಡಿತ್ತು ಚಿತ್ರ. ಇದೀಗ ಟ್ರೈಲರ್ ರಿಲೀಸ್ ಆಗಿದ್ದು, ನೋಡುಗರಿಂದ ಮೆಚ್ಚುಗೆಗೆ ಪಾತ್ರವಾಗಿದೆ.
‘ಸಾಧನೆ ಮಾಡದೆ ಸತ್ತರೆ ಸಾವಿಗೆ ಅವಮಾನ, ಸಿದ್ಧಾಂತಗಳು ಇಲ್ಲದೆ ಬದುಕಿದರೆ ಬದುಕಿಗೆ ಅವಮಾನʼ ಎಂಬ ಡೈಲಾಗ್ ಮೂಲಕ ಟ್ರೈಲರ್‌ನಲ್ಲಿ ಡಾ. ವಿಜಯ ಸಂಕೇಶ್ವರ ಅವರ ಒಟ್ಟು ಜೀವನದ ಜರ್ನಿಯನ್ನು ಸೊಗಸಾಗಿ ಕಟ್ಟಿಕೊಟ್ಟಿದೆ. ಸನ್ನಿವೇಶ ಹಾಗೂ ಡೈಲಾಗ್‌ಗಳಿಗೆ ತಕ್ಕಂತೆ ಹಿನ್ನೆಲೆ ಧ್ವನಿ ಬಹಳ ಅಚ್ಚುಕಟ್ಟಾಗಿ ಮೂಡಿಬಂದಿದೆ ಎಂದು ಸಿನಿಪ್ರಿಯರು ಜಾಲತಾಣಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ | Vijayananda Film | ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ `ಹಾಗೆ ಆದ ಆಲಿಂಗನ’ ಸಾಂಗ್ ಔಟ್!
ಚಿತ್ರಕ್ಕೆ ನಿಹಾಲ್ ನಾಯಕನಾಗಿ, ಸಿರಿ ಪ್ರಹ್ಲಾದ್ ನಾಯಕಿಯಾಗಿ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ, ಹಳೇಬೀಡು, ಬೇಲೂರು ಸೇರಿದಂತೆ 10ಕ್ಕೂ ಹೆಚ್ಚು ಪ್ರೇಕ್ಷಣೀಯ ಸ್ಥಳಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಹೆಸರಾಂತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ.
ಪದ್ಮಶ್ರೀ ಡಾ. ವಿಜಯ ಸಂಕೇಶ್ವರರ ಬಯೋಪಿಕ್‌ಅನ್ನು ವಿಆರ್‌ಎಲ್ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸುತ್ತಿದ್ದಾರೆ. ‘ಟ್ರಂಕ್’ ಖ್ಯಾತಿಯ ನಿರ್ದೇಶಕಿ ರಿಷಿಕಾ ಶರ್ಮಾ ನಿರ್ದೇಶಿಸುತ್ತಿದ್ದಾರೆ. ಡಾ. ವಿಜಯ ಸಂಕೇಶ್ವರರ ಪಾತ್ರದಲ್ಲಿ ನಿಹಾಲ್ ರಜಪೂತ್, ಶ್ರೀಮತಿ ಲಲಿತಾ ಸಂಕೇಶ್ವರರ ಪಾತ್ರದಲ್ಲಿ ಸಿರಿ ಪ್ರಹ್ಲಾದ್, ಡಾ. ವಿಜಯ ಸಂಕೇಶ್ವರರ ತಂದೆ ಬಿ.ಜಿ. ಸಂಕೇಶ್ವರರ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್, ಡಾ. ಆನಂದ ಸಂಕೇಶ್ವರರ ಪಾತ್ರದಲ್ಲಿ ಭರತ್ ಬೋಪಣ್ಣ ಹಾಗೂ ವಿಜಯ ಸಂಕೇಶ್ವರರ ಗುರುಗಳ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ. ವಿಜಯಾನಂದ’ ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಡಿಸೆಂಬರ್ 9ರಂದು ಬಿಡುಗಡೆಯಾಗಲಿದೆ.
ಇದನ್ನೂ ಓದಿ | Vijayananda Film | ನ.6ರಂದು ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ ಆಡಿಯೊ ಲಾಂಚ್