Site icon Vistara News

Vishnuvardhan Birthday | ಅಭಿಮಾನ್ ಸ್ಟುಡಿಯೊದಲ್ಲಿ ರಾರಾಜಿಸುತ್ತಿವೆ ಕಟೌಟ್‌ಗಳು, ಅಭಿಮಾನಿಗಳಿಂದ ಸ್ಮರಣೆ

Vishnuvardhan Birthday

ಬೆಂಗಳೂರು: ಸಾಹಸ ಸಿಂಹ, ಅಭಿನಯ ಭಾರ್ಗವ ಹೀಗೆ ನಾನಾ ಬಿರುದುಗಳಿಂದ ಜನಪ್ರಿಯತೆ ಪಡೆದಿರುವ ಡಾ.ವಿಷ್ಣುವರ್ಧನ್ ಅವರ ಜನುಮದಿನ ಇಂದು(Vishnuvardhan Birthday). 72ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಕಟೌಟ್‌ಗಳು ರಾರಾಜಿಸುತ್ತಿವೆ.

ಅಭಿಮಾನ್ ಸ್ಟುಡಿಯೋ ಬಳಿ ಡಾ.ವಿಷ್ಣುವರ್ಧನ್ 50 ಕಟೌಟ್‌ಗಳು ರಂಗೇರಿವೆ. ಯಜಮಾನ, ಸಾಹಸ ಸಿಂಹ, ಕೃಷ್ಣ ನೀ ಬೇಗನೆ ಬಾ, ಜಯಸಿಂಹ, ವೀರಪ್ಪ ನಾಯಕ, ಜನ ನಾಯಕ, ದಾದಾ, ಕೃಷ್ಣ ರುಕ್ಮಿಣಿ, ಹೃದಯ ಗೀತೆ, ದೇವ, ಮತ್ತೆ ಹಾಡಿತು ಕೋಗಿಲೆ, ಲಯನ್ ಜಗಪತಿ ರಾವ್, ರಾಜಾಧಿರಾಜಾ, ರಾಯರು ಬಂದರು ಮಾವನ ಮನೆಗೆ, ಮಹಾಕ್ಷತ್ರಿಯ, ಮುತ್ತಿನ ಹಾರ, ದಣಿ, ಜನನಿ ಜನ್ಮಭೂಮಿ, ಸೂರ್ಯ ವಂಶ, ಸೂರಪ್ಪ, ದಿಗ್ಗಜರು, ಕೋಟಿಗೊಬ್ಬ, ಸಿಂಹಾದ್ರಿಯ ಸಿಂಹ, ರಾಜ ನರಸಿಂಹ, ಆಪ್ತಮಿತ್ರ, ಸಾಹುಕಾರ, ವರ್ಷ, ಕರ್ನಾಟಕ ಸುಪುತ್ರ, ಹಲೋ ಡ್ಯಾಡಿ, ಅಪ್ಪಾಜಿ, ಸ್ಕೂಲ್ ಮಾಸ್ಟರ್, ಆಪ್ತರಕ್ಷಕ, ಚಿನ್ನದಂತ ಮಗ, ವಿಷ್ಣುಸೇನಾ, ನಾಗರಹಾವು, ಗಂಧದ ಗುಡಿ, ಶುಭ ಮಿಲನ ಹೀಗೆ ಹಲವು ಚಿತ್ರಗಳ ಕಟೌಟ್‌ಗಳನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ | ರಾಜ ಮಾರ್ಗ ಅಂಕಣ | ಗಂಧದ ಗುಡಿಯಲ್ಲಿ ಅಂದು ನಿಜಕ್ಕೂ ನಡೆದಿದ್ದೇನು? ವಿಷ್ಣುವರ್ಧನ್‌ ಅನುಭವಿಸಿದ ಯಾತನೆ ಎಷ್ಟು?

