ಸಿನಿಮಾ
Vikrant Rona Movie: ‘ರಾ ರಾ ರಕ್ಕಮ್ಮ’ ಸಾಂಗ್ ರಿಲೀಸ್
ಈಗಾಗಲೇ ಹಾಡನ್ನು ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರವನ್ನು ಶಾಲಿನಿ ಆರ್ಟ್ಸ್ ಮೂಲಕ ಜಾಕ್ ಮಂಜು ನಿರ್ಮಾಣ ಮಾಡಲಾಗಿದೆ.
ಬೆಂಗಳೂರು : ಸರಿಯಾಗಿ 3 ಗಂಟೆ 5 ನಿಮಿಷಕ್ಕೆ ವಿಕ್ರಾಂತ್ ರೋಣಾ ಸಾಂಗ್ ರಿಲೀಸ್ ಆಗಿದ್ದು, ಕಿಚ್ಚ ಅಭಿಮಾನಿಗಳು ಫಿದಾ ಆಗಿದ್ದಾರೆ. ಜುಲೈ 28 ಕ್ಕೆ ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾದಲ್ಲಿ ಜಾಕ್ವೆಲಿನ್ ಫರ್ನಾಂಡಿಸ್ ‘ಗಡಾಂಗ್ ರಕ್ಕಮ್ಮ ‘ #RaRaRakkamma ಆಗಿ ಮಿಂಚಿದ್ದಾರೆ.
ಇದನ್ನೂ ಓದಿ | Vikrant Rona Film: ಹಿಂದಿಯಲ್ಲಿ ವಿತರಣೆ ಮಾಡಲಿದ್ದಾರೆ ನಟ ಸಲ್ಮಾನ್ ಖಾನ್
ಒಂದೊಂದು ದಿನ ಐದು ಭಾಷೆಗಳಲ್ಲಿ ಹಾಡು ಬಿಡುಗಡೆಗೊಳ್ಳುತ್ತಿರುವುದು ವಿಶೇಷ. ಸೋಮವಾರ ಕನ್ನಡ ಹಾಗೂ ಮೇ 24 ರಂದು ಹಿಂದಿಯಲ್ಲಿ, ಮೇ 25 ರಂದು ತೆಲುಗಿನಲ್ಲಿ, ಮೇ 26 ರಂದು ತಮಿಳು ಹಾಗೂ ಮೇ 27 ರಂದು ಮಲಯಾಳಂನಲ್ಲಿ ಬಿಡುಗಡೆಗೊಳ್ಳುತ್ತಿದೆ.
ಈಗಾಗಲೇ ಹಾಡನ್ನು ಕಿಚ್ಚ ಸುದೀಪ್ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಸಿಹಿಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅನೂಪ್ ಭಂಡಾರಿ ನಿರ್ದೇಶನದ ಈ ಚಿತ್ರವನ್ನು ಶಾಲಿನಿ ಆರ್ಟ್ಸ್ ಮೂಲಕ ಜಾಕ್ ಮಂಜು ನಿರ್ಮಾಣ ಮಾಡಿದ್ದಾರೆ.
ಅಲಂಕಾರ್ ಪಾಂಡಿಯನ್ ಸಹ ನಿರ್ಮಾಪಕರಾಗಿದ್ದುಏಪ್ರಿಲ್ 2 ರಂದು ಈ ಸಿನಿಮಾದ ಟೀಸರ್ ರಿಲೀಸ್ ಆಗಿತ್ತು. ತಮಿಳಿನಲ್ಲಿ ಸಿಂಬು, ಮಲಯಾಳಂನಲ್ಲಿ ಮೋಹನ್ ಲಾಲ್, ತೆಲಗುನಲ್ಲಿ ಮೆಗಾ ಸ್ಟಾರ್ ಚಿರಂಜೀವಿ ಹಾಗೂ ಇಂಗ್ಲಿಷ್‌ನಲ್ಲಿ ವಿರೇಂದ್ರ ಸೆಹ್ವಾಗ್ ಅವರು ಟೀಸರ್ ಬಿಡುಗಡೆ ಮಾಡಿದ್ದರು. ದಿಯಲ್ಲಿ ಸಲ್ಮಾನ್ ಖಾನ್ ವಿತರಣೆ ಮಾಡಲು ಮುಂದಾಗಿದ್ದರು.
ಇದನ್ನೂ ಓದಿ | ಇನ್ನೊಮ್ಮೆ ಕಿಚ್ಚ ಸುದೀಪ್ V/S ಅಜಯ್ ದೇವಗನ್: ಜುಲೈನಲ್ಲಿ ʼವಿಕ್ರಾಂತ್ ರೋಣಾʼ, ʼಥ್ಯಾಂಕ್ ಗಾಡ್ʼ ಸ್ಟಾರ್ ವಾರ್..!
ಕರ್ನಾಟಕ
Cauvery water dispute : ನಮಗೆ ನೀರಿಲ್ಲ, ತಮಿಳುನಾಡಿಗೆ ನೀರು ಬಿಡೋದು ಹೇಗೆ? – ನಟಿ ರಾಗಿಣಿ ದ್ವಿವೇದಿ
ಕಾವೇರಿ ನೀರಿಗಾಗಿ ಹೋರಾಟವು ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಈ ನಡುವೆ ಸ್ಯಾಂಡಲ್‌ವುಡ್ ಮಂದಿ ಒಬ್ಬೊಬ್ಬರಾಗಿ ಕಾವೇರಿ ಹೋರಾಟಕ್ಕೆ ಸಾಥ್ ನೀಡುತ್ತಿದ್ದಾರೆ. ಈಗ ನಟಿ ರಾಗಿಣಿ ದ್ವಿವೇದಿ ಹೋರಾಟವನ್ನು ಬೆಂಬಲಿಸಿದ್ದಾರೆ.
