Vishnuvardhan: ಸಾಹಸ ಸಿಂಹ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆಯ ಫೋಟೊಗಳು ಇಲ್ಲಿವೆ Yashaswi Devadiga 2 ವರ್ಷಗಳು ago ಮೈಸೂರಿನ ಎಚ್.ಡಿ ಕೋಟೆ ರಸ್ತೆಯ ಹಾಲಾಳು ಗ್ರಾಮದಲ್ಲಿ ನಿರ್ಮಾಣವಾಗಿರುವ ಸಾಹಸ ಸಿಂಹ ವಿಷ್ಣುವರ್ಧನ್ ( Vishnuvardhan ) ಅವರ ಸ್ಮಾರಕವನ್ನು ಭಾನುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ಫೋಟೊ ಗ್ಯಾಲರಿ ವೀಕ್ಷಣೆ ಮಾಡಿ ವಿಷ್ಣುವರ್ಧನ್ ಅವರ 7 ಅಡಿ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದರು . 5 ಎಕರೆ ಜಾಗದಲ್ಲಿ 11 ಕೋಟಿ ರೂ. ವೆಚ್ಚದಲ್ಲಿ ವಿಷ್ಣುವರ್ಧನ್ ಸ್ಮಾರಕದ ಉದ್ಘಾಟನೆ ಸಮಾರಂಭದಲ್ಲಿ ಭಾರತಿ ವಿಷ್ಣುವರ್ಧನ್, ಅಳಿಯ ಅನಿರುದ್ಧ್, ಪುತ್ರಿ ಕೀರ್ತಿ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.ವಿಷ್ಣುವರ್ಧನ್ ನೆಚ್ಚಿನ ಊರಿನಲ್ಲೇ ಸ್ಮಾರಕ ನಿರ್ಮಾಣ ಆಗಿರುವುದಕ್ಕೆ ಅಭಿಮಾನಿಗಳು ಸಂತಸವ್ಯಕ್ತಪಡಿಸಿದ್ದಾರೆಕಲೆ ಹಾಗೂ ಕನ್ನಡಿಗರ ಅಸ್ಮಿತೆಯಾಗಬೇಕೆಂಬ ಉದ್ದೇಶದಿಂದ ವಸ್ತುಸಂಗ್ರಹಾಲಯ, ಅಭಿನಯ ತರಬೇತಿ ಶಾಲೆ, ನಾಟಕೋತ್ಸವ, ಚಿತ್ರೋತ್ಸವಗಳನ್ನು ನಡೆಸುವಂತಹ ವೇದಿಕೆಗಳು ಇರಲಿವೆ.ಹಲವಾರು ವರ್ಷಗಳಿಂದ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ನಾನಾ ಕಾರಣಗಳಿಂದ ನನೆಗುದಿಯಲ್ಲಿತ್ತು. ಕೊನೆಗೂ ಮೈಸೂರಿನಲ್ಲಿ ಅನಾವರಣಗೊಂಡಿದೆ.ಇದೀಗ ದಾದಾ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.