ವಿಕ್ರಾಂತ್‌ ರೋಣ : ಜೂನ್‌ 23ರಂದು ಟ್ರೈಲರ್‌ ರಿಲೀಸ್‌ - Vistara News

ಸಿನಿಮಾ

ವಿಕ್ರಾಂತ್‌ ರೋಣ : ಜೂನ್‌ 23ರಂದು ಟ್ರೈಲರ್‌ ರಿಲೀಸ್‌

ವಿಕ್ರಾಂತ್‌ ರೋಣ (Vikranth Rona) ಟ್ರೈಲರ್‌ ರಿಲೀಸ್‌ಗಾಗಿಯೂ ಕಾದು ಕುಳಿತಿದ್ದಾರೆ ಕಿಚ್ಚ ಸುದೀಪ್‌ ಅವರ ಅಭಿಮಾನಿಗಳು. ಸುದೀಪ್‌ ಹಾಗೂ ಚಿತ್ರದ ನಿರ್ದೇಶಕ ನಿರೂಪ್‌ ಭಂಡಾರಿ ಈ ದಿನಾಂಕ ರಿವೀಲ್‌ ಮಾಡಿದ್ದಾರೆ.

VISTARANEWS.COM


on

Vikranth Rona Announcement
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಟ್ರೈಲರ್‌ ರಿಲೀಸ್‌ಗೆ ಜೂನ್‌ ೨೩ಕ್ಕೆ ನಿಗದಿಯಾಗಿದೆ.

ವಿಕ್ರಾಂತ್ ರೋಣ ಸಿನಿಮಾದ ಟ್ರೈಲರ್ ರಿಲೀಸ್ ಡೇಟ್ ಅನ್ನು ಕಿಚ್ಚ ಸುದೀಪ್‌ ತಮ್ಮ ತಮ್ಮ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಜೂನ್‌ ೨೩ರಂದು ಟ್ರೈಲರ್‌ ಔಟ್‌ ಆಗಲಿದೆಯಂತೆ. ʼʼOnce You Enter The Maze, Escape is Not An Option” ಎಂಬ ಮಾತಿನೊಂದಿಗೆ ಸುದೀಪ್‌ ಟ್ವೀಟ್‌ ಮಾಡಿದ್ದಾರೆ. ಅವರ ಹೊಸ ಲುಕ್‌ ಇದರಲ್ಲಿ ರಿವೀಲ್‌ ಆಗಿದೆ.

ಅನೂಪ್ ಭಂಡಾರಿ ನಿರ್ದೇಶಿಸಿ ಜಾಕ್ ಮಂಜುನಾಥ್ ನಿರ್ಮಾಣದ ಈ ಸಿನಿಮಾ ಮೇಲೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ಚಿತ್ರದ ರಾ ರಾ ರಕ್ಕಮ್ಮ ಲಿರಿಕಲ್ ಹಾಡು ಡಿಜಿಟಲ್ ಮೀಡಿಯಾದಲ್ಲಿ ಧೂಳ್ ಎಬ್ಬಿಸಿದ್ದು ಕಿಚ್ಚನ ಅಭಿಮಾನಿಗಳಿಗೆ ಸಿಗ್ತಿರೋ ಸರ್ ಪ್ರೈಸ್ ಗಿಫ್ಟ್ ಹೇಗಿರುತ್ತೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: Vikrant Rona Film: ಹಿಂದಿಯಲ್ಲಿ ವಿತರಣೆ ಮಾಡಲಿದ್ದಾರೆ ನಟ ಸಲ್ಮಾನ್‌ ಖಾನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕಾಲಿವುಡ್

Kamal Haasan: ‘ಇಂಡಿಯನ್-2’ ಸಿನಿಮಾದ ಎರಡನೇ ಹಾಡು ರಿಲೀಸ್!

