Site icon Vistara News

Vinay Rajkumar: ವಿನಯ್ ರಾಜ್‌ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್

Vinay Rajkumar ondu sarala prema kathe poster

ಬೆಂಗಳೂರು: ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ (Vinay Rajkumar) ನಟಿಸುತ್ತಿರುವ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ.

ನಟ ವಿನಯ್ ರಾಜ್ ಕುಮಾರ್ ಮಾತನಾಡಿ ʻʻಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ಮೊದಲಿನಿಂದಲೂ ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ತುಂಬಾ ಇಷ್ಟ. ಜತೆಗೆ ಸುನಿ ಅವರ ನಿರ್ದೇಶನದ ಶೈಲಿ ಕೂಡ ತುಂಬಾ ಇಷ್ಟ. ಸುನಿ ಅವರು ಈ ಸಿನಿಮಾ ಕಥೆ ಹೇಳಲು ಬಂದಾಗ ಅವರ ನಿರ್ದೇಶನದಲ್ಲಿ ಸಿನಿಮಾ ಮಾಡುತ್ತಿದ್ದೇವೆ ಎನ್ನುವುದೇ ತುಂಬ ಖುಷಿ ಕೊಟ್ಟಿತ್ತು. ಈ ಚಿತ್ರದಲ್ಲಿ ಅತಿಶಯ್ ಪಾತ್ರದಲ್ಲಿ ನಟಿಸಿದ್ದೇನೆ. ಸಂಗೀತ ನಿರ್ದೇಶಕನ ಪಾತ್ರ. ದೊಡ್ಡ ಮ್ಯೂಸಿಕ್ ಡೈರೆಕ್ಟರ್ ಆಗಬೇಕು ಎನ್ನುವುದು ಅವನ ಕನಸು. ಆತನ ಮನಸ್ಸಲ್ಲಿ ಒಂದು ಹುಡುಗಿಯ ಹುಡುಕಾಟ ಯಾವಾಗಲೂ ಇರುತ್ತದೆ ಇದು ಸಿನಿಮಾದ ಒಂದು ಎಳೆʼʼ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ: Vinay Rajkumar | ಸಿಂಪಲ್ ಸುನಿ ಚಿತ್ರಕ್ಕೆ ದೊಡ್ಮನೆ ಹುಡುಗ ವಿನಯ್ ರಾಜ್‌ಕುಮಾರ್‌ ನಾಯಕ!

ನಿರ್ದೇಶಕ ಸಿಂಪಲ್ ಸುನಿ ಮಾತನಾಡಿʻʻ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಗೆ ಇಟ್ಟ ಮೊದಲ ಟೈಟಲ್ ‘ಒಂದು ಸರಳ ಪ್ರೇಮಕಥೆ’. ಯಾವುದಾದರೂ ಸಿನಿಮಾಗೆ ಈ ಟೈಟಲ್ ಇಡೋಣ ಎಂದು ಹತ್ತು ವರ್ಷದಿಂದ ಟೈಟಲ್ ರಿನಿವಲ್ ಮಾಡಿಕೊಂಡು ಬಂದಿದ್ದೆ. ಈ ಚಿತ್ರದ ಕಥೆ ಕೇಳಿ ವಿನಯ್ ರಾಜ್ ಕುಮಾರ್ ಓಕೆ ಮಾಡಿದರು, ಚಿತ್ರಕ್ಕೆ ಪ್ರಸನ್ನ ಅವರು ಕಥೆ ಬರೆದಿದ್ದಾರೆ. ಜನವರಿ 23ರಂದು ಸಿನಿಮಾ ಮುಹೂರ್ತ ಆಗಿತ್ತು, ಬೆಂಗಳೂರು, ಚಿಕ್ಕಪೇಟೆಯಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಮೈಸೂರಿನಲ್ಲಿ ಇವತ್ತು ಕೊನೆಯ ದಿನದ ಚಿತ್ರೀಕರಣ ನಡೆಯುತ್ತಿದೆ. ಈಗಾಗಲೇ 50%ರಷ್ಟು ಚಿತ್ರೀಕರಣ ಮುಗಿದಿದೆʼʼಎಂದರು.

ಇದನ್ನೂ ಓದಿ: Vinay Rajkumar | ವಿಭಿನ್ನ ಲುಕ್‌ನೊಂದಿಗೆ ಕಾಣಿಸಿಕೊಂಡ ವಿನಯ್ ರಾಜ್ ಕುಮಾರ್

ಸಾಧುಕೋಕಿಲ, ರಾಜೇಶ್ ನಟರಂಗ, ಅರುಣ ಬಾಲರಾಜ್ ಒಳಗೊಂಡ ಕಲಾವಿದರು ಒಂದು ಸರಳ ಪ್ರೇಮಕಥೆ ಚಿತ್ರದಲ್ಲಿದ್ದು, ಕಾರ್ತಿಕ್ ಛಾಯಾಗ್ರಹಣ, ಆದಿ ಸಂಕಲನ, ವೀರ್ ಸಮರ್ಥ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ.

Exit mobile version