ವಿಷ್ಣುವರ್ಧನ್ ಅವರ ಸಮಾಧಿ ಸ್ಥಳಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿದ್ದಾರೆ. ಹಾಗೇ ಹಿರಿಯ ನಟ ರಮೇಶ್ ಭಟ್ ಆರತಿ ಎತ್ತಿ, ಪುಷ್ಪ ನಮನ ಸಲ್ಲಿಸಿದ್ದಾರೆ.

ನಟ ರಮೇಶ್‌ ಭಟ್‌ ಮಾತನಾಡಿ, ʻʻಡಾ. ವಿಷ್ಣುವರ್ಧನ್ ಅಭಿಮಾನಿಗಳ ಸಂಭ್ರಮ ನೋಡಿ ತುಂಬಾ ಖುಷಿಯಾಗಿದೆ. ಪ್ರತಿ ಕ್ಷಣವೂ ಡಾ. ವಿಷ್ಣುವರ್ಧನ್ ನಮ್ಮ ಜತೆಯಲ್ಲೇ ಇದ್ದಾರೆ. ಕೊರೊನಾ ಸಂದರ್ಭದಲ್ಲಿ ಇಲ್ಲಿಗೆ ಬರಲು ಆಗದೆ ತುಂಬಾ ಬೇಸರವಾಗಿತ್ತು. ಆದರೆ ಈ ವರ್ಷ ಅದ್ಧೂರಿಯಾಗಿ ಡಾ. ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಿಸಿದ್ದಾರೆ. ಡಾ. ವಿಷ್ಣುವರ್ಧನ್ ಅಭಿನಯದ ಸಿನಿಮಾಗಳ ಕಟೌಟ್ ನೋಡಿ ಖುಷಿಯಾಯ್ತು. 50ಕ್ಕೂ ಹೆಚ್ಚು ಕಟೌಟ್‌ಗಳನ್ನು ನಿಲ್ಲಿಸುವುದು ಸಾಮಾನ್ಯ ವಿಚಾರವಲ್ಲʼʼ ಎಂದರು.

ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿರುವ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

1950ರ ಸೆಪ್ಟಂಬರ್ 18ರಂದು ಮೈಸೂರಿನಲ್ಲಿ ಜನಿಸಿದ ವಿಷ್ಣುವರ್ಧನ್‌ ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದರು. ‘ವಂಶವೃಕ್ಷ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಪುಟ್ಟಣ್ಣ ಕಣಗಾಲ್ ನಿರ್ದೇಶನದ ‘ನಾಗರಹಾವು’ ಸಿನಿಮಾ ದೊಡ್ಡ ಮಟ್ಟದ ಬ್ರೇಕ್ ತಂದುಕೊಟ್ಟ ಚಿತ್ರ. ‘ಭೂತಯ್ಯನ ಮಗ ಅಯ್ಯು’, ‘ಸಾಹಸ ಸಿಂಹ’, ‘ಬಂಧನ’, ‘ಹಬ್ಬ’, ‘ಜೀವನದಿ’, ‘ಯಜಮಾನ’, ‘ಸಿಂಹಾದ್ರಿಯ ಸಿಂಹ’, ‘ಆಪ್ತಮಿತ್ರ’, ಮುಂತಾದ ಅನೇಕ ಹಿಟ್ ಚಿತ್ರಗಳನ್ನು ಡಾ.ವಿಷ್ಣುವರ್ಧನ್ ನೀಡಿದರು. ಡಾ. ವಿಷ್ಣುವರ್ಧನ್‌ ಅವರಿಗೆ ರಾಜ್ಯ ಪ್ರಶಸ್ತಿ, ಡಾ.ರಾಜ್‌ಕುಮಾರ್ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿವೆ.

ಇದನ್ನೂ ಓದಿ | ಈ ಶುಭದಿನ ರಿಯಲ್‌ ಸ್ಟಾರ್‌ ಉಪೇಂದ್ರ ಜನುಮದಿನ

Exit mobile version