Kamal Haasan: 1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

Kamal Haasan indian 2 second song out
Koo

ಬೆಂಗಳೂರು: ಕಾಲಿವುಡ್‌ ನಟ ಕಮಲ್ ಹಾಸನ್ (Kamal Haasan) ನಟನೆಯ ಬಹುನಿರೀಕ್ಷಿತ ಸಿನಿಮಾ ʻಇಂಡಿಯನ್ 2ʼ ಜುಲೈ 12ಕ್ಕೆ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್ ಹಾಗೂ ಹಾಡಿನ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿರುವ ಈ ಚಿತ್ರದ ಎರಡನೇ ಹಾಡು ಅನಾವರಣಗೊಂಡಿದೆ. ಬೊಮ್ಮರಿಲ್ಲು ಸಿದ್ದಾರ್ಥ್ ಹಾಗೂ ರಕುಲ್ ಪ್ರೀತ್ ಸಿಂಗ್ ನಡುವಿನ ಪ್ರೇಮಗೀತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ರಾಮ ಜೋಗಯ್ಯಶಾಸ್ತ್ರಿ ತೆಲುಗು ವರ್ಷನ್ ಹಾಡಿಗೆ ಸಾಹಿತ್ಯ ಬರೆದಿದ್ದು, ತಾಮರೈ ತಮಿಳು ವರ್ಷನ್ ಗೆ ಪದ ಗೀಚಿದ್ದಾರೆ. ಅನಿರುದ್ಧ ರವಿಚಂದರ್ ಹಾಡಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

1996ರಲ್ಲಿ ‘ಇಂಡಿಯನ್’ ಸಿನಿಮಾ ಬಿಡುಗಡೆಯಾಗಿ ಸೂಪರ್ ಹಿಟ್ ಆಗಿತ್ತು. ಸೇನಾಪತಿ ಎಂಬ ಪಾತ್ರದಲ್ಲಿ ಕಮಲ್ ಹಾಸನ್ ಅವರು ಮಿಂಚಿದ್ದರು. ಅದರ ಮುಂದುವರಿದ ಭಾಗವಾಗಿ ‘ಇಂಡಿಯನ್ 2’ ಸಿನಿಮಾ ಮೂಡಿಬರುತ್ತಿದೆ. ಇದು ಪ್ಯಾನ್ ಇಂಡಿಯಾ ಸಿನಿಮಾ. ಕಮಲ್ ಹಾಸನ್ ಹಿರಿಯ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಈ ಸಿನಿಮಾದಲ್ಲಿದ್ದು, ಕಮಲ್ ಹಾಸನ್ ಮತ್ತದೇ ಅವತಾರದಲ್ಲಿ ನೋಡಬಹುದಾಗಿದೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಕಮಲ್ ಹಾಸನ್ ಜತೆಯಲ್ಲಿ ಸಿದ್ದಾರ್ಥ್, ಎಸ್ ಜೆ ಸೂರ್ಯ, ಕಾಜಲ್ ಅಗರ್ವಾಲ್, ರಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಂ, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕಣಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲಾ ಕಿಶೋರ್, ಮತ್ತು ದೀಪಾ ಶಂಕರ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: IPL 2024 : ಜಿಯೋಸಿನಿಮಾದಲ್ಲಿ ದಾಖಲೆಯ 62 ಕೋಟಿಗೂ ಅಧಿಕ ವೀಕ್ಷಣೆ ಕಂಡ ಐಪಿಎಲ್​

ಎಸ್. ಶಂಕರ್ ನಿರ್ದೇಶನದಲ್ಲಿ ‘ಇಂಡಿಯನ್ 2’ ಸಿನಿಮಾ ಮೂಡಿ ಬರುತ್ತಿದ್ದು, ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಜಂಟಿಯಾಗಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅನಿರುದ್ಧ್ ರವಿಚಂದರ್ ಅವರು ಈ ಸಿನಿಮಾಗೆ ಸಂಗೀತ ನೀಡಿದ್ದಾರೆ. ರವಿವರ್ಮನ್ ಹಾಗೂ ರತ್ನವೇಲು ಅವರು ಛಾಯಾಗ್ರಹಣ ಮಾಡಿದ್ದಾರೆ. ಎ. ಶ್ರೀಕರ್ ಪ್ರಸಾದ್ ಅವರು ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Kannada New Movie: ʻತಿಥಿʼ ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ ʻದಾಸಪ್ಪʼ ಸಿನಿಮಾ ಟ್ರೈಲರ್‌ ಔಟ್‌!