ದೇವನಹಳ್ಳಿ: ನಮಗೆ ನೀರಿಲ್ಲ ಎಂದಾಗ ತಮಿಳುನಾಡಿಗೆ ನೀರು ಬಿಡುವುದು ಹೇಗೆ? ಎಂದು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ನಟಿ ರಾಗಿಣಿ ದ್ವಿವೇದಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ. ಕಾವೇರಿ ಹೋರಾಟಕ್ಕೆ (Cauvery water dispute) ನಾನು ಸದಾ ಸಿದ್ಧವಾಗಿದ್ದೇನೆ ಎಂದರು.
ರೈತರಿಗೆ ನೀರು ಮುಖ್ಯ, ಅವರು ಬೆಳೆ ಬೆಳೆದರೆ ನಮ್ಮ ಜೀವನ ನಡೆಯುವುದು. ಕಾವೇರಿ ಪ್ರಾಧಿಕಾರವು ಯೋಚನೆ ಮಾಡಿ ನೀರು ಬಿಡಬೇಕು. ನಮ್ಮ ರೈತರಿಗೆ ತೊಂದರೆ ಆದರೆ ನಾವು ಹೇಗೆ ಸುಮ್ಮನಿರಲು ಆಗುತ್ತದೆ. ಕರ್ನಾಟಕ ನಮ್ಮ ಮನೆ, ನಮ್ಮ ರೈತರ ಹಿತ ಮುಖ್ಯ ಎಂದರು.
ಸ್ಯಾಂಡಲ್ ವುಡ್ ಯಾವಾಗಲೂ ರೈತರ ಪರವಾಗಿ ಇರಲಿದೆ. ರೈತರ ಪರವಾಗಿ ನನ್ನ ಬೆಂಬಲವು ಇದೆ. ಸೆ.29ರ ಶುಕ್ರವಾರದ ಬಂದ್‌ಗೆ ಅಗತ್ಯ ಬಿದ್ದರೆ ನಾನು ಹೋಗುವೆ. ಈಗಾಗಲೆ ಸಾಕಷ್ಟು ಚಿತ್ರರಂಗದ ಮಂದಿ ಬೆಂಬಲ ನೀಡಿದ್ದಾರೆ ಎಂದರು.
ಇದನ್ನೂ ಓದಿ: Cauvery water dispute: ಟ್ವೀಟ್ ಮೂಲಕ ಕಾವೇರಿ ಕರುನಾಡ ಆಸ್ತಿ ಎಂದರೇ ಕ್ರಿಕೆಟಿಗ ರಾಹುಲ್?
ತಮಿಳುನಾಡು ಸಿಎಂ ಜತೆ ಮಾತನಾಡಿ; ಸಿದ್ದರಾಮಯ್ಯಗೆ ಕಿಚ್ಚ ಸುದೀಪ್ ಸಲಹೆ
ಕಾವೇರಿ ಜಲ ವಿವಾದಕ್ಕೆ (Cauvery water dispute) ಸಂಬಂಧಪಟ್ಟಂತೆ ವಿವಾದ ಭುಗಿಲೇಳುತ್ತಲೇ ಇದೆ. ತಮಿಳುನಾಡಿಗೆ ನೀರು ಬಿಡುತ್ತಿರುವ (Cauvery water to Tamil Nadu) ರಾಜ್ಯ ಸರ್ಕಾರದ (Government of Karnataka) ನಿಲುವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಇದೇ ವೇಳೆ ಮಂಗಳವಾರ (ಸೆಪ್ಟೆಂಬರ್ 26) ರಾಜಧಾನಿ ಬೆಂಗಳೂರನ್ನು ಬಂದ್ (Bangalore bandh) ಮಾಡಿ ಆಕ್ರೋಶವನ್ನು ಹೊರಹಾಕಲಾಗಿದೆ. ಅಲ್ಲದೆ, ಚಿತ್ರನಟರು ಕಾವೇರಿ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂಬ ಆರೋಪಗಳೂ ಕೇಳಿ ಬಂದಿರುವ ಈ ಹೊತ್ತಿನಲ್ಲಿ ಒಬ್ಬೊಬ್ಬರಾಗಿಯೇ ಮಾತನಾಡುತ್ತಿದ್ದಾರೆ. ಸೋಮವಾರ ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ನಟ ದರ್ಶನ್ (Actor Darshan) ಭಾಗಿಯಾಗಿ ಕಾವೇರಿ ಪರ ಧ್ವನಿ ಎತ್ತಿದ್ದರು. ಈಗ ನಟ ಕಿಚ್ಚ ಸುದೀಪ್ (Kichcha Sudeep) ಟ್ವೀಟ್ ಮಾಡುವ ಮೂಲಕ ಕಾವೇರಿ ನಮ್ಮ ಹಕ್ಕು ಎಂದು ಪ್ರತಿಪಾದಿಸಿದ್ದಾರೆ.
