Site icon Vistara News

Vikram Ravichandran : ವಿಕ್ರಮ್ ರವಿಚಂದ್ರನ್ ಅಭಿನಯದ ಮುಧೋಳ್ ಸಿನಿಮಾ ಸ್ಟಂಟ್ ಮಾಸ್ಟರ್‌ಗೆ ಪೆಟ್ಟು

Vikram Ravichandran Mudhol stunt master ravivarma injured

ಬೆಂಗಳೂರು: ಸ್ಯಾಂಡಲ್‌ವುಡ್‌ ಕನಸುಗಾರ ವಿ ರವಿಚಂದ್ರನ್ (Vikram Ravichandran) ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ (Vikram Ravichandran) ಅವರ ಸಿನಿಮಾಗೆ ಮಧೋಳ್ ಎಂಬ ಶೀರ್ಷಿಕೆ ಇಡಲಾಗಿದೆ. ‘ಮುಧೋಳ್’ ಸಿನಿಮಾ ಚಿತ್ರೀಕರಣದ ವೇಳೆ ಸ್ಟಂಟ್ ಮಾಸ್ಟರ್ ರವಿವರ್ಮಾಗೆ ಪೆಟ್ಟಾಗಿದೆ ಎಂದು ವರದಿಯಾಗಿದೆ. ಆ್ಯಕ್ಷನ್ ಸನ್ನಿವೇಶವೊಂದರಲ್ಲಿ ರೋಪ್ ಕಟ್ಟಿ ಕ್ಯಾಮರಾ ಹಿಡಿದು ಸನ್ನಿವೇಶವನ್ನು ಸೆರೆಹಿಡಿಯುತ್ತಿದ್ದರು. ರೋಪ್ ಜಾರಿ ಬಿದ್ದು ಪೆಟ್ಟಾಗಿದೆ. ಈಗಾಗಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ ಎಂದು ವರದಿಯಾಗಿದೆ.

ಅಷ್ಟಕ್ಕೂ ಕ್ರೇಜಿಸ್ಟಾರ್ ಪುತ್ರನ ಚಿತ್ರಕ್ಕೆ ಮುಧೋಳ್ ಎಂಬ ಟೈಟಲ್ ಕೊಟ್ಟಿದ್ದೇ ರವಿಚಂದ್ರನ್. ತ್ರಿವಿಕ್ರಮ್ ಸಿನಿಮಾ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿದ ವಿಕ್ರಮ್ ರವಿಚಂದ್ರನ್ ಈ ಬಾರಿ ಗ್ಯಾಂಗ್ ಸ್ಟಾರ್ ಸಬ್ಜೆಕ್ಟ್ ಮೂಲಕ ಸಿನಿರಸಿಕರನ್ನು ರಂಜಿಸಲು ಬರುತ್ತಿದ್ದಾರೆ. ಮುಧೋಳ್ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ವಿಕ್ರಮ್ ರವಿಚಂದ್ರನ್, ʻʻತ್ರಿವಿಕ್ರಮ ರಿಲೀಸ್ ಆಗಿದ್ದು ಜೂನ್ 24, ಅದು ಆದಮೇಲೆ ಏಪ್ರಿಲ್ 26 ನನ್ನ ಎರಡನೇ ಸಿನಿಮಾದ ಟೈಟಲ್ ಲಾಂಚ್ ಮಾಡುತ್ತಿದ್ದೇವೆ. ನನ್ನ ಎರಡನೇ ಹೆಜ್ಜೆ.ನಿಮ್ಮ ಪ್ರೀತಿ ಹಾರೈಕೆ ಹೀಗೆ ಇರಲಿʼʼ ಎಂದರು.

ನಿರ್ದೇಶಕ ಕಾರ್ತಿಕ್ ರಾಜನ್ ಮಾತನಾಡಿ, ʻʻಮುಧೋಳ್‌ಗಾಗಿ ತುಂಬಾ ಕಡೆ ಹುಡುಗಾಡಿದೆವು. ನಮ್ಮ ಮ್ಯಾನೇಜರ್ ಹತ್ತಿರ ಹೇಳಿದೆ. ತ್ಯಾಗರಾಜ್ ಎಂಬುವವರು ಆ ಶ್ವಾನ ಟ್ರೈನ್ ಮಾಡಿದ್ದಾರೆ. ಟೈಟಲ್ ಟೀಸರ್‌ನಲ್ಲಿ ಶ್ವಾನ ಚಾಕು ಕಚ್ಚಿಕೊಂಡು ಬರುವ ದೃಶ್ಯಕ್ಕಾಗಿ 23 ಟೇಕ್ ತೆಗೆದುಕೊಂಡಿದ್ದೇವೆʼʼ ಎಂದು ತಿಳಿಸಿದರು.

ಇದನ್ನೂ ಓದಿ: Vikram Ravichandran : ವಿಕ್ರಮ್ ರವಿಚಂದ್ರನ್ ಎರಡನೇ ಸಿನಿಮಾಗೆ ‘ಮುಧೋಳ್’ ಟೈಟಲ್‌ ಫಿಕ್ಸ್‌

ಸಂಭಾಷಣೆಗಾರ ಮಾಸ್ತಿ ಮಾತನಾಡಿ, ʻʻಈಶ್ವರಿ ಕಂಬೈನ್ಸ್‌ನಲ್ಲಿ ನಟಿಯರು ರವಿಚಂದ್ರನ್ ಜತೆ ಕೆಲಸ ಮಾಡಬೇಕು ಅಂದುಕೊಳ್ಳುತ್ತಿದ್ದರು. ಅದೇ ರೀತಿ ರೈಟರ್ಸ್ ಆ ಸಂಸ್ಥೆ ಜತೆ ಕೆಲಸ ಮಾಡಬೇಕು ಎಂದುಕೊಳ್ಳುತ್ತಿದ್ದರು. ಈಶ್ವರಿ ಕಂಬೈನ್ಸ್ ಎನ್ನುವುದೇ ಒಂದು ಪರಂಪರೆ. ಆ ಸಂಸ್ಥೆಯ ಜತೆ ವಿಕ್ರಮ್ ಸರ್ ಜತೆ ಕೆಲಸ ಮಾಡುತ್ತಿರುವುದು ಖುಷಿʼʼ ಎಂದರು.

Exit mobile version