Kannada New Movie: “ತಿಥಿ” ಚಿತ್ರದ (Kannada New Movie) ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್‌ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

VISTARANEWS.COM


on

Kannada New Movie Dasappa Kannada Movie Trailer
Koo

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ “ತಿಥಿ” ಚಿತ್ರದ (Kannada New Movie) ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿರುವ “ದಾಸಪ್ಪ” ಚಿತ್ರದ ಟ್ರೈಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್‌ ಟ್ರೈಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

ನಿರ್ದೇಶಕ ವಿಜಯ್ ಕೀಲಾರ ಮಾತನಾಡಿ ʻʻದಾಸಪ್ಪ” ಪಕ್ಕಾ ಗ್ರಾಮೀಣ ಸೊಗಡಿನ ಚಿತ್ರ. ಎಲ್ಲಾ ಹಳ್ಳಿಗಳಲ್ಲಿ ಯಾವುದೇ ಕಾರ್ಯವಾದರೂ “ದಾಸಪ್ಪ” ಅವರು ಇರಲೇ ಬೇಕು. ಅಂತಹ ದಾಸಪ್ಪ ಎಂಬ ಪಾತ್ರದ ಸುತ್ತ ಈ ಚಿತ್ರದ ಕಥೆ ಸಾಗುತ್ತದೆ. “ತಿಥಿ” ಚಿತ್ರದ ಸ್ಫೂರ್ತಿಯಿಂದ ಈ ಚಿತ್ರ ಮಾಡಿದ್ದೇನೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ನಾನೇ ಬರೆದಿದ್ದೇನೆ. ಆನಂದ್ ಕೆಂಪೇಗೌಡ ಕೆಬ್ಬಳ್ಳಿ ಈ ಚಿತ್ರದ ನಿರ್ಮಾಪಕರು. ಶ್ರೀನಿವಾಸ್ ಹಾಗೂ ರಾಘವೇಂದ್ರ ಸಹ ನಿರ್ಮಾಪಕರು‌. “ತಿಥಿ” ಖ್ಯಾತಿಯ ನಟ ತಮ್ಮಣ್ಣ ಅವರು “ದಾಸಪ್ಪ”ನಾಗಿ ಅಭಿನಯಿಸಿದ್ದಾರೆ. ಮಂಜು ಪಾವಗಡ, ವಿನೋದ್ ಗೊಬ್ರಗಾಲ, ಅಂಜನ ಗಿರೀಶ್, ಸುರಕ್ಷಿತ ಶೆಟ್ಟಿ, ಸಿಂಚನ ಗೌಡ ಮುಂತಾದವರು ಅಭಿನಯಿಸಿದ್ದಾರೆ. ಹಾಡುಗಳು ಹಾಗೂ ಸಾಹಸ ಸನ್ನಿವೇಶಗಳು ಇಲ್ಲದಿರುವುದು ಈ ಚಿತ್ರದ ವಿಶೇಷ. ಮಂಡ್ಯ, ಕೀಲಾರ, ಮದ್ದೂರಿನಲ್ಲಿ ಚಿತ್ರೀಕರಣವಾಗಿದೆ. ಸದ್ಯದಲ್ಲೇ ತೆರೆಗೆ ಬರಲಿದೆʼʼ ಎಂದರು.