ಕಾವೇರಿ ನೀರಿಗಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ತಮ್ಮ ಬೆಂಬಲ ಸದಾ ಇರುತ್ತದೆ ಎಂದು ಸುದೀಪ್ ಟ್ವೀಟ್ ಮೂಲಕ ಹೇಳಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ತಮಿಳುನಾಡು ಮುಖ್ಯಮಂತ್ರಿ ಜತೆ ಮಾತುಕತೆ ನಡೆಸುವ ಮೂಲಕ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕು ಎಂಬ ಸಲಹೆಯನ್ನೂ ನೀಡಿದ್ದಾರೆ.
ಇದನ್ನೂ ಓದಿ: Cauvery water dispute : ನಿರುತ್ತರ ಮುಖ್ಯಮಂತ್ರಿ ಎಂದು ಟೀಕಿಸಿದ ಬಿಜೆಪಿ; ಸಿದ್ದರಾಮಯ್ಯಗೆ 7 ಪ್ರಶ್ನೆ!
ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಬೇಕು ಎಂಬ ಸಲಹೆಯನ್ನು ಸಹ ಕಿಚ್ಚ ಸುದೀಪ್ ಇದೇ ವೇಳೆ ನೀಡಿದ್ದಾರೆ. ಅಲ್ಲದೆ, ಈ ಜಲ ವಿವಾದವನ್ನು ಶೀಘ್ರದಲ್ಲಿಯೇ ಬಗೆಹರಿಸಬೇಕು ಎಂಬ ಕಳಕಳಿಯನ್ನು ಅವರು ವ್ಯಕ್ತಪಡಿಸಿದ್ದಾರೆ.
ಕಿಚ್ಚ ಸುದೀಪ್ ಟ್ವೀಟ್‌ನಲ್ಲೇನಿದೆ?
“ಸಮಸ್ತ ಕನ್ನಡ ಜನತೆಗೆ ನಮಸ್ಕಾರ; ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನಡೆಸುತ್ತಿದ್ದಾರೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ. ಮುಂಗಾರು ಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ. ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ- ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಿಬ್ಯುನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ.
ಹಿಂದಿನ ಕೆಲವು ಮುಖ್ಯಮಂತ್ರಿಗಳಂತೆಯೇ ನಮ್ಮ ಮುಖ್ಯ ಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ತಮಿಳುನಾಡಿನ ಮುಖ್ಯಮಂತ್ರಿಗಳೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದು ಎಂದು ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ, ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಮಾನ್ಯ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡುತ್ತೇನೆ.
ಇದನ್ನೂ ಓದಿ: Cauvery water dispute : ಕಾವೇರಿ ಮಾತುಕತೆಗೆ ನಾವು ಸಿದ್ಧ; ಮೋದಿ ಮನಸ್ಸು ಮಾಡಲಿ ಎಂದ ಸಿದ್ದರಾಮಯ್ಯ
— Kichcha Sudeepa (@KicchaSudeep) September 26, 2023
ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆಹರಿದು ಹೋರಾಟಕ್ಕೆ ಜಯವಾಗಲಿ. ಇದರ ಜತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ – ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ನಮ್ಮ ಜಲ ನಮ್ಮ ಹಕ್ಕು” ಎಂದು ಕಿಚ್ಚ ಸುದೀಪ್ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಪ್ರಮುಖ ಸುದ್ದಿ
Rakshit Shetty: ಹೌದು, ನಾನು ಈಗಲೂ ರಶ್ಮಿಕಾ ಜತೆ ಸಂಪರ್ಕದಲ್ಲಿದ್ದೇನೆ! ರಕ್ಷಿತ್ ಶೆಟ್ಟಿ ಹೇಳಿಕೆ
Rakshit Shetty: ಕಿರಿಕ್ ಪಾರ್ಟಿ ಚಿತ್ರ ಬಿಡುಗಡೆ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಬೆಂಗಳೂರು: ನಿಶ್ಚಿತಾರ್ಥ ಮಾಡಿಕೊಂಡ ಬಳಿಕ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ನಟ ರಕ್ಷಿತ್ ಶೆಟ್ಟಿ (Rakshit Shetty) ಅವರು ಬೇರೆ ಬೇರೆಯಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಈ ಇಬ್ಬರು ಪರಸ್ಪರ ಸಂಪರ್ಕದಲ್ಲಿದ್ದಾರೆ! ಹೌದು, ಈ ವಿಷಯವನ್ನು ಸ್ವತಃ ನಟ ರಕ್ಷಿತ್ ಶೆಟ್ಟಿ ಅವರು ಬಹಿರಂಗಗೊಳಿಸಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradache Ello) ಚಿತ್ರದ ಪ್ರಚಾರಕ್ಕೆ ಸಂಬಂಧಿಸಿದಂತೆ ಯುಟ್ಯೂಬ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಮಾಹಿತಿಯನ್ನು ನೀಡಿದ್ದಾರೆ.
