Site icon Vistara News

Pavitra Naresh: `ಮತ್ತೆ ಮದುವೆ’ ಸಿನಿಮಾ ಮೂಲಕ ಸಮಾಜಕ್ಕೆ ಸಂದೇಶ ನೀಡಲು ಹೊರಟಿದ್ದೇವೆ; ಪವಿತ್ರಾ ಲೋಕೇಶ್‌

We are going to give a message to the society through the Matte Maduve movie Pavithra Lokesh

ಬೆಂಗಳೂರು: ಟಾಲಿವುಡ್‌ ನಟ ನರೇಶ್‌ ಕೃಷ್ಣ ಹಾಗೂ ಪವಿತ್ರಾ ಲೋಕೇಶ್‌ (Pavitra Naresh) ಅಭಿನಯದ ʻಮತ್ತೆ ಮದುವೆʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ತೆಲುಗು ಹಾಗೂ ಕನ್ನಡ ಎರಡು ಭಾಷೆಯಲ್ಲಿ ಚಿತ್ರ ರಿಲೀಸ್ ಆಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪವಿತ್ರಾ ಹಾಗೂ ನರೇಶ್‌ ಪ್ರಮೋಷನ್‌ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಜೋಡಿ ಮೇ 17ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ತಮ್ಮ ಸಿನಿಮಾ ಹಾಗೂ ವೈಯಕ್ತಿಕ ಜೀವನದ ಬಗ್ಗೆ ಸಾಕಷ್ಟು ವಿಷಯ ಹಂಚಿಕೊಂಡರು.

ಇದು ನಿಮ್ಮ ಜೀವನದ ರಿಯಲ್‌ ಲೈಫ್‌ ಸ್ಟೋರಿನಾ? ಟೀಸರ್‌ ನೋಡಿದರೆ ಇದುವರೆಗೂ ನಡೆದ ಘಟನೆಗಳನ್ನೇ ಅಲ್ಲಿ ತೋರಿಸಲಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಪವಿತ್ರಾ ಲೋಕೇಶ್, ”ಒಂದೆರಡು ನಿಮಿಷದ ಟೀಸರ್‌ ಟ್ರೈಲರ್‌ ನೋಡಿ ಯಾವ ನಿರ್ಧಾರಕ್ಕೂ ಬರಬೇಡಿ. ಸಿನಿಮಾ ನೋಡಿದರೆ ನಾವು ಏನು ಹೇಳಲು ಹೊರಟಿದ್ದೇವೆ ಎನ್ನುವುದು ಅರ್ಥವಾಗುತ್ತದೆ. ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡಲು ಹೊರಟಿದ್ದೇವೆ. ಈಗಲೇ ಸಿನಿಮಾ ಕಥೆಯನ್ನು ಹೇಳಲು ಸಾಧ್ಯವಿಲ್ಲ. ನಮ್ಮ ಜೀವನಕ್ಕೂ ಸಿನಿಮಾಗೂ ಏನೂ ಸಂಬಂಧ ಇಲ್ಲ. ಸಿನಿಮಾ ಬೇರೆ, ವೈಯಕ್ತಿಕ ಜೀವನವೇ ಬೇರೆʼʼಎಂದರು.

ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ

ʻʻನನ್ನ‌ ವೃತ್ತಿಗೂ ವೈಯಕ್ತಿಕ ವಿಚಾರಕ್ಕೂ ಲಿಂಕ್‌ ಮಾಡುವುದು ನನಗೆ ಇಷ್ಟವಿಲ್ಲ. ನನ್ನನ್ನು ಒಬ್ಬ ನಟಿಯಾಗಿ ಮಾತ್ರ ನೋಡಿ. ಬೇಕಂತಲೇ ಯಾರೂ ಸುದ್ದಿಯಾಗುವುದಿಲ್ಲ. 1994ನಲ್ಲಿ ಅಂಬರೀಶ್‌ ಅವರು ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅಲ್ಲಿಂದ ಇದುವರೆಗೂ ನಾನು ಯಾವುದೇ ವಿಚಾರವನ್ನು ಮಾಧ್ಯಮಗಳ ಮುಂದೆ ಬಂದು ಹೇಳಿಕೊಂಡಿರಲಿಲ್ಲ. ದುರುದ್ದೇಶಪೂರ್ವಕವಾಗಿ ನನ್ನ ಹೆಗಲ ಮೇಲೆ ಗನ್‌ ಇಟ್ಟು ನರೇಶ್‌ ಅವರನ್ನು ಶೂಟ್‌ ಮಾಡುವ ಪಿತೂರಿ ನಡೆದಿತ್ತು” ಎಂದು ಪವಿತ್ರಾ ಹೇಳಿದರು.

ಇದನ್ನೂ ಓದಿ: Pavitra Naresh: ನಾವಿಬ್ಬರೂ ಒಟ್ಟಿಗೆ ಸಹಜೀವನ ನಡೆಸುತ್ತಿದ್ದೇವೆ; ನರೇಶ್-ಪವಿತ್ರಾ ಲೋಕೇಶ್‌

ಮಳ್ಳಿ ಪೆಳ್ಳಿ ಸಿನಿಮಾವನ್ನು ನರೇಶ್ ಅವರೇ ನಿರ್ಮಾಣ ಮಾಡುತ್ತಿದ್ದಾರೆ. ನರೇಶ್ ಅವರ ತಾಯಿ, ಹಿರಿಯ ನಟಿ, ನಿರ್ದೇಶಕಿ ವಿಜಯಾ ನಿರ್ಮಲಾ ಅವರು 1973ರಲ್ಲಿ ‘ಸೂಪರ್ ಸ್ಟಾರ್‌’ ಕೃಷ್ಣ ಅವರ ಜತೆಗೂಡಿ ವಿಜಯ ಕೃಷ್ಣ ಮೂವೀಸ್ ಆರಂಭಿಸಿದ್ದರು. ಇದೀಗ ಆ ಬ್ಯಾನರ್‌ಗೆ 50 ವರ್ಷ ತುಂಬಿದೆ. ಆ ಹಿನ್ನೆಲೆಯಲ್ಲಿ ಆ ಬ್ಯಾನರ್‌ ಮೂಲಕ ಮಳ್ಳಿ ಪೆಳ್ಳಿ’ ಸಿನಿಮಾವನ್ನು ನರೇಶ್ ನಿರ್ಮಾಣ ಮಾಡುತ್ತಿದ್ದಾರೆ.

ಚಿತ್ರಕ್ಕೆ ಎಂ. ಎಸ್. ರಾಜು, ಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಇದೊಂದು ಫ್ಯಾಮಿಲಿ ಎಂಟರ್ಟೈನ್ಮೆಂಟ್ ಸಿನಿಮಾವಾಗಿದೆ. ಜಯಸುಧಾ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ, ಮಧು ಹಾಗೂ ಇನ್ನಿತರರು ಈ ಚಿತ್ರದಲ್ಲಿ ನಟಿಸಿದ್ದಾರೆ.‌ ಮೇ 26ಕ್ಕೆ ʻಮಳ್ಳಿ ಪೆಳ್ಳಿʼ ಎಂಬ ಟೈಟಲ್ ನಡಿ ತೆಲುಗಿನಲ್ಲಿ ಸಿನಿಮಾ ತೆರೆ ಕಾಣುತ್ತಿದೆ. ಕನ್ನಡದಲ್ಲಿ ಇನ್ನೂ ರಿಲೀಸ್ ಡೇಟ್ ಫೈನಲ್ ಆಗಿಲ್ಲ.

Exit mobile version