Site icon Vistara News

Maadeva Film | ಮರಿ ಟೈಗರ್‌ಗೆ ಮತ್ತೆ ಜೋಡಿಯಾದ ನಟಿ ಸೋನಲ್ ಮೊಂಥೆರೋ

Maadeva Film

ಬೆಂಗಳೂರು: ಮರಿ ಟೈಗರ್ ವಿನೋದ್ ಪ್ರಭಾಕರ್ ಬತ್ತಳಿಕೆಯಲ್ಲಿ ಸಾಲು ಸಾಲು ಸಿನಿಮಾಗಳಿವೆ. ಕೆಲ ದಿನಗಳ ಹಿಂದಷ್ಟೇ ಲಂಕಾಸುರ ಚಿತ್ರದ ಟೈಟಲ್‌ ಟ್ರ್ಯಾಕ್‌ ಭಾರಿ ಸದ್ದು ಮಾಡಿತ್ತು. ಈಗ ಅವರ ಬಹುನಿರೀಕ್ಷಿತ “ಮಾದೇವ” (Maadeva Film) ಸಿನಿಮಾದ ನಾಯಕಿ ಯಾರೆಂದು ರಿವೀಲ್‌ ಆಗಿದೆ. ಅಲ್ಲದೆ, ಈ ಜೋಡಿ ರಾಬರ್ಟ್‌ ಮೂಲಕ ಜನಮೆಚ್ಚುಗೆಯನ್ನು ಗಳಿಸಿತ್ತು.

ವಿಭಿನ್ನ ಕಥಾಹಂದರ ಹೊಂದಿರುವ ಈ ಸಿನಿಮಾಕ್ಕೆ ಪಂಚತಂತ್ರ ಬ್ಯೂಟಿ ಸೋನಲ್ ಮೊಂಥೆರೋ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ . ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ಸೋನಲ್ ಈ ಚಿತ್ರದಲ್ಲಿ ವಿನೋದ್ ಪ್ರಭಾಕರ್‌ ಅವರಿಗೆ ಜೋಡಿಯಾಗಿ ನಟಿಸಲಿದ್ದಾರೆ.

ವಿನೋದ್ ಹಾಗೂ ಸೋನಲ್ ಈ ಹಿಂದೆ ರಾಬರ್ಟ್ ಸಿನಿಮಾದಲ್ಲಿ ತನು-ರಾಘವ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಇದೀಗ ಮತ್ತೊಮ್ಮೆ ಈ ಜೋಡಿ ಒಂದಾಗಿರುವುದು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ. ನವೀನ್ ಬಿ ರೆಡ್ಡಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಮಾದೇವ ಚಿತ್ರದಲ್ಲಿ ಸೋನಲ್ 80ರ ದಶಕದ ಮಧ್ಯಮ ವರ್ಗದ ಹೆಣ್ಣುಮಗಳಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ | ಮಿನಿ ಟೈಗರ್ ನಟನೆಯ ಲಂಕಾಸುರ ಟೈಟಲ್ ಟ್ರ್ಯಾಕ್ ಔಟ್!

80ರ ದಶಕದ ಎಮೋಷನಲ್ ಹಾಗೂ ಮಾಸ್ ಆಗಿರುವ ಈ ಸಿನಿಮಾ ರೈಲು ಮತ್ತು ಜೈಲಿನ ಬ್ಯಾಕ್‌ಡ್ರಾಪ್‌ನಲ್ಲಿ ನಡೆಯಲಿದೆ. ವಿನೋದ್ ಪ್ರಭಾಕರ್ ಈ ಹಿಂದಿನ ಪಾತ್ರಗಳಿಗಿಂತ ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ದೇಶಕರು ಹೇಳಿಕೊಂಡಿದ್ದಾರೆ.

ಶಿವಮೊಗ್ಗ, ಧಾರವಾಡ ಮತ್ತು ಹೈದರಾಬಾದ್‌ನಲ್ಲಿ ಸಿನಿಮಾದ ಶೂಟಿಂಗ್ ನಡೆಯಲಿದೆ. ಹಿರಿಯ ನಟಿ ಶ್ರುತಿ, ಪೋಷಕ ಕಲಾವಿದ ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಹಲವರ ತಾರಾಬಳಗವಿದೆ. ಬಾಲಕೃಷ್ಣ ತೋಟ ಕ್ಯಾಮೆರಾ ಕೈಚಳಕ, ಪ್ರದ್ಯೋಥನ್ ಮ್ಯೂಸಿಕ್ ಪುಳಕ ಸಿನಿಮಾಕ್ಕಿದೆ. ಗಾಯತ್ರಿ ರಾಜೇಶ್ ಹಾಗೂ ಲವ್ ಗುರು ಸುಮನ್ ನಿರ್ಮಾಣದ ಮಾದೇವ ಸಿನಿಮಾದ ಶೂಟಿಂಗ್ ಭರದಿಂದ ಸಾಗಿದೆ.

ಇದನ್ನೂ ಓದಿ | Lucky Man Movie | ನಟ ಪುನೀತ್ ರಾಜಕುಮಾರ್ ಅಭಿನಯದ ಲಕ್ಕಿ ಮ್ಯಾನ್ ಸಿನಿಮಾದ ಟೀಸರ್ ಔಟ್‌

Exit mobile version