ಬೆಂಗಳೂರು: ಗೊಂಬೆಗಳ ಲವ್ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಭರವಸೆ ಮೂಡಿಸಿದ್ದ ನಟ ಅರುಣ್ ಕುಮಾರ್ ಈಗ ನಿರ್ದೇಶನಕ್ಕಿಳಿದಿದ್ದಾರೆ. ಅವರ ಚೊಚ್ಚಲ ಹೆಜ್ಜೆಗೆ ‘ನೆಲ್ಸನ್’ ಎಂಬ ಶೀರ್ಷಿಕೆ ಇಡಲಾಗಿದ್ದು, ರಕ್ತದಲ್ಲಿ ನೆಂದ ದೇವರಕಾಡು (Vinod Prabhakar) ಎಂಬ ಅಡಿ ಬರಹ ಚಿತ್ರದ ಸಾರಂಶವನ್ನು ವಿವರಿಸುತ್ತಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಟೀಸರ್ ರಿಲೀಸ್ ಆಗಿದ್ದು, ನಿರೀಕ್ಷೆಯನ್ನು ಇಮ್ಮಡಿಗೊಳಿಸಿದೆ. ಸಖತ್ ಮಾಸ್ ಆಗಿ ಮೂಡಿಬಂದಿರುವ ನೆಲ್ಸನ್ ಟೀಸರ್ ನಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್ ಯಂಗ್ ಮ್ಯಾನ್ ಅವತಾರದಲ್ಲಿ ಅಬ್ಬರಿಸಿದ್ದಾರೆ. ಎಂಎಂ ಲೆಗಸಿಯಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರು ಟೀಸರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭಾಶಯ ತಿಳಿಸಿದರು. ಈ ವೇಳೆ ಇಡೀ ಚಿತ್ರತಂಡ ಭಾಗಿಯಾಗಿತ್ತು.
ಉಪೇಂದ್ರ ಮಾತನಾಡಿ, ʻಟೈಗರ್ ಹವಾ ಆಗಲೂ ಇತ್ತು ಈಗಲೂ ಇರುತ್ತೇ.. ಮುಂದೆಯೂ ಇರುತ್ತದೆ. ನಿಮ್ಮ ತಂದೆ ಸಿನಿಮಾಗೆ ಡೈಲಾಗ್ ಬರೆದಿದ್ದೆ. ಇವತ್ತು ನಿಮ್ಮ ಟೀಸರ್ ಲಾಂಚ್ ಮಾಡಲು ನಿಮ್ಮ ತಂದೆ ಆಶೀರ್ವಾದ ಮಾಡಿದ್ದಾರೆ. ಟೀಸರ್ ಬಗ್ಗೆ ಏನೂ ಹೇಳೋದು. ಎಲ್ಲವೂ ಎಕ್ಸ್‌ಟ್ರಾಡಿನರಿಯಾಗಿದೆ. ಮೇಕಿಂಗ್, ಗೆಟಪ್ ಸೂಪರ್. ಸಬ್ಜೆಕ್ಟ್ ಬೇರೆ ತರ ಇದೆ. ಇಡೀ ತಂಡಕ್ಕೆ ಒಳ್ಳೆಯದಾಗಲಿ. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿದೆʼʼ ಎಂದರು.
ನಟ ವಿನೋದ್ ಪ್ರಭಾಕರ್ ಮಾತನಾಡಿ, ʻʻಉಪೇಂದ್ರ ಅಣ್ಣ ಟೀಸರ್ ನೋಡಿ ತುಂಬಾ ಖುಷಿಪಟ್ಟರು. ದರ್ಶನ್ ಸರ್ ಕೂಡ ಟೀಸರ್ ನೋಡಿದರು. ಈ ತರಹದ ಒಂದು ಸಿನಿಮಾ ಮಾಡಲು ಧೈರ್ಯ ಬೇಕು. ಶ್ರೀರಾಮ್ ಸರ್ ನಿಮಗೆ ಧನ್ಯವಾದ. ನಿಮ್ಮ ಮೇಲೆ ನಮಗೆ ಕಾನ್ಫಿಡೆನ್ಸ್ ಇದೆ. ಅರುಣ್ ಕುಮಾರ್ ಅವರು ಬಹಳಷ್ಟು ಫ್ಯಾಷನ್ ಇರುವ ವ್ಯಕ್ತಿ. ಭರತ್ ಸರ್ ವಂಡರ್ ಫುಲ್ ಮ್ಯೂಸಿಕ್. ಸಿನಿಮಾ ಬಗ್ಗೆ ಮುಂದೆ ಮಾತಾಡ್ತೀನಿ. ತೆರೆಹಿಂದೆ ಬಹಳಷ್ಟು ಜನ ಕೆಲಸ ಮಾಡಿದ್ದೀರಿʼʼ ಎಂದರು.
ಇದನ್ನೂ ಓದಿ: Sonal Monteiro: ವಿನೋದ್ ಪ್ರಭಾಕರ್-ಸೋನಲ್ ಅಭಿನಯದ `ಮಾದೇವ’ ಶೂಟಿಂಗ್ ಕಂಪ್ಲೀಟ್!
