Site icon Vistara News

Vinod Prabhakar | ಮಾದೇವದಲ್ಲಿ ವಿನೋದ್ ಪ್ರಭಾಕರ್‌ಗೆ ಶ್ರೀನಗರ ಕಿಟ್ಟಿ ಖಳನಾಯಕ

Vinod Prabhakar

ಬೆಂಗಳೂರು: ವಿನೋದ್ ಪ್ರಭಾಕರ್ (Vinod Prabhakar) ನಾಯಕನಾಗಿ ನಟಿಸಿರುವ ʻಮಾದೇವ’ ಸಿನಿಮಾಗೆ ಶ್ರೀನಗರ ಕಿಟ್ಟಿ ಎಂಟ್ರಿ ಕೊಟ್ಟಿದ್ದಾರೆ. ನವೀನ್ ರೆಡ್ಡಿ ಬಿ. ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರುತ್ತಿದ್ದು, 80ರ ದಶಕದ ಕಥೆಯನ್ನು ಸಿನಿಮಾ ಒಳಗೊಂಡಿದೆ. ಮರಿ ಟೈಗರ್ ವಿನೋದ್ ಪ್ರಭಾಕರ್‌ಗೆ ಎದುರಾಳಿಯಾಗಿ ಸಮುದ್ರ ಎಂಬ ಪವರ್ ಫುಲ್ ಪಾತ್ರದ ಮೂಲಕ ಶ್ರೀನಗರ ಕಿಟ್ಟಿ ಅಬ್ಬರಿಸಲಿದ್ದಾರೆ.

ಭಂಟಿ ಸಿನಿಮಾ ನಿರ್ಮಾಪಕ ಆರ್.ಕೇಶವ್ ದೇವಸಂದ್ರ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಲವ್ ಗುರು ಸಮಂತ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಶೃತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ನಟಿಸುತ್ತಿದ್ದಾರೆ.

ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

ಬಾಲಕೃಷ್ಣ ತೋಟ ಕ್ಯಾಮೆರಾಮನ್‌ ಆಗಿದ್ದು, ಪ್ರದ್ಯೋಥನ್ ಸಂಗೀತ ನಿರ್ದೇಶನವಿದೆ. ಹೈದರಾಬಾದ್‌ ರಾಮೋಜಿ ಫಿಲ್ಮ್ಸ್‌ ಸಿಟಿ, ಮದ್ದೂರು, ಕನಕಪುರ, ಚನ್ನಪಟ್ಟಣ ಭಾಗದಲ್ಲಿ ಶೇಕಡಾ ೫೦ರಷ್ಟು ಶೂಟಿಂಗ್ ಮುಕ್ತಾಯಗೊಂಡಿದೆ. ಉಳಿದ ಭಾಗದ ಚಿತ್ರೀಕರಣವನ್ನು ಮಲೆನಾಡು ಶಿವಮೊಗ್ಗ ಸೇರಿದಂತೆ ಇತರೆ ಭಾಗಗಳಲ್ಲಿ ನಡೆಸಲು ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ | Maadeva Film | ಮರಿ ಟೈಗರ್‌ಗೆ ಮತ್ತೆ ಜೋಡಿಯಾದ ನಟಿ ಸೋನಲ್ ಮೊಂಥೆರೋ

Exit mobile version