“ದಾಸಪ್ಪ” ನ ಪಾತ್ರದಲ್ಲಿ ಅಭಿನಯಿಸಿದ್ದು ಖುಷಿಯಾಗಿದೆ ಎಂದ ನಟ ತಮ್ಮಣ್ಣ, ಚಿತ್ರತಂಡದವರಿಗೆ ಧನ್ಯವಾದ ತಿಳಿಸಿದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ʻʻನಿರ್ದೇಶಕರು ನನ್ನ ಸ್ನೇಹಿತರು. ಕಥೆ ಕೇಳಿ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು. ನಿರ್ಮಾಣದ ಜತೆಗೆ ಸಣ್ಣ ಪಾತ್ರದಲ್ಲೂ ಕಾಣಿಸಿಕೊಂಡಿರುವುದಾಗಿʼʼ ಸಹ ನಿರ್ಮಾಪಕ ಶ್ರೀನಿವಾಸ್ ತಿಳಿಸಿದರು‌. ಮತ್ತೊಬ್ಬ ಸಹ ನಿರ್ಮಾಪಕ ರಾಘವೇಂದ್ರ ಹಾಗೂ ಸಿರಿ ಮ್ಯೂಸಿಕ್ ಸುರೇಶ್ ಚಿಕ್ಕಣ್ಣ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಚಿತ್ರದಲ್ಲಿ ನಟಿಸಿರುವ ಮಂಜು ಪಾವಗಡ, ವಿನೋದ್ ಗೊಬ್ರಗಾಲ, ಸುರಕ್ಷಿತ, ಸಿಂಚನ ಗೌಡ ಮುಂತಾದವರು ತಮ್ಮ ಪಾತ್ರಗಳ ಬಗ್ಗೆ ಮಾಹಿತಿ ನೀಡಿದರು.

Continue Reading

ಸ್ಯಾಂಡಲ್ ವುಡ್

Prajwal Devaraj: ಪ್ರಜ್ವಲ್​ ದೇವರಾಜ್ ಇನ್ನಿಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳು; ಕುಟುಂಬಸ್ಥರ ಆಕ್ರೋಶ!

Prajwal Devaraj: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

VISTARANEWS.COM


on

Prajwal Devaraj death news take leagal action by family
Koo

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಪ್ರಜ್ವಲ್​ ದೇವರಾಜ್ (Prajwal Devaraj) ಅವರುಇನ್ನಿಲ್ಲ ಎಂಬ ಸುದ್ದಿ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ‘ಪ್ರಜ್ವಲ್​ ದೇವರಾಜ್​ ಇನ್ನಿಲ್ಲ. ಓಂ ಶಾಂತಿ’ ಎಂಬ ಕ್ಯಾಪ್ಷನ್​ನೊಂದಿಗೆ ಪ್ರಜ್ವಲ್​ ದೇವರಾಜ್​ ಅವರ ಫೋಟೊವನ್ನು ಕಿಡಿಗೇಡಿಗಳು ವೈರಲ್​ ಮಾಡಿದ್ದಾರೆ. ಇದು ಅವರ ಕುಟುಂಬದವರ ಗಮನಕ್ಕೂ ಬಂದಿದೆ. ಪ್ರಜ್ವಲ್‌ ಬಗ್ಗೆ ಹರಿದಾಡುತ್ತಿರುವ ಈ ವಿಚಾರವನ್ನು ಅರಗಿಸಿಕೊಳ್ಳಲಾಗದೇ, ಅಭಿಮಾನಿ ವಲಯವೂ ಆತಂಕಕ್ಕೀಡಾಗಿತ್ತು. ಈ ಬಗ್ಗೆ ನಟ ದೇವರಾಜ್‌ ಮತ್ತವರ ಕುಟುಂಬ ಸ್ಪಷ್ಟನೆ ನೀಡಿದೆ.