ಕಿರಿಕ್ ಪಾರ್ಟಿ ಚಿತ್ರದಯ ಯಶಸ್ಸಿನ ಬಳಿಕ ರಕ್ಷಿತ್ ಶೆಟ್ಟಿ ಹಾಗೂ ರಶ್ಮಿಕಾ ಮಂದಣ್ಣ ಅವರು 2017ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆದರೆ, ರಶ್ಮಿಕಾ ಮಂದಣ್ಣ ಅವರು ಈ ನಿಶ್ಚಿತಾರ್ಥ ಮುರಿದು, ಮದುವೆಗೆ ನಿರಾಕರಿಸಿದರು. ಆ ಬಳಿಕ, ರಶ್ಮಿಕಾ ಮಂದಣ್ಣ ಅವರು ಈ ಕುರಿತು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ರಕ್ಷಿತಾ ಶೆಟ್ಟಿ ಮಾತ್ರ ಈಗಲೂ ರಶ್ಮಿಕಾ ಮಂದಣ್ಣ ಜತೆಗೆ ಸಂಪರ್ಕದಲ್ಲಿರುವುದಾಗಿ ಹೇಳುವ ಮೂಲಕ ಶಾಕ್ ನೀಡಿದ್ದಾರೆ. ಅಲ್ಲದೇ, ಚಿತ್ರಗಳಲ್ಲಿ ರಶ್ಮಿಕಾ ಮಂದಣ್ಣ ತೋರುತ್ತಿರುವ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟ ರಕ್ಷಿತ್ ಶೆಟ್ಟಿ ಹೇಳಿದ್ದೇನು?
ಇತ್ತೀಚೆಗೆ ಯುಟ್ಯೂಬ್‍ಗೆ ನೀಡಿದ ಸಂದರ್ಶನದಲ್ಲಿ ರಕ್ಷಿತ್ ಶೆಟ್ಟಿಗೆ, ಈಗಲೂ ರಶ್ಮಿಕಾ ಮಂದಣ್ಣ ಜತೆಗೆ ಸಂಪರ್ಕದಲ್ಲಿದ್ದೀರಾ ಎಂದು ಕೇಳಲಾಯಿತು. ಈ ಪ್ರಶ್ನೆಗೆ ಉತ್ತರಿಸಿದ ರಕ್ಷಿತ್ ಶೆಟ್ಟಿ ಅವರು, ಹೌದು. ಈಗಲೂ ನಾನು ಮತ್ತು ರಶ್ಮಿಕಾ ಇಬ್ಬರು ಪರಸ್ಪರ ಸಂಪರ್ಕದಲ್ಲಿದ್ದೇವೆ. ಸಿನಿಮಾ ಜಗತ್ತನಲ್ಲಿ ಆಕೆ ದೊಡ್ಡ ಕನಸು ಕಂಡಿದ್ದಾಳೆ. ಅದರಂತೆ ಆಕೆ ಆ ಕನಸಿನತ್ತ ಸಾಗುತ್ತಿದ್ದಾಳೆ. ತಾನು ಏನು ಮಾಡಬೇಕು ಅಂದುಕೊಂಡಿದ್ದಾಳೋ ಅದನ್ನು ಸಾಧಿಸುವ ಶಕ್ತಿ ಅವಳಲ್ಲಿದೆ. ಆಕೆಯ ಸಾಧನೆಗಾಗಿ ನಾವೆಲ್ಲ ಆಕೆಯನ್ನು ಬೆಂಬಲಿಸಬೇಕು ಎಂದು ಹೇಳಿದರು.
ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ರಶ್ಮಿಕಾ ಮಂದಣ್ಣ ಅವರು ಪದಾರ್ಪಣೆ ಮಾಡಿದರು. ಕಾಂತಾರ ಚಿತ್ರದ ನಟ-ನಿರ್ದೇಶಕ ರಿಷಭ್ ಶೆಟ್ಟಿ ಅವರು ಕಿರಿಕ್ ಪಾರ್ಟಿ ಚಿತ್ರದ ನಿರ್ದೇಶಕರು. ಕಿರಿಕ್ ಪಾರ್ಟಿ ಚಿತ್ರದ ಚಿತ್ರೀಕರಣದ ವೇಳೆಯೇ ರಶ್ಮಿಕಾ-ರಕ್ಷಿತ್ ಒಬ್ಬರಿಗೊಬ್ಬರು ಪ್ರೀತಿಸಲಾರಂಭಿಸಿದರು ಎನ್ನುವ ವರದಿಗಳಿವೆ. ಕಿರಿಕ್ ಪಾರ್ಟಿ ಚಿತ್ರದ ಬಿಡುಗಡೆ ಬಳಿಕ ರಶ್ಮಿಕಾ ಮತ್ತು ರಕ್ಷಿತ್ ಎಂಗೆಜ್ಮೆಂಟ್ ಮಾಡಿಕೊಂಡರು. ಆದರೆ, ಕೆಲವು ತಿಂಗಳ ಬಳಿಕ ಇಬ್ಬರು ನಿಶ್ಚಿತಾರ್ಥ ಮುರಿದುಕೊಂಡರು. ಆದರೆ, ಯಾವುದೇ ಕಾರಣವನ್ನು ಅವರು ಬಹಿರಂಗ ಮಾಡಿರಲಿಲ್ಲ.
ಕತ್ತಿನಲ್ಲಿ ತಾಳಿ, ಕೆಂಪು ಬಾರ್ಡರ್ ಸೀರೆಯುಟ್ಟು ಫಸ್ಟ್ ಲುಕ್‌ನಲ್ಲೇ ನಾಚಿ ನೀರಾದ ರಶ್ಮಿಕಾ!