ನಿರ್ದೇಶಕ ಅರುಣ್ ಕುಮಾರ್ ಮಾತನಾಡಿ, ʻʻಲಾಕ್ ಡೌನ್ ಆದ ಮೇಲೆ ಹಸಿವು, ಅಸಹಾಯಕ ಸಮಯದಲ್ಲಿ ನೆಲ್ಸನ್ ಹುಟ್ಟಿಕೊಂಡಿದ್ದು. ಬರೆಯುತ್ತಾ, ಬರೆಯುತ್ತಾ ತುಂಬಾ ಚೆನ್ನಾಗಿ ಕಥೆ ಬೆಳೆಯಿತು.ಸ್ನೇಹಿತರ ಮೂಲಕ ನಿರ್ಮಾಪಕರು ಸಿಕ್ಕಿದರು. ನಂಬಿಕೆ ಹುಟ್ಟಿಕೊಳ್ತು. ಇದುವರೆಗೆ ನನ್ನ ನಂಬಿದ್ದು ಶ್ರೀರಾಮ್ ಸರ್. ನಾನು ಟೀಂ ನನ್ನ ಬೆನ್ನೆಲುಬು ಆಗಿ ನಿಂತರು. ಸಿನಿಮಾ ಈ ಹಂತಕ್ಕೆ ಬರಲು ನನ್ನ ಟೆಕ್ನಿಕಲ್ ಟೀಂ ಬೆಂಬಲವಿದೆ. ವಿನೋದ್ ಸರ್ ಡೆಡಿಕೇಷನ್ ನೋಡಿ ಭಯ ಆಯಿತು. ವಿನೋದ್ ಸರ್ ಸಪೋರ್ಟ್ ತುಂಬಾ ದೊಡ್ಡದಿದೆ. 60 ರಿಂದ 90 ಒಳಗಡೆ ಚಾಮರಾಜನಗರದಲ್ಲಿ ನಡೆಯುವ ಕಥೆ ಇದು. ಸ್ಕ್ರೀನ್ ಪ್ಲೇ, ಕಥೆ ತುಂಬಾ ಸ್ಟ್ರಾಂಗ್ ಆಗಿದೆʼʼ ಎಂದರು.
‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ನೈಜ ಘಟನೆಯ ಕಥಾಹಂದರದ ಸಿನಿಮಾ. ಚಾಮರಾಜನಗರ ಜಿಲ್ಲೆಯಲ್ಲಿ 60ರಿಂದ 90ರ ದಶಕದಲ್ಲಿ ನಡೆಯುವ ಗ್ಯಾಗ್‌ಸ್ಟರ್ ಕಥೆ. ಅಲ್ಲಿನ ಭಾಷೆ, ಸಂಸ್ಕೃತಿ, ನೆಲ, ಜಲ, ಬುಡಕಟ್ಟು ಜನಾಂಗದ ಸಂಘರ್ಷ ಸೇರಿದಂತೆ ಒಂದಷ್ಟು ಅಂಶಗಳನ್ನು ಈ ಚಿತ್ರದಲ್ಲಿ ಅರುಣ್ ಕಟ್ಟಿಕೊಡಲಿದ್ದಾರೆ. ವಿಶೇಷ ಅಂದರೆ ವಿನೋದ್ ಪ್ರಭಾಕರ್ ಹಿಂದೆಂದೂ ಕಾಣದ ಅವತಾರದಲ್ಲಿ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾದಲ್ಲಿ ನಿಮಗೆ ಕಾಣಸಿಗ್ತಾರೆ. ಬಹಳ ಇಂಪ್ರೆಸ್ ಎನಿಸುವ ಟೀಸರ್ ಝಲಕ್ ನಲ್ಲಿ ಛಾಯಾಗ್ರಹಣ ಹಾಗೂ ಸಂಗೀತವೂ ಗಮನಸೆಳೆಯುತ್ತಿದೆ.
ಇದನ್ನೂ ಓದಿ: Sonal Monteiro: ವಿನೋದ್ ಪ್ರಭಾಕರ್-ಸೋನಲ್ ಅಭಿನಯದ `ಮಾದೇವ’ ಶೂಟಿಂಗ್ ಕಂಪ್ಲೀಟ್!
ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಅನುಭವವಿರುವ ಅರುಣ್ ಕುಮಾರ್ ಆ ಎಲ್ಲಾ ಕಲೆಯನ್ನು ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಚಿತ್ರಕ್ಕೆ ಧಾರೆ ಎರೆದಿದ್ದಾರೆ. ಅವರ ಮೊದಲ ಕನಸಿಗೆ ದೀಪ ಫಿಲ್ಮ್ಸ್ ಬ್ಯಾನರ್‌ನಲ್ಲೂ ಬಿ.ಎಮ್ ಶ್ರೀರಾಮ್ (ಕೋಲಾರ) ಹಣ ಹಾಕಿದ್ದಾರೆ. ಪ್ರಜ್ವಲ್ ಗೌಡ ಛಾಯಾಗ್ರಹಣ ಮತ್ತು ಭರತ್ ಬಿಜಿ ಸಂಗೀತ, ವಿಜಯ್ ರಾಜ್ ಸಂಕಲನ, ಹರಿ ಸಂಭಾಷಣೆ ‘ನೆಲ್ಸನ್-ರಕ್ತದಲ್ಲಿ ನೆಂದ ದೇವರಕಾಡು’ ಸಿನಿಮಾಗಿದೆ. ಆಕ್ಷನ್ ಟೀಸರ್ ಧಮಾಕ ಎಬ್ಬಿಸಿರುವ ಚಿತ್ರತಂಡ ನವೆಂಬರ್ ತಿಂಗಳಿಂದ ಶೂಟಿಂಗ್ ಅಖಾಡಕ್ಕೆ ಧುಮುಕಲಿದ್ದಾರೆ.