ʻʻನಟ ಪ್ರಜ್ವಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿಗಳನ್ನ ಹಬ್ಬಿಸಲಾಗಿದೆ. ಪ್ರಜ್ವಲ್ ದೇವರಾಜ್ ಅವರ ಪೋಟೋಗಳನ್ನ ದುರ್ಬಳಕೆ ಮಾಡಲಾಗಿದೆ.. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ವದಂತಿಗಳು ಸಲ್ಲದು. ಇದರಿಂದಾಗಿ ಕುಟುಂಬಸ್ಥರು ಹಾಗೂ ಅಭಿಮಾನಿಗಳಲ್ಲಿ ಆತಂಕ ಉಂಟಾಗುತ್ತದೆ. ಕಿಡಿಗೇಡಿಗಳು ಪ್ರಜ್ವಲ್ ದೇವರಾಜ್ ಆರೋಗ್ಯದ ಬಗ್ಗೆ ಅನಗತ್ಯ ಸುಳ್ಳು ವದಂತಿ ಹಬ್ಬಿಸಿದ್ದಾರೆʼʼಎಂದು ಕುಟುಂಬ ಮಾಹಿತಿ ಹಂಚಿಕೊಂಡಿದೆ.

ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬದವರು ನಿರ್ಧರಿಸಿದ್ದಾರೆ ಎನ್ನಲಾಗಿದೆ. ‘ಪ್ರಜ್ವಲ್ ದೇವರಾಜ್ ಆರೋಗ್ಯವಾಗಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ’ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Prajwal Devaraj: ಪ್ರಜ್ವಲ್ ಜತೆ ಸಂಪದಾ ರೊಮ್ಯಾನ್ಸ್!

‘ಕರಾವಳಿ’, ‘ಮಾಫಿಯಾ’, ‘ಗಣ’ ಮುಂತಾದ ಸಿನಿಮಾಗಳು ಅವರ ಕೈಯಲ್ಲಿವೆ. ‘ಕರಾವಳಿ’ ಸಿನಿಮಾದಲ್ಲಿ ಅವರ ಗೆಟಪ್​ ತುಂಬ ಡಿಫರೆಂಟ್​ ಆಗಿರಲಿದೆ.

ಕರಾವಳಿ (Karavali Movie)-ಇದು ಈಗಾಗಲೇ ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸಿರುವ ಸಿನಿಮಾ. ಗುರುದತ್ ಗಾಣಿಗ (Gurudath Ganiga) ನಿರ್ದೇಶನದ ಅವರದೇ ಗಾಣಿಗ ಫಿಲ್ಮ್ಸ್‌ ಹಾಗೂ ವಿಕೆ ಫಿಲ್ಮ್‌ ಅಸೋಸಿಯೇಷನ್‌ನಲ್ಲಿ ನಿರ್ಮಾ಼ಣವಾಗುತ್ತಿರುವ ಚಿತ್ರ. ಪ್ರಜ್ವಲ್ ದೇವರಾಜ್ (Prajwal Devaraj) ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾ ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ನಿರ್ದೇಶಕ ಮತ್ತು ನಿರ್ಮಾಪಕ ಗುರುದತ್ ಗಾಣಿಗ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ‘ಇದು ಮನುಷ್ಯ ಹಾಗೂ ಪ್ರಾಣಿಯ ಮಧ್ಯೆ ನಡೆಯುವ ಸಂಘರ್ಷದ ಕಥೆ. ಇದು ಹಳ್ಳಿಯ ಕಥೆ. ಚಿತ್ರದಲ್ಲಿ ಕಂಬಳವೂ ಒಂದು ಪಾತ್ರವಾಗಿ ಹರಿಯಲಿದೆ’ ಎಂದು ಹೇಳಿದ್ದರು.

ಇನ್ನು ಕರಾವಳಿ ಸಿನಿಮಾಗೆ ನಾಯಕಿಯಾಗಿ ಸಂಪದಾ ಆಯ್ಕೆ ಆಗಿದ್ದಾರೆ. ಈಗಾಗಲೇ ಬೆಂಕಿ ಹಾಗೂ ರೈಡರ್ ಸಿನಿಮಾಗಳಲ್ಲಿ ಕಾಣಿಸೊಂಡಿದ್ದ ಸಂಪದಾ ಇದೀಗ ಕರಾವಳಿ ಸಿನಿಮಾದಲ್ಲಿ ಮಿಂಚಲಿದ್ದಾರೆ. ಚಿತ್ರದ ಬಗ್ಗೆಸ ಸಖತ್ ಎಕ್ಸಾಯಿಟ್ ಆಗಿರುವ ಸಂಪದಾ ಪಶುವೈದ್ಯೆಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Continue Reading