ರಣಬೀರ್ ಕಪೂರ್ (Ranbir Kapoor)) ಅಭಿನಯದ ʻಅನಿಮಲ್ʼ ಸಿನಿಮಾ (Animal first look poster) ದಿನಕ್ಕೊಂದು ಹೊಸ ಅಪ್‌ಡೇಟ್‌ಗಳನ್ನು ಹಂಚಿಕೊಳ್ಳುತ್ತಲೇ ಇದೆ. ಇದೀಗ ʻಅನಿಮಲ್ʼ ಸಿನಿಮಾ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ. ಈ ಪೋಸ್ಟರ್ ಕಂಡು ರಶ್ಮಿಕಾ ಅವರ ಫ್ಯಾನ್ಸ್ ಸಂತಸ ಹೊರಹಾಕುತ್ತಿದ್ದಾರೆ. ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ʻಗೀತಾಂಜಲಿʼ (Geethanjali animal Cinema) ಪಾತ್ರವನ್ನು ನಿಭಾಯಿಸುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Rashmika Mandanna: ಮೊದಲ ಬಾರಿಗೆ ರಕ್ಷಿತ್ ಶೆಟ್ಟಿಯವರ ʻಕಿರಿಕ್ ಪಾರ್ಟಿʼ ಕುರಿತು ಬಾಯ್ಬಿಟ್ಟ ರಶ್ಮಿಕಾ ಮಂದಣ್ಣ
ಈಗಾಗಲೇ ಅನಿಮಲ್ ಚಿತ್ರತಂಡ ಹಲವು ಪಾತ್ರಗಳನ್ನು ಪರಿಚಯಿಸಿದೆ. ಕಬೀರ್ ಸಿಂಗ್ ಖ್ಯಾತಿಯ ಸಂದೀಪ್ ರೆಡ್ಡಿ ವಂಗಾ ಈ ಸಿನಿಮಾ ನಿರ್ದೇಶಿಸಿದ್ದಾರೆ. ರಶ್ಮಿಕಾ ಪೋಸ್ಟರ್‌ನಲ್ಲಿ, ಕೆಂಪು ಮತ್ತು ಬಿಳಿ ಬಣ್ಣದ ಬಾರ್ಡರ್ ಸೀರೆಯೊಂದಿಗೆ ಗೃಹಿಣಿಯ ಲುಕ್‌ನಲ್ಲಿ ಸಿಂಪಲ್ ಆಗಿ ಕಂಡಿದ್ದಾರೆ. ರಶ್ಮಿಕಾ ಅಭಿನಿಯೊಬ್ಬರು ʻ ಗೀತಾಂಜಲಿಯ ಲುಕ್ ಬಹಳ ವಿಭಿನ್ನವೆಂದು ತೋರುತ್ತದೆʼʼಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬರು. ‘ಇಡೀ ಚಿತ್ರರಂಗದಲ್ಲಿ ನಿಮಗಿಂತ ಮಿಗಿಲಾದವರು ಯಾರೂ ಇಲ್ಲ, ನೀವೇ ಅತ್ಯಂತ ಸುಂದರಿʼʼಎಂದು ಮತ್ತೊಬ್ಬರು ಕಮೆಂಟ್ ಮಾಡಿದ್ದಾರೆ.
ಸಿನಿಮಾದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಬಾಲಿವುಡ್
Dadasaheb Phalke Award: ವಹೀದಾ ರೆಹಮಾನ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
85ರ ಹರೆಯದ ವಹೀದಾ ರೆಹಮಾನ್ ಅವರು ಗೈಡ್, ಪ್ಯಾಸಾ, ಕಾಗಜ್ ಕೆ ಫೂಲ್ ಮತ್ತು ಚೌಧವೀಂ ಕಾ ಚಾಂದ್‌ನಂತಹ ಸೂಪರ್‌ಹಿಟ್ ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸಿದ ಚಲನಚಿತ್ರಗಳಲ್ಲಿ ನಟಿಸಿದ್ದು, ಬಾಲಿವುಡ್ (bollywood) ರಸಿಕರ ಮೆಚ್ಚುಗೆಯ ನಟಿಯಾಗಿದ್ದಾರೆ.
ಹೊಸದಿಲ್ಲಿ: ಬಾಲಿವುಡ್‌ನ ಖ್ಯಾತ ಹಿರಿಯ ನಟಿ ವಹೀದಾ ರೆಹಮಾನ್ (Waheeda Rehman) ಅವರಿಗೆ 2021ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ನೀಡಲಾಗುತ್ತಿದೆ ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ (Anurag Thakur) ಘೋಷಿಸಿದ್ದಾರೆ.
85ರ ಹರೆಯದ ವಹೀದಾ ರೆಹಮಾನ್ ಅವರು ಗೈಡ್, ಪ್ಯಾಸಾ, ಕಾಗಜ್ ಕೆ ಫೂಲ್ ಮತ್ತು ಚೌಧವೀಂ ಕಾ ಚಾಂದ್‌ನಂತಹ ಸೂಪರ್‌ಹಿಟ್ ಮತ್ತು ವಿಮರ್ಶಕರ ಮೆಚ್ಚುಗೆ ಗಳಿಸಿದ ಚಲನಚಿತ್ರಗಳಲ್ಲಿ ನಟಿಸಿದ್ದು, ಬಾಲಿವುಡ್ (bollywood) ರಸಿಕರ ಮೆಚ್ಚುಗೆಯ ನಟಿಯಾಗಿದ್ದಾರೆ. ಅವರು ಪದ್ಮಭೂಷಣ ಮತ್ತು ಪದ್ಮಶ್ರೀ ಪುರಸ್ಕಾರಗಳನ್ನೂ ಪಡೆದಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು (Dadasaheb Phalke Award) ದೇಶದ ಅತ್ಯುನ್ನತ ಚಲನಚಿತ್ರ ಪ್ರಶಸ್ತಿ; ಇದನ್ನು ಕೇಂದ್ರ ಸರ್ಕಾರ ಕೊಡಮಾಡುತ್ತದೆ.