ಸಿನಿಮಾ

Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

Kantara Movie: ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

VISTARANEWS.COM


on

Kantara Movie Mollywood actor enters
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ದೇಶ-ವಿದೇಶದಲ್ಲಿ ಭರ್ಜರಿ ಹೆಸರು ಗಳಿಸಿದ ಬೆನ್ನಲ್ಲೇ ರಿಷಬ್‌ ಶೆಟ್ಟಿ ಅವರು ಕಾಂತಾರ ಚಾಪ್ಟರ್‌ 1‌ (Kantara Movie) (ಪ್ರಿಕ್ವೆಲ್) ಚಿತ್ರೀಕರಣಕ್ಕೆ ಇಳಿದಿದ್ದರು. ಇದರ ಬೆನ್ನಲ್ಲೇ, ಕಾಂತಾರ ಸಿನಿಮಾದ ಡಿಜಿಟಲ್‌ ಹಕ್ಕುಗಳು (Digital Rights) ಅಮೆಜಾನ್‌ ಪ್ರೈಮ್‌ ಪಾಲಾಗಿದ್ದು, ಸುಮಾರು 125 ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂದು ತಿಳಿದುಬಂದಿತ್ತು. ಇದೀಗ ಮಾಲಿವುಡ್‌ ಖ್ಯಾತ ನಟ ಸಿನಿಮಾಗೆ ಎಂಟ್ರಿ ಕೊಟ್ಟಿರುವುದಾಗಿ ವರದಿಯಾಗಿದೆ.

ಮಾಲಿವುಡ್‌ ನಟ ನಟ ಜಯರಾಂ ‘ಕಾಂತಾರ’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹೊರ ಬೀಳಬೇಕಿದೆ. ಒಮ್ಮೆಲೆ 5 ಭಾಷೆಗಳಲ್ಲಿ ‘ಕಾಂತಾರ’ ಚಾಪ್ಟರ್-1 ಸಿನಿಮಾ ಕಟ್ಟಿಕೊಡಲು ತಂಡ ಪ್ರಯತ್ನಿಸುತ್ತಿದೆ ಎನ್ನಲಾಗಿದೆ. ಬೇರೆ ಭಾಷೆಗಳಲ್ಲಿ ಸಿನಿಮಾ ಬರುವುದರಿಂದ ಅಲ್ಲಿನ ಕಲಾವಿದರನ್ನು ಬಳಸಿಕೊಳ್ಳುತ್ತಿದೆ ಎನ್ನಲಾಗಿದೆ. ನಟ ಜಯರಾಂ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ಕೂಡ ನಟಿಸಿದ್ದಾರೆ. ಶಿವರಾಜ್‌ಕುಮಾರ್ ನಟನೆಯ ‘ಘೋಸ್ಟ್’ ಚಿತ್ರದಲ್ಲಿ ಎಸಿಪಿ ಚೆಂಗಪ್ಪ ಪಾತ್ರದಲ್ಲಿ ಅಬ್ಬರಿಸಿದ್ದರು.

ಇದನ್ನೂ ಓದಿ: Kantara Movie: ದಾಖಲೆ ಮೊತ್ತಕ್ಕೆ ಕಾಂತಾರ ಸಿನಿಮಾದ ಡಿಜಿಟಲ್‌ ರೈಟ್ಸ್‌ ಮಾರಾಟ; ಅಬ್ಬಾ ಇಷ್ಟು ಕೋಟಿನಾ!

ದೈವಾರಾಧನೆಯ ಎಳೆಯನ್ನು ಇಟ್ಟುಕೊಂಡು, ಕಡಿಮೆ ಬಜೆಟ್‌ನಲ್ಲಿ ನಿರ್ಮಿಸಿದ ಕಾಂತಾರ ಸಿನಿಮಾ ಭಾರತ ಸೇರಿ ಜಗತ್ತಿನಾದ್ಯಂತ ಹೆಸರು ಗಳಿಸಿದೆ. ರಿಷಬ್‌ ಶೆಟ್ಟಿ ಅವರ ಸಿನಿಮಾ ಬದುಕಿಗೆ ಹೊಸ ಸ್ವರೂಪ ನೀಡಿದೆ. ಹಾಗಾಗಿ, ಕಾಂತಾರ ಪ್ರಿಕ್ವೆಲ್‌ಅನ್ನು ಅದ್ಧೂರಿಯಾಗಿ ನಿರ್ಮಿಸುವುದು ರಿಷಬ್‌ ಶೆಟ್ಟಿ ಅವರ ಗುರಿಯಾಗಿದೆ. ಇದರ ಬೆನ್ನಲ್ಲೇ, ಕಾಂತಾರ ಚಾಪ್ಟರ್‌ 1 ಸಿನಿಮಾದ ಡಿಜಿಟಲ್‌ ಹಕ್ಕುಗಳು ದಾಖಲೆಯ 125 ಕೋಟಿ ರೂ.ಗೆ ಮಾರಾಟವಾಗಿರುವುದು ಮಹತ್ವದ ಸಂಗತಿಯಾಗಿದೆ.

ಕೆಲ ದಿನಗಳ ಹಿಂದಷ್ಟೇ ರಿಷಬ್‌ ಶೆಟ್ಟಿ ಅವರು ಕಾಂತಾರ 2 ಚಿತ್ರೀಕರಣ ಆರಂಭವಾಗಿದೆ ಎಂದು ಹೇಳಿದ್ದರು. ಕಾಂತಾರ ಚಿತ್ರದ ಕುರಿತು ಅಧಿಕೃತವಾಗಿ ಹೊಂಬಾಳೆ ಸಂಸ್ಥೆ ಎಲ್ಲವನ್ನೂ ಘೋಷಣೆ ಮಾಡುತ್ತದೆ. ಈಗಾಗಲೇ ಚಿತ್ರೀಕರಣ ಆರಂಭವಾಗಿದ್ದು, ಬಹಳ ಚೆನ್ನಾಗಿ ಕೆಲಸಕಾರ್ಯಗಳು ನಡೆಯುತ್ತಿವೆ. ಮೊದಲಿಗಿಂತ ದೊಡ್ಡ ಜವಾಬ್ದಾರಿಯೊಂದಿಗೆ ದೊಡ್ಡ ತಂಡ ಕೆಲಸ ಮಾಡುತ್ತಿದೆ” ಎಂದು ಹೇಳಿದ್ದರು.

“ಹೊಂಬಾಳೆ ಪ್ರೊಡಕ್ಷನ್ ಹೌಸ್ ಸಿಕ್ಕಿರುವುದು ಫಿಲಂ ಮೇಕರ್‌ಗಳಿಗೆ ಒಂದು ಪುಣ್ಯ. ಕಾಂತಾರದಲ್ಲಿ ಅದ್ಭುತವಾದ ಟೆಕ್ನಿಷಿಯನ್ಸ್‌ಗಳು ಕೆಲಸ ಮಾಡುತ್ತಿದ್ದಾರೆ. ನಿರಂತರವಾಗಿ ಕೆಲಸಗಳು ನಡೆಯುತ್ತಿದ್ದು ಪಾರ್ಟ್ ಬೈ ಪಾರ್ಟ್ ಚಿತ್ರೀಕರಣ ನಡೆಯುತ್ತದೆ. ಜನ ಕಾಂತಾರವನ್ನು ಗೆಲ್ಲಿಸಿದ್ದಾರೆ, ಹೀಗಾಗಿ ಮಾತಿನಲ್ಲಿ ಏನನ್ನೂ ಹೇಳುವುದಿಲ್ಲ. ಕೆಲಸದ ಮೂಲಕ ಮಾಡಿ ತೋರಿಸಬೇಕು ಎಂದು ಅಂದುಕೊಂಡಿದ್ದೇನೆ” ಎಂದಿದ್ದರು.