ಎಕ್ಸ್ (ಟ್ವಿಟರ್)ನಲ್ಲಿನ ಪೋಸ್ಟ್‌ನಲ್ಲಿ, ಅನುರಾಗ್ ಠಾಕೂರ್ ಹೀಗೆ ಬರೆದಿದ್ದಾರೆ: “ವಹೀದಾ ರೆಹಮಾನ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಈ ವರ್ಷದ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಘೋಷಿಸಲು ನಾನು ಅಪಾರ ಸಂತೋಷ ಪಡುತ್ತೇನೆ. ವಹೀದಾಜೀ ಹಿಂದಿ ಚಲನಚಿತ್ರಗಳಲ್ಲಿನ ಅವರ ಪಾತ್ರಗಳಿಗಾಗಿ ವಿಮರ್ಶಾತ್ಮಕ ಮೆಚ್ಚುಗೆ ಪಡೆದಿದ್ದಾರೆ. ಪ್ಯಾಸಾ, ಕಾಗಜ್ ಕೆ ಫೂಲ್, ಚೌಧವಿ ಕಾ ಚಾಂದ್, ಸಾಹೇಬ್ ಬಿವಿ ಔರ್ ಗುಲಾಮ್, ಗೈಡ್, ಖಾಮೋಶಿ ಅವುಗಳಲ್ಲಿ ಪ್ರಮುಖವಾದವುಗಳು. 5 ದಶಕಗಳ ಕಾಲದ ತಮ್ಮ ವೃತ್ತಿಜೀವನದಲ್ಲಿ ಅವರು ತಮ್ಮ ಪಾತ್ರಗಳನ್ನು ಮೆರೆದಿದ್ದಾರೆ. ರೇಷ್ಮಾ ಔರ್ ಶೇರಾ ಚಿತ್ರದ ಪಾತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ವಹೀದಾಜಿ ಅವರು ಸಮರ್ಪಣೆ, ಬದ್ಧತೆ ಮತ್ತು ಅತ್ಯುನ್ನತ ಮಟ್ಟವನ್ನು ಸಾಧಿಸಬಲ್ಲ ಭಾರತೀಯ ನಾರಿಯ ಶಕ್ತಿಯನ್ನು ಪ್ರತಿನಿಧಿಸಿದ್ದಾರೆ. ಕಠಿಣ ಪರಿಶ್ರಮದಿಂದ ವೃತ್ತಿಪರ ಶ್ರೇಷ್ಠತೆ ಸಾಧಿಸಿದ್ದಾರೆ. ಸಂಸತ್ತು ಐತಿಹಾಸಿಕ ನಾರಿ ಶಕ್ತಿ ವಂದನೆ ಅಧಿನಿಯಮವನ್ನು ಅಂಗೀಕರಿಸಿರುವ ಸಮಯದಲ್ಲಿ ವಹೀದಾ ಅವರಿಗೆ ಈ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಿರುವುದು ಸಕಾಲಿಕ ಹಾಗೂ ಭಾರತೀಯ ಚಿತ್ರರಂಗದ ಪ್ರಾತಿನಿಧಿಕ ಪ್ರಮುಖ ಮಹಿಳೆಯೊಬ್ಬರಿಗೆ ನೀಡಿದ ಸೂಕ್ತವಾದ ಗೌರವ. ನಾನು ಅವರನ್ನು ಅಭಿನಂದಿಸುತ್ತೇನೆ ಮತ್ತು ನಮ್ಮ ಚಲನಚಿತ್ರ ಇತಿಹಾಸದ ಭಾಗವಾಗಿರುವ ಅವರ ಸಾಧನೆಗೆ ನನ್ನ ನಮನಗಳನ್ನು ಸಲ್ಲಿಸುತ್ತೇನೆ.”
I feel an immense sense of happiness and honour in announcing that Waheeda Rehman ji is being bestowed with the prestigious Dadasaheb Phalke Lifetime Achievement Award this year for her stellar contribution to Indian Cinema.
— Anurag Thakur (@ianuragthakur) September 26, 2023
Waheeda ji has been critically acclaimed for her…
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆಯು ದಿವಂಗತ ನಟ ದೇವ್ಆನಂದ್ (Dev Anand) ಅವರ ಶತಮಾನೋತ್ಸವದೊಂದಿಗೆ ಸೇರಿಕೊಂಡಿದೆ. ದೇವ್ ಆನಂದ್ ಹಾಗೂ ವಹೀದಾ ರೆಹಮಾನ್ 1965ರ ಬ್ಲಾಕ್‌ಬಸ್ಟರ್ ಚಿತ್ರ ʼಗೈಡ್ʼನ ರೊಮ್ಯಾಂಟಿಕ್ ಜೋಡಿ. ಈ ವರ್ಷದ ಕೊನೆಯಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ವಹೀದಾ ರೆಹಮಾನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಆಶಾ ಪರೇಖ್ (Asha Parekh) ಹಾಗೂ ಅದರ ಹಿಂದಿನ ವರ್ಷದ (2019) ಪ್ರಶಸ್ತಿಯನ್ನು ರಜನಿಕಾಂತ್ (Rajinikanth) ಪಡೆದಿದ್ದರು. ವಹೀದಾ ಸದ್ಯ ಬೆಂಗಳೂರಿನ ನಿವಾಸಿಯಾಗಿದ್ದಾರೆ.
ಇದನ್ನೂ ಓದಿ: Sunday read | ಈ ಚೆಲುವೆ ವನ್ಯಜೀವಿ ಫೋಟೋಗ್ರಫಿ ಮಾಡಿದಾಗ…
South Cinema
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತ?
Heart attack : ಸ್ಯಾಂಡಲ್‌ವುಡ್ ಹಿರಿಯ ಕಲಾವಿದ, ಹಾಸ್ಯ ನಟ ಬ್ಯಾಂಕ್ ಜನಾರ್ದನ್ ಅವರನ್ನು ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೃದಯಾಘಾತ ಆಗಿದೆ ಎಂದು ಹೇಳಲಾಗುತ್ತಿದ್ದರೂ ಅವರ ಪುತ್ರ ಇದನ್ನು ಅಲ್ಲಗಳೆದಿದ್ದಾರೆ.
ಬೆಂಗಳೂರು: ಹಿರಿಯ ನಟ, ಹಾಸ್ಯ ಕಲಾವಿದ ಬ್ಯಾಂಕ್ ಜನಾರ್ದನ್ (Bank Janardhan) ಅವರಿಗೆ ಹೃದಯಾಘಾತ (Heart attack) ಆಗಿದೆ ಎಂಬ ಸುದ್ದಿ ದಟ್ಟವಾಗಿ ಹರಡಿದೆ. ಅವರನ್ನು ಮಣಿಪಾಲ್ ಆಸ್ಪತ್ರೆಗೆ (Manipal Hospital) ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿಯುತ್ತಿದೆ. ಆದರೆ, ಅವರಿಗೆ ಹೃದಯಾಘಾತ ಆಗಿಲ್ಲ ಎಂದು ಪುತ್ರ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.
ಮಣಿಪಾಲ್ ಆಸ್ಪತ್ರೆಯಲ್ಲಿ ಬ್ಯಾಂಕ್ ಜನಾರ್ದನ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಐಸಿಯುಗೆ ದಾಖಲು ಮಾಡಲಾಗಿದೆ. ಹೃದಯಾಘಾತ ಆಗಿದೆ ಎಂಬ ಸುದ್ದಿ ಎಲ್ಲ ಕಡೆ ಹರಿದಾಡುತ್ತಿದೆ. ಆದರೆ, ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನಡೆಯುತ್ತಿದೆ ಅಷ್ಟೇ. ಅವರಿಗೆ ಹಾರ್ಟ್ ಅಟ್ಯಾಕ್ ಆಗಿಲ್ಲ ಎಂದು ಅವರ ಪುತ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬ್ಯಾಂಕ್ ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದೆ. ಕಳೆದ 40 ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದಾರೆ. ಅವರು ಈವರೆಗೆ ಸುಮಾರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಅಲ್ಲದೆ, ನಟನೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಹಾಸ್ಯ ಸೇರಿದಂತೆ ಗಂಭೀರ ಪಾತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದು, ನಟನೆಗೆ ಜೀವ ತುಂಬುವ ಕೆಲಸವನ್ನು ಮಾಡುತ್ತಾ ಬಂದಿದ್ದಾರೆ.
ಕನ್ನಡ ಸಿನಿಮಾ, ಕಿರುತೆರೆ ಮತ್ತು ರಂಗಭೂಮಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದ ಜನಾರ್ದನ್, ತಮ್ಮದೇ ಆದ ಅಭಿಮಾನಿ ವರ್ಗವನ್ನು ಕಲೆಹಾಕಿದ್ದರು.
ನಾಳೆ ಆಂಜಿಯೋಗ್ರಾಮ್?
ಸದ್ಯ ನಟ ಬ್ಯಾಂಕ್ ಜನಾರ್ದನ್ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಬುಧವಾರ ಅವರಿಗೆ ಆಂಜಿಯೋಗ್ರಾಮ್ (Angiogram test) ಮಾಡುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಜನಾರ್ದನ್ ಅವರನ್ನು ನೋಡಲು ಯಾರಿಗೂ ಅನುಮತಿ ನೀಡುತ್ತಿಲ್ಲ.
ಬಹುತೇಕ ಸ್ಟಾರ್ ನಟರ ಜತೆ ನಟನೆ
ಗೌರಿ ಗಣೇಶ, ಕೌರವ, ರಂಗ ಎಸ್.ಎಸ್.ಎಲ್.ಸಿ ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ವಿಭಿನ್ನ ಪಾತ್ರಗಳನ್ನು ಮಾಡಿದ್ದಾರೆ. ಅಲ್ಲದೆ, ಕನ್ನಡ ಚಿತ್ರರಂಗದ ಬಹುತೇಕ ಸ್ಟಾರ್ ನಟರ ಜತೆ ಇವರು ನಟನೆ ಮಾಡಿದ ಖ್ಯಾತಿಯನ್ನು ಹೊಂದಿದ್ದಾರೆ.
ಉತ್ತಮ ಹಾಸ್ಯ ನಟ
ಬ್ಯಾಂಕ್ ಜನಾರ್ದನ್ ಕನ್ನಡ ಸಿನಿಮಾ ರಂಗದ ಮಟ್ಟಿಗೆ ಒಬ್ಬ ಅತ್ಯುತ್ತಮ ಹಾಸ್ಯ ನಟರಾಗಿದ್ದಾರೆ. ಸಹಜ ನಟನೆ ಮೂಲಕ ಗಮನ ಸೆಳೆಯುವ ಇವರು, ತಮ್ಮ ಹಾವ-ಭಾವ ಹಾಗೂ ಮಾತಿನ ಮೂಲಕ ಹಾಸ್ಯವನ್ನು ಹಂಚುತ್ತಿದ್ದರು. ಉಪೇಂದ್ರ ನಿರ್ದೇಶನದ ಶ್! ಸಿನಿಮಾದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಮಾಡಿದ ಇವರ ನಟನೆಯನ್ನು ಯಾರೂ ಮರೆಯಲು ಸಾಧ್ಯವಿಲ್ಲ. ಇದಲ್ಲದೆ ತರ್ಲೆ ನನ್ ಮಗ, ಬೆಳ್ಳಿಯಪ್ಪ ಬಂಗಾರಪ್ಪ , ಗಣೇಶ ಸುಬ್ರಹ್ಮಣ್ಯ, ಕೌರವ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ತಮ್ಮ ಪಾತ್ರದ ಮೂಲಕ ಗಮನ ಸೆಳೆದಿದ್ದಾರೆ.
ಧಾರಾವಾಹಿಯಲ್ಲೂ ನಟನೆ
ಸಿನಿಮಾಗಳ ಜತೆ ಜತೆಯಲ್ಲಿ ಧಾರಾವಾಹಿಗಳಲ್ಲಿಯೂ ಬಣ್ಣ ಹಚ್ಚಿದ್ದ ಬ್ಯಾಂಕ್ ಜನಾರ್ದನ್ ಅಲ್ಲಿಯೂ ನಗಿಸುವ ಪ್ರಯತ್ನವನ್ನು ಮುಂದುವರಿಸಿದ್ದರು. ಪಾಪ ಪಾಂಡು, ಮಾಂಗಲ್ಯ, ರೋಬೋ ಫ್ಯಾಮಿಲಿ, ಜೋಕಾಲಿ ಧಾರಾವಾಹಿಗಳಲ್ಲಿ ನಟಿಸಿ ಮನೆ ಮನೆ ಮಾತಾಗಿದ್ದಾರೆ.
ಇದನ್ನೂ ಓದಿ: Cauvery water dispute : ತಮಿಳುನಾಡು ಸಿಎಂ ಜತೆ ಮಾತನಾಡಿ; ಸಿದ್ದರಾಮಯ್ಯಗೆ ಕಿಚ್ಚ ಸುದೀಪ್ ಸಲಹೆ
ಶೀಘ್ರ ಗುಣಮುಖರಾಗುವಂತೆ ಪ್ರಾರ್ಥನೆ
ಈಗ ಬ್ಯಾಂಕ್ ಜನಾರ್ದನ್ ಅವರು ಶೀಘ್ರ ಗುಣಮುಖರಾಗಲಿ ಎಂದು ಕನ್ನಡ ಕಲಾವಿದರು, ಸಿನಿಮಾ ಅಭಿಮಾನಿಗಳು ಕೋರಿಕೊಂಡಿದ್ದಾರೆ.
-
Live News21 hours ago
Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!
-
ವಿದೇಶ11 hours ago
Great auction: ಅಮೆರಿಕದ ಅಪರೂಪದ ನೋಟು 3.9 ಕೋಟಿ ರೂ.ಗೆ ಮಾರಾಟ!
-
ದೇಶ4 hours ago
UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!
-
South Cinema14 hours ago
Heart attack : ಹಿರಿಯ ನಟ ಬ್ಯಾಂಕ್ ಜನಾರ್ದನ್‌ಗೆ ಹೃದಯಾಘಾತ?
-
ಕರ್ನಾಟಕ15 hours ago
Bengaluru Bandh : ಪೊಲೀಸರಿಗೆ ಕೊಟ್ಟ ಊಟದಲ್ಲಿ ಸಿಕ್ಕಿತು ಫ್ರೈಡ್ ಇಲಿ!
-
ಆಟೋಮೊಬೈಲ್11 hours ago
Viral News : ಅಮ್ಮನ ಕಾರಿನಲ್ಲಿಯೇ ಮನೆ ಬಿಟ್ಟು ಹೋದ ಪುಟಾಣಿ ಮಕ್ಕಳು, 300 ಕಿ. ಮೀ ದೂರ ಹೋಗಿ ಸಿಕ್ಕಿಬಿದ್ದರು
-
ಕರ್ನಾಟಕ11 hours ago
Assault Case : ರಸ್ತೆ ವಿಚಾರಕ್ಕೆ ವಕೀಲನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು!
-
ಕ್ರಿಕೆಟ್15 hours ago
ರಾಜ್ಕೋಟ್ನಲ್ಲಿ ಈಡೇರಲಿ ಭಾರತದ ಕ್ಲೀನ್ ಸ್ವೀಪ್ ಯೋಜನೆ; ನಾಳೆ ಅಂತಿಮ ಏಕದಿನ