ಕಾಂತಾರ ಶೂಟಿಂಗ್‌ಗಾಗಿ ಕುಂದಾಪುರದ ಕರಾವಳಿ ಪ್ರದೇಶದಲ್ಲಿ ಅದ್ಧೂರಿ ಸೆಟ್​ ನಿರ್ಮಿಸಲಾಗಿದೆ. 200×200 ಅಡಿಯ ಬೃಹತ್ ಸೆಟ್ ನಿರ್ಮಿಸಲಾಗಿದೆ. ಚಿತ್ರದ ಹೆಚ್ಚಿನ ಭಾಗವನ್ನು ಕಾಡಿನಲ್ಲಿ ಚಿತ್ರೀಕರಿಸಲಿದ್ದರೆ, ಬೃಹತ್ ಸೆಟ್ ಡಬ್ಬಿಂಗ್ ಸ್ಟುಡಿಯೊ ಮತ್ತು ಎಡಿಟಿಂಗ್ ಸೂಟ್ ಒಳಗೊಂಡಿರುತ್ತದೆ ಎಂದು ವರದಿಯಾಗಿದೆ. ಮುಂಬೈ, ಬೆಂಗಳೂರು ಮತ್ತು ಹೈದರಾಬಾದ್‌ನಂತಹ ಸ್ಥಳಗಳಿಂದ ಸೆಟ್ ನಿರ್ಮಾಣಕ್ಕಾಗಿ 600 ನುರಿತ ಬಡಗಿಗಳು ಮತ್ತು ಸ್ಟಂಟ್ ಮಾಸ್ಟರ್‌ಗಳನ್ನು ನೇಮಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ರಾಮೋಜಿ ಫಿಲ್ಮ್‌ ಸಿಟಿಯ ನಂತರ ದೇಶದಲ್ಲೇ ಅತಿ ದೊಡ್ಡ ಸೆಟ್‌ ಇದಾಗಿದೆ ಎಂದು ಹೇಳಲಾಗುತ್ತಿದೆ.

Continue Reading
Advertisement
Radhika Merchant
ಪ್ರಮುಖ ಸುದ್ದಿ5 mins ago

Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

Suspicious Death Advocate Chaitra Gowda Case
ಬೆಂಗಳೂರು24 mins ago

Suspicious Death: ಸಿಸಿಬಿ ತೆಕ್ಕೆಗೆ ವಕೀಲೆ ಚೈತ್ರಾ ಡೆತ್ ಕೇಸ್; 15 ದಿನಗಳ ಸಿಸಿಟಿವಿ ಪರಿಶೀಲನೆ

Star Fashion
ಫ್ಯಾಷನ್51 mins ago

Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Health Insurance
ಮನಿ-ಗೈಡ್1 hour ago

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

First successful TAVR surgery in the state at Fortis Hospital
ಬೆಂಗಳೂರು1 hour ago

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

MLA Belur Gopalakrishna election campaign for Congress candidates at ripponpete
ರಾಜಕೀಯ1 hour ago

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

Vijayanagara News Distribute good quality sowing seeds and fertilizers says Tehsildar Amaresh G K
ವಿಜಯನಗರ1 hour ago

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
ಉತ್ತರ ಕನ್ನಡ1 hour ago

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

indo Chaina border
ದೇಶ1 hour ago

Indo China Border : ಸಿಕ್ಕಿಂನಿಂದ 150 ಕಿ.ಮೀ ದೂರದಲ್ಲಿ ಚೀನಾದಿಂದ ಅತ್ಯಾಧುನಿಕ ಯುದ್ಧ ವಿಮಾನ ನಿಯೋಜನೆ

Prevention Of Obesity
ಆರೋಗ್ಯ1 hour ago

Